ತುಮಕೂರು:
ದಿನೇ ದೆನೇ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಆತಂಕ ಹೆಚ್ಚುತ್ತಿದೆ.
ಜಿಲ್ಲೆಯ ಕೆಹೆಚ್‍ಬಿ ಕಾಲೋನಿಯ ಪಿ-535 ಮೃತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಪಿ-553 ವ್ಯಕ್ತಿಗೂ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ತಿಳಿಸಿದ್ದಾರೆ.
ಮೃತ ಪಿ-535 ವ್ಯಕ್ತಿಯು ಪ್ರಾಥಮಿಕ ಸಂಪರ್ಕದಲ್ಲಿದ್ದ ಅವರ ಕುಟುಂಬ ಸದಸ್ಯರ 4 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ 3 ಮಾದರಿಗಳು ನೆಗೆಟಿವ್ ಬಂದಿದ್ದು, ಮೃತ ವ್ಯಕ್ತಿಯ ಪತ್ನಿಗೆ ಪಾಸಿಟಿವ್ ಬಂದಿದ್ದು, ಅವರನ್ನು ಐಸೋಲೇಶನ್ ಮಾಡಲಾಗಿದೆ.
ಉಳಿದಂತೆ ಮೃತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದ್ದು, ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿದ್ದು, ಅವರನ್ನು ಸಹ ಪರೀಕ್ಷೆಗೊಳಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 5 ಜನರಿಗೆ ಸೋಂಕು ತಗಲಿದ್ದು ಇಬ್ಬರು ಮೃತಪಟ್ಟಿದ್ದು. ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದು ಒಬ್ಬರು ಗುಣಮುಖರಾಗಿದ್ದಾರೆ.