ಗುಬ್ಬಿ:

      ಸರ್ಕಾರಿ ನೌಕರರ ಮೇಲೆ ದಬ್ಬಾಳಿಕೆ ಮತ್ತು ದೌರ್ಜನ್ಯ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತಹ ವ್ಯಕ್ತಿಗಳನ್ನು ಯಾವುದೇ ಮೂಲಾಜಿಲ್ಲದೇ ಕಾನೂನಿನ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಕಾನೂನು ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾದುಸ್ವಾಮಿ ಎಚ್ಚೆರಿಸಿದರು.

      ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಕದರೇಗೌಡನಪಾಳ್ಯದಲ್ಲಿ ಬಂಗಾರ ಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸರ್ಕಾರಿ ನೌಕರರು ಅವರದ್ದೇ ಆದ ಕಾನೂನು ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು. ಇದರಿಂದ ಕೆಲವು ಜನಗಳಿಗೆ ವ್ಯತ್ಯಸವಾಗುತ್ತಿದ್ದು ಇದನ್ನೇ ವ್ಯಕ್ತಿಗತವಾಗಿ ತಗೆದುಕೊಂಡು ಚಾಕುವಿನಿಂದ ಹಿರುಯುವಂತಹ ಕೆಲಸವನ್ನು ಮಾಡಿರುವಂತಹ ವ್ಯಕ್ತಿಗೆ ಯಾವುದೇ ಸಹಾನುಭೂತಿ ತೋರಿಸದೇ ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ತಿಳಿಸಿದ ಅವರು ಮೃತ ಕುಟುಂಬದವರಿಗೆ ಸಹಕಾರದಿಂದ ನೀಡುವ ಎಲ್ಲಾ ಸೌಕರ್ಯಗಳನ್ನು ನೀಡಲಾಗುತ್ತದೆ ಇನ್ನು ಮುಂದೆ ಯಾವುದೇ ಅಧಿಕಾರಿಗಳು ಹಿಂಜೆರಿಯುವಂತಹ ವಾತವರಣವನ್ನು ಸೃಷ್ಠಿ ಮಾಡುವುದಿಲ್ಲ ಎಂದು ತಿಳಿಸಿದರು.

      ಅಬಕಾರಿ ಸಚಿವ ಹೆಚ್.ನಾಗೇಶ್ ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ ಸಂದರ್ಭದಲ್ಲಿ ಕುಟುಂಬ ಸದಸ್ಯರು ಈ ರೀತಿಯ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿ ಮುಂದೆ ಇಂತಹ ಘಟನೆಗಳು ಆಗದ ರೀತಿ ಸೂಕ್ತ ಕಾನೂನು ರೂಪಿಸುವಂತೆ ಮನವಿ ಮಾಡಿದರು.
ನಂತರ ಮಾತಾನಾಡಿದ ಸಚಿವರು ನಿನ್ನೆ ನಡೆದ ಘಟನೆಗೆ ಸಂತಾಪ ಸೂಚಿಸಿ ಈ ರೀತಿಯ ಕೃತ್ಯಕ್ಕೆ ಮುಂಚೆಯೇ ವ್ಯವಸ್ಥಿತ ಸಂಚನ್ನು ರೂಪಿಸಿ ಏಕಾಏಕಿ ಚಾಕುವಿನಿಂದ ಇರಿ ದು ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯ ಮೇಲೆ ಕಾನೂನಿನ ಕರುಣೆಯನ್ನು ತೋರಿಸದೇ ಶಿಕ್ಷೆಗೆ ಒಳ ಪಡಿಸಲಾಗುತ್ತದೆ ಎಂದು ತಿಳಿಸಿದರು.   

     ಸರ್ಕಾರದ ಸಕಲ ಗೌರವಗಳೊಂದಿಗೆ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆಯನ್ನು ನಡೆಸಲಾಗಿತ್ತು.

      ಬಿ.ಕೆ.ಚಂದ್ರಮೌಳೇಶ್ವರ ಅವರ ಅಂತ್ಯಕ್ರಿಯೆಯಲ್ಲಿ ಕೋಲಾರ ಉಸ್ತುವಾರಿ ಸಚಿವರಾದ ಹೆಚ್.ನಾಗೇಶ್, ಕೋಲಾರ ಸಂಸದ ಎಸ್. ಮುನಿಸ್ವಾಮಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ತುಮಕೂರು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್, ಕೋಲಾರ ಜಿಲ್ಲಾಧಿಕಾರಿ ಸಿ. ಸತ್ಯಭಾಮ, ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಕೆ. ವಂಶಿಕೃಷ್ಣ, ಉಪವಿಭಾಗಾಧಿಕಾರಿ ಅಜಯ್, ಕೋಲಾರ ಉಪವಿಭಾಗಾಧಿಕಾರಿ ಸೋಮಶೇಖರ್, ತಹ ಶೀಲ್ದಾರ್‍ಗಳಾದ ಡಾ: ಪ್ರದೀಪ್ ಕುಮಾರ್, ಮೋಹನ್‍ಕುಮಾರ್ ಸೇರಿದಂತೆ ಅಧಿಕಾರಿಗಳು, ಕುಟುಂಬಸ್ಥರು, ಅಭಿಮಾನಿಗಳು ಭಾಗವಹಿಸಿ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು

(Visited 10 times, 1 visits today)