ತುಮಕೂರು: ಸಿರಿಧಾನ್ಯ ಕುರಿತು ಜನಾಂದೋಲನ ರೂಪದಲ್ಲಿ ಪ್ರಚಾರ ಕೈಗೊಂಡು ರಾಜ್ಯವನ್ನು ಸಿರಿಧಾನ್ಯಗಳಿಗೆ ಜಾಗತಿಕ ಕೇಂದ್ರವನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2 ದಿನಗಳ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಒನಕೆಯಲ್ಲಿ ಭತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಸಿರಿಧಾನ್ಯಗಳು ಹೆಚ್ಚಿನ ರೋಗ ನಿರೋಧಕ ಶಕ್ತಿಯೊಂದಿಗೆ ಹೇರಳವಾದ ಪೋಷಕಾಂಶಗಳನ್ನು ಹೊಂದಿವೆ. ಸಿರಿಧಾನ್ಯ ಸೇವನೆಯಿಂದ ಆರೋಗ್ಯವರ್ಧನೆಯಾಗುವುದಲ್ಲದೆ ರೋಗ ಮುಕ್ತರಾಗಿ ಆಸ್ಪತ್ರೆಯಿಂದ ದೂರವಿರಬಹುದು ಎಂದು ತಿಳಿಸಿದರು. ತಾಯಂದಿರು ತಮ್ಮ ಮಕ್ಕಳಿಗೆ ಸಿರಿಧಾನ್ಯ ಪದಾರ್ಥಗಳ ಸೇವನೆಯ ಅಭ್ಯಾಸ ಮಾಡಿಸಬೇಕು. ನಿಧಾನವಾಗಿ ಜೀರ್ಣವಾಗಿ ದೇಹಕ್ಕೆ ಶಕ್ತಿವರ್ಧಕವಾಗಿ ಕೆಲಸ ಮಾಡುವ ಗುಣಧರ್ಮವನ್ನು ಹೊಂದಿರುವ ಸಿರಿಧಾನ್ಯಗಳನ್ನು ಜನರು ಹೆಚ್ಚಾಗಿ ಬಳಸಬೇಕು ಎಂದರಲ್ಲದೆ, ಜಿಲ್ಲೆಯು ಸಿರಿಧಾನ್ಯಗಳ ತವರೂರು ಎಂದೆನೆಸಿಕೊAಡಿದೆ.…
Author: News Desk Benkiyabale
ತುಮಕೂರು; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ತುಮಕೂರು ಇವರ ವತಿಯಿಂದ ಚೊಚ್ಚಲ ಬಾರಿಗೆ ಕಲ್ಪತರು ನಗರಿ ತುಮಕೂರಿನಲ್ಲಿ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನವನ್ನು ನಡೆಸಲು ನಿಶ್ಚಯಿಸಿದ್ದು ಈಗಾಗಲೇ ನಿರೀಕ್ಷೆಗೂ ಮೀರಿದ ಸಿದ್ಧತೆಗಳನ್ನ ಕೈಗೊಳ್ಳಲಾಗಿದ್ದು ಕಲ್ಪತರು ನಾಡಿನಲ್ಲಿ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಅರ್ಥಗರ್ಭಿತವಾಗಿ ನಡೆಯಬೇಕಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ನಗರದ ಎಸ್‌ಎಸ್‌ಐಟಿ ಕಾಲೇಜು ಕ್ಯಾಂಪಸ್ ಆವರಣದ ಸ್ಟೇಪ್ ಬಿಲ್ಡಿಂಗ್ ಸಭಾಂಗಣದಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಕುರಿತಾಗಿ ತುಮಕೂರು ಜಿಲ್ಲಾ ಘಟಕದ ವಿವಿಧ ಉಪ ಸಮಿತಿಗಳ ಸಿದ್ಧತೆ ಮತ್ತು ಕಾರ್ಯವೈಕರಿಗಳ ಬಗ್ಗೆ ಚರ್ಚೆ ನಡೆಸಲು ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು ಶ್ರೇಷ್ಠತೆಗಳಲ್ಲಿ ವಿಶೇಷತೆ ಎನಿಸಿರುವ ತುಮಕೂರು ಜಿಲ್ಲೆಯು ಶೈಕ್ಷಣಿಕ, ಕಲೆ, ಸಾಹಿತ್ಯ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತನ್ನದೇ ಆದ ಸಾಧನೆಯನ್ನು ತನ್ನ ಮುಡಿಗೇರಿಸಿಕೊಂಡಿದೆ ಅದೇ ನಿಟ್ಟಿನಲ್ಲಿ ಈ ಬಾರಿ ಇಲ್ಲಿ ನಡೆಯುವ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವೂ ಕೂಡ ಇತಿಹಾಸದ ಮೈಲಿಗಲ್ಲು…
ತುಮಕೂರು: ಕಳೆದ ಐದು ದಿವಗಳಿಂದ ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಗುಬ್ಬಿ ವೀರಣ್ಣ ಟ್ರಸ್ಟï ವತಿಯಿಂದ ನಡೆದ ಐದು ದಿವಸಗಳ ಹಾಸ್ಯ ಬ್ರಹ್ಮ ದಿ. ನರಸಿಂಹರಾಜು ನಾಟಕೋತ್ಸವಕ್ಕೆ ವಿದ್ಯುಕ್ತವಾಗಿ ತೆರೆ ಬಿತ್ತು. ದಾಕ್ಷಾಯಿಣಿ ಭಟï ನಿರ್ದೇಶನದ ತಾಜï ಮಹಲï ಟೆಂರ್ಡ ನಾಟಕ ಪ್ರದರ್ಶಿಸುವ ಮೂಲಕ ನರಸಿಂಹರಾಜು ನಾಟಕೋತ್ಸವಕ್ಕೆ ತೆರ ಬಿತ್ತು. ಕಾರ್ಯಕ್ರಮದಲ್ಲಿ ಸಮಾರೋಪ ಭಾಷಣ ಮಾಡಿದ ಗುಬ್ಬಿ ವೀರಣ್ಣ ಟ್ರಸ್ಟï ನ ಅಧ್ಯಕ್ಷೆ ಬಿ. ಜಯಶ್ರೀ ಅವರು ನರಸಿಂಹರಾಜು ತುಂಬಿದ ಕೊಡ ಎಂದು ಶ್ಲಾಘಿಸಿದರು. ನಾನು ನಾಲ್ಕು ವರ್ಷದ ಹುಡುಗಿಯಾಗಿz್ದÁಗ ನರಸಿಂಹರಾಜಣ್ಣನವರನ್ನು ನೋಡಿದ್ದು ಅವರು ರಂಗದ ಮೇಲೆ ಬಂದರೆAದರೆ ಜನ ನಗುತ್ತಿದ್ದರು ನಮ್ಮ ಕಂಪೆನಿಯಲ್ಲಿz್ದÁಗ ಅವರು ಹೆಚ್ಚು ಹಾಸ್ಯ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದರು ಎಂದರು. ಗುಬ್ಬಿ ವೀರಣ್ಣನವರ ಹೆಸರಿನಲ್ಲಿ ಕಟ್ಟಿರುವ ರಂಗಮAದಿರದಲ್ಲಿ ಸಂಸ್ಕೃತಿ ಪರಂಪರೆಯನ್ನು ಉಳಿಸಲು ಇಲ್ಲಿಯವರೆಗೆ ಹಲವಾರು ನಾಟಕ ಗಳನ್ನು ಮಾಡಿದ್ದೀವಿ ಆದರೆ ಗುಬ್ಬಿಯ ಜನ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಾಟಕಗಳನ್ನು ಪ್ರೋತ್ಸಾಹಿಸುವ ಅವಶ್ಯಕತೆ ಇದೆ ಎಂದ ಅವರು ನರಸಿಂಹರಾಜು…
ತುಮಕೂರು: ಒರ್ವ ವ್ಯಕ್ತಿ ಪರಿಪೂರ್ಣ ವ್ಯಕ್ತಿತ್ವವನ್ನು ಹೊಂದಲು ನಾಲ್ಕು ಗೋಡೆಗಳ ಮದ್ಯೆ ಕಲಿಯುವ ಶಿಷ್ಠ ಶಿಕ್ಷಣದ ಜೊತೆಗೆ, ಜಾನಪದಿಂದ ಕಲಿಯುವ ಮಾನವೀಯ ಮೌಲ್ಯಗಳು ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಜಿ.ಪ್ರಭು ಅಭಿಪ್ರಾಯಪಟ್ಟಿದ್ದಾರೆ. ತುಮಕೂರು ವಿವಿ ವಿಜ್ಞಾನ ಕಾಲೇಜಿನ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ, ತುಮಕೂರು ವಿವಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಾನಪದದ ನಡೆ, ವಿದ್ಯಾರ್ಥಿಗಳ ಕಡೆ ಎಂಬ ವಿಚಾರ ಸಂಕಿರಣ, ಜಾನಪದ ಗಾಯಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಬದುಕಿಬೇಕಾದ ಶೇ45-50ರಷ್ಟು ಅನುಭವಗಳನ್ನು ಶಿಷ್ಠ ಶಿಕ್ಷಣದಿಂದ ಪಡೆದರೆ, ಶೇ35-40ರಷ್ಟು ಅಂಶಗಳನ್ನು ನಾವು ಸಮಾಜವನ್ನು ನೋಡುವುದರಿಂದ ಕಲಿಯುತ್ತೇವೆ.ಆದರೆ ಉಳಿದ 10ರಷ್ಟು ಅಂಶಗಳು ನಮಗೆ ಜಾನಪದದಿಂದ ಸಿಗುತ್ತವೆ.ನಮ್ಮ ನಡೆ, ನುಡಿ, ಆಚಾರ, ವಿಚಾರ ಎಲ್ಲದರ ಮೇಲೆ ಆಯಾಯ ಭಾಗದ ಜನಪದ ಆಚರಣೆಗಳ ಮೇಲೆ ಅವಲಂಬಿತವಾಗಿರುತ್ತವೆ ಎಂದರು. ಜಗತ್ತಿನ ಬೇರೆ ದೇಶಗಳಿಗೆ ಹೊಲಿಸಿದರೆ ಭಾರತದ ದುಡಿಯವ ವಯಸ್ಸಿನ ಮಾನವ ಸಂಪನ್ಮೂಲಕ್ಕೆ ಇಡೀ ಪ್ರಪಂಚದಾದ್ಯAತ ಬೇಡಿಕೆ ಇದೆ. ಐದು ಸಾವಿರದಿಂದ 10 ಸಾವಿರ ವರ್ಷಗಳ ನಾಗರಿಕತೆಯ…
ಕೊರಟಗೆರೆ: ತುಮಕೂರು ಅಥವಾ ನೆಲಮಂಗಲ ಸಮೀಪ ಅಂತರಾಷ್ಟಿçÃಯ ವಿಮಾನ ನಿಲ್ದಾಣ ಆಗ್ಬೇಕು. ಇದರ ಬಗ್ಗೆ ಗೃಹಸಚಿವ ಡಾ.ಜಿ.ಪರಮೇಶ್ವರ ಜೊತೆ ನಾನು ಈಗಾಗಲೇ ಚರ್ಚಿಸಿದ್ದೀನಿ. ನೀವೇನಾದ್ರು ಬೇರೆಕಡೆ ಮಾಡೋಕೆ ಪ್ರಯತ್ನ ಪಟ್ರೇ ನಮಗೇ ಹೆಚ್‌ಎಎಲ್ ನಿಲ್ದಾಣವೇ ಸಾಕು ಅಂತೀವಿ. ರಾಜ್ಯ ಸರಕಾರಕ್ಕೆ ನಾನು ಟ್ರಂಪ್‌ಕಾರ್ಡ್ ಕೊಟ್ಟಿದ್ದೀನಿ ಎಂದು ಕೇಂದ್ರ ರೈಲ್ವೆಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು. ಕೊರಟಗೆರೆ ತಾಲೂಕು ಕೋಳಾಲದ 7ಗ್ರಾಪಂ ಮತ್ತು ಕಸಬಾ ಹೋಬಳಿಯ 6ಗ್ರಾಪಂ ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆ ಸಭೆ ಹಾಗೂ ಕೇಂದ್ರ ಸರಕಾರದ ಯೋಜನೆಯಡಿ ಬರುವ ಪಲಾನುಭವಿಗಳಿಗೆ ವಿವಿಧ ಇಲಾಖೆಯ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಹಣಕಾಸು ಮಂತ್ರಾಲಯ ರಾಜ್ಯ ಸರಕಾರಕ್ಕೆ 6310ಕೋಟಿ ಹಣ ಬಿಡುಗಡೆ ಮಾಡಿದೆ. ಭದ್ರಾಮೆಲ್ದಂಡೆ ಯೋಜನೆಯ ನೀರಾವರಿ ಯೋಜನೆಗೆ ನರೇಂದ್ರಮೋದಿ ಸರಕಾರ ಅಸ್ತು ಅಂದಿದೆ. ತುಮಕೂರು ಜಿಲ್ಲೆಯಲ್ಲಿ 4ದಿಕ್ಕಿನಲ್ಲಿಯು ಅಂತರಾಷ್ಟಿçÃಯ ಹೈವೇಗಳಿವೆ. 40ಸಾವಿರ ಎಕರೇ ಪ್ರದೇಶದಲ್ಲಿ ಇಂಡಸ್ಟಿçÃಯಲ್ ಏರಿಯಾ ಇದೆ. ತುಮಕೂರು ನಗರ ರಾಜಧಾನಿಗೆ ಹತ್ತಿರವಾಗಿ ಬೆಳೆಯುತ್ತೀದೆ. ಗೃಹಸಚಿವ ಡಾ.ಜಿ.ಪರಮೇಶ್ವರ ಹತ್ತಿರ…
ತುಮಕೂರು : ಜಿಲ್ಲೆಯಲ್ಲಿ ಕಳೆದ 2024ರ ಏಪ್ರಿಲ್ ಮಾಹೆಯಿಂದ ಡಿಸೆಂಬರ್‌ವರೆಗೆ ಒಟ್ಟು 13 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಭೆಯಲ್ಲಿ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 2 ಮತ್ತು 3ನೇ ತ್ರೆöÊಮಾಸಿಕಕ್ಕೆ ಸಂಬAಧಿಸಿದAತೆ ಗುರುವಾರ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹಗಳು ನಡೆಯುವಾಗ ಅಧಿಕಾರಿಗಳ ಗಮನಕ್ಕೆ ಯಾಕೆ ಬಂದಿಲ್ಲ? ಇಂತಹ ಪ್ರಕರಣಗಳು ಮರುಕಳಿಸಬಾರದು. ಕರ್ತವ್ಯ ನಿರ್ಲಕ್ಷತೆ ತೋರುವ ಯಾವುದೇ ಸಿಬ್ಬಂದಿಯನ್ನು ಸೇವೆಯಲ್ಲಿ ಮುಂದುವರೆಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಬಾಲ್ಯ ವಿವಾಹಗಳನ್ನು ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ಕೂಡಲೇ ತಾಲ್ಲೂಕುವಾರು ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು. ಬಾಲ್ಯ ವಿವಾಹಗಳು ನಡೆಯದಂತೆ ತಡೆಯಲು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು…
ತುಮಕೂರು: ನಾವು ವಾಸಿಸುವ ಹಟ್ಟಿಯೊಳಗೆ ಹೋಗಲು ದಾರಿ ಬಿಡದಂತೆ ಅಕ್ರಮವಾಗಿ ಬೇಲಿ ಹಾಕಿಕೊಂಡಿರುವ ವ್ಯಕ್ತಿಯ ವಿರುದ್ಧ ಕ್ರಮ ಜರುಗಿಸಿ ದಾರಿ ಬಿಡಿಸಿಕೊಡುವಂತೆ ಶಿರಾ ತಾಲ್ಲೂಕು ಹುಲಿಕುಂಟೆ ಹೋಬಳಿ ಬೆಜ್ಜಿಹಳ್ಳಿ ಗೊಲ್ಲರಹಟ್ಟಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಶುಕ್ರವಾರ ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿಗೆ ಅಗಮಿಸಿದ ಬೆಜ್ಜಿಹಳ್ಳಿ ಗೊಲ್ಲರಹಟ್ಟಿಯ ಗ್ರಾಮಸ್ಥರುಗಳು ಹಟ್ಟಿಗೆ ಹೋಗಲು ಇರುವ ಕಾನೂನು ಬದ್ಧ ದಾರಿಯನ್ನೇ ಅತಿಕ್ರಮಿಸಿ ಬಲಾಢ್ಯರು ಬೇಲಿ ನಿರ್ಮಿಸಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಕಿತಾಪತಿ ಮಾಡುತ್ತಿದ್ದು, ಇದೀಗ ದಾರಿಯನ್ನೇ ಬಂದ್ ಮಾಡಿದ್ದಾರೆ. ಹೀಗಾದರೆ ನಾವು ನಮ್ಮ ವಾಸ ಸ್ಥಳದ ಊರಿಗೆ ಹೋಗುವುದಾದರೂ ಹೇಗೆ? ಈ ಕೂಡಲೇ ಸದರಿ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಂಡು ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು. ಬೆಜ್ಜಿಹಳ್ಳಿ ಗ್ರಾಮದ ಸ.ನಂ.102/1, 102/2, 102/3 ರಲ್ಲಿ ಮೂಲ ದಾಖಲೆಯಲ್ಲಿ ದಾರಿ ಗುರುತಿಸಿದೆ. ಕ್ರಯ ಪತ್ರದಲ್ಲಿನ ದಾಖಲೆಯಲ್ಲಿ ಪಾಲುಪತ್ರ ವಿಭಾಗ ನೋಂದಣಿ ದಾಖಲೆಯಲ್ಲಿ ದಾರಿ ಇದೆ. ಆಕಾರ್ ಬಂದ್‌ನAತೆ ಒಂದು ಎಕರೆ ನಾಲ್ಕು ಗುಂಟೆ ಜಮೀನಿನಲ್ಲಿ…
ತುಮಕೂರು: ವಿದ್ಯಾರ್ಥಿಗಳು ಉತ್ತಮ ಕಲಿಕೆಯೊಂದಿಗೆ ದೇಶದ ಮುಂದಿನ ಸಂಪದ್ಭರಿತ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಡಯಟ್ ಪ್ರಾಂಶುಪಾಲರಾದ ಕೆ. ಮಂಜುನಾಥ್ ಕರೆ ನೀಡಿದರು. ತಾಲ್ಲೂಕಿನ ಗೊಲ್ಲಹಳ್ಳಿ ಬಳಿ ಇರುವ ಜವಹರ್ ನವೋದಯ ವಿದ್ಯಾಲಯದಲ್ಲಿ ಏರ್ಪಡಿಸಿದ್ದ 36ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಪಠ್ಯ ಮತ್ತು ಪಠ್ಯೇತರ ಜ್ಞಾನ ಪಡೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ಮುಂದಿನ ಹೆಜ್ಜೆಯನ್ನು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಇಡಬೇಕು. ಈ ಮೂಲಕ ಹೆತ್ತವರು ಹಾಗೂ ಶಾಲೆಯ ಶಿಕ್ಷಕರ ಕನಸನ್ನು ಈಡೇರಿಸಬೇಕು ಎಂದು ಸಲಹೆ ನೀಡಿದರು. ಈ ಹಿಂದೆ ಋಷಿಮುನಿಗಳ ಆಶ್ರಮದಲ್ಲಿ ಇದ್ದ ಶಿಕ್ಷಣ ಕಲಿಕೆಯ ಪರಿಕಲ್ಪನೆಯಲ್ಲಿ ಜವಹರ್ ನವೋದಯ ವಿದ್ಯಾಲಯದಲ್ಲಿ ಮಕ್ಕಳಿಗೆ ಶಿಕ್ಷಣ ದೊರೆಯುತ್ತಿದೆ. ಈ ಶಾಲೆಯಲ್ಲಿ ಕಲಿಯುವ ಅವಕಾಶ ಎಲ್ಲ ಮಕ್ಕಳಿಗೂ ಸಿಗುವುದಿಲ್ಲ. ಇಲ್ಲಿ ಕಲಿಯುತ್ತಿರುವ ಮಕ್ಕಳ ಪೂರ್ವಜನ್ಮದ ಪುಣ್ಯ ಎಂದರು. 1986 ರಲ್ಲಿ ಅಂದಿನ ಪ್ರಧಾನಿಗಳು ಇಡೀ ದೇಶಕ್ಕೆ ನೀಡಿದ ಬಹುದೊಡ್ಡ ಕೊಡುಗೆ ನವೋದಯ ವಿದ್ಯಾಲಯ. ಅಂದು ಅವರು ರೂಪಿಸಿದ ಶಿಕ್ಷಣ ನೀತಿ…
ತುಮಕೂರು : ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ತುಮಕೂರು ನಗರ ಸಂಚಾರಿ ಪೊಲೀಸ್ ಠಾಣೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಸ್ತುಬದ್ಧ ಜೀವನ ಮುಖ್ಯ. ಅಪ್ರಾಪ್ತ ವಯಸ್ಸಿನ ಮಕ್ಕಳು ದ್ವಿಚಕ್ರ ವಾಹನ ಚಾಲನೆ ಮಾಡಿದರೆ ಅಪರಾಧ. ಕಾನೂನು ಮೀರಿ ವಾಹನ ಚಾಲನೆ ಮಾಡಿದ ಅಪ್ರಾಪ್ತ ವಯಸ್ಸಿನ ಮಕ್ಕಳ ಪೋಷಕರು ನ್ಯಾಯಾಲಯಕ್ಕೆ ದಂಡ ಕಟ್ಟಬೇಕು. ಚಾಲನಾ ಪರವಾನಗಿ ಹೊಂದಿದ ಹಾಗೂ 18 ವರ್ಷ ತುಂಬಿದವರು ಮಾತ್ರ ವಾಹನ ಚಲಾಯಿಸಬಹುದು. ವೇಗವಾಗಿ ವಾಹನ ಚಾಲನೆ, ಹೆಲ್ಮೆಟ್ ಧರಿಸದೆ ವಾಹನ ಚಾಲನೆ…
ತುಮಕೂರು: ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನ ಕೋರ್ಸ್ಗಳಿಗೆ ಸೇರಲು ಹಿಂಜರಿಯಬಾರದು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ: ಬಾಲಗುರುಮೂರ್ತಿ ಕರೆ ನೀಡಿದರು. ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ 2 ದಿನಗಳ ಸಿಇಟಿ, ನೀಟ್ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಾಹಿತಿ ಕೊರತೆ ಕಾರಣದಿಂದಾಗಿ ಬಹುತೇಕ ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನದ ಕೋರ್ಸುಗಳಿಗೆ ಸೇರಲು ಹಿಂದೇಟು ಹಾಕುವಂತಾಗಿದೆ. ಇದನ್ನು ಹೋಗಲಾಡಿಸಲು ಜಿಲ್ಲೆಯಾದ್ಯಂತ ವಿಜ್ಞಾನ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಿಂದ ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು. ಗ್ರಾಮೀಣ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕೀಳರಿಮೆ ಬೆಳೆಸಿಕೊಳ್ಳದೇ ಸಿಕ್ಕ ಶೈಕ್ಷಣಿಕ ಅವಕಾಶಗಳನ್ನು ಆತ್ಮವಿಶ್ವಾಸದಿಂದ ಬಳಸಿಕೊಂಡು ಯಶಸ್ಸು ಸಾಧಿಸಬೇಕು. ಅವಕಾಶ ಇದ್ದವರು ಉನ್ನತ ಶಿಕ್ಷಣ ಗಳಿಸುವುದು ಮುಖ್ಯವಲ್ಲ. ಬದಲಾಗಿ ಅವಕಾಶ ವಂಚಿತರು ಛಲದಿಂದ ಉನ್ನತ ಶಿಕ್ಷಣ ಗಳಿಸುವುದು ಮುಖ್ಯ ಎಂದರಲ್ಲದೆ, ಬರುವ ಫೆಬ್ರವರಿ ತಿಂಗಳಲ್ಲಿ ಸರ್ಕಾರಿ ಹಾಗೂ ಅನುದಾನಿತ ಕಾಲೇಜಿನ ವಿಜ್ಞಾನ ವಿದ್ಯಾರ್ಥಿಗಳಿಗೆ 10 ದಿನಗಳ…