ತುಮಕೂರು:
ಜಿಲ್ಲೆಯ 21 ಪರೀಕ್ಷಾ ಕೇಂದ್ರಗಳಲ್ಲಿ ಜುಲೈ 30 ಮತ್ತು 31ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಿ ಜಿಲ್ಲಾ ದಂಡಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವ ವ್ಯಕ್ತಿಗಳು ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಷೇಧಾಜ್ಞೆಯು ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ 10 ರಿಂದ ಸಂಜೆ 4-30ಗಂಟೆವರೆಗೆ ಜಾರಿಯಲ್ಲಿರುತ್ತದೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ಈ ಅವಧಿಯಲ್ಲಿ ನಿಷೇಧಿತ ಪ್ರದೇಶಗಳಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(Visited 7 times, 1 visits today)