Author: News Desk Benkiyabale

ತುಮಕೂರು: ರಾಜ್ಯದಲ್ಲಿ ಊಒPಗಿ(ಹ್ಯೂಮನ್ ಮೆಟಾನ್ಯೂಮೊ ವೈರಸ್) ಸೋಂಕು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯನ್ವಯ ಕೆಮ್ಮುವಾಗ, ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತç ಅಥವಾ ಟಿಶ್ಯೂ ಪೇಪರ್‌ನಿಂದ ಮುಚ್ಚಿಕೊಳ್ಳಬೇಕು. ಕೈಗಳನ್ನು ಆಗಾಗ ಸಾಬೂನು ಅಥವಾ ಸ್ಯಾನಿಟೈಸರ್‌ನಿಂದ ತೊಳೆದುಕೊಳ್ಳಬೇಕು. ಜ್ವರ, ನೆಗಡಿ, ಕೆಮ್ಮು ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಬೇಕು. ಬಳಸಿದ ಟಿಶ್ಯೂ, ಕರವಸ್ತçವನ್ನು ಪುನರ್ ಬಳಕೆ ಮಾಡಬಾರದು. ಅನಾರೋಗ್ಯದ ಲಕ್ಷಣಗಳಿದ್ದವರು ಸಭೆ-ಸಮಾರಂಭದಲ್ಲಿ ಭಾಗವಹಿಸದಂತೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು. ಶಾಲಾ ಮಕ್ಕಳಲ್ಲಿ ಊಒPಗಿ ಸೋಂಕು ಹೆಚ್ಚಾಗಿ ಕಂಡು ಬರುವ ಸಾಧ್ಯತೆಯಿರುವುದರಿಂದ ಶೀತ, ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿರುವ ಮಕ್ಕಳನ್ನು ವೈದ್ಯರ ಬಳಿ ಕರೆದೊಯ್ದು…

Read More

ತುಮಕೂರು: ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿಯಿರುವ ಗ್ರಾಮ ಆಡಳಿತಾಧಿಕಾರಿಗಳ ನೇರ ನೇಮಕಾತಿಗೆ ಸಂಬAಧಿಸಿದAತೆ ತಾತ್ಕಾಲಿಕ ಪರಿಷ್ಕೃತ ಆಯ್ಕೆ ಪಟ್ಟಿಯನ್ವಯ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಬಹು ಉಪಯೋಗಿ ಸಭಾಂಗಣದಲ್ಲಿAದು ನಡೆದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ದಾಖಲೆಗಳನ್ನು ಪರಿಶೀಲಿಸುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಪರಿಶೀಲನಾಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದರು. ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಿ ನಿಯೋಜಿತ ಪರಿಶೀಲನಾಧಿಕಾರಿಗಳು ನಿಗಧಿತ ನಮೂನೆಯ ಅಂಕಣಗಳನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು. ಭರ್ತಿ ಮಾಡಿದ ನಂತರ ಅಭ್ಯರ್ಥಿಗಳಿಂದ ಅಗತ್ಯ ದಾಖಲೆಗಳ 2 ಸೆಟ್ ದೃಢೀಕೃತ ನಕಲುಗಳನ್ನು ಪಡೆಯಬೇಕು ಎಂದು ಸೂಚಿಸಿದರು.

Read More

ತುಮಕೂರು: ಬೀದಿಬದಿ ವ್ಯಾಪಾರಿಗಳು ಸಂಘಟಿತರಾಗಬೇಕು, ಸಂಘಟನೆಯಾಗಿ ಶಕ್ತಿ ಬೆಳೆಸಿಕೊಂಡು ಸರ್ಕಾರದ ಸೌಲಭ್ಯ ಪಡೆಯುವುದು, ಪರಸ್ಪರ ಸಹಕಾರದಿಂದ ಬೆಳವಣಿಗೆ ಆಗಬೇಕು ಎಂದು ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಶ್ರಮ ಜೀವಿ ಬೀದಿಬದಿ ವ್ಯಾಪಾರಿಗಳ ರಾಜ್ಯ ಸಂಘದಿAದ ಸೋಮವಾರ ನಗರದ ಕೆ.ಆರ್.ಬಡಾವಣೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿ, ಬೀದಿಬದಿ ವ್ಯಾಪಾರಿಗಳು ಸಣ್ಣ ಪ್ರಮಾಣದಲ್ಲಿ ವ್ಯಾಪಾರ ಆವಲಂಬಿಸಿ ಬದುಕು ಸಾಗಿಸುತ್ತಿದ್ದಾರೆ., ಇಂತಹ ವ್ಯವಹಾರಸ್ಥರಿಗೆ ಸರ್ಕಾರದ ವಿವಿಧ ಯೋಜನೆಗಳು, ಸವಲತ್ತುಗಳ ಬಗ್ಗೆ ಮಾಹಿತಿ, ಮಾರ್ಗದರ್ಶನ ನೀಡಿ ಅವರಿಗೆ ಅವುಗಳ ಪ್ರಯೋಜನ ದೊರೆಯುವಂತೆ ಮಾಡಬೇಕು ಎಂದು ಹೇಳಿದರು. ಬಡವರ ಮನೆ ಚಿಕ್ಕದಾದರೂ ಮನಸು ದೊಡ್ಡದು, ಶ್ರೀಮಂತರ ಮನೆ ದೊಡ್ಡದಾಗಿದ್ದರೂ ಅವರ ಮನಸು ಚಿಕ್ಕದು. ಕನ್ನಡದ ಬಗ್ಗೆ ಪ್ರೀತಿ ಅಭಿಮಾನ, ರಾಜ್ಯೋತ್ಸವ ಆಚರಣೆ ಮಾಡುವುದು ಇಂತಹ ಬಡವರ್ಗದ ಜನರೇ ಹೆಚ್ಚು. ಶ್ರೀಮಂತರು ರಾಜ್ಯೋತ್ಸದಂತಹ ಆಚರಣೆಗೆ ಹೆಚ್ಚು ಆಸಕ್ತಿ ತೋರುವುದಿಲ್ಲ. ಕನ್ನಡ ಪ್ರೇಮ ಇಂತಹವರಲ್ಲಿ ಮನೆಮಾಡಿದೆ ಎಂದರು. ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮಾತನಾಡಿ, ಶ್ರಮಜೀವಿ…

Read More

ತುಮಕೂರು: ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವು, ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ, ಬಸ್ ಪ್ರಯಾಣ ದರ ಏರಿಕೆ, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಖಂಡಿಸಿ ಜಿಲ್ಲಾ ಬಿಜೆಪಿ ಹಾಗೂ ಬಿಜಿಪಿ ಮಹಿಳಾ ಮೋರ್ಚಾದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ಸರಣಿ ಹಗರಣ, ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇವೆ. ಇದರ ವಿರುದ್ಧ ಬಿಜೆಪಿಯಿಂದ ಸಾಕಷ್ಟು ಪ್ರತಿಭಟನೆ ನಡೆದಿವೆ. ಇಷ್ಟಾಗಿಯೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಟೀಕಿಸಿದರು. ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳು ಆತಂಕ ಮೂಡಿಸಿವೆ. ಸರ್ಕಾರ ಆರೋಗ್ಯ ಸೇವೆಯನ್ನು ಸಮರ್ಪಕವಾಗಿ ಒದಗಿಸುತ್ತಿಲ್ಲ, ಆರೋಗ್ಯ ಇಲಾಖೆಯ ತಿಮಿಂಗಿಲಗಳು ಬಾಣಂತಿಯರನ್ನು ನುಂಗುತ್ತಿವೆ. ಇದಕ್ಕೆಲ್ಲಾ ಸರ್ಕಾರವೇ ನೇರ ಹೊಣೆ.…

Read More

ತುಮಕೂರು: ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಕಾರ್ಯೋನ್ಮುಖರಾಗಿರುವ ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಅತ್ಯವಶ್ಯ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು. ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನ್ ಮತ್ತು ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ದೇಶ, ರಾಜ್ಯದಲ್ಲಿನ ನಾಗರಿಕರನ್ನು ರಕ್ಷಣೆ ಮಾಡುವಂತೆ ಪೊಲೀಸರು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಉತ್ತಮ ಆರೋಗ್ಯ, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಇಂತಹ ಕ್ರೀಡಾಕೂಟ ಆಯೋಜಿಸುವುದು ಬಹುಮುಖ್ಯ ಎಂದರು. ಪೊಲೀಸರು ವರ್ಷಕ್ಕೊಮ್ಮೆ ಮೂರು ದಿನ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಮುಖ್ಯವಲ್ಲ. ತಮ್ಮ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ನಿರಂತರವಾಗಿ ಕಾಪಾಡಿಕೊಳ್ಳಲು ಸಮಯ ಸಿಕ್ಕಾಗ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅವಶ್ಯ ಎಂದು ಸಲಹೆ ನೀಡಿದರು. ಸಾರ್ವಜನಿಕರಿಗೆ ಸರ್ಕಾರ ಎಂದಾಕ್ಷಣ ನೆನಪಾಗುವುದು ಪೊಲೀಸ್ ಇಲಾಖೆ. ಪೊಲೀಸರ ಬಗ್ಗೆ ಜನರು ನಂಬಿಕೆ ಇಟ್ಟಿದ್ದಾರೆ. ನಿಮ್ಮ ಕೈಯಲ್ಲಿ…

Read More

ಹುಳಿಯಾರು: ಇತ್ತೀಚೆಗೆ ಮಹಿಳೆಯರು ಮೈಕ್ರೋ ಫೈನಾನ್ಸ್ಗಳಿಂದ ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ತುಂಬಾ ವಿಷಾದನೀಯ ಎಂದು ಚಿಕ್ಕನಾಯಕನಹಳ್ಳಿ ಕೆನರಾ ಬ್ಯಾಂಕಿನ ಕ್ಷೇತ್ರಧಿಕಾರಿಗಳಾದ ಎನ್.ಜಿ.ಮಧುಸೂದನ್ ಎಂದರು. ಕೆನರಾ ಬ್ಯಾಂಕ್ ಹಾಗೂ ಆರ್ಥಿಕ ಸಾಕ್ಷರತಾ ಕೇಂದ್ರದಿAದ ಕುಪ್ಪೂರು ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜನ ಸುರಕ್ಷಾ ಅಭಿಯಾನ ಶಿಬಿರದಲ್ಲಿ ಅವರು ಮಾತನಾಡಿದರು. ಮಹಿಳೆಯರು ಬ್ಯಾಂಕುಗಳಲ್ಲಿ ಸ್ವಸಹಾಯಗಳ ಮುಖಾಂತರ ಕಡಿಮೆ ಬಡ್ಡಿ ದರದಲ್ಲಿ ದೊರೆಯುವ ಸಾಲ ಪಡೆಯುವಂತೆ ಸಲಹೆ ನೀಡಿದರು. ಆರ್ಥಿಕ ಸಾಕ್ಷರತಾ ಸಲಹೆಗಾರರಾದ ಆರ್.ಎಂ.ಕುಮಾರಸ್ವಾಮಿ ಮಾತನಾಡುತ್ತಾ ಹೊಸ ವರ್ಷದ ಪ್ರಯುಕ್ತ ಹಲವಾರು ಸಂದೇಶಗಳನ್ನು ಮೊಬೈಲ್ ಮುಖಾಂತರ ಸೈಬರ್ ಕಳ್ಳರು ಕಳುಹಿಸುತ್ತಿದ್ದು ಅವುಗಳನ್ನು ತಿರಸ್ಕರಿಸಬೇಕೆಂದು ಹಾಗೇನಾದರೂ ಆದಲ್ಲಿ 1930 ಕ್ಕೆ ಕರೆ ಮಾಡಬೇಕೆಂದು ತಿಳಿಸಿದರು, ಕೆನರಾ ಬ್ಯಾಂಕಿನ ರಂಗಸ್ವಾಮಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷಣಿಯಾದ ರೆಹನಾ ಬಾನು, ಸಂಜೀವಿನಿ ಒಕ್ಕೂಟದ ಎಲ್‌ಸಿಆರ್‌ಪಿ ಕಲ್ಪನ, ಆಶಾ ಕಾರ್ಯಕರ್ತೆ ಹೇಮಾವತಿ, ಪ್ರತಿನಿಧಿ ಮಂಜುಳಾ ಮುಂತಾದವರು ವೇದಿಕೆಯನ್ನು ಕುರಿತು ಮಾತನಾಡಿದರು.…

Read More

ತುಮಕೂರು: ಯುವಜನರು, ಅದರಲ್ಲಿಯೂ ಹೆಣ್ಣು ಮಕ್ಕಳು ಓದುವ ಸಮಯದಲ್ಲಿ ಇನ್ನಿಲ್ಲದ ಆಕರ್ಷಣೆಗೆ ಒಳಗಾಗಿ, ದಾರಿ ತಪ್ಪಿದರೆ, ಬದುಕಿನದ್ದಕ್ಕೂ ಸಂಕಷ್ಟದ ಜೀವನ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಶ್ರೀಮತಿ ನೂರುನ್ನಿಸಾ ಎಚ್ಚರಿಸಿದ್ದಾರೆ. ನಗರದ ಮಳೆಕೋಟೆಯ ಧಾನಿಶ್ ಸಭಾಂಗಣದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ತೆಹ್ರಿರಿಕ್‌ಎ ಉರ್ದು ಆದಬ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮೌಲಾನ ಅಬ್ದುಲ್ ಕಲಾಂ ಆಜಾದ್ ಶಾಲೆಯ ಮಕ್ಕಳಿಗೆ ಹಮ್ಮಿಕೊಂಡಿದ್ದ ಪರೀಕ್ಷಾ ಪೂರ್ವ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಮೊಬೈಲ್, ಇನ್ನಿತರ ಅಕರ್ಷಣೆಗಳಿಂದ ದೂರವಿದ್ದು,ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಂಡರೆ,ಸಾಧಕರ ಪಟ್ಟಿಯಲ್ಲಿ ನಿಲ್ಲಬಹುದು.ಇದಕ್ಕೆ ನನ್ನ ಜೀವನವೇ ಉದಾಹರಣೆ ಎಂದರು. ನಮ್ಮ ತಂದೆ, ತಾಯಿ, ನಮಗೆ ಬೇಕಾದನ್ನು ಕೊಡಿಸಲಿಲ್ಲ,ಒಳ್ಳೆಯ ಶಾಲೆಗೆ ಸೇರಿಸಲಿಲ್ಲ ಎಂದು ದೂರುವ ಬದಲು ಇರುವುದರಲ್ಲಿಯೇ ಕಷ್ಟಪಟ್ಟು ಓದಿ,ಒಳ್ಳೆಯ ಅಂಕ ಪಡೆದು,ಇರುವ ಅವಕಾಶಗಳನ್ನು ಬಳಸಿಕೊಂಡರೆ ನೀವು ಕೂಡ ನಮ್ಮಂತೆ ನ್ಯಾಯಾಧೀಶರೋ,ವಕೀಲರೋ,ಅಧಿಕಾರಿಗಳೋ ಆಗಬಹುದು.ಮನೆಯಲ್ಲಿ ಅಪ್ಪ, ಅಮ್ಮ ನಮಗೆ ಸಮಯ ನೀಡುತ್ತಿಲ್ಲ ಎಂದು ಸೊಷಿಯಲ್ ಮೀಡಿಯಾದಲ್ಲಿ…

Read More

ತುಮಕೂರಿನ ಬಾರ್‌ಲೈನ್ ರಸ್ತೆಯಲ್ಲಿರುವ ಕೃಷ್ಣಮಂದಿರದಲ್ಲಿ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರ 5ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ವಿಶೇಷ ಹೋಮ-ಪೂಜಾದಿಗಳು ನೆರವೇರಿದವು. ನಂತರ ಕೃಷ್ಣ ಮಂದಿರದ ಸೇರಿದಂತೆ ಜಯಪುರದ ಲಕ್ಷಿ÷್ಮ ದೇವಸ್ಥಾನ ಮುಂಭಾಗ ಹಾಗೂ ಮೈದಾಳದ ಶಿವಶೈಕ್ಷಣಿಕ ಅನಾಥಾಶ್ರಮದ ಮುಂಭಾಗ ಅನ್ನಸಂತರ್ಪಣೆ ನಡೆಸಲಾಯಿತು.

Read More

ತುಮಕೂರು: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಶನಿವಾರ ತುಮಕೂರು ವಿಶ್ವವಿದ್ಯಾನಿಲಯದ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜûಮ್ ಜûಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಕೆ. ಪ್ರಸನ್ನಕುಮಾರ್ ಉಪಸ್ಥಿತರಿದ್ದರು. ಸ್ವಾಮೀಜಿ ಅವರಿಗೆ ತುಮಕೂರು ವಿವಿಯ 17ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿತ್ತು. ಅನಿವಾರ್ಯ ಕಾರಣಗಳಿಂದ ಸ್ವಾಮೀಜಿ ಅವರು ಘಟಿಕೋತ್ಸವದಲ್ಲಿ ಭಾಗವಹಿಸಿರಲಿಲ್ಲ. ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ಚುನಾವಣೆಯಲ್ಲಿ ತಳ ಸಮುದಾಯದ ಮತಗಳನ್ನು ಪಡೆಯುವ ಪಕ್ಷಗಳು, ಚುನಾವಣೆಯ ನಂತರ ಆ ಸಮುದಾಯಗಳಿಗೆ ನೀಡಿದ ಭರವಸೆಗಳನ್ನು, ಹಿತವನ್ನು ಮರೆಯುತ್ತಾರೆ. ರಾಜಕೀಯ ಇಚ್ಛಾಶಕ್ತಿ ಹಾಗೂ ಅಸಂಘಟನೆಯ ಕೊರತೆಯಿಂದಾಗಿ ಮೀಸಲಾತಿ ಸರಿಯಾದ ಪ್ರಮಾಣದಲ್ಲಿ ಹಂಚಿಯಾಗುತ್ತಿಲ್ಲ. ನೀತಿಯಿಂದ ಮನುಷ್ಯನ ವ್ಯಕ್ತಿತ್ವವನ್ನು ಅಳೆದಾಗ ಸಮ ಸಮಾಜ ರೂಪುಗೊಳ್ಳಲಿದೆ ಎಂದರು. ಆಧ್ಯಾತ್ಮಿಕ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ಪ್ರಸನ್ನಾನಂದ ಸ್ವಾಮೀಜಿ ಅವರು ಗದಗ ಜಿಲ್ಲೆಯ ಹಿರೇಮಣ್ಣೂರಿನವರು. ಶಾಲಾ ವಿದ್ಯಾಭ್ಯಾಸ…

Read More

ತುಮಕೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ತುಮಕೂರಿನ ಜ್ಞಾನ ಸಿಂಧು ಸ್ವಾಮಿ ಅವರನ್ನು ಆಯ್ಕೆ ಮಾಡಿ ಕೆ ಆರ್ ಎಸ್ ಪಕ್ಷದ ಕಾರ್ಯಕಾರಿ ಸಮಿತಿ ಆದೇಶ ಹೊರಡಿಸಿದೆ. ಪಕ್ಷವೂ ಮುಂಬುರವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಕಾರ್ಯಕ್ಷಮತೆಯಿಂದ ಕೆಲಸ ನಿರ್ವಹಣೆ ಮಾಡಲು ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಪುನರಚನೆ ಕಾರ್ಯ ಕೈಗೊಂಡಿತ್ತು. ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹೆಸರು ಸೂಚಿಸಿ ಮತ ಹಾಕುವ ಪ್ರಕ್ರಿಯೆ ಯಲ್ಲಿ ಒಮ್ಮತದಿಂದ ರಾಜ್ಯ ಕಾರ್ಯದರ್ಶಿಯಾಗಿದ್ದ ಜ್ಞಾನಸಿಂಧುಸ್ವಾಮಿ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಪಕ್ಷದ ಬಲವರ್ಧನೆ, ಸಂಘಟನಾ ಚಾತುರ್ಯ, ನಾಯಕತ್ವ ಹಾಗೂ ವಿವಿಧ ಆಯಾಮಗಳಲ್ಲಿ ಮುಂದೆ ಇರುವ ಅವರನ್ನು ಪಕ್ಷವು ಉನ್ನತಮಟ್ಟಕ್ಕೆ ಆಯ್ಕೆ ಮಾಡುವ ಮೂಲಕ ಮತ್ತಷ್ಟು ಜವಾಬ್ದಾರಿ ಹಂಚಿದೆ. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಜ್ಞಾನಸಿಂಧು ಸ್ವಾಮಿ ಅವರು, ಪಕ್ಷಕ್ಕೆ ದುಡಿದ ಪ್ರಾಮಾಣಿಕತೆಯನ್ನು ಗಮನಿಸಿ ಉಪಾಧ್ಯಕ್ಷ ಸ್ಥಾನಕ್ಕೇರಿಸಿ ಆಯ್ಕೆ ಮಾಡಿದ್ದು ಪಕ್ಷದಲ್ಲಿ ನನ್ನ ಜವಾಬ್ದಾರಿಯನ್ಮು…

Read More