ತುಮಕೂರು: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕು ಮಜತಿ ಗ್ರಾಮದ ಪರಸಪ್ಪ ಹಾಗೂ ಲಕ್ಷಿö್ಮÃ ದಂಪತಿ ಪುತ್ರ ಕೃಷ್ಣಾ ತಳವಾರ ಅವರು ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಬಿ.ರಮೇಶ್ ಮಾರ್ಗದರ್ಶನದಲ್ಲಿ ಮಂಡಿಸಿದ ‘ಕರ್ನಾಟಕದ ಶೈಕ್ಷಣಿಕ ಮತ್ತು ಔದ್ಯೋಗಿಕ ಸಾಧನೆಯ ಮೇಲೆ 371(ಜೆ) ಪ್ರಭಾವ’ ಕುರಿತ ಸಂಶೋಧನ ಮಹಾಪ್ರಬಂಧಕ್ಕೆ ತುಮಕೂರು ವಿವಿಯು ಪಿಎಚ್.ಡಿ ಪದವಿ ನೀಡಿದೆ.
Author: News Desk Benkiyabale
ಕೊರಟಗೆರೆ: ಕೊರಟಗೆರೆ ತಾಲ್ಲೂಕಿನಲ್ಲಿ ನೂತನವಾಗಿ ರಾಗಿ ಖರೀದಿ ಕೇಂದ್ರವನ್ನು ತೆರೆಯಲಾಗಿದ್ದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಕೊರಟಗೆರೆ ತಾಲ್ಲೂಕಿನ ರೈತರಿಗೆ ಅನುಕೂಲವಾಗಲು ರಾಗಿ ಖರೀದಿ ಕೇಂದ್ರವನ್ನು ತಾಲ್ಲೂಕಿನಲ್ಲಿ ತೆರೆಯುವಂತೆ ಹಲವು ವರ್ಷಗಳ ಬೇಡಿಕೆಯನ್ನು ರೈತರು ಇಟ್ಟಿದ್ದರು, ಇದನ್ನು ಮನಗೊಂಡ ಗೃಹಸಚಿವ ಡಾ.ಜಿ.ಪರಮೇಶ್ವರ್ ಇತ್ತೀಚೆಗೆ ಕೊರಟಗೆರೆ ಪಟ್ಟಣ ಪಂಚಾಯಿತಿಯಲ್ಲಿ ನಡೆದ ಕೆ.ಡಿ.ಬಿ. ಸಾಮಾನ್ಯ ಸಭೆಯಲ್ಲಿ ತಾಲ್ಲೂಕಿನಲ್ಲಿ ಶೀಘ್ರವಾಗಿ ರಾಗಿ ಖರೀದಿ ಕೇಂದ್ರವನ್ನು ತೆರೆಯುವಂತೆ ಅಧಿಕಾರಿಗಳಗೆ ಆದೇಶಿಸಿದರು, ಸಚಿವರ ಆದೇಶದ ಅನ್ವಯ ತಾಲ್ಲೂಕಿನ ಅಕ್ಕಿರಾಂಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ರಾಗಿ ಖರೀದಿ ಕೇಂದ್ರವನ್ನು ಮಾರ್ಚ್ 6ರ ಬುಧವಾರದಂದು ತೆರೆಯಲಾಯಿತು. ರಾಗಿ ಖರೀದಿ ಕೇಂದ್ರ ಪ್ರಾರಂಭವಾದ ದಿನದಿಂದ ರೈತರು ದಾಖಲೆ ಸಂಖ್ಯೆಯಲ್ಲಿ ರಾಗಿಯನ್ನು ಎ.ಪಿ.ಎಂ.ಸಿ ಮಾರುಕಟ್ಟೆಗೆ ನೀಡುತ್ತಿದ್ದಾರೆ, ಪ್ರತಿ ಕ್ವಿಂಟಲ್ಗೆ ಸರ್ಕಾರವು 4290 ಸಾವಿರ ಹಣವನ್ನು ನಿಗಧಿಪಡಿಸಲಾಗಿದ್ದು ಒಬ್ಬ ರೈತ 20 ಕ್ವಿಂಟಲ್ವರೆಗೆ ರಾಗಿಯನ್ನು ನೀಡಬಹುದಾಗಿದೆ ಮಾರಾಟ ಮಾಡಿದ ಹಣವನ್ನು ಸರ್ಕಾರವು ರೈತರ ಖಾತೆಗೆ ನೇರ ಜಮಾವಣೆ ಮಾಡುತ್ತz. ತಾಲ್ಲೂಕಿನ ರೈತರು ಮಧುಗಿರಿ ಅಥವಾ ತುಮಕೂರು ಎ.ಪಿ.ಎಂ.ಸಿ. ಗಳಿಗೆ…
ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯ್ತಿಯಲ್ಲಿ ಬುಧವಾರ ಬಹಿರಂಗ ಹರಾಜು ಇಸ್ತಿಹಾರ್ ಏರ್ಪಡಿಸಿದ್ದರು. ಇದರಲ್ಲಿ ಪಂಚಾಯ್ತಿಯ ಅನುಪಯುಕ್ತ ಸಾಮಗ್ರಿಗಳ ಹರಾಜು ಮಾಡಿದ್ದರು. ಆದರೆ ಕೊಳವೆಬಾವಿಗಳ ಪಂಪ್ ಮತ್ತು ಮೋಟರ್ ಇಡುವುದಾಗಿ ಹೇಳಿ ಇಡದೆ ಯಾಮಾರಿಸಿದರು ಎಂದು ಹರಾಜಿಗೆ ಬಂದಿದ್ದ ಗುಜರಿ ವ್ಯಾಪಾರಿಗಳು ಆರೋಪಿಸಿದರು. ಹರಾಜು ಪ್ರಕಟಣೆ ನೋಡಿದ ತಕ್ಷಣ ಪಪಂ ಮುಖ್ಯಾಧಿಕಾರಿ ನಾಗಭೂಷಣ್ ಅವರಿಗೆ ದೂರವಾಣಿ ಕರೆ ಮಾಡಿ ಹರಾಜಿಗೆ ಏನೇನು ಐಟಂ ಇಡುತ್ತಿದ್ದೀರಿ ಎಂದು ಕೇಳಿದಾಗ ನಿರುಪಯುಕ್ತ ಪಂಪ್ ಮೋಟರ್ ಸೇರಿದಂತೆ ವಿವಿಧ ಕಬ್ಬಿಣದ ಗುಜರಿ ಐಟಂಗಳಿವೆ ಎಂದಿದ್ದರು. ಹಾಗಾಗಿ ಹರಾಜಿನಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿAದ ಬಂದಿದ್ದೇನೆ. ಇಲ್ಲಿ ನೋಡಿದರೆ ಟ್ಯೂಬ್ ಲೈಟ್ನ ಫ್ರೇಮ್ಗಳೇ ಅಧಿಕವಾಗಿದ್ದು ೫ ಸಾವಿರ ರೂ.ಗಳಿಗೂ ಬೆಲೆ ಬಾಳದ ಸಾಮಗ್ರಿಗಳಿವೆ ಎಂದು ಗುಜರಿ ವ್ಯಾಪಾರಿ ಪಾಷಾ ಆರೋಪಿಸಿದರು. ಅಲ್ಲದೆ ನಿಮ್ಮನ್ನು ಬಾ ಎಂದು ಕರೆದಿದ್ದೇವೆಯೇ ಎಂದು ಅವಮಾನಿಸಿದ್ದಾರೆ ಎಂದರು. ಹುಳಿಯಾರಿನ ಗುಜರಿ ವ್ಯಾಪಾರಿ ನಾಗಣ್ಣ ಅವರು ಮಾತನಾಡಿ ಈ ಹಿಂದೆ ಗೋಡನ್ನಿಂದ ಗುಜರಿ ಐಟಂ ಹೊರತೆಗೆದಾದ ೧೦ ಸಣ್ಣ…
ತುಮಕೂರು: ನಗರದಜಿಲ್ಲಾ ಸಾರ್ವಜನಿಕಆಸ್ಪತ್ರೆಯಲ್ಲಿ ಹೊರಗುತ್ತಿಗೆಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಡಿ ಗ್ರೂಪ್ ನೌಕರರುತಮ್ಮ ಸಮಸ್ಯೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ಬುಧವಾರ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಅಸ್ಗರ್ ಬೇಗ್ಅವರಿಗೆ ಮನವಿ ಪತ್ರಸಲ್ಲಿಸಿದರು. ಈ ನೌಕರರ ಹೋರಾಟದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು. ಗುತ್ತಿಗೆ ಪದ್ದತಿಯನ್ನು ರದ್ದು ಮಾಡಿ ನಮ್ಮನ್ನು ನೇಮಕ ಮಾಡಿಕೊಂಡು ನೇರ ವೇತನ ಪಾವತಿ ಮಾಡುವ ವ್ಯವಸ್ಥೆಯಡಿ ತರಬೇಕು ಎಂದು ನೌಕರು ಮನವಿ ಮಾಡಿದರು. ಗುತ್ತಿಗೆ ಏಜೆನ್ಸಿಯವರು ಸಕಾಲದಲ್ಲಿ ತಮಗೆ ವೇತನ ನೀಡುವುದಿಲ್ಲ, ಇದರಿಂದ ಸಂಸಾರ ನಿರ್ವಹಣೆಗೆ ಕಷ್ಟವಾಗುತ್ತಿದೆ. ಅಲ್ಲದೆ, ನಮಗೆ ಪಿ.ಎಫ್, ಇಎಸ್ಐ ನಂಬರ್ ಕೊಟ್ಟಿಲ್ಲ, ಪ್ರತಿ ತಿಂಗಳ ಹತ್ತನೇ ತಾರೀಖಿನೊಳಗೆ ವೇತನ ನೀಡುವಂತೆಕ್ರಮ ಕೈಗೊಳ್ಳಲು ಶಸ್ತçಚಿಕಿತ್ಸಕರಿಗೆ ಕೋರಿಕೆ ಸಲ್ಲಿಸಿದರು. ಹೊರಗುತ್ತಿಗೆ ಪದ್ದತಿ ವಿಚಾರವಾಗಿ ಸರ್ಕಾರತೀರ್ಮಾನ ಮಾಡಬೇಕು, ಅಲ್ಲಿಯವರೆಗೂ ಇದೇ ವ್ಯವಸ್ಥೆಯಲ್ಲಿ ಕೆಲಸ ಮಾಡುವುದು ಅನಿವಾರ್ಯ ಎಂದು ಹೇಳಿದ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಅಸ್ಗರ್ ಬೇಗ್, ನಿಮ್ಮ ಬೇಡಿಕೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತಕ್ರಮ ಕೈಗೊಳ್ಳಲು ಮನವಿ ಮಾಡುತ್ತೇನೆಎಂದು ಹೇಳಿದರು. ಕನ್ನಡ ಸೇನೆ…
ತುಮಕೂರು: ಜಿಲ್ಲೆಯಲ್ಲಿ ಯಾವುದೇ ಹಕ್ಕಿಜ್ವರ ಪ್ರಕರಣಗಳು ವರದಿಯಾಗಿಲ್ಲ. ಚಿಕ್ಕಬಳ್ಳಾಪುರದಲ್ಲಿ ಮಾತ್ರ ಒಂದು ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗೆ ಸಂಪರ್ಕ ಹೊಂದಿರುವ ಮಧುಗಿರಿ ತಾಲ್ಲೂಕು ಬಳಿ ಮುನ್ನೆಚ್ಚರಿಕೆ ಕ್ರಮವಾಗಿ ಚೆಕ್ ಪೋಸ್ಟ್ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು. ನಗರದ ಪಾಲಿಕೆ ಆವರಣದಲ್ಲಿ ನೀರು ಸರಬರಾಜು ನೌಕರರು ನಡೆಸುತ್ತಿರುವ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಗುತ್ತಿಗೆ ನೌಕರರ ಸಮಸ್ಯೆ ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಯಾವುದೇ ಕೋಳಿ ಫಾರಂಗಳ ಪ್ರದೇಶಗಳಲ್ಲೂ ಹಕ್ಕಿಜ್ವರ ಪ್ರಕರಣ ಕಂಡು ಬಂದಿಲ್ಲ ಎಂದರು. ನಮ್ಮ ದೇಶದ ಆಹಾರ ಮಾಡುವ ವಿಧಾನವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಮಾಂಸವನ್ನು ಸುಮಾರು ೭೦ ಡಿಗ್ರಿಯಷ್ಟು ಬೇಯಿಸಿ ನಂತರ ತಿನ್ನಬೇಕು. ಯಾವುದೇ ಕಾರಣಕ್ಕೂ ಹಸಿ ಮಾಂಸವನ್ನು ಬಳಸಬಾರದು ಎಂದು ಅವರು ಹೇಳಿದರು.
ತುಮಕೂರು: ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಪದ್ದತಿ ರದ್ದುಪಡಿಸಿ ನೇರ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನ, ಖಾಲಿ ಹುದ್ದೆ ಭರ್ತಿ, ಗೃಹ ಭಾಗ್ಯ ಯೋಜನೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ೪ ದಿನಗಳಿಂದ ನಗರಕ್ಕೆ ನೀರು ಸರಬರಾಜು ಸ್ಥಗಿತಗೊಳಿಸಿ ಜಿಲ್ಲಾ ನೀರು ಸರಬರಾಜು ನೌಕರರು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಮುಷ್ಕರದ ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಮುಷ್ಕರ ನಿರತ ಪಾಲಿಕೆ ಗುತ್ತಿಗೆ ನೀರು ಸರಬರಾಜು ನೌಕರರ ಅಹವಾಲುಗಳನ್ನು ಆಲಿಸಿದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು, ನಗರದಲ್ಲಿ ಸುಮಾರು ೧೦ ಲಕ್ಷಕ್ಕೂ ಅಧಿಕ ಜನ ಸುಖವಾಗಿ ಬದುಕು ನಡೆಸುತ್ತಿದ್ದಾರೆ ಎಂದರೆ ಅದಕ್ಕೆ ಕಾರಣಕರ್ತರು ನೀವೇ. ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತೆ ಮತ್ತು ನೀರು ತುಂಬಾ ಮುಖ್ಯವಾಗಿದೆ. ಇದಕ್ಕೆ ಮೂಲ ಕಾರಣಕರ್ತರು ನೀವುಗಳೇ. ಹಾಗಾಗಿ ನಿಮಗೆ ಜಿಲ್ಲಾಡಳಿತ ಹಾಗೂ ವೈಯುಕ್ತಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.…
ತುರುವೇಕೆರೆ: ರಾತ್ರಿ ವೇಳೆ ಮನೆ ಮುಂದೆ ಹಾಕಲಾಗಿದ್ದ ತೆಂಗಿಕಾಯಿ ರಾಶಿಯಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ನಡೆಸಿ ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ ತೊರೆಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಆನೇಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತೊರೆಮಾವಿನಹಳ್ಳಿ ಗ್ರಾಮದ ಕಲ್ಲೇಶ್ವರಸ್ವಾಮಿ ದೇವಾಲಯದ ಸಮೀಪವಿರುವ ಶಂಕರಪ್ಪ ಎಂಬುವರ ಮನೆ ಮುಂದೆ ತೆಂಗಿನ ಕಾಯಿ ರಾಶಿ ಹಾಕಲಾಗಿತ್ತು. ಈ ತೆಂಗಿನ ರಾಶಿ ಪಕ್ಕದಲ್ಲೇ ಇವರು ಸಾಕಿದ್ದ ನಾಯಿ ಮಲಗಿತ್ತು. ಮಧ್ಯರಾತ್ರಿ ಇದನ್ನು ಹೊಂಚು ಹಾಕಿರುವ ಚಿರತೆ ನಿಧಾನವಾಗಿ ಸದ್ದುಗದ್ದಲ ಇಲ್ಲದೆ ಮೆಲ್ಲನೆ ಹೋಗಿ ನಾಯಿ ಮೇಲೆ ದಾಳಿ ಮಾಡಿ ಹೊತ್ತುಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗ್ರಾಮದ ಹೃದಯಭಾಗಕ್ಕೆ ಚಿರತೆ ನುಗ್ಗಿ ಮನೆ ಮುಂದೆ ಮಲಗಿದ್ದ ನಾಯಿಯನ್ನು ಹೊತ್ತುಕೊಂಡು ಹೋಗಿರುವುದರಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ರಾತ್ರಿ ಮತ್ತು ಹಗಲು ವೇಳೆ ಗ್ರಾಮದ ಹೊರ ಭಾಗದಲ್ಲಿ ಜಮೀನುಗಳು, ತೋಟಗಳಿಗೆ ಹೋಗಲು ರೈತರು ಹಿಂದೇಟು ಹಾಕುವಂತಾಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಇತ್ತಕಡೆ ಗಮನ ಹರಿಸಿ…
ತುಮಕೂರು: ಜಿಲ್ಲೆಯಲ್ಲಿ ಇಂದಿನಿAದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಈ ಎರಡು ವಿಭಾಗಗಳಲ್ಲೂ 25768 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಯಾವುದೇ ರೀತಿಯ ಅಡಚಣೆಗಳಿಲ್ಲದೆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಲಲಿತವಾಗಿ ನಡೆಯಿತು. ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 13, ಕೊರಟಗೆರೆ ತಾಲ್ಲೂಕಿನಲ್ಲಿ 1, ಗುಬ್ಬಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಮಧುಗಿರಿ ತಾಲ್ಲೂಕಿನಲ್ಲಿ ತಲಾ 2, ಕುಣಿಗಲ್, ತಿಪಟೂರು, ಪಾವಗಡ ತಾಲ್ಲೂಕಿನಲ್ಲಿ ತಲಾ 3, ಸಿರಾ ತಾಲ್ಲೂಕಿನಲ್ಲಿ 4 ಸೇರಿ ಒಟ್ಟು 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ನಕಲು, ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ನಗರದಲ್ಲಿರುವ ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಜೂನಿಯರ್ ಕಾಲೇಜು, ಎಂಪ್ರೆಸ್ ಕಾಲೇಜು, ಸಿದ್ದಗಂಗಾ ಮಹಿಳಾ ಪದವಿ ಪೂರ್ವ ಕಾಲೇಜು, ಕಾಳಿದಾಸ ಪ.ಪೂ. ಕಾಲೇಜು ಸೇರಿದಂತೆ ಜಿಲ್ಲೆಯಾದ್ಯಂತ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಪೋಷಕರೊಂದಿಗೆ ಬೆಳಿಗ್ಗೆ 8 ಗಂಟೆಗೆ ಆಗಮಿಸಿ ತಮ್ಮ…
ತುಮಕೂರು: ಜಿಲ್ಲೆಯಲ್ಲಿ ಮಾರ್ಚ್ 1ರ ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು. ಜಿಲ್ಲಾ ಪಂಚಾಯತಿ ಭೌಗೋಳಿಕ ಮಾಹಿತಿ ಕೇಂದ್ರದಲ್ಲಿ ಶನಿವಾರ ವೆಬ್ಕಾಸ್ಟಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 35 ಕೇಂದ್ರಗಳಲ್ಲಿ ಮಾರ್ಚ್ 1 ರಿಂದ 20ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ನಡೆಸಲು ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇರಿಸಲು 40 ಗಣಕಯಂತ್ರಗಳನ್ನು ವ್ಯವಸ್ಥೆ ಮಾಡಲಾಗಿದ್ದು, 40 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಪೊಲೀಸ್ ಕಣ್ಗಾವಲಿನಲ್ಲಿ ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ತಲುಪಿಸಲು ಪ್ರತಿ ತಾಲ್ಲೂಕಿನಲ್ಲಿ ಭದ್ರತಾ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮೇಲುಸ್ತುವಾರಿಗಾಗಿ ಮೇಲುಸ್ತುವಾರಿ ಅಧಿಕಾರಿ, ಪ್ರತೀ ಪರೀಕ್ಷಾ ಕೊಠಡಿಗೆ ಮೇಲ್ವಿಚಾರಕರು, ಸ್ಕಾ÷್ವಡ್, ಪೊಲೀಸ್ ಹಾಗೂ ಆರೋಗ್ಯ…
ತುಮಕೂರು: ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯ ಅನುದಾನವನ್ನು ಕೇವಲ ಪರಿಶಿಷ್ಟ ಜಾತಿ, ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ ಮಾತ್ರ ಬಳಸಬೇಕು. ಆದರೆ, ಕಾಂಗ್ರೆಸ್ ಸರ್ಕಾರ ಎಸ್?ಸಿಪಿ, ಟಿಎಸ್?ಪಿ ಯೋಜನೆಯ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಈ ವರ್ಗಗಳಿಗೆ ಅನ್ಯಾಯ ಮಾಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಹರಿಹಾಯ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ 16 ಬಜೆಟ್ ಮಂಡಿಸಿದ್ದು, ಇದೀಗ 17ನೇ ಬಜೆಟ್ ಮಂಡಿಸಲು ಸಿದ್ದರಾಗಿದ್ದಾರೆ. ಆರ್ಥಿಕ ತಜ್ಞ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳು ಈ ಹಿಂದೆ ಎಸ್ಸಿ, ಎಸ್ಟಿ ಸಮುದಾಯಗಳ ಯೋಜನೆಗೆ ಮೀಸಲಿಟ್ಟ ಅನುದಾನವನ್ನು ಸಂಪೂರ್ಣವಾಗಿ ಬಿಡುಗಡೆ ಮಾಡದೆ ಸಮುದಾಯಕ್ಕೆ ಮೋಸ ಮಾಡಿದ್ದಾರೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರಕ್ಕೆ ಬಡವರು, ದಲಿತರ ಬಗ್ಗೆ ಕಾಳಜಿ ಇಲ್ಲ, ಬದಲಾಗಿ ನಿಷ್ಕಾಳಜಿ ಹೊಂದಿದೆ. ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗಿನಿAದ ಸಮುದಾಯದ ಅಭಿವೃದ್ಧಿಗೆ ಒತ್ತು ಕೊಟ್ಟಿಲ್ಲ. ಗ್ಯಾರಂಟಿಗಾಗಿ ದಲಿತ ಸಮುದಾಯದ ಹಣವನ್ನು ಬಳಕೆ ಮಾಡಿಕೊಳ್ಳುವ ಮೂಲಕ ಈ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ…