ತುಮಕೂರು:

      ತುಮಕೂರು ಸ್ಮಾರ್ಟ್ ಸಿಟಿ ವತಿಯಿಂದ ಜಿಲ್ಲಾ ಆಸ್ಪತ್ರೆಗೆ ನೂತನ ಎ.ಎಲ್.ಎಸ್ ಆಂಬುಲೆನ್ಸ್ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಟಿ ರಂಗಸ್ವಾಮಿ ತಿಳಿಸಿದ್ದಾರೆ.

      ಕೋವಿಡ್-19 ಹಿನ್ನೆಲೆಯಲ್ಲಿ ಸೋಂಕಿತರನ್ನು ಕರೆತರಲು ಜಿಲ್ಲಾಸ್ಪತ್ರೆಗೆ 54 ಲಕ್ಷ ರೂ. ಮೊತ್ತದ ಒಂದು ಜೀವರಕ್ಷಕ ಎ.ಎಲ್.ಎಸ್ ಆಂಬುಲೆನ್ಸ್ ಅನ್ನು ಒದಗಿಸಲಾಗಿದೆ. ಜಿಲ್ಲಾಸ್ಪತ್ರೆ ಮನವಿ ಮೇರೆಗೆ ಈ ಅತ್ಯಾಧುನಿಕ ಆಂಬುಲೆನ್ಸ್ ಅನ್ನು ಒದಗಿಸಲಾಗಿದ್ದು, ಆಂಬುಲೆನ್ಸ್‍ನಲ್ಲಿ ಒಂದು Portable ventilator, Syringe infusion pump, Wheel chair cum Evacuation chair, Intubation kit, Advanced portable suction unit ಮತ್ತಿತರೆ ಪರಿಕರಗಳನ್ನೊಳಗೊಂಡಿದೆ. 

      ಜಿಲ್ಲಾಸ್ಪತ್ರೆಯ ಟ್ರಾಮಾ ಕೇರ್ ವಿಭಾಗದಿಂದ ರೋಗಿಗಳನ್ನು ಉನ್ನತ ಮಟ್ಟದ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗಳಿಗೆ ಕರೆದೊಯ್ಯಲು ಹಾಗೂ ಅಪಘಾತ ಸ್ಥಳದಿಂದ ಗಾಯಾಳುಗಳನ್ನು ಟ್ರಾಮಾ ಕೇರ್ ಸೆಂಟರ್‍ಗೆ ಕರೆತರಲು ಸಹ ಈ ಆಂಬುಲೆನ್ಸ್ ಅನ್ನು ಬಳಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

(Visited 21 times, 1 visits today)