ಬೆಂಗಳೂರು: 

      ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

       ಬಹುಅಂಗಾಂಗ ವೈಫಲ್ಯದಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬುಲೆಟ್ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ತಿಂಗಳಿಂದ ಆರೋಗ್ಯದಲ್ಲಿ ಏರುಪೇರು ಆಗಿದ್ದು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

      1976 ಏಪ್ರಿಲ್ 2ರಂದು ಜನಿಸಿದ್ದ ಬುಲೆಟ್ ಪ್ರಕಾಶ್ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಸಂಜೆ 4.45 ರ ಸುಮಾರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

      325 ಸಿನಿಮಾಗಳಲ್ಲಿ ಬುಲೆಟ್ ಪ್ರಕಾಶ್ ಅಭಿನಯಿಸಿದ್ದರು. 44 ವರ್ಷದ ಬುಲೆಟ್ ಪ್ರಕಾಶ್ ಬಹುತೇಕ ಎಲ್ಲಾ ನಾಯಕ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

(Visited 7 times, 1 visits today)