ಕೊರಟಗೆರೆ : ಇಲಾಖಾ ಅಧಿಕಾರಿಗಳು ತಾವು ಕಾರ್ಯನಿರ್ವಹಿಸುವ ಸ್ಥಳದಲ್ಲೆ ವಾಸವಿದ್ದು ರಾಜ್ಯ ಸರ್ಕಾರದ ಯೋಜನೆಗಳನ್ನು ಪ್ರಮಾಣಿಕವಾಗಿ ಅನುಷ್ಢಾನ ಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಅವರು ತಮ್ಮ ಸ್ವಕ್ಷೇತ್ರವಾದ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ತ್ರೈಮಾಸಿಕ ಕೆ.ಡಿ.ಪಿ ಸಬೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಇಲಾಖಾ ಅಧಿಕಾರಿಗಳು ಪ್ರತಿನಿತ್ಯ ಬೆಂಗಳೂರು ಸೇರಿದಂತೆ ದೂರದ ಊರುಗಳಿಂದ ಬರುತ್ತಿದ್ದು ಕಛೇರಿಯಲ್ಲಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅಧಿಕಾರಿಗಳು ಲಭ್ಯವಿಲ್ಲದೆ ಕೆಲಸ ಕಾರ್ಯಗಳು ಕುಂಟಿತವಾಗಿದ್ದು ಉಪಮುಖ್ಯಮಂತ್ರಿಗಳು ತಮ್ಮ ಕ್ಷೇತ್ರದಲ್ಲಿ ಇಲಾಖಾ ಅಧಿಕಾರಿಗಳನ್ನು ಹಿಡಿತದಲ್ಲಿ ಇಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದ್ದು ಇನ್ನು ಮುಂದೆ ಜನರಿಗೆ ಸ್ಪಂದಿಸಿ ಸರ್ಕಾರಿ ಕಾರ್ಯಕ್ರಮಗಳು ಸಮಪರ್ಕವಾಗಿ ಅನುಷ್ಠಾನಮಾಡುವುದರೊಂದಿಗೆ ಕೊರಟಗೆರೆ ವಿಧಾನ ಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಬೇಕು ಎಂದು ಎಚ್ಚರಿಕೆ ನೀಡಿದರು. ಲಕ್ಷಾಂತರ ರೂಗಳ ವೆಚ್ಚದಲ್ಲಿ ತಾಲೂಕು ಕೇಂದ್ರದಲ್ಲಿ ಸುಂದರವಾದ ತಾಲೂಕು ಕಛೇರಿ ಮತ್ತು ತಾ.ಪಂ. ಕಛೇರಿಗಳ ಕಟ್ಟಡವಿದ್ದು ಶುಚ್ಚಿಸ್ವವಿಲ್ಲದೆ ನೂತನ…
Author: News Desk Benkiyabale
ಕೊರಟಗೆರೆ: ಕಾರು ಚಾಲಕನ ಅಜಾಗರೂಕತೆ ಮತ್ತು ಅತಿವೇಗದ ಚಾಲನೆಯಿಂದ ಆಹಾರಕ್ಕಾಗಿ ಗ್ರಾಮಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ಡಿಕ್ಕಿ ಹೊಡೆದು, ಚಿರತೆಯ ತಲೆ, ಹೊಟ್ಟೆ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿ ಚಿರತೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿರುವ ಘಟನೆ ಸೋಮವಾರ ನಡೆದಿದೆ. ಊರ್ಡಿಗೆರೆ ಸಮೀಪದ ದೇವರಾಯನದುರ್ಗ ಅರಣ್ಯ ಪ್ರದೇಶದಿಂದ ಎಲೆರಾಂಪುರ ಗ್ರಾಪಂ ಸಮೀಪದ ಹೊಸಪಾಳ್ಯದ ಕಡೆಗೆ ಆಹಾರ ಅರಸಿ ಬಂದಿರುವ ಚಿರತೆ ಭಾನುವಾರ ರಾತ್ರಿ ರಸ್ತೆ ದಾಟುವ ವೇಳೆಯಲ್ಲಿ ಅತಿ ವೇಗವಾಗಿ ಬಂದಿರುವ ಕಾರಿನಿಂದ ಅಪಘಾತವಾಗಿದೆ. ಅಪಘಾತ ನಡೆದ ಕೂಡಲೆ ತಿರುಗಿಯೂ ಸಹ ನೋಡದೆ ಕಾರು ಚಾಲಕ ಸ್ಥಳದಿಂದ ಪರಾರಿ ಆಗಿದ್ದಾರೆ. ಹೊಸಪಾಳ್ಯಕ್ಕೆ ತೆರಳುವ ವೇಳೆ ಯುವಕರಿಗೆ ಸೋಮವಾರ ಮುಂಜಾನೆ ಚಿರತೆಯ ದರ್ಶನವಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಭಾನುವಾರ ರಾತ್ರಿಯೇ ಚಿರತೆಗೆ ಅಪಘಾತವಾಗಿ ರಸ್ತೆ ಬದಿಯ ಬೇಲಿಗೆ ಬಿದ್ದು ಹಾರಾಟ ಚೀರಾಟ ನಡೆಸಿದೆ. ಬೇಲಿಯಲ್ಲಿನ…
ತುಮಕೂರು: ಶಾಸಕದ್ವಯರಾದ ಆನಂದ್‍ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸತ್ಯವೇ ಆಗಿದ್ದರೆ, ಸದ್ಯದಲ್ಲಿರುವ ಸಂಖ್ಯಾಬಲದಿಂದ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಸರ್ಕಾರ ಸುಭದ್ರವಾಗಿದ್ದು, ಜನರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ ಅವರು ಸ್ಪಷ್ಟಪಡಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಬೆಳಿಗ್ಗೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಾತನಾಡಿದ ಅವರು ಆನಂದ್‍ಸಿಂಗ್ ಹಾಗೂ ಜಾರಕಿಹೊಳಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಸುದ್ದಿ ಇದೆ. ಆದರೆ ಇವರಿಬ್ಬರ ರಾಜೀನಾಮೆಯನ್ನು ಸ್ಪೀಕರ್ ಅವರು ಇನ್ನೂ ಸ್ಪಷ್ಟಪಡಿಸಿಲ್ಲ. ಒಂದು ವೇಳೆ ಅವರು ರಾಜೀನಾಮೆ ನೀಡಿರುವುದು ಸತ್ಯವಾಗಿದ್ದರೆ ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆಂಬ ಬಗ್ಗೆ ತಮಗೆ ಮಾಹಿತಿಯಿಲ್ಲ. ಇದೇ ಜುಲೈ 12 ರಿಂದ ಅಧಿವೇಶನ ನಡೆಸಲು ಈಗಾಗಲೇ ತೀರ್ಮಾನಿಸಿ ಘೋಷಿಸಲಾಗಿದ್ದು, ರಾಜ್ಯಪಾಲರೂ ಸಹ ಈ ನಿರ್ಣಯಕ್ಕೆ ಅಂಕಿತ ಹಾಕಿರುವುದರಿಂದ ಸರ್ಕಾರಕ್ಕೆ ಯಾವುದೇ ತೊಂದರೆ…
ತುಮಕೂರು : ದ್ವಿಚಕ್ರ ವಾಹನದಲ್ಲಿ ಅಪರಿಚಿತ ವ್ಯಕ್ತಿಗಳಿಬ್ಬರು ಗಾಂಜಾ ಮಾರಾಟ ಮಾಡುತ್ತಿರುವಾಗ ಗಾಂಜಾ ಸಮೇತ ಸಿಕ್ಕಿಬಿದ್ದಿದ್ದಾರೆ. ನಗರದ ಮಾರುತಿ ಟಾಕೀಸ್ ಮತ್ತು ಟಿ.ಹೆಚ್.ಎಸ್. ಆಸ್ಪತ್ರೆಯ ಪಕ್ಕದಲ್ಲಿರುವ ಕಾಂಪ್ಲೆಕ್ಸ್ ಮುಂಭಾಗದಲ್ಲಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಗಾಂಜಾ ಮಾರುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಸಿಪಿಐ ಚಂದ್ರಶೇಖರ್ ರವರು ದಾಳಿ ನಡೆಸಿ ಇಬ್ಬರು ಆರೋಪಿಗಳಾದ ಇರ್ಫಾನ್ ಮತ್ತು ಜಿತೇಂದ್ರ ರ ಬಳಿಯಿದ್ದ 2.5ಕೆ.ಜಿ.ಗಾಂಜಾ ಸಮೇತ ವಶಪಡಿಸಿಕೊಂಡು, ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಪತ್ತೆಗೆ ಶ್ರಮಿಸಿದ ಸಿಪಿಐ ಕೆ.ಆರ್. ಚಂದ್ರಶೇಖರ್, ಪಿಎಸ್‍ಐ ವಿಜಯಲಕ್ಷ್ಮಿ ಹಾಗೂ ಸಿಬ್ಬಂಧಿ ವರ್ಗವನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿರುತ್ತಾರೆ.
ತುಮಕೂರು: ನಗರದ ಬಾಳನಕಟ್ಟೆ ಪ್ರದೇಶದಲ್ಲಿರುವ ಪತ್ರಿಕಾಭವನಕ್ಕೆ ಪಾಲಿಕೆ ಆಯುಕ್ತ ಭೂಬಾಲನ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಅವರು ಪತ್ರಿಕಾಭವನದ