ತುಮಕೂರು: ನಗರದ ಸಮೀಪದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ದಂತ ಕಾಲೇಜಿನ ಪ್ರೊಸ್ತೋಡಾಂಟಿಕ್ಸ್ ಮತ್ತು ಕ್ರೌನ್ & ಬ್ರಿಡ್ಜ್ ವಿಭಾಗ ಹಾಗೂ ಭಾರತೀಯ ಪ್ರಾಸ್ತೋಡಾಂಟಿಕ್ ಸೊಸೈಟಿಯ ಸಹಯೋಗದೊಂದಿಗೆ ಪ್ರೊಸ್ತೋಡಾಂಟಿಕ್ಸ್ ದಿನಾಚರಣೆಯ ಅಂಗವಾಗಿ ‘ಕೃತಕ ಹಲ್ಲುಗಳÀ ಜೋಡಣೆ ಮತ್ತು ಮುಖ ಸೌಂದರ್ಯದ ಪುನರ್ ಸ್ಥಾಪನೆ ಕುರಿತ’ ಎರಡು ದಿನಗಳ ರಾಜ್ಯಮಟ್ಟದ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಾಗಾರವನ್ನು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ ಅವರು ಉದ್ಘಾಟಿಸಿ, ಮುಖ ಸೌಂದರ್ಯದ ಪುನರ್ ಸ್ಥಾಪನೆ ಮತ್ತು ಹಲ್ಲುಗಳ ಬದಲಿ ಜೋಡಣೆಯಲ್ಲಿ ದಂತ ವೈದ್ಯರ ಪಾತ್ರ ಮುಖ್ಯವಾಗಿರುತ್ತದೆ. ಅವರು ಪರಿಣಿತಿಯಿಂದಾಗಿ ವಿಪತ್ತುಗಳಂದ ಹಾನಿಗೊಳಗಾದ ಹಲ್ಲುಗಳ ಬದಲಿಗೆ ಕೃತಕ ಹಲ್ಲುಗಳನ್ನು ಜೋಡಿಸಿ, ನಿರ್ವಹಿಸಲು ಮತ್ತು ದಂತ ಹದಗೆಡುವುದನ್ನು ತಡೆಯಲು ಆಧುನಿಕ ಚಿಕಿತ್ಸಾ ಕ್ರಮಗಳನ್ನು ಅನುಸರಿಸಿ ಚಿಕಿತ್ಸೆ ನೀಡುತ್ತಾರೆ ಎಂದರು. ಕಾರ್ಯಾಗಾರದಲ್ಲಿ ಪ್ರಾಸ್ತವಿಕ ನುಡಿಗಳನ್ನಾಡಿದ ಶ್ರೀ ಸಿದ್ದಾರ್ಥ ದಂತ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರವೀಣ್ ಕುಡುವಾ, ದಂತ ಸಂರಕ್ಷಣೆಯಿAದ ಮುಖ ಸೌಂದರ್ಯ ಕಾಪಾಡಿಕೊಳ್ಳಲು ಸಾಧ್ಯ. ಒಂದು ವೇಳೆ ದುರಂತ…
Author: News Desk Benkiyabale
ಚಿಕ್ಕನಾಯಕನಹಳ್ಳಿ: ಪ್ರಧಾನಮಂತ್ರಿ ಸುರಕ್ಷಾಭೀಮ ವಿಮಾ ಯೋಜನೆಯಲ್ಲಿ ಕೇವಲರೂ.20 ತೊಡಗಿಸಿದರೆ ಆಕಸ್ಮಿಕ ಮರಣಕ್ಕೆ ರೂ.2ಲಕ್ಷ ದೊರೆಯಲಿದೆ ಎಂದು ಆರ್ಥಿಕ ಸಾಕ್ಷರಥಾ ಕೇಂದ್ರದ ಸಲಹೆಗಾರ ಆರ್.ಎಂ. ಕುಮಾರಸ್ವಾಮಿ ತಿಳಿಸಿದರು. ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ದುಗಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಚಿಹಳ್ಳಿ ಗ್ರಾಮದಲ್ಲಿ ನಡೆದ ಜನಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಕೇಂದ್ರ ಸರ್ಕಾರ ಸಾಮಾನ್ಯಜನರ ಅನುಕೂಲಕ್ಕಾಗಿ ಸಾಕ್ಷಷ್ಟು ಯೋಜನೆಗಳನ್ನು ನೀಡಿದೆ. ಬ್ಯಾಂಕ್ ಮೂಲಕ ರೈತರಿಗಾಗಿ ಕಿಸಾನ್ ಕ್ರೆಡಿಟ್ ಯೋಜನೆ, ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ಹಾಗೂ ಸುಲಭಕಂತುಗಳ ಹಲವು ವಿಮಾಯೋಜನೆ ಸೌಲಭ್ಯ ನೀಡಿದೆ. ಇದರಲ್ಲಿ ಬ್ಯಾಂಕ್ ಮೂಲಕ ಕೇವಲ ರೂ.20 ಕಂತನ್ನು ಪ್ರಧಾನ ಮಂತ್ರಿ ಸುರಕ್ಷಾಭೀಮಯೋಜನೆಯಲ್ಲಿಆಕಸ್ಮಿಕ ಮರಣಕ್ಕೆ ರೂ. 2 ಲಕ್ಷ ನೀಡಲಾಗುತ್ತೆ ಎಂದರು. ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆಯಲ್ಲಿ 436ರೂ. ಕಂತು ಕಟ್ಟಿದರೆ ಸಹಜ ಸಾವುಗಳಿಗೂಸಹ ರೂ.2ಲಕ್ಷ ದೊರೆಯಲಿದೆ ಎಂದರು. ಇದೇ ಸಂದರ್ಭದಲ್ಲಿ ಮಹಾವೀರ್ ಜೈನ್ ಆಸ್ಪತ್ರೆಯ ಸಹಯೋಗದಲ್ಲಿ ಮಂಜುನಾಥ್ ಆರಾದ್ಯರವರ ನೇತೃತ್ವದಲ್ಲಿ ಆರೋಗ್ಯ ಉಚಿತ ತಪಾಸಣೆ ನಡೆಸಲಾಯಿತು. ತಪಾಸಣೆಯಲ್ಲಿ…
ತುಮಕೂರು: ಕಳಪೆ ಗುಣಮಟ್ಟದ ಔಷಧಿಗಳ ಪೂರೈಕೆಯಿಂದ ಕರ್ನಾಟಕ ವಿವಿಧ ಜಿಲ್ಲಾಸ್ಪತ್ರಗಳಲ್ಲಿ ಬಾಣಂತಿಯರ ಸಾವುಗಳು ಸಂಭವಿಸುತ್ತಿವೆ. ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಾಣಂತಿಯರ ಸಾವು ಪ್ರಕರಣಗಳು ಘಟಿಸುತ್ತಿರುವುದು ಕರ್ನಾಟಕದಲ್ಲಿ, ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚು. ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಫೆ.3 ರಂದು ಬೀದರ್ ನಿಂದ ಶುರುವಾದ ‘ಆರೋಗ್ಯ ಹಕ್ಕಿನ ಜಾಥಾ’ ಫೆ.14 ರಂದು ಬೆಂಗಳೂರು ತಲುಪಲಿದೆ ಎಂದು ಡ್ರಗ್ ಎಕ್ಷನ್ ಪೋರಂ ನ ಸಂಸ್ಥಾಪಕ ಸದಸ್ಯ ಡಾ.ಗೋಪಾಲ ದಾಬಡೆ ತಿಳಿಸಿದರು. ನಗರದ ವಿಜ್ಞಾನ ಕೇಂದ್ರದಲ್ಲಿ ಟ್ರಗ್ ಎಕ್ಷನ್ ಪೋರಂ ಕರ್ನಾಟಕ ಹಾಗೂ ಸಾರ್ವತ್ರಿಕ ಆರೋಗ್ಯ ಕರ್ನಾಟಕದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಆಸ್ಪತೆಗಲ್ಲಿ 400ಕ್ಕೂ ಹೆಚ್ಚು ಕಳಪೆ ಔಷಧಗಳು ಬಳಕೆಯಾಗುತ್ತಿವೆ. ತಮಿಳುನಾಡು ರಾಜ್ಯದಲ್ಲಿ ಪ್ಯಾರಾಸಿಟಮಲ್ ಅನ್ನು ಕೇವಲ 35 ಪೈಸೆಗೆ ನೀಡುತ್ತಿದ್ದರೆ, ನಮ್ಮ ಕರ್ನಾಟಕದಲ್ಲಿ 2.5 ರೂಗೆ ಮಾರಾಟ ಮಾಡುತ್ತಿರುವುದು ದುರ್ದೈವ ಎಂದು ಹೇಳಿದರು. ರಾಜಾಸ್ಥಾನದಲ್ಲಿರುವ `ಆರೋಗ್ಯ ಹಕ್ಕು ಮಸೂದೆ’ಯು ರಾಜ್ಯದ ಜನರಿಗೆ…
