ತುಮಕೂರು :
ಜಿಲ್ಲೆಯಲ್ಲಿ 222 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6662 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 57, ಪಾವಗಡ-27, ಕುಣಿಗಲ್-21, ಮಧುಗಿರಿ-20, ಕೊರಗಟಗೆರೆ-09, ತುರುವೇಕೆರೆ-16, ಶಿರಾ-09, ತಿಪಟೂರು-27, ಗುಬ್ಬಿ-13, ಚಿಕ್ಕನಾಯಕನಹಳ್ಳಿ-23 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 222 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.
ಜಿಲ್ಲಾಸ್ಪತ್ರೆಯಿಂದ 189 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 4707 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1778 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 171 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
(Visited 7 times, 1 visits today)