ತುಮಕೂರು :
ಜಿಲ್ಲೆಯಲ್ಲಿ 92 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3211 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 31, ಪಾವಗಡ-09, ಕುಣಿಗಲ್-09, ಮಧುಗಿರಿ-10, ಕೊರಗಟಗೆರೆ-07, ತುರುವೇಕೆರೆ-05, ಶಿರಾ-03, ತಿಪಟೂರು-08, ಗುಬ್ಬಿ-04, ಚಿಕ್ಕನಾಯಕನಹಳ್ಳಿ-06 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 92 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.
ಜಿಲ್ಲಾಸ್ಪತ್ರೆಯಿಂದ 62 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1043 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1040 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 96 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
(Visited 10 times, 1 visits today)