ತುಮಕೂರು:

      ರಾಜ್ಯದಲ್ಲಿ ಕೋವಿಡ್-19 ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಆರೋಗ್ಯ ಇಲಾಖೆ ವತಿಯಿಂದ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19ರ ತಪಾಸಣೆಯನ್ನು ಉಚಿತವಾಗಿ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ.

      ಸರ್ಕಾರದ ಆದೇಶದ ಮೇರೆಗೆ ಮಾಧ್ಯಮ ಪ್ರತಿನಿಧಿಗಳು ಪ್ರತಿನಿತ್ಯ ತಮ್ಮ ಆರೋಗ್ಯ ಲೆಕ್ಕಿಸದೇ ಸುದ್ದಿ ಸಂಗ್ರಹಿಸುತ್ತಿದ್ದಾರೆ. ಅಂತಹವರ ಬಗ್ಗೆ ಎಚ್ಚರವಹಿಸಿ ಅವರ ರಕ್ಷಣೆಗೆ ಮುಂದಾಗುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಸಹಯೋಗದಲ್ಲಿ ಎಲ್ಲಾ ಮಾಧ್ಯಮ ಪ್ರತಿನಿಧಿಗಳಿಗೂ ತಪಾಸಣೆ ಮಾಡಲಾಗುತ್ತಿದೆ.

      ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವೀರಭದ್ರಯ್ಯ ಅವರು ಮಾತನಾಡಿ, ಕೋವಿಡ್ ನಿಯಂತ್ರಣದಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಮಾಧ್ಯಮದವರು ಕೊರೊನಾ ವಾರಿಯರ್ಸ್‍ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಪತ್ರಿಕಾ ಹಾಗೂ ಟಿವಿ ಮಾಧ್ಯಮದವರಿಗೆ ಕೋವಿಡ್ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಆಯಾ ತಾಲೂಕಿನಲ್ಲಿರುವ ಮಾಧ್ಯಮದವರು ತಾಲೂಕು ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಲಾಗುವುದು ಎಂದರು.

      ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ.ಪುರುμÉೂೀತ್ತಮ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡಿ. ಮತ್ತಿತರರು ಹಾಜರಿದ್ದರು.

(Visited 101 times, 1 visits today)