ತುಮಕೂರು: 

 

      ಮೆಡಿಕಲ್ ಸ್ಟೋರೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಔಷಧಿಗಳು ಹಾಗೂ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ.

      ಜಿಲ್ಲೆಯ ಯಲ್ಲಾಪುರದ ಬಾಲಾಜಿ ಮೆಡಿಕಲ್ ಸ್ಟೋರ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದರ ಪರಿಣಾಮ ಸ್ಟೋರ್ ನಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸುಮಾರು 5 ಲಕ್ಷ ರೂ. ಮೌಲ್ಯದ ಔಷಧಿಗಳು ಸೇರಿದಂತೆ 10 ಲಕ್ಷ ರೂಪಾಯಿಗೂ ಹೆಚ್ಚು ಬೆಲೆಬಾಳುವ ಪೀಠೋಪಕರಣಗಳು ಸುಟ್ಟು ಕರಕಲಾಗಿದೆ.

      ಮೆಡಿಕಲ್‍ಗೆ ಹೊತ್ತಿಕೊಂಡಿದ್ದ ಬೆಂಕಿ ತೀವ್ರಗೊಂಡ ಪರಿಣಾಮ ಪಕ್ಕದಲ್ಲಿದ್ದ ಕ್ಲಿನಿಕ್‍ಗೂ ಬೆಂಕಿ ತಗುಲಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

      ಘಟನೆ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅನಾಹುತಕ್ಕೆ ಕಾರಣವೇನು ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

(Visited 11 times, 1 visits today)