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಸಿಂಡಿಕೇಟ್ ಸದಸ್ಯ ಪ್ರೊ. ಕೆ. ಜಿ. ಪರಶುರಾಮ ಅವರು ಸಂತಶ್ರೇಷ್ಠ ಕನಕದಾಸ ಜಯಂತಿಯ ಗೌರವ ಸನ್ಮಾನಕ್ಕೆ ಭಾಜನರಾಗಿದ್ದಾರೆ. ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸಾಹಿತ್ಯ ಪರಿಷತ್ ಪ್ರೊ. ಪರಶುರಾಮ ಅವರಿಗೆ ಈ ಪುರಸ್ಕಾರ ನೀಡಿ ಗೌರವಿಸಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತುಮಕೂರು ವಿಶ್ವವಿದ್ಯಾನಿಲಯವು ವಿಶೇಷ ಘಟಕ ಯೋಜನೆಯಡಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ’ದಲ್ಲಿ ಈ ಗೌರವ ಪ್ರದಾನ ಮಾಡಲಾಯಿತು. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ನಿವೃತ್ತ ನ್ಯಾಯಾಧೀಶ ಬಾಬಾ ಸಾಹೇಬ್ ಜಿನರಾಳ್ಕರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಮಿರ್ಜಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪ್ರೊ. ಪರಶುರಾಮ ಅವರು 24 ವರ್ಷಗಳ ಬೋಧನೆ ಹಾಗೂ…
ತುಮಕೂರು : ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಅವರು ಹೇಳಿದರು. ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಮತ್ತು ಕಾರ್ಯಾಗಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರö್ಯ ದೊರೆತು 75 ವರ್ಷಗಳು ಕಳೆದರೂ ಜೀತ ಪದ್ಧತಿ ಇನ್ನೂ ಜೀವಂತವಾಗಿರುವುದು ಶೋಚನೀಯ ಸಂಗತಿ. ಆರ್ಥಿಕವಾಗಿ ಹಿಂದುಳಿದವರು ಜೀತ ಪದ್ಧತಿಗೆ ಒಳಗಾಗುತ್ತಾರೆ. ಜೀತ ಪದ್ಧತಿಯಿಂದ ಮಾನವ ಹಕ್ಕುಗಳಿಗೆ ಚ್ಯುತಿಯುಂಟಾಗುತ್ತದೆ. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಜೀತ ಪದ್ಧತಿ, ಸತಿ ಸಹಗಮನ, ಅಸ್ಪೃಶ್ಯತೆ, ಮಾನವ ಕಳ್ಳಸಾಗಾಣಿಕೆ, ಮ್ಯಾನ್ಯುಯಲ್ ಸ್ಕಾö್ಯವೆಂಜಿAಗ್ಗಳAತಹ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆಗೊಳಿಸುವಲ್ಲಿ ಯಶಸ್ವಿ ಹೆಜ್ಜೆಗಳನ್ನು ಹಾಕುತ್ತಿದ್ದೇವೆ ಎಂದು ತಿಳಿಸಿದರು. ಜೀತ ಪದ್ಧತಿ ನಿರ್ಮೂಲನೆ ಕಾಯ್ದೆಯು 1976ರಲ್ಲಿ ಜಾರಿಗೆ ತರಲಾಗಿದ್ದು, ಕಾಯ್ದೆಯ ಅನುಷ್ಟಾನದ ಜವಾಬ್ದಾರಿಯನ್ನು ಎಲ್ಲ ಅಧಿಕಾರಿಗಳಿಗೆ ನೀಡಲಾಗಿದೆ. ಜೀತ ಪದ್ಧತಿಗೆ ಬಡತನವೇ…
ಹುಳಿಯಾರು: ಮಾಗಡಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಆಯೋಜಿಸಿದ್ದ ಅಂತರ ಜಿಲ್ಲಾ ಮಟ್ಟದ ಪತ್ರಕರ್ತರ ಡಬಲ್ ಶಟಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ತುಮಕೂರು ಜಿಲ್ಲೆಯನ್ನು ಪ್ರತಿನಿಧಿಸಿದ್ದ ಹುಳಿಯಾರು ಪತ್ರಕರ್ತರಾದ ಯೋಗೀಶ್ ಹಾಗೂ ಸೋಮಶೇಖರ್ ಅವರು ದ್ವಿತೀಯ ಸ್ಥಾನ ಪಡೆದು 5 ಸಾವಿರ ರೂಪಾಯಿ ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ಗೆದ್ದುಕೊಂಡಿದ್ದಾರೆ. ಪಂದ್ಯಾವಳಿಯಲ್ಲಿ ಚಾಮರಾಜ ನಗರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಹಾಸನ, ತುಮಕೂರು ಸೇರಿ ಒಟ್ಟು 19 ತಂಡಗಳು ಭಾಗವಹಿಸಿದ್ದು, ಅದರಲ್ಲಿ ಮಾಗಡಿ ತಂಡದ ಕಿರಣ್ ಕುಮಾರ್ ಹಾಗೂ ಅಭಿಷೇಕ್ ಪ್ರಥಮ ಬಹುಮಾನ ಪಡೆಯುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ತುಮಕೂರಿನ ಸೋಮಶೇಖರ್ ಮತ್ತು ಯೋಗೇಶ್ ಅವರು ರನ್ನರ್ ಆಪ್ ಆಗಿ ದ್ವಿತೀಯ ಸ್ಥಾನ, ಹಾಸನದ ರವಿ ಮತ್ತು ರಾಘವೇಂದ್ರ ತೃತೀಯ ಬಹುಮಾನ ಪಡೆದಿದ್ದಾರೆ. ಶಾಸಕ ಎಚ್.ಸಿ. ಬಾಲಕೃಷ್ಣ ಮಾತನಾಡಿ, ಪತ್ರಕರ್ತರು ಯಾವಾಗಲೂ ಒತ್ತಡದಲ್ಲೇ ಕೆಲಸ ಮಾಡುತ್ತಿರುತ್ತಾರೆ. ಹಾಗಾಗಿ ಪತ್ರಕರ್ತರು ಕ್ರೀಡೆಯಲ್ಲಿ ಭಾಗವಹಿಸುವ ಗುಣ ಬೆಳಸಿಕೊಂಡರೆ ಉತ್ತಮ ಆರೋಗ್ಯ ತಮ್ಮದಾಗಿಸಿಕೊಳ್ಳಬಹುದು ಎಂದು ತಿಳಿಸಿದರು.…
ತುಮಕೂರು: ಸ್ವಾತಂತ್ರಪರ್ವದಲ್ಲಿಯೇ ಸ್ವಾತಂತ್ರ ಭಾರತ ಹೇಗಿರಬೇಕು ಎಂಬ ಕನಸು ಕಂಡವರು ಅಂಬೇಡ್ಕರ್, ಸಂವಿಧಾನ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಹಲವು ದೇಶಗಳ ಸಂವಿಧಾನವನ್ನು ಆಧ್ಯಯನ ಮಾಡಿ, ಸಮಾನತೆ, ಭಾತೃತ್ವದ ನೆಲೆಯಲ್ಲಿ ಸಂವಿಧಾನವನ್ನು ರಚಿಸಿ ಎಲ್ಲರೂ ಜಾತಿ, ರ್ಮ, ಭಾಷೆ, ಲಿಂಗ ತಾರತಮ್ಯವಿಲ್ಲದೆ ಬದುಕುವಂತಹ ಅವಕಾಶ ಕಲ್ಪಿಸಿದ ಅಂಬೇಡ್ಕರ್ ಇಂದಿನ ಯುವಪೀಳಿಗೆಗೆ ಮಾದರಿ ಎಂದು ತುಮಕೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅಭಿಪ್ರಾಯಪಟ್ಟಿದ್ದಾರೆ. ತುಮಕೂರು ವಿವಿಯ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತುಮಕೂರು ಅವರು, ತುಮಕೂರು ವಿವಿಯ ವಿವಿಧ ವಿಭಾಗಗಳ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ “ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು “ಕರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಅಂಬೇಡ್ಕರ್ ಅವರನ್ನು ಯುವಜನರು ಓದುವುದರಿಂದ ರ್ವ ಜವಾಬ್ದಾರಿಯುತ ಪ್ರಜೆಯಾಗಿ ರೂಪಗೊಳ್ಳಲು ಸಹಕಾರಿಯಾಗುತ್ತದೆ ಎಂದರು. ಕಡು ಬಡತನ ಕುಟುಂಬದಲ್ಲಿ ಹುಟ್ಟಿದ ಅಂಬೇಡ್ಕರ್ ವಿದ್ಯರ್ಥಿ ದಿಸೆಯಲ್ಲಿಯೇ ಆದ ಹಲವು ಅಪಮಾನಗಳನ್ನು ಮೆಟ್ಟಿನಿಂತು ಈ ದೇಶದ ಎಲ್ಲ ಜನರಿಗೆ ಅಗತ್ಯವಾಗಿರುವ ಸಂವಿಧಾನವನ್ನು ರಚಿಸಿಕೊಟ್ಟರು. ಇದರ ಹಿಂದಿನ ಶಕ್ತಿ ಎಂದರೆ ಅವರಲ್ಲಿದ್ದ…
ತುಮಕೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ನವದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ತುಮಕೂರು, ಚಿತ್ರದುರ್ಗ, ದಾವಣಗೆರೆ ರೈಲ್ವೇ ಮಾರ್ಗಕ್ಕೆ ಸಂಬAಧಪಟ್ಟ ಭಾಗವಾದ ತಿಮ್ಮರಾಜನಹಳ್ಳಿ ಮತ್ತು ತಾವರೆಕೆರೆ ಮಧ್ಯದ ರೈಲ್ವೇ ಕಾಮಗಾರಿ ಕೈಗೊಳ್ಳಲು ರೈಲ್ವೇ ಮಂಡಳಿಯು ಕೇಂದ್ರ ಗೃಹ ಇಲಾಖೆಗೆ ಕಳುಹಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಬೇಕೆಂದು ಮನವಿ ಮಾಡಿದರು. ಮನವಿಗೆ ಕೇಂದ್ರ ಗೃಹ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂತಸ ತಂದಿದೆ. ಕರ್ನಾಟಕ ರಾಜ್ಯದ ಹಾಗೂ ವಿಶೇಷವಾಗಿ ತುಮಕೂರು ಜನತೆಯ ಪರವಾಗಿ ಅಮಿತ್ ಶಾ ಅವರಿಗೆ ಸೋಮಣ್ಣ ಅವರು ಧನ್ಯವಾದ ತಿಳಿಸಿದ್ದಾರೆ.
ತುಮಕೂರು: ಗಣಿಬಾಧಿತ ಕುಟುಂಬಗಳಿಗೆ ಆದ್ಯತೆ ಮೇರೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ(ಕೆಎಂಇಆರ್ಸಿ)ದ ವ್ಯವಸ್ಥಾಪಕ ನಿರ್ದೇಶಕ ಡಾ: ಸಂಜಯ್ ಎಸ್. ಬಿಜ್ಜೂರ್ ಸೂಚಿಸಿದರು. ಮಂಗಳವಾರ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ನಡೆದ ಕೆಎಂಇಆರ್ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗಣಿಗಾರಿಕೆಯಿಂದ ಹಲವಾರು ಕುಟುಂಬಗಳಿಗೆ ತೊಂದರೆಯುAಟಾಗುತ್ತಿದ್ದು, ಗಣಿಬಾಧಿತ ಕುಟುಂಬಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. Àರ್ಕಾರವು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಮೂಲಕ ರಾಜ್ಯದ ಗಣಿಬಾಧಿತ ಪ್ರದೇಶಗಳಲ್ಲಿ ಪರಿಸರ ಪುನಶ್ಚೇತನ ಮತ್ತು ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಸಮಗ್ರ ಪರಿಸರ ಯೋಜನೆ ಮತ್ತು ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ (ಅಇPಒIZ) ಯೋಜನೆಯು ಪ್ರಮುಖವಾಗಿದ್ದು, ಈ ಯೋಜನೆಯಡಿ ಗಣಿಬಾಧಿತ ಪ್ರದೇಶಗಳಲ್ಲಿ ಮೂಲಸೌಕರ್ಯ, ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ಜನರ ಜೀವನ ಮಟ್ಟದ ಸುಧಾರಣೆಗಾಗಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಆರ್ಥಿಕವಾಗಿ ಹಿಂದುಳಿದವರಿಗೆ ಮಾತ್ರ ಗಣಿಬಾಧಿತ ಯೋಜನೆಗಳನ್ನು ಕಲ್ಪಿಸಬೇಕು. ಗಣಿಬಾಧಿತ ಪ್ರದೇಶಗಳಲ್ಲಿ…
ಹುಳಿಯಾರು: ರೈತರು ಸರ್ಕಾರದ ಕೃಷಿ ಹೊಂಡ, ಚೆಕ್ ಡ್ಯಾಮ್, ಉದಿಬದ ಮತ್ತಿತರರ ಅನುಕೂಲಗಳನ್ನು ಬಳಕೆ ಮಾಡಿಕೊಂಡು ಮಳೆಯ ನೀರನ್ನು ಇಂಗಿಸಲು ಮುಂದಾಗಬೇಕು ಎಂದು ಶಾಸಕ ಸಿ.ಬಿ.ಸುರೇಶ್ಬಾಬು ತಿಳಿಸಿದರು. ಹುಳಿಯಾರು ಸಮೀಪದ ದೊಡ್ಡಎಣ್ಣೇಗೆರೆಯಲ್ಲಿ ಕೃಷಿ ಇಲಾಖೆಯಿಂದ ಜಲಾನಯನ ಡಬ್ಲೂö್ಯಡಿ ಸಿ 2 ಯೋಜನೆಯಲ್ಲಿ ಆಯೋಜಿಸಿದ್ದ ಮಣ್ಣು ಮತ್ತು ನೀರಿನ ಸಂರಕ್ಷಣೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕಿಗೆ ಈ ಹಿಂದೆ ವರ್ಷಕ್ಕೆ ಇನ್ನೂರರಿಂದ ಐನೂರು ಸ್ಪಿಂಕ್ಲರ್ ಸೆಟ್ ವಿತರಿಸಲಾಗುತ್ತಿತ್ತು. ಈಗ ಕಳೆದ 2 ವರ್ಷಗಳಿಂದ ಆರು ಸಾವಿರಕ್ಕೂ ಹೆಚ್ಚು ಸ್ಪಂಕ್ಲರ್ ಸೆಟ್ಗಳನ್ನು ರೈತರಿಗೆ ವಿತರಿಸಲಾಗಿದೆ. ಅದೂ ಯಾವ ಪಕ್ಷ, ಜಾತಿ ನೋಡದೆ ರೈತನೆನ್ನುವ ಪಹಣಿ ಒಂದನ್ನು ನೋಡಿ ವಿತರಿಸಲಾಗಿದೆ ಎಂದು ತಿಳಿಸಿದರು. ಗಣಿ ಬಾದಿತ ಪ್ರದೇಶದ ಅಭಿವೃದ್ದಿಗೆ ಮೀಸಲಿದ್ದ ಗಣಿ ಹಣದಲ್ಲಿ ತಾಲೂಕಿನ ಕೃಷಿ ಇಲಾಖೆಗೆ 57 ಕೋಟಿ, ರಸ್ತೆಗಳಿಗೆ 400 ಕೋಟಿ ರೂ. ಬಿಡುಗಡೆಯಾಗಿದೆ ಹಂದನಕೆರೆ ಹೋಬಳಿಗೆ ಭದ್ರ ನೀರು ಹರಿಸಲು ಈಗಾಗಲೆ ಎಂಜಿನಿಯರ್ ಅವರೊಂದಿಗೆ ಚರ್ಚಿಸಲಾಗಿದೆ ಎಂದರಲ್ಲದೆ ಮೈಕ್ರೋ…