ತುಮಕೂರು:
ತುಮಕೂರು(ದ) ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಇಂದು ನಡೆದ ಎಸ್‍ಎಸ್‍ಎಲ್‍ಸಿ ವಿಜ್ಞಾನ ವಿಷಯ ಪರೀಕ್ಷೆಗೆ ನೋಂದಣಿಯಾಗಿರುವ 33781 ವಿದ್ಯಾರ್ಥಿಗಳ ಪೈಕಿ 33130 ವಿದ್ಯಾರ್ಥಿಗಳು ಹಾಜರಾಗಿದ್ದು, 651 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ತುಮಕೂರು(ದ):
ವಿಜ್ಞಾನ ವಿಷಯ ಪರೀಕ್ಷೆಗೆ ವಿದ್ಯಾರ್ಥಿಗಳು ನೋಂದಣಿಯಾಗಿರುವ 20976 ವಿದ್ಯಾರ್ಥಿಗಳ ಪೈಕಿ 20792 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 184 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಮಧುಗಿರಿ:
ವಿಜ್ಞಾನ ವಿಷಯ ಪರೀಕ್ಷೆಗೆ ವಿದ್ಯಾರ್ಥಿಗಳು ನೋಂದಣಿಯಾಗಿರುವ 12805 ವಿದ್ಯಾರ್ಥಿಗಳ ಪೈಕಿ 12338 ವಿದ್ಯಾರ್ಥಿಗಳು ಹಾಜರಾಗಿದ್ದು, 467 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 8 ವಿದ್ಯಾರ್ಥಿಗಳು ನೆರೆ ರಾಜ್ಯಗಳಿಂದ, 21 ವಿದ್ಯಾರ್ಥಿಗಳು ಕಂಟೈನ್ಮೆಂಟ್ ಪ್ರದೇಶಗಳಿಂದ, ಅನಾರೋಗ್ಯದಿಂದ ವಿಶೇಷ ಕೊಠಡಿಯಲ್ಲಿ ಒಬ್ಬ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದಾರೆ. ಮೊದಲ ಬಾರಿಗೆ 12280 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾದ ಖಾಸಗಿ ಅಭ್ಯರ್ಥಿಗಳ ದಾಖಲಾತಿ 288 ಈ ಪೈಕಿ 223 ಹಾಜರಿ, 65 ಗೈರು ಹಾಜರಾಗಿದ್ದಾರೆ. ಸರ್ಕಾರಿ ಖಾಸಗಿ ವಸತಿ ನಿಲಯದಲ್ಲಿದ್ದು 96 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ವಿದ್ಯಾರ್ಥಿಗಳ ಶಾಲಾ ಅಭ್ಯರ್ಥಿಗಳು 321 ವಲಸೆ ವಿದ್ಯಾರ್ಥಿಗಳಲ್ಲಿ 319 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ ಇಬ್ಬರು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷೆಯು ಶಾಂತಿಯುತವಾಗಿ ನಡೆಯಿತು ಎಂದು ಅವರು ತಿಳಿಸಿದ್ದಾರೆ.