ತುಮಕೂರು :
ಜಿಲ್ಲೆಯಲ್ಲಿ 50 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3470 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 14, ಪಾವಗಡ-11, ಕುಣಿಗಲ್-01, ಮಧುಗಿರಿ-03, ಕೊರಟಗೆರೆ-01, ತುರುವೇಕೆರೆ-02, ಶಿರಾ-01, ತಿಪಟೂರು-03, ಗುಬ್ಬಿ-05, ಚಿಕ್ಕನಾಯಕನಹಳ್ಳಿ-09 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 101 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.
ಜಿಲ್ಲಾಸ್ಪತ್ರೆಯಿಂದ 103 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 2462 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 900 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 108 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
(Visited 10 times, 1 visits today)