ತುಮಕೂರು: ತುಮಕೂರು ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಯನ್ನು ವಜಾ(ಸೂಪರ್‍ಸೀಡ್)ಗೊಳಿಸಿ ತಮ್ಮನ್ನು ಒಂದು ವರ್ಷದ ಅವಧಿಗೆ ಬ್ಯಾಂಕಿನ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಬೆಂಗಳೂರು ವಿಭಾಗದ ಸಹಕಾರ ಸಂಘಗಳ ಜಂಟಿ ನಿಬಂಧಕರು ಜುಲೈ 19ರಂದು ಹೊರಡಿಸಿರುವ ಆದೇಶದನ್ವಯ ಜುಲೈ 20ರ ಸಂಜೆ ಆಡಳಿತಾಧಿಕಾರಿಯ ಸ್ವಯಂ ಪ್ರಭಾರವನ್ನು ವಹಿಸಿಕೊಂಡಿದ್ದೇನೆ ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ಅವರು ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಆಗಿರುವ ಹಿನ್ನೆಲೆಯಲ್ಲಿ ಬ್ಯಾಂಕಿನ ಮುಂದಿನ ಕಾರ್ಯಚಟುವಟಿಕೆಗಳನ್ನು ರೂಪಿಸುವ ಬಗ್ಗೆ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು. ಸೂಪರ್ ಸೀಡ್ ಮಾಡಲು ಕಾರಣವೇನೆಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು 6 ಪುಟಗಳನ್ನೊಳಗೊಂಡ ಜಂಟಿ ನಿಬಂಧಕರ ಆದೇಶದಲ್ಲಿ ಪ್ರತ್ಯೇಕವಾಗಿ ಕಾರಣವೇನೆಂದು ತಿಳಿಸಿಲ್ಲ. ಆದರೆ ಬ್ಯಾಂಕಿನ ಹಣಕಾಸು ವ್ಯವಹಾರದಲ್ಲಿ ಲೋಪವಾಗಿರುವ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಈ ವಿಷಯದ ಬಗ್ಗೆ ವಿವರವಾದ ಮಾಹಿತಿ ನನಗೆ ಗೊತ್ತಿಲ್ಲ.…
Author: News Desk Benkiyabale
ತುಮಕೂರು: ಸಮರ್ಪಕ ಕುಡಿಯುವ ನೀರಿಗೆ ಆಗ್ರಹಿಸಿ ನಗರದ ಹೊರವಲಯದ ಬೆಳಗುಂಬ ಗ್ರಾಮ ಪಂಚಾಯಿತಿ ಕಚೇರಿಗೆ ಮಹಿಳೆಯರು ಬುಧವಾರ ಮುತ್ತಿಗೆ ಹಾಕಿದರು. ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಐದಾರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಜನರ ಮನವಿಗೆ ಸ್ಪಂದಿಸುತ್ತಿಲ್ಲ. ಇದರಿಂದ ಕುಡಿಯುವ ನೀರಿನ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದರು ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಮತ್ತು ಅಧ್ಯಕ್ಷರು ಸ್ಪಂದಿಸುತ್ತಿಲ್ಲ. ಇದರಿಂದ ಬೇಸರವಾಗಿದೆ. ನಾನು ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಗ್ರಾಮ ಪಂಚಾಯಿತಿ ಸದಸ್ಯ ರಾಮಚಂದ್ರಯ್ಯ ಅವರು ಈ ವೇಳೆ ತಿಳಿಸಿದರು. ಅಧಿಕಾರಿಗಳು ಮೊದಲು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಮಹಿಳೆಯರು ಆಗ್ರಹಿಸಿದರು. ಪಿಡಿಒ ವರ್ಗಾವಣೆಗೆ ಮನವಿ: ಬೆಳಗುಂಬ ಪಂಚಾಯಿತಿ ಪಿಡಿಒ ಮೋಹನ್ ಕುಮಾರ್ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅವರನ್ನು ಬೇರೆಡೆ…
ತುಮಕೂರು: ಹೇಮಾವತಿ ಯೋಜನೆ ಅಡಿಯಲ್ಲಿ ಭೂಮಿಯನ್ನು ಪಡೆಯಲು 2013ನೇ ಕಾಯ್ದೆ ಪ್ರಕಾರ ಕೆಲ ಗ್ರಾಮಗಳಲ್ಲಿ ರೈತರ ಜಮೀನುಗಳ ಖರೀದಿಗೆ ನಿರ್ದಿಷ್ಠ ಮೊತ್ತವನ್ನು ನಿಗದಿ ಮಾಡಿದ್ದು, ಇದಕ್ಕೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಒಂದು ತಿಂಗಳೊಳಗಡೆ ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ರೈತರ ಸಭೆಯಲ್ಲಿ ಮಾತನಾಡಿದ ಅವರು, ಚಿಕ್ಕನಾಯಕನಹಳ್ಳಿಯ ಕೆಲ ಹಳ್ಳಿಗಳಲ್ಲಿ ಹೇಮಾವತಿ ನಾಲಾ ಯೋಜನೆಗೆ ರೈತರ ಜಮೀನು ಪಡೆಯಲು ಗುಂಟೆಗೆ 8900, 9250 ರೂಗಳಂತೆ ನಿಗದಿ ಪಡಿಸಲಾಗಿದೆ. ಒಂದು ಗುಂಟೆಗೆ 8900 ರೂಗಳಂತೆ 1:4 ಅನುಪಾತದಲ್ಲಿ ಒಂದು ಎಕರೆಗೆ 14 ಲಕ್ಷದಷ್ಟು ಹಣ ನೀಡಿ ಜಮೀನು ನೇರ ಖರೀದಿ ಮಾಡಲಾಗುವುದು ಎಂದರು. ಸಭೆಯಲ್ಲಿ ಮಾತನಾಡಿದ ರೈತರು, ಈ ಮುಂಚೆ ಕೆಲ ರೈತರ ಜಮೀನುಗಳು ವಿವಿಧ ಯೋಜನೆಗಳಿಗೆ ಹೋಗಿದ್ದು, ಅದಕ್ಕೆ ಇಲ್ಲಿಯವರೆಗೆ ಹಣ ಬಂದಿಲ್ಲ. ಈಗ ಮತ್ತೆ ಹೇಮಾವತಿ ಯೋಜನೆ ಹೆಸರಿನಲ್ಲಿ ಜಮೀನು ಪಡೆಯಲು…
ಮಧುಗಿರಿ : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಗುರುವಾರ ತಡರಾತ್ರಿ ಹೆಬ್ಬಾವು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಕಿಡಿಗೇಡಿಗಳ ದಾಳಿಗೆ ಬಲಿಯಾಯ್ತ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ರಾತ್ರಿ ಸುಮಾರು 11 ಘಂಟೆಯ ಸಂದರ್ಭದಲ್ಲಿ ಆಸ್ಪತ್ರೆಯ ಆವರಣದ ಕಾಂಪೌಂಡ್ ಮೇಲ್ಬಾಗದಲ್ಲಿ ಹೆಬ್ಬಾವು ಓಡಾಡುತ್ತಿದ್ದುದನ್ನು ಗಮನಿಸಿದ ಸಾರ್ವಜನಿಕರು ಭಯಬೀತರಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದಾಗ ಹೆಬ್ಬಾವು ಚರಂಡಿಯೊಳಗೆ ನುಸುಳಿದೆ. ಚರಂಡಿಯೊಳಗೆ ಹೋದ ಹಾವು ಮತ್ತೆ ಮೇಲೆ ಬರುವುದಿಲ್ಲ. ಯಾರಿಗೂ ಏನೂ ತೊಂದರೆ ಮಾಡುವುದಿಲ್ಲ. ಬೆಳಗ್ಗೆ ಬಂದು ಹಿಡಿಯುವುದಾಗಿ ಸಿಬ್ಬಂದಿ ಅಲ್ಲಿಂದ ನಿರ್ಗಮಿಸಿದ್ದಾರೆ. ಸ್ವಲ್ಪ ಸಮಯದ ನಂತರ ಮತ್ತೆ ಮೇಲೆ ಬಂದ ಹಾವು ಅಸ್ಪತ್ರೆಯ ಆವರಣ ಕಾಂಪೌಂಡ್ ಮೇಲ್ಬಾಗದಲ್ಲಿ ಓಡಾಡಿದೆ. ಇದರಿಂದ ಗಾಬರಿಗೊಂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ಹೊರಕ್ಕೆ ಓಡಿ ಬಂದಿದ್ದಾರೆ. ಒಂದು ಘಂಟೆಯಾದರೂ ಹೆಬ್ಬಾವು ಆಸ್ಪತ್ರೆಯ ಕಾಂಪೌಚಿಡ್ ಮೇಲಿಂದ ಕದಲದೆ ಮಲಗಿಬಿಟ್ಟಿದೆ. ಈ ಸಂದರ್ಭದಲ್ಲಿ…
ತುರುವೇಕೆರೆ : ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಹಿಂದೇಟು ಹಾಕುವ ಹಾಗೂ ಸಾರ್ವಜನಿಕರಿಂದ ಹಣ ಸುಲಿಗೆ ಮಾಡುವವರಿಗೆ ಸಿಂಹಸ್ವಪ್ನದಂತಿರಬೇಕಾದ ಭ್ರಷ್ಠಾಚಾರ ನಿಗ್ರಹ ದಳದ ಪತ್ರಕ್ಕೆ ತಾಲೂಕಿನ ಹಲವಾರು ಸರ್ಕಾರಿ ಕಛೇರಿಗಳು ಕವಡೆ ಕಿಮ್ಮತ್ತನ್ನೂ ನೀಡುತ್ತಿಲ್ಲ ಎಂಬ ಸಂಗತಿ ಇಂದು ಬಾಣಸಂದ್ರದಲ್ಲಿ ನಡೆದ ಎಸಿಬಿ ಸಾರ್ವಜನಿಕರ ಸಭೆಯ ವೇಳೆ ಪ್ರಸ್ತಾಪವಾಯಿತು. ತಾಲೂಕಿನ ಎಂ.ಮಂಚೇನಹಳ್ಳಿಯ ಕೃಷ್ಣಮೂರ್ತಿ ಎಂಬುವವರು ಕಳೆದ 28-11- 18 ರಂದು ಎಸಿಬಿ ಗೆ ತುರುವೇಕೆರೆ ತಾಲೂಕು ಕಛೇರಿಯಲ್ಲಿ ಕಾನೂನು ಬಾಹಿರವಾಗಿ ಖಾತೆ ಬದಲಾವಣೆ ಮಾಡಲಾಗಿದೆ. ಈ ಕುರಿತು ಸಾಕಷ್ಟು ಬಾರಿ ಮನವಿ ಹಾಗೂ ದೂರು ನೀಡಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳದೇ ತೊಂದರೆ ಮಾಡಲಾಗಿದೆ ಎಂದು ದೂರು ನೀಡಿದ್ದರು. ಈ ಸಂಬಂಧ ತಾಲೂಕು ಕಛೇರಿಗೆ ಅಂದೇ ಜಿಲ್ಲಾ ಭ್ರಷ್ಠಾಚಾರ ನಿಗ್ರಹ ದಳದ ಅಧಿಕಾರಿಗಳು ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ಮಾಡಿ ದೂರುದಾರರಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದೂ ಹಾಗೂ ಆ ಕುರಿತಂತೆ ದೂರುದಾರರಿಗೆ ಮತ್ತು ತಮಗೆ ಇನ್ನು…
ಗುಬ್ಬಿ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 206 ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಾಗೂ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸ್ವಾಧೀನಪಡಿಸಿ ಕೊಳ್ಳುತ್ತಿರುವ ರೈತರ ಭೂಮಿ, ನಿವೇಶನ, ತೋಟಗಳು, ವಾಸದ ಮನೆಗಳಿಗೆ ಸೂಕ್ತವಾದ ಪರಿಹಾರ ನೀಡದಿರುವುದನ್ನು ಖಂಡಿಸಿ ತಾಲ್ಲೂಕಿನ ಮುದಿಗೆರೆ ಭಾಗದ ರೈತರು ಹಾಗೂ ರೈತ ಸಂಘದ ಪದಾಧಿಕಾರಿಗಳು ಕಾಮಗಾರಿ ನಡೆಸದಂತೆ ಜೆಸಿಬಿ ಯಂತ್ರಗಳನ್ನು ತಡೆದು ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಮುದಿಗೆರೆ ಗ್ರಾಮದ ಪಕ್ಕದಲ್ಲಿ ಹಾದು ಹೋಗುತ್ತಿರುವ ರಸ್ತೆ ಕಾಮಗಾರಿ ನಡೆಯುತ್ತಿರುವ ರೈತರ ಜಮೀನಿನಲ್ಲಿ ಜೆಸಿಬಿ ಯಂತ್ರವನ್ನು ತಡೆದು ಸ್ವಾಧೀನಪಡಿಸಿಕೊಳ್ಳುವ ಜಮೀನಿಗೆ ಸೂಕ್ತವಾದ ಪರಿಹಾರ ನೀಡುವವರೆಗೂ ಕಾಮಗಾರಿ ಮಾಡಬಾರದೆಂದು ಈ ಭಾಗದ ರೈತರು ರೈತ ಸಂಘದ ಮುಖಂಡರೊಂದಿಗೆ ಪ್ರತಿಭಟನೆ ನಡೆಸಿದರು. ರೈತ ಮಹದೇವಯ್ಯ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಸ್ವಾಧೀನ ಪಡಿಸಿಕೊಂಡಿರುವ ನಮ್ಮ ಭೂಮಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈವರೆಗೂ ಸೂಕ್ತವಾದ ಪರಿಹಾರ ನೀಡಿಲ್ಲ. ಅಲ್ಲದೆ ಯಾವುದೇ ಮಾಹಿತಿಯನ್ನು ನೀಡದೆ…
ತುಮಕೂರು : ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಡೆದ ಅಲ್ಪಸಂಖ್ಯಾತ ಕಲ್ಯಾಣದ ಪ್ರಧಾನ ಮಂತ್ರಿಗಳ 15 ಅಂಶಗಳ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಗುಬ್ಬಿ ಹಾಗೂ ತುಮಕೂರು ತಾಲ್ಲೂಕಿನಲ್ಲಿ ಒಟ್ಟು 114 ಅಲ್ಪಸಂಖ್ಯಾತರ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಹೊರಗುಳಿದ ಮಕ್ಕಳನ್ನು ವಿಶೇಷ ದಾಖಲಾತಿ ಆಂದೋಲನಡಿಯಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಿ ಶಾಲೆಗೆ ದಾಖಲಿಸಬೇಕು ಹಾಗೂ ತಂದೆ-ತಾಯೆಂದರಿಗೆ ಮಕ್ಕಳ ಭವಿಷ್ಯದ ಬಗ್ಗೆ ಅರಿವು ಮೂಡಿಸಬೇಕೆಂದರು. ಅಲ್ಪಸಂಖ್ಯಾತ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ದಾಖಲಾತಿ ಹೆಚ್ಚಾಗಿದ್ದು, ವಿದ್ಯಾರ್ಥಿಗಳ ಸಂಖ್ಯೆ ಕಡಿಯಾಗುತ್ತಿರುವ ಬಗ್ಗೆ ಕಾರಣವೇನೆಂದು ಕೇಳಿ ನಿಖರ ಮಾಹಿತಿ ನೀಡಲು ಡಿಡಿಪಿಐ ಕಾಮಾಕ್ಷಿ ಅವರಿಗೆ ಸೂಚಿಸಿದಾಗ ಆರ್ಥಿಕವಾಗಿ ಹಿಂದುಳಿದಿರುವುದರಿಂದ ಮಕ್ಕಳ ಪೋಷಕರೇ ಗ್ಯಾರೇಜು, ಮತ್ತಿತರ ಕಡೆ ಕೆಲಸಕ್ಕೆ ಕಳುಹಿಸುತ್ತಿರುವುದರಿಂದ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ…
ತುಮಕೂರು: ನಗರದಲ್ಲಿ ಕೈಗೊಂಡಿರುವ ಸ್ಮಾರ್ಟ್ ರಸ್ತೆ ಯೋಜನೆ ಪೂರ್ಣಗೊಂಡ ಬಳಿಕ ರಸ್ತೆ ಅಗೆಯುವ ಯಾವುದೇ ಕಾಮಗಾರಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸ್ಮಾರ್ಟ್ ರಸ್ತೆ ಕಾಮಗಾರಿ ಪೂರ್ಣಗೊಳ್ಳುವ ಮುನ್ನ ವಿವಿಧ ಇಲಾಖೆಗಳ ವತಿಯಿಂದ ಕೈಗೊಳ್ಳಬಹುದಾದ ಕುಡಿಯುವ ನೀರು, ವಿದ್ಯುತ್, ಗ್ಯಾಸ್, ಬೀದಿ ದೀಪ, ನೀರಿನ ಸಂಪರ್ಕ, ಬಿಎಸ್‍ಎನ್‍ಎಲ್ ಕೇಬಲ್ ಅಳವಡಿಕೆ, ಯುಜಿಡಿ ಸಂಪರ್ಕ ಸೇರಿದಂತೆ ಮತ್ತಿತರ ರಸ್ತೆ ಅಗೆಯುವ ಕಾಮಗಾರಿಗಳನ್ನು ಪೂರ್ಣಗೊಳಿಸಿರಬೇಕು. ತದ ನಂತರ ಯಾವುದೇ ರಸ್ತೆ ಅಗೆಯುವ ಕಾಮಗಾರಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಅವರು ತಿಳಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಸ್ಮಾರ್ಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡನಂತರ ಅತ್ಯಾವಶ್ಯಕ ಕಾಮಗಾರಿಗಳಿದ್ದಲ್ಲಿ ಸಂಬಂಧಪಟ್ಟವರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮನ್ವಯ ಸಮಿತಿಯಲ್ಲಿ ಮಂಡಿಸಿ ಪೂರ್ವಾನುಮತಿ ಪಡೆದುಕೊಳ್ಳಬೇಕು. ತಪ್ಪಿದಲ್ಲಿ…
ತುರುವೇಕೆರೆ: ತುಮಕೂರು ಜಿಲ್ಲಾದಿಕಾರಿ ರಾಕೇಶ್‍ಕುಮಾರ್ ಮಂಗಳವಾರ ಸಂಜೆ ತಾಲೂಕು ಕಚೇರಿಗೆ ಧಿಡೀರ್ ಬೇಟಿ ನೀಡಿ ಹಲವಾರು ಇಲಾಖೆಗಳ ಕಡತಗಳನ್ನು ಪರಿಶೀಲಿಸುವ ಮೂಲಕ ಅದಿಕಾರಿಗಳಿಗೆ ಚುರುಕು ಮುಟ್ಟಿಸಿದರು. ತಾಲೂಕು ಕಛೇರಿಯಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಸಮಾಜಿಕ ಭದ್ರತ ಯೋಜನೆಯಲ್ಲಿನ ಪಿಂಚಣಿ ಹಣ ವರ್ಗಾವಣೆಯಲ್ಲಿ ವಿಳಂಬವಾಗುತ್ತಿದ್ದ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ಹಲವು ದೂರುಗಳು ಸಲ್ಲಿಕೆಯಾಗಿದ್ದು ಖುದ್ದು ಬೇಟಿ ನೀಡಿ ಪರಿಶೀಲಿಸಲಾಗಿ ಕೆಲವು ಲೋಪ ದೋಷಗಳು ಕಂಡ ಬಂದಿದ್ದು ಹಲವು ಪಲಾನುಭವಿಗಳಿಗೆ ಎರಡು ಬಾರಿ ಹಣ ಸಂದಾಯವಾಗಿದ್ದು. ಇನ್ನು ಕೆಲವು ಜನರಿಗೆ ಸುಮಾರು ದಿನಗಳಿಂದ ಪಿಂಚಣಿ ಬಂದಿಲ್ಲ. ಕೆ-1 ನಿಂದ ಕೆ-2ಗೆ ಆಡಳಿತ ಯಂತ್ರ ಬದಲಾಗಿರುವುದರಿಂದ ಸೂಕ್ತ ದಾಖಲಾತಿಗಳನ್ನು ಪಲಾನುಭವಿಗಳು ಸಲ್ಲಿಸದಿದ್ದರಿಂದ ವಿಳಂಬವಾಗಿದೆ. ಪಿಂಚಣಿ ಪಲಾನುಭವಿಗಳು ತಮ್ಮ ಆದಾರ್ ಕಾರ್ಡ್ ಬ್ಯಾಂಕ್ ಪಾಸ್ ಪುಸ್ತಕವನ್ನು ಸಲ್ಲಿಸುವಂತೆ ಸೂಚಿಸಿದರು. ಗ್ರಾಮ ಪಂಚಾಯ್ತಿಯಲ್ಲಿ ಆದಾರ್ ತಿದ್ದುಪಡಿ: ಜಿಲ್ಲೆಯಲ್ಲಿಯೇ ಆದಾರ್ ಕಾರ್ಡ್…
ತುಮಕೂರು : ಗ್ರಾಮಲೆಕ್ಕಾಧಿಕಾರಿಗಳ ಮುಂಬಡ್ತಿಯಲ್ಲಿ ಉಂಟಾಗುತ್ತಿರುವ ನಿರಂತರ ಅನ್ಯಾಯವನ್ನು ಸರಿಪಡಿಸಿ, ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಮತ್ತು ಗ್ರಾಮಲೆಕ್ಕಿಗರ ಜೇಷ್ಠತೆಗಳನ್ನು ಒಟ್ಟುಗೂಡಿಸಿ, ಪದನವೀಕರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜಿಲ್ಲಾ. ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಕೆ.ಆರ್.ಮುರಳೀಧರ್ ಆಗ್ರಹ ವ್ಯಕ್ತ ಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘವು ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕುಂದು ಕೊರತೆ ಮತ್ತು ಇತರೆ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸರಿಪಡಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಲ್ಲಿ ಕೋರಲಾಗಿತ್ತು. ನಂತರ ಈ ಬಗ್ಗೆ ಎರಡು ಬಾರಿ ಸಭೆ ಕರೆದು ಚರ್ಚ ಮಾಡಿ ಬೇಡಿಕೆಗಳ ಈಡೇರಿಕೆಗೆ ಆಶ್ವಾಸನೆ ನೀಡಲಾಗಿತ್ತು. ಆದರೆ ಇಲ್ಲಿವರೆಗೆ ಭರವಸೆಗಳು ಈಡೇರಿಲ್ಲ ಎಂದು ಆಕ್ರೋಷ ವ್ಯಕ್ತ ಪಡಿಸಿದರು. ಅನ್ಯ ಇಲಾಖೆಯ ಕೆಲಸದ ಒತ್ತಡವನ್ನು ನಮ್ಮ ಇಲಾಖೆ ನೌಕರರ…