ತುಮಕೂರು :
ಜಿಲ್ಲೆಯಲ್ಲಿ ಇಂದು 59 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 991 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು ತುಮಕೂರು-22, ಮಧುಗಿರಿ-8, ಗುಬ್ಬಿ ಹಾಗೂ ತಿಪಟೂರಿನಲ್ಲಿ ತಲಾ 7, ಕುಣಿಗಲ್ ಹಾಗೂ ತುರುವೇಕೆರೆಯಲ್ಲಿ ತಲಾ 5, ಚಿಕ್ಕನಾಯಕನಹಳ್ಳಿ-2, ಕೊರಟಗೆರೆ, ಪಾವಗಡ ಹಾಗೂ ಶಿರಾ ತಲಾ 1 ಸೇರಿದಂತೆ ಒಟ್ಟು 67 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.
ಜಿಲ್ಲಾಸ್ಪತ್ರೆಯಿಂದ 35 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 523 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 430 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 38 ಮಂದಿ ಸಾವನ್ನಪ್ಪಿದ್ದು, ಶುಕ್ರವಾರ-03 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
(Visited 9 times, 1 visits today)