ತುಮಕೂರು :
ಜಿಲ್ಲೆಯಲ್ಲಿಂದು 32 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 597 ಕ್ಕೆ ಏರಿಕೆಯಾಗಿದೆ ಎಂದು ಡಿ.ಹೆಚ್.ಓ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.
ಇಂದು ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 17, ಚಿಕ್ಕನಾಯಕನಹಳ್ಳಿ -6, ಮಧುಗಿರಿ-8, ಕೊರಟಗೆರೆ -1 ಸೇರಿ ಒಟ್ಟು 32 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.
ಈವರೆಗೆ 213 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 367 ಸಕ್ರಿಯ ಪ್ರಕರಣಗಳಿದ್ದು, ಇಂದು 58 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.
ಈವರೆಗೆ 17 ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(Visited 393 times, 1 visits today)