ತುಮಕೂರು :

      ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿ.ಯು.ಸಿ.ಯ ಅರ್ಥಶಾಸ್ತ್ರ ವಿಷಯದ ಪರೀಕ್ಷೆಯಲ್ಲಿ 15837 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಅರ್ಥಶಾಸ್ತ್ರ ವಿಷಯಕ್ಕೆ ನೋಂದಣಿಯಾದ 16930 ವಿದ್ಯಾರ್ಥಿಗಳ ಪೈಕಿ 1093 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

      ಜೀವಶಾಸ್ತ್ರ ವಿಷಯದಲ್ಲಿ 7023 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಜೀವಶಾಸ್ತ್ರ ವಿಷಯಕ್ಕೆ ನೋಂದಣಿಯಾದ 7192 ವಿದ್ಯಾರ್ಥಿಗಳ ಪೈಕಿ 169 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

      ಪರೀಕ್ಷೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ವರದಿಯಾಗಿರುವುದಿಲ್ಲವೆಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲಲಿತಕುಮಾರಿ ತಿಳಿಸಿದ್ದಾರೆ.

(Visited 28 times, 1 visits today)
FacebookTwitterInstagramFacebook MessengerEmailSMSTelegramWhatsapp
FacebookTwitterInstagramFacebook MessengerEmailSMSTelegramWhatsapp