ತುಮಕೂರು:
ತುಮಕೂರು ಜಿಲ್ಲೆಯ 34 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 4ರಿಂದ 2020ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ.
ತುಮಕೂರು ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ತುಮಕೂರು, ಗುಬ್ಬಿ, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ ಮತ್ತು ಕುಣಿಗಲ್ ತಾಲ್ಲೂಕುಗಳ 24 ಪರೀಕ್ಷಾ ಕೇಂದ್ರಗಳು, ಮಧುಗಿರಿ ವ್ಯಾಪ್ತಿಯಲ್ಲಿ ಬರುವ ಮಧುಗಿರಿ, ಶಿರಾ, ಪಾವಗಡ ಹಾಗೂ ಕೊರಟಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ 10 ಪರೀಕ್ಷಾ ಕೇಂದ್ರಗಳು ಸೇರಿ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ.
2020ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರಥಮವಾಗಿ (ಫ್ರೆಶರ್ಸ್)-23492, ಪುನರಾವರ್ತಿತ (ರಿಪೀಟರ್ಸ್)-3387, ಖಾಸಗಿ ವಿದ್ಯಾರ್ಥಿಗಳು-581, ಕಲಾ ವಿಭಾಗ-7350, ವಾಣಿಜ್ಯ-11348, ವಿಜ್ಞಾನ-8762, ಆ ಪೈಕಿ ಬಾಲಕರು-12638, ಬಾಲಕಿಯರು-14822 ಸೇರಿ ಜಿಲ್ಲೆಯಲ್ಲಿ ಒಟ್ಟು 27460 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸಲಿದ್ದಾರೆ.
ಮಾರ್ಚ್ 4ರಂದು ಬುಧವಾರ ಇತಿಹಾಸ, ಫಿಜಿಕ್ಸ್, ಬೇಸಿಕ್ ಮ್ಯಾಥ್ಸ್ ವಿಷಯಗಳ ಪರೀಕ್ಷೆ ನಡೆಯಲಿವೆ. ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಲಲಿತಾ ಕುಮಾರಿ ತಿಳಿಸಿದ್ದಾರೆ.