ತುಮಕೂರು :
ಪ್ರಸಿದ್ಧ ಗೊರವನಹಳ್ಳಿ ವರಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿರುವ ಮಾರಮ್ಮ ದೇಗುಲದ ಅರ್ಚಕರ ಪತ್ನಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ವರಮಹಾಲಕ್ಷ್ಮಿ ದೇವಸ್ಥಾನವನ್ನು ಬಂದ್ ಮಾಡಲಾಗಿದೆ.
ಇತ್ತೀಚೆಗೆ ದೇವಾಲಯದ ಅರ್ಚಕರ ಪತ್ನಿಗೆ ಕೊರೋನಾ ಸೋಂಕು ದೃಡಪಟ್ಟಿತ್ತು, ಇದೀಗ ಅವರು ಗುಣಮುಖವಾಗಿ ಮನೆಗೆ ಬಂದಿದ್ದಾರೆ. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬಸ್ಥರ ಸ್ವ್ಯಾಬ್ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದೇವಸ್ಥಾನದ ಮೂಲಗಳು ಸ್ಪಷ್ಟಪಡಿಸಿವೆ.
ಜುಲೈ 20ರಿಂದ ದೇವಸ್ಥಾನದ ಬಾಗಿಲು ಮುಚ್ಚಲಾಗಿದ್ದು, ಭಕ್ತರ ದರ್ಶನ ಹಾಗೂ ಪೂಜೆಗೆ ನಿರ್ಬಂಧ ವಿಧಿಸಲಾಗಿದೆ. ಪೂಜೆ-ಪುನಸ್ಕಾರವನ್ನು ಸ್ಥಗಿತ
(Visited 8 times, 1 visits today)