Author: News Desk Benkiyabale

ತುಮಕೂರು: ದೇಶವನ್ನು ಸೂಪರ್ ಪವರ್ ಆಗಿಸುವಲ್ಲಿ ವಿದ್ಯಾರ್ಥಿಗಳು ಮತ್ತು ನವ ಯುವಕರ ಕೊಡುಗೆ ಅತ್ಯಗತ್ಯ. ಪ್ರತಿಯೊಬ್ಬ ಯುವಕನು ಉದ್ಯೋಗವನ್ನು ಹುಡುಕುವುದರ ಜೊತೆಗೆ ತಮ್ಮಲ್ಲಿರುವ ಕೌಶಲ್ಯವನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿ ಸುವಂತಾಗಬೇಕು. ಮೊದಲು ಸಿಕ್ಕಿರುವ ಉದ್ಯೋಗಾವಕಾಶಗಳನ್ನು ಉಪಯೋಗಿಸಿಕೊಂಡು ನಂತರ ವೇತನದ ಬಗ್ಗೆ ಯೋಚಿಸಿ, ಉದ್ಯೋಗಾವಕಾಶಗಳು ಚಿಕ್ಕದಿರಲಿ ದೊಡ್ಡದಿರಲಿ ಬಳಸಿಕೊಳ್ಳುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಎಂದು ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾ ಕೌಶಲ್ಯ ಮಿಷನ್, ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ತುಮಕೂರು ವಿಶ್ವವಿದ್ಯಾನಿಲಯದ ಉದ್ಯೋಗ ಕೋಶ, ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ರೆಡ್ಡೀಸ್ ಫೌಂಡೇಶನ್ (ರಿ), ತುಮಕೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ನಡೆದ ಉದ್ಯೋಗ ಮೇಳ-2025 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಮಾತನಾಡಿದರು. ಈ ಉದ್ಯೋಗ ಮೇಳಕ್ಕೆ…

Read More

ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿರವರ ಸಮಕ್ಷದಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿ 10 ಗಂಟೆ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕಟವಾಯಿತು. ತುಮಕೂರು ಗ್ರಾಮಾಂತರ, ತಿಪಟೂರು, ಮಧುಗಿರಿ, ಪಾವಗಡ ಹಾಗೂ ಗುಬ್ಬಿ ತಾಲ್ಲೂಕುಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಕುಣಿಗಲ್, ಸಿರಾ, ಕೊರಟಗೆರೆ ತಾಲ್ಲೂಕಿನಿಂದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು, ತುರುವೇಕೆರೆ ಮತ್ತು ಚಿಕ್ಕನಾಯಕನಹಳ್ಳಿ ತಾಲ್ಲೂಕಿನಿಂದ ಸ್ವತಂತ್ರ ಅಭ್ಯರ್ಥಿ ಜಯಗಳಿಸಿದ್ದಾರೆ. ತುಮಕೂರು ತಾಲ್ಲೂಕಿನಿಂದ ಸ್ಪರ್ಧಿಸಿದ್ದ ಹೆಚ್.ಎಂ. ನಂಜೇಗೌಡ 83 ಮತಗಳನ್ನು ಪಡೆದು ಹೆಚ್.ಕೆ. ರೇಣುಕಾಪ್ರಸಾದ್ (66 ಮತ) ರವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಗುಬ್ಬಿ ತಾಲ್ಲೂಕಿನಿಂದ ಶಾಸಕ ಹಾಗೂ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ…

Read More

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಹಲವಾರು ಕೈಗಾರಿಕೆಗಳು ಸ್ಥಾಪನೆಯಾಗಿವೆ, ಗುಬ್ಬಿಯಲ್ಲಿ ಹೆಚ್‌ಎಲ್‌ಎಲ್ ಆರಂಭಗೊAಡಿದೆ, ಈ ಕೈಗಾರಿಕೆಗಳಲ್ಲಿ ಸ್ಥಳೀಯ ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸುವಂತಹ ಕಾರ್ಯಕ್ರಮ ರೂಪಿಸುವ ಕುರಿತು ಶಾಸಕರುಗಳೊಂದಿಗೆ ಸಮಾಲೋಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ತುಮಕೂರು ತಾಲ್ಲೂಕು ಗೂಳೂರಿನಲ್ಲಿ ಗುರುವಾರ ನಡೆದ ಗೂಳೂರು ಹೋಬಳಿ ಮಟ್ಟದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ವಿತರಣೆ ಮಾಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. ದೂರದೃಷ್ಟಿ ಚಿಂತನೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಯೋಜನೆಗಳ ಫಲ ಜನರಿಗೆ ತಲುಪಬೇಕು. ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ತಂದು ತುಮಕೂರು ಜಿಲ್ಲೆಯನ್ನು ಮಾದರಿಯನ್ನಾಗಿ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ. ಆರು ತಿಂಗಳಲ್ಲಿ ಸುಮಾರು 20 ರೈಲ್ವೆ ಗೇಟುಗಳಲ್ಲಿ ಮೇಲುಸೇತುವೆ, ಕೆಳಸೇತುವೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ನೆನೆಗುದಿಗೆ…

Read More

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಪ್ರಸ್ತುತ ತುಮಕೂರು ಜಿಲ್ಲೆಯ ನಗರ ಹಾಗೂ ಪ್ರತಿ ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲೂ ಕರಾಮುವಿ ಕಲಿಕಾರ್ಥ ಸಹಾಯ ಕೇಂದ್ರಗಳನ್ನು (ಅಧ್ಯಯನ ಕೇಂದ್ರಗಳನ್ನು) ಪ್ರಥಮ ದರ್ಜೆ ಕಾಲೇಜುಗಳಲ್ಲಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿಯ ಅಧಿಕೃತ ವೆಬ್ ಸೈಟ್ www.ksoumysuru.ac.in \  https://ksouportal.com/reg_sc/StudyCentreRegistration.aspx ನಲ್ಲಿ ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಭರ್ತಿ ಮಾಡಿದ ಅರ್ಜಿಯನ್ನು *ಡೀನ್ (ಅಧ್ಯಯನ ಕೇಂದ್ರ), ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06 ಇಲ್ಲಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2025ರ ಜನವರಿ 18. ಮುಂದುವರಿದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ. ಮುಕ್ತ ವಿವಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳು ಪ್ರವೇಶಾತಿಯನ್ನು…

Read More

ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಸಂಬAಧ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ತುಮಕೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಆಯಾ ಮತಗಟ್ಟೆ, ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿ, ಚುನಾವಣಾಧಿಕಾರಿಗಳ ಕಚೇರಿ ಹಾಗೂ ಛಿeo.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ಣumಞuಡಿ.ಟಿiಛಿ.iಟಿ ವೆಬ್‌ಸೈಟ್‌ಗಳಲ್ಲಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ನಿವಾಸ ವ್ಯಾಪ್ತಿಯ ಮತಗಟ್ಟೆಗಳಲ್ಲಿನ ಮತದಾರರ ಪಟ್ಟಿಗಳಲ್ಲಿ ತಮ್ಮ ಹಾಗೂ ತಮ್ಮ ಮನೆಯ ಸದಸ್ಯರ ಹೆಸರುಗಳು ನಮೂದಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬಹುದಾಗಿದೆ. ಮತದಾರರ ಸೇರ್ಪಡೆಗೆ ನಮೂನೆ-6; ಅನಿವಾಸಿ ಭಾರತೀಯರ ಹೆಸರುಗಳ ಸೇರ್ಪಡೆಗೆ ನಮೂನೆ-6ಎ; ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ಉದ್ದೇಶಿತ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ/ಹೆಸರು ತೆಗೆದು ಹಾಕಲು ನಮೂನೆ-7 ಹಾಗೂ ಮತದಾರರ ನಿವಾಸ ಬದಲಾವಣೆ/ ಪ್ರಸ್ತುತ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ/ ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಎಪಿಕ್ ನೀಡುವಿಕೆ/ ಅಂಗವಿಕಲ ವ್ಯಕ್ತಿ ಎಂದು ಗುರುತಿಸುವುದಕ್ಕೆ ನಮೂನೆ-8ರಲ್ಲಿ ಮನವಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು: ಇತ್ತೀಚೆಗಷ್ಟೇ ತುಮಕೂರಿನ ಆರ್ ಟಿ ಒ ಕಚೇರಿ ಮೇಲೆ ದಾಳಿ ಮಾಡಿ ಮಹತ್ವದ ದಾಖಲೆ ಸಂಗ್ರಹಿಸಿದ್ದ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಿಗ್ಗೆ ದಿಬ್ಬೂರು ವಾಸಿ ,ಗೃಹಸಚಿವರ ಆಪ್ತನೆಂದು ಸ್ವಯಂ ಬಿಂಬಿಸಿಕೊAಡಿದ್ದ ಆರ್ ಟಿ ಓ ಏಜೆಂಟ್ ಸತೀಶ್ ಮನೆ ಮತ್ತು ನಿವೃತ್ತ ಆರ್ ಟಿ ಓ ,ಎಸ್ ರಾಜುರವರ ಬೆಂಗಳೂರಿನ ಮನೆ , ರಾಜು ಮಗಳ ಮನೆ, ಅವರ ಬೆಂಗಳೂರು, ಹೊಸಪೇಟೆ ಮನೆ ಸೇರಿದಂತೆ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರು ಆರ್ ಟಿ ಓ ಆಗಿ ಹಲವು ವರ್ಷ ಸೇವೆ ಸಲ್ಲಿಸಿದ ರಾಜು ನಿವೃತ್ತರಾಗಿದ್ದರು. ಬೆಂಗಳೂರಿನ ಅವರ ಮನೆ ಮತ್ತು ಬೇನಾಮಿ ಹೆಸರಿನಲ್ಲಿ ತಮ್ಮ ಆದಾಯಕ್ಕಿಂತ ಅತಿ ಹೆಚ್ಚು ಆಸ್ತಿಪಾಸ್ತಿ ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರುಗಳ ಮನೆ ಸೇರಿದಂತೆ ಐದು ಕಡೆ ದಾಳಿ ನಡೆದಿದೆ.ರಾಜು ಅವರಿಗೆ ಆಪ್ತನೆಂದು ಹೇಳಲಾದ ದಿಬ್ಬೂರು ಸತೀಶ್ ಮನೆಗೂ ಲೋಕಾಯುಕ್ತ ಇನ್ಸ್ ಫೆಕ್ಟರ್ ಶಿವರುದ್ರಪ್ಪ ಮೇಟಿ ನೇತೃತ್ವದಲ್ಲಿ ದಾಳಿ…

Read More

ತುಮಕೂರು: ಶಿಕ್ಷಣ ಕಲಿಕೆ ಮತ್ತು ಸಾಂಸ್ಕöÈತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸವಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಆಡಿಟೋರಿಯಂನಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಜಿಲ್ಲಾ ಪ್ರಾಚಾರ್ಯರ ಸಂಘದ ಸಹಯೋಗದಲ್ಲಿ ಏರ್ಪಡಿಸಿದ್ದ 2024-25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಸಾಂಸ್ಕöÈತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲಿಕೆಗೆ ಬಡವ, ಶ್ರೀಮಂತ ಎಂಬ ಭೇದ-ಭಾವ ಇರುವುದಿಲ್ಲ. ದೇವರು ಎಲ್ಲರಿಗೂ ಒಂದೇ ರೀತಿಯಾದ ಬುದ್ಧಿಶಕ್ತಿಯನ್ನು ಕೊಟ್ಟಿರುತ್ತಾನೆ. ಆ ಬುದ್ಧಿಶಕ್ತಿಯನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಬೇಕು ಎಂದು ಕರೆ ನೀಡಿದರು. ಉತ್ತಮ ಶಿಕ್ಷಣ ಪಡೆಯಲು ಲಭ್ಯವಿರುವ ಉತ್ತಮ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಹೇಳಿದರು. ಅಂಕ, ಪದವಿ ಮನುಷ್ಯನ ವ್ಯಕ್ತಿತ್ವದ ಮಾನದಂಡವಲ್ಲ. ವಿದ್ಯಾರ್ಥಿಗಳು…

Read More

ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬAಧಿಸಿದAತೆ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯನ್ವಯ ಜಿಲ್ಲೆಯಲ್ಲಿ 11,40,384 ಪುರುಷರು, 11,65,030 ಮಹಿಳೆಯರು ಹಾಗೂ 88 ಇತರೆ ಸೇರಿದಂತೆ ಒಟ್ಟು 23,05,502 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಸಂಜೆ ಜರುಗಿದ ಮಾನ್ಯತೆ ಪಡೆದ ರಾಷ್ಟಿçÃಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗಾಗಿ ಚುನಾವಣಾ ಆಯೋಗ ಹೊರಡಿಸಿದ್ದ ವೇಳಾಪಟ್ಟಿಯಂತೆ 2024ರ ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಮತದಾರರಿಗೆ 2024ರ ಅಕ್ಟೋಬರ್ 29 ರಿಂದ ನವೆಂಬರ್ 28ರವರೆಗೆ ಕಾಲಾವಕಾಶ ನೀಡಲಾಗಿತ್ತು. ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನವೆಂಬರ್ 9, 10, 23 ಹಾಗೂ 24ರಂದು ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಅರ್ಹತಾ ದಿನಾಂಕ:1.1.2025ಕ್ಕನ್ವಯವಾಗುವAತೆ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು…

Read More

ತುಮಕೂರು: ಕಳೆದ ವರ್ಷ ಜಿಲ್ಲೆಯಲ್ಲಿ 20 ಕೋಟಿಯಷ್ಟು ಹಣವನ್ನು ಸೈಬರ್ ಅಪರಾಧಿಗಳು ಕಬಳಿಸಿದ್ದಾರೆ. ಸೈಬರ್ ಅಪರಾಧಗಳ ತೀವ್ರತೆ ಹೆಚ್ಚಾಗಿರುವುದರಿಂದ ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಭಿಯಾನವಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ವಿ. ಅಶೋಕ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ಪ್ರಜಾಪ್ರಗತಿ ದಿನಪತ್ರಿಕೆ-ಪ್ರಗತಿ ಟಿವಿ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ‘ಸೈಬರ್ ಅಪರಾಧ ಜಾಗೃತಿ ಅಭಿಯಾನ’ದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ನಮ್ಮ ಜಿಲ್ಲೆಯೊಂದರಲ್ಲೇ 2022ರಲ್ಲಿ 2.5 ಕೋಟಿ, 2023ರಲ್ಲಿ ಸುಮಾರು 4 ಕೋಟಿ ಹಣ ಸೈಬರ್ ವಂಚಕರ ಪಾಲಾಗಿದೆ. ರಾಜ್ಯದಲ್ಲಿ 2000 ಕೋಟಿ ಹಣವನ್ನು ಸೈಬರ್ ಕಳ್ಳರು ದೋಚಿದ್ದಾರೆ. ಇದರಲ್ಲಿ 1000 ಕೋಟಿ ಬೆಂಗಳೂರಿಗರು ಕಳೆದುಕೊಂಡಿದ್ದಾರೆ. ಇದರಿಂದ ಸೈಬರ್ ಅಪರಾಧಿಗಳ ಬಲಿಪಶುಗಳು ಮಾನಸಿಕ ಆಘಾತಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಹಿರಿಯ ನಾಗರಿಕರೇ ಸೈಬರ್ ಅಪರಾಧಿಗಳ ಮೊದಲ…

Read More

ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಹಾಡುಹಗಲೇ ಪತ್ರಿಕಾ ಸಂಪಾದಕ ರಾಮಾಂಜನಪ್ಪ ಅವರ ಮೇಲಿನ ದಾಳಿ ಖಂಡಿಸಿ, ಹಲ್ಲೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಕೃಷ್ಣಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಜಿ.ಕರುಣಾಕರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ನಿಯೋಗದಲ್ಲಿ ತೆರಳಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಕೃಷ್ಣಮೂರ್ತಿ, ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ್ದು, ಜಿಲ್ಲೆಯ ಪಾವಗಡದಲ್ಲಿ ನಡೆದಂತಹ ಘಟನೆಯೇ ಇದಕ್ಕೆ ತಾಜಾ ಉದಾಹರಣೆಯಾಗಿದೆ. ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದರು. ಪಾವಗಡ ಪಟ್ಟಣದಲ್ಲಿ ಸೋಮವಾರ ರಾಮಾಂಜಿನಪ್ಪ ಅವರ ಮೇಲೆ ಹಲ್ಲೆ ಮಾಡಿದವರನ್ನು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.…

Read More