ತುಮಕೂರು :
ಜಿಲ್ಲೆಯಲ್ಲಿಂದು 101 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1718 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು ತುಮಕೂರು-40, ಕುಣಿಗಲ್-06, ತಿಪಟೂರು-21, ಮಧುಗಿರಿ-02, ಪಾವಗಡ-8, ಗುಬ್ಬಿ-7, ತುರುವೇಕೆರೆ-04, ಕೊರಟಗೆರೆ-07, ಚಿಕ್ಕನಾಯಕನಹಳ್ಳಿ-06, ಸೇರಿದಂತೆ ಒಟ್ಟು 101 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.
ಇಂದು ಜಿಲ್ಲಾಸ್ಪತ್ರೆಯಿಂದ 11 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 736 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 844 ಸಕ್ರಿಯ ಪ್ರಕರಣಗಳಿದ್ದು, ಇಂದು ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಈವರೆಗೆ 52 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(Visited 13 times, 1 visits today)