ತುಮಕೂರು :
ಕೊವೀಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾವಣೆಯಲ್ಲಿಡಲಾಗಿದ್ದು, ಈ ಪೈಕಿ 159 ಮಂದಿಯನ್ನು ಹೋಂ ಕ್ವಾರೆಂಟೈನ್ನಲ್ಲಿ ಇರಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರಬಾರದೆಂದು ಸೂಚಿಸಲಾಗಿದೆ.
ಒಟ್ಟು 141 ಮಂದಿಯನ್ನು ಐಸೋಲೇಷನ್ನಲ್ಲಿ ಇಡಲಾಗಿದ್ದು, 211 ಜನರ 28 ದಿನಗಳ ಹೋಂ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ. ಈವರೆವಿಗೂ 202 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 188 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. 3 ಮಾದರಿಗಳು ತಿರಸ್ಕøತಗೊಂಡಿವೆ ಹಾಗೂ 9 ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಡಿಹೆಚ್ಓ ಡಾ: ಚಂದ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(Visited 11 times, 1 visits today)