ಕೊರಟಗೆರೆ: ಎಲೆರಾಂಪುರ ಪ್ರಾಥಮಿಕ ಕೃಷಿ ಪತ್ತಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಧುಕುಮಾರ್ ಉಪಾಧ್ಯಕ್ಷರಾಗಿ ಚಂದ್ರಪ್ಪ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಸಿಡಿಒ ಗುರುರಾಜ್ ಘೋಷಣೆ ಮಾಡಿದರು. ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಎಲೆರಾಂಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಏರ್ಪಡಿಸಲಾಗಿದ್ದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಊರಿನ ಮುಖಂಡರು ಹಾಗೂ ನಿರ್ದೇಶಕರ ಒಮ್ಮತದಿಂದ ಅಧ್ಯಕ್ಷ ಸ್ಥಾನಕ್ಕೆ ಮಧೂಕುಮಾರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಪ್ಪ ಅವರು ಮಾತ್ರ ನಾಮಪತ್ರ ಸಲ್ಲಿಸಿದರು. ಇವರ ವಿರುದ್ದ ಯಾರು ನಾಮಪತ್ರ ಸಲ್ಲಿಸದ ಹಿನ್ನಲೇಯಲ್ಲಿ ಅಧ್ಯಕ್ಷರಾಗಿ ಮಧುಕುಮಾರ್ ಉಪಾಧ್ಯಕ್ಷರಾಗಿ ಚಂದ್ರಪ್ಪ ಅವರನ್ನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷ ಮಧುಕುಮಾರ್ ಮಾತನಾಡಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ಆಶೀರ್ವಾದದಿಂದ ಹಾಗೂ ಎಲ್ಲಾ ನನ್ನ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಗ್ರಾಮೀಣ ಭಾಗದ ರೈತ ಸಮಸ್ಯೆಯನ್ನ ಹಾಗೂ ಸಾಲ ಸೌಲಭ್ಯಗಳನ್ನ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್ ರಾಜಣ್ಣ…
Author: News Desk Benkiyabale
ತುರುವೇಕೆರೆ: ತಾಲೂಕಿನ ಗಡಿಭಾಗದ ಸುಕ್ಷೇತ್ರ ರಂಗನಹಳ್ಳಿ ಶ್ರೀ ಶನೇಶ್ವರ ಸ್ವಾಮಿಯವರ 21 ನೇ ಜಾತ್ರಾ ಮಹೋತ್ಸವವು ಫೆ.12 ರಿಂದ 15 ರವರೆಗೆ ಬಹಳ ವಿಜೃಂಭಣೆಯಿ0ದ ನೆರವೇರಲಿದೆ ಎಂದು ರಂಗನಹಳ್ಳಿ ಶ್ರೀ ಶನೇಶ್ವರಸ್ವಾಮಿ ಸೇವಾ ಸಮಿತಿ ತಿಳಿಸಿದೆ. ಸುಮಾರು ವರ್ಷಗಳಿಂದ ಬಹಳ ವೈಭವದಿಂದ ನಿರಂತರವಾಗಿ ಆಚರಿಸಿಕೊಂಡು ಬರುತ್ತಿರುವ ಶನೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ತಾಲೂಕಿನಲ್ಲಿ ಪ್ರಸಿದ್ದಿ ಪಡೆದಿದ್ದು, ಈ ಬಾರಿ ನಡೆಯುವ 21 ನೇ ಜಾತ್ರಾ ಮಹೋತ್ಸವವು ಶ್ರೀ ಆಂಜನೇಯಸ್ವಾಮಿ, ಶ್ರೀ ದುರ್ಗಾಪರಮೇಶ್ವರಿ ಹಾಗೂ ಆದಿಪರಾಶಕ್ತಿ ಕಾಳಿಕಾದೇವಿಯವರ ಆಗಮನದೊಂದಿಗೆ ಶ್ರೀಶನೇಶ್ವರ ಸ್ವಾಮಿಯವರ ಮಹೋತ್ಸವವು ಧಾರ್ಮಿಕ ವಿಧಿ-ವಿಧಾನಗಳಿಂದ ವಿಜೃಂಭಣೆಯಿAದ ನೆರವೇರಲಿದೆ. ಫೆ. 12 ರಂದು ಸ್ವಾಮಿಗೆ ಪಂಚಾಮೃತ, ಅಷ್ಟೋತ್ತರ ಕುಂಕುಮಾರ್ಚನೆ ಮಹಮಂಗಳಾರತಿ ಹಾಗೂ ಶ್ರೀಕ್ಷೇತ್ರ ಮಲ್ಲಾಘಟ್ಟ ಕೆರೆಯಲ್ಲಿ ಸ್ವಾಮಿಗೆ ಗಂಗಾಸ್ನಾನ ನೆರವೇರಲಿದ್ದು, 13 ರಂದು ಜಾನಪದ ಕಲಾ ತಂಡಗಳೊAದಿಗೆ ಆಲ್ಬೂರು. ಅಣಪನಹಳ್ಳಿ. ಬಸವನಹಳ್ಳಿ. ರಂಗನಹಳ್ಳಿ. ಮಾಕನಹಳ್ಳಿ. ನೊಣವಿನಕೆರೆ. ಕಾಡಸಿದ್ದೇಶ್ವರ ಮಠ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಉತ್ಸವಗಳು ನೆಡೆಯಲಿವೆ. ಫೆ.14 ರಂದು ಲೋಕಕಲ್ಯಾಣ ಯಾಗ ಕ್ಷೇತ್ರಕ್ಕೆ…
ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಾಥಮಿಕ ಶಿಕ್ಷಣದ ಬುನಾದಿ ಬಹುಮುಖ್ಯವಾಗಿರುವುದರಿಂದ ಗ್ರಾಮೀಣ ವಿದ್ಯಾರ್ಥಿಗಳು ಭಾಷೆ, ಬರವಣಿಗೆ, ಕೌಶಲ್ಯತೆ, ಸಾಮಾನ್ಯ ಜ್ಞಾನವನ್ನು ಈ ಹಂತದಲ್ಲೇ ಪಡೆದುಕೊಂಡಲ್ಲಿ ಯಶಸ್ಸನ್ನು ಸುಲಭವಾಗಿ ಪಡೆಯಬಹುದೆಂದು ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ರವೀಂದ್ರ.ಪಿ.ಎನ್. ಹೇಳಿದರು. ಅವರು ಫೆಬ್ರವರಿ 8ರಂದು ಗುಬ್ಬಿ ತಾಲ್ಲೂಕಿನ ಕಾಡಶೆಟ್ಟಿಹಳ್ಳಿ ಜ್ಞಾನಮಲ್ಲಿಕಾ-ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ‘ಮಕ್ಕಳೊಡನೆ ಮಾತು ಕತೆ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಗ್ರಾಮೀಣ ಭಾಗದ ವಿದ್ಯಾಥಿಗಳಲ್ಲಿ ಬದ್ಧತೆ, ಕೌಶಲ್ಯ, ವ್ಯವಹಾರಿಕ ಜ್ಞಾನ, ಹಿರಿ-ಕಿರಿಯರಿಗೆ ಗೌರವ ಕೊಡುವುದನ್ನು ಕಲಿಸುವುದು ಗ್ರಾಮೀಣ ಪ್ರದೇಶದ ಪಾಠ ಶಾಲೆಗಳೆಂದರೆ ಹಳ್ಳಿಗಳು, ಪ್ರಾಥಮಿಕ ಹಂತದ ಶಿಕ್ಷಣದ ಬೂನಾದಿ ಬಹುಮುಖ್ಯವಾದದ್ದು, ಪ್ರಾಥಮಿಕ ಶಿಕ್ಷಣದ ಬೂನಾದಿ ಬಿಗಿಯಾಗಿದ್ದರೆ ಜ್ಞಾನದ ಸೌಧಗಳನ್ನು ಸುಲಭವಾಗಿ ಕಟ್ಟಬಹುದು ಎಂದು ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮೈಸೂರು ಒಡೆಯರಾಗಿದ್ದ ನಾಲ್ವಡಿ ಕೃಷ್ಣರಾಜೇಂದ್ರ ಅವರು ಸಮ ಸಮಾಜದ ಕನಸ್ಸನ್ನು ಕಂಡವರು, ಒಬ್ಬರು ಸಂವಿಧಾನ ನೀಡಿದರೆ, ಮತ್ತೊಬ್ಬರು ಆಗಿನ ಕಾಲಕ್ಕೆ ಮೀಸಲಾತಿಯ ಮೂಲಕ ಶಿಕ್ಷಣ ನೀಡಿದಂತಹ ಮಹಾನುಭಾವರು. ಎಂದು ಹೇಳಿದರು. ಸಮಾರಂಭದಲ್ಲಿ ಪ್ರಾಸ್ತವಿಕವಾಗಿ ಪತ್ರಕರ್ತ ವೆಂಕಟಾಚಲ.ಹೆಚ್.ವಿ.…
ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಬಗ್ಗೆ ತೀರ ಹಗುರವಾಗಿ ಮಾತನಾಡುವುದನ್ನೇ ಚಟವಾಗಿ ಮಾಡಿಕೊಂಡಿರುವ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ, ಪ್ರಚಾರಕ್ಕಾಗಿ ಸರಕಾರವನ್ನು ಹಿಯಾಳಿಸುವುದನ್ನು ಕೈಬಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ತಾಕೀತು ಮಾಡಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದೇ ಪದೇ ಸರಕಾರ ಸತ್ತು ಹೋಗಿದೆ. ಜಿಲ್ಲೆಯಲ್ಲಿ ಅಭಿವೃದ್ದಿ ಕುಂಠಿತವಾಗಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವ ದಲ್ಲಿಯೇ ಜಿಲ್ಲೆಯಲ್ಲಿ ಎರಡು ಬೃಹತ್ ಫಲಾನುಭವಿಗಳ ಸಮಾವೇಶ ನಡೆದಿದೆ. ಸುಮಾರು 1500 ಕೋಟ ರೂಗಳ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಮಾಡಲಾಗಿದೆ. ಆ ಸಮಾರಂಭ ಗಳಲ್ಲಿ ಸ್ವತಹಃ ಶಾಸಕರೇ ಉಪಸ್ಥಿತರಿದ್ದು, ಹತ್ತಿರದಿಂದ ನೋಡಿದ್ದರೂ, ಟೀಕಿಸುವುದು ತರವಲ್ಲ ಎಂದರು. ಜಿಲ್ಲೆಗೆ ಸರಕಾರದ ಗ್ಯಾರಂಟಿ ಯೋಜನೆಗಳಿಂದ ಸುಮಾರು 3500 ಕೋಟಿ ರೂಗಳ ಅನುಧಾನ ನೀಡಲಾಗಿದೆ. ಮಹಾತ್ಮಗಾಂಧಿ ಕ್ರೀಡಾಂಗಣ, ದೇವರಾಜ ಅರಸು ಬಸ್ ನಿಲ್ದಾಣ ನಿರ್ಮಾಣಕ್ಕೆ ಸರಕಾರದಿಂದ ಹಣ ನೀಡಲಾಗಿದೆ.…
ತುರುವೇಕೆರೆ: ತಾಲೂಕಿನಲ್ಲಿ ನೂರಾರು ಎಕರೆ ಗೋಮಾಳ, ಅರಣ್ಯ ಭೂಮಿಯನ್ನು ಬಗರ್ ಹುಕುಂ ಕಮಿಟಿ ಮುಂದೆ ಅರ್ಜಿಗಳೇ ಭಾರದೆ ಕಂದಾಯ ಅಧಿಕಾರಿಗಳು ಅಕ್ರಮವಾಗಿ ಮುಂಜೂರು ಮಾಡಿ ಕೊಟ್ಟಿದ್ದಾರೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಹಿಂದಿನ ತಹಶೀಲ್ದಾರ್ ರೇಣುಕುಮಾರ್ ಅವದಿಯಲ್ಲಿ ನೂರಾರು ಎಕರೆ ಗೋಮಾಳ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ನೂರಾರು ಎಕರೆ ಭೂಮಿಯನ್ನು ಲಕ್ಷಾಂತರ ರೂ ಹಣ ಪಡೆದು ಅಧಿಕಾರಿಗಳು ಮುಂಜೂರು ಮಾಡಿಕೊಟ್ಟಿದ್ದಾರೆ. ಮಾಯಸಂದ್ರ ಹೋಬಳಿ ನರೀಗೆಹಳ್ಳಿ ಗ್ರಾಮದ ಸರ್ವೆ ನಂ 22 ರಲ್ಲಿ ಜಯಮ್ಮ ಕೋ ನರಸಿಂಹಯ್ಯ 3 ಎಕರೆ, ಚಿಕ್ಕಮ್ಮ ಕೋಂ ನರಸಿಂಹಯ್ಯ 2.30 ಗುಂಟೆ, ರಾಮಣ್ಣ ಬಿನ್ ಮುದ್ದಯ್ಯ 3 ಎಕರೆ, ಸಣ್ಣ ಹನುಮಯ್ಯ ಬಿನ್ ತಿಮ್ಮಯ್ಯ 2.22 ಗುಂಟೆ. ಸರ್ವೆ ನಂ 20ರಲ್ಲಿ ಆರ್.ರಂಗಸ್ವಾಮಿ ಬಿನ್ ರಂಗಯ್ಯ 3 ಎಕರೆ, ಹುಚ್ಚಯ್ಯ ಬಿನ್ ನರಸಿಂಹಯ್ಯ 3.10 ಗುಂಟೆ, ತಿಮ್ಮಯ್ಯ ಬಿನ್ ಹನುಮಯ್ಯ…
ತುಮಕೂರು: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ರ‍್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಅವರು ಶನಿವಾರ( ಫೆಬ್ರವರಿ 07, 2025) ಬೆಂಗಳೂರಿಗೆ ಭೇಟಿ ನೀಡಿದ ಸಂರ‍್ಭದಲ್ಲಿ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟೆಂಡ್‌ನಲ್ಲಿ ರ‍್ನಾಟಕ ರ‍್ಕಾರದ ಮುಖ್ಯ ಕರ‍್ಯರ‍್ಶಿ ಡಾ: ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದರು. ಒಂದು ಜಗತ್ತು ಹಲವು ಸಾಧ್ಯತೆಗಳನ್ನು ಬಿಂಬಿಸುವ ರ‍್ನಾಟಕ ಕುರಿತಾದ ಪುಸ್ತಕವನ್ನು ನೀಡಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ(Sಆಉ) ಸಾಧನೆಯಲ್ಲಿ ರ‍್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ ವಿಶ್ವಸಂಸ್ಥೆಯ ಅಧ್ಯಕ್ಷರು ಆಸಕ್ತಿಯಿಂದ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಬಯಸಿದರು. ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಕೈಗೆ ನಗದು ಹಣ ನೀಡುವ ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ ಶಕ್ತಿ, ಕರ‍್ಮಿಕ ಕ್ಷೇತ್ರದಲ್ಲಿ…
ತುಮಕೂರು: ದೆಹಲಿ ವಿಧಾನಸಭಾಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವುದಕ್ಕೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆರಾಜ್ಯ ಸಚಿವ ವಿ.ಸೋಮಣ್ಣಅವರ ನೇತೃತ್ವದಲ್ಲಿ ಶನಿವಾರ ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಪಟಾಕಿ ಹಚ್ಚಿ, ಸಿಹಿ ಹಂಚಿಸAಭ್ರಮಿಸಿದರು. ಈ ವೇಳೆ ಮಾತನಾಡಿದ ಸಚಿವ ವಿ.ಸೋಮಣ್ಣ, ದೆಹಲಿ ಚುನಾವಣಾ ಪ್ರಚಾರದಲ್ಲಿತಾವೂ ಪಾಲ್ಗೊಂಡಿದ್ದುಎಲ್ಲೆಡೆ ಬಿಜೆಪಿ ಪರವಾಗಿಜನ ಒಲವುಕಂಡುಬAದಿತ್ತು, ಎಲ್ಲಾಧರ್ಮಿಯರೂ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಮೆಚ್ಚಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿದ್ದಾರೆ.ಪ್ರತಿಪಕ್ಷಗಳ ಆಮಿಷಗಳಿಗೆ ಬೆಲೆ ಕೊಡದೆದೆಹಲಿ ಮತದಾರರು ಬಿಜೆಪಿ ಬೆಂಬಲಿಸಿದ್ದಾರೆಎAದು ಸಂತಸ ವ್ಯಕ್ತಪಡಿಸಿದರು. ರಾಷ್ಟçದರಾಜಧಾನಿ ದೆಹಲಿಯ ವಿಧಾನಸಭಾಚುನಾವಣೆದೇಶದ ಮುಂಬರುವ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ. ದೇಶದರಕ್ಷಣೆ, ಅಭಿವೃದ್ಧಿಗೆ ಬಿಜೆಪಿಯೇ ಪರಿಹಾರಎಂದುದೇಶದಜನರು ಪಕ್ಷದ ಬಗ್ಗೆ ವಿಶ್ವಾಸ ಹೊಂದಿದ್ದಾರೆ. ಪಕ್ಷ ಹಾಗೂ ನಮ್ಮ ನಾಯಕರುಜನರ ನಂಬಿಕೆ, ವಿಶ್ವಾಸಕ್ಕೆಧಕ್ಕೆಯಾಗದಂತೆದೇಶದ ಸುರಕ್ಷತೆ, ಪ್ರಗತಿಗೆ ಶ್ರಮಿಸುತ್ತಾರೆಎಂದು ಹೇಳಿದರು. ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಜಿಲ್ಲಾಯುವ ಮೋರ್ಚಾಅಧ್ಯಕ್ಷಚೇತನ್, ನಗರಅಧ್ಯಕ್ಷಧನುಷ್, ಮುಖಂಡರಾದ ಟಿ.ಹೆಚ್.ಹನುಮಂತರಾಜು, ಹನುಮಂತರಾಯಪ್ಪ, ಸಿ.ಎನ್.ರಮೇಶ್,…
ತುಮಕೂರು: ಕೃಷಿ ಇಲಾಖೆಯ ಅನುಮತಿ ಪಡೆಯದೆ ಕಳಪೆ ದರ್ಜೆಯ ಹರಳು ರೂಪದ ಎನ್‌ಪಿಕೆ ಮಿಶ್ರಣ ರಸಗೊಬ್ಬರವನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಜಾರಿ ದಳದ ಅಧಿಕಾರಿಗಳು ದಾಳಿ ನಡೆಸಿ 1.15 ಲಕ್ಷ ರೂ. ಬೆಲೆ. 11.25 ಟನ್ ರಸಗೊಬ್ಬರವನ್ನು ವಶಪಡಿಸಿಕೊಂಡಿದ್ದಾರೆ. ತುರುವೇಕೆರೆ ಪಟ್ಟಣದ ಬಿ.ಎಸ್. ರಸ್ತೆಯಲ್ಲಿರುವ ಶ್ರೀ ಸ್ವಾಮಿ ಅಯ್ಯಪ್ಪ ಫರ್ಟಿಲೈಸರ್ಸ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಇಲಾಖೆ ಅನುಮತಿ ಪಡೆಯದೆ ಕಳಪೆ ದರ್ಜೆಯ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ಬಂದ ದೂರಿನ ಮೇರೆಗೆ ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕರಾದ ಪುಟ್ಟರಂಗಪ್ಪ, ಅಶ್ವತ್ಥ್ನಾರಾಯಣ ಹಾಗೂ ಸಿಬ್ಬಂದಿ ದಾಳಿ ನಡೆಸಿದಾಗ ವಿಜಾಪುರ ಜಿಲ್ಲೆಯ ಮೆ. ಶಾಂತಿ ಜೀವನ್ ಆಗ್ರೋ ಫುಡ್ಸ್ ರವರಿಂದ ಅನಧಿಕೃತವಾಗಿ ಸರಬರಾಜು ಆದ 225 ಬ್ಯಾಗ್ ಕಳಪೆ ದರ್ಜೆಯ ಹರಳು ರೂಪದ ರಸಗೊಬ್ಬರ ಮಾರಾಟ ಮಾಡುತ್ತಿದ್ದದ್ದು ಪತ್ತೆಯಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು 1,15,425 ರೂ. ಬೆಲೆಯ 11.25 ಟನ್ ರಸಗೊಬ್ಬರವನ್ನು ವಶಕ್ಕೆ ಪಡೆದು ಮುಂದಿನ ಕ್ರಮ…
ತುಮಕೂರು: ಸರ್ಕಾರಿ ಅಧಿಕಾರಿ/ನೌಕರರು ನಿಗಧಿತ ಸಮಯಕ್ಕೆ ಸರಿಯಾಗಿ ಕಚೇರಿ ಕೆಲಸಕ್ಕೆ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಮ್ಮ ಕಚೇರಿಯ ಅಧಿಕಾರಿ/ಸಿಬ್ಬಂದಿಗಳೊAದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಸಕಾಲಕ್ಕೆ ಕಚೇರಿ ಕೆಲಸಕ್ಕೆ ಹಾಜರಾಗಿ ವಹಿಸಿದ ಕೆಲಸ-ಕಾರ್ಯಗಳನ್ನು ನಿಗಧಿತ ಅವಧಿಯೊಳಗಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಅಧಿಕಾರಿ/ನೌಕರರು ಪ್ರತಿ ದಿನ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಬೇಕು. ಕಚೇರಿ ವೇಳೆಯಲ್ಲಿ ಕರ್ತವ್ಯದ ಸ್ಥಳದಲ್ಲಿ ಹಾಜರಿರಬೇಕು. ಯಾವುದೇ ಕಡತಗಳನ್ನು ಬಾಕಿ ಉಳಿಸಿಕೊಳ್ಳಬಾರದು. ಸ್ವೀಕೃತ ಕಡತಗಳನ್ನು ಇ-ಆಫೀಸ್ ಮೂಲಕವೇ ಮುಂದಿನ ಹಂತಕ್ಕೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿರುವ ಇತರೆ ಇಲಾಖೆ ಕಚೇರಿಗಳಿಗೂ ಅನಿರೀಕ್ಷಿತ ಭೇಟಿ ನೀಡಿ ಸಿಬ್ಬಂದಿಗಳ ಸಮಯ ಪಾಲನೆ, ಕಾರ್ಯಕ್ಷಮತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ತುಮಕೂರು: ವಾಣಿಜ್ಯ ಮಳಿಗೆಗಳು, ಕಚೇರಿ, ಕಾರ್ಖಾನೆಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಕಡ್ಡಾಯ ಬಳಕೆ ನಿಯಮ ಪಾಲನೆಯಾಗಬೇಕು. ಎಳನೀರಿಗೆ ಬೆಂಬಲ ಬೆಲೆ ಘೋಷಣೆ ಮಾಡಿ ರೈತರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡಪರ, ರೈತ ಹಾಗೂ ದಲಿತ ಸಂಘಟನೆಗಳ ಮುಖಂಡರು, ಬೀದಿಬದಿ ವ್ಯಾಪಾರಿಗಳು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಿಜಿಎಸ್ ವೃತ್ತದಲ್ಲಿ ಮುಖಂಡರು ಕನ್ನಡ ಬಾವುಟ ಪ್ರದರ್ಶಿಸಿ ಮಾನವ ಸರಪಳಿ ನಿರ್ಮಿಸಿ ಕನ್ನಡ ರಕ್ಷಣೆ ಹಾಗೂ ರೈತರ ರಕ್ಷಣೆಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ತೆರಳಿ ಅಲ್ಲಿ ಪ್ರತಿಭಟನೆ ನಡೆಸಿದರು. ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ಮಾತನಾಡಿ, ಎಲ್ಲಾ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬರಹ ಇರಬೇಕು, ತಪ್ಪಿದಲ್ಲಿ ಅಂತಹ ಮಳಿಗೆಗಳ ವ್ಯಾಪಾರ ಪರವಾನಗಿ ರದ್ದು ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದ್ದರೂ, ನಗರದಲ್ಲಿ ಅದರ ಉಲ್ಲಂಘನೆ ಆಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕಾದ ನಗರಪಾಲಿಕೆ ಅಧಿಕಾರಿಗಳು ಅಂತಹ…