ತುಮಕೂರು:

      ಜಿಲ್ಲೆಯಲ್ಲಿಂದು 24 ಹೊಸ ಕೊವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 292ಕ್ಕೆ ಏರಿಕೆಯಾಗಿದೆ ಎಂದು ಡಿ.ಹೆಚ್.ಓ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ಇಂದು ಪಾವಗಡ ತಾಲ್ಲೂಕಿನಲ್ಲಿ 14, ಗುಬ್ಬಿ-3, ಕೊರಟಗೆರೆ-2 ಹಾಗೂ ಚಿಕ್ಕನಾಯಕನಹಳ್ಳಿ ಕುಣಿಗಲ್, ಮಧುಗಿರಿ, ತುಮಕೂರು, ಹಾಗೂ ತುರುವೇಕೆರೆ ತಾಲ್ಲೂಕಿನಲ್ಲಿ ತಲಾ ಒಂದು ಸೇರಿ ಒಟ್ಟು 24 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಅಲ್ಲದೆ ಓರ್ವ ಸೋಂಕಿನಿಂದ ಮೃತಪಟ್ಟಿದ್ದಾರೆ.

      ಇಂದು ಆಸ್ಪತ್ರೆಯಿಂದ ಇಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 67 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 215 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 10 ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಡಿ.ಹೆಚ್.ಓ. ಡಾ||ನಾಗೇಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

(Visited 21 times, 1 visits today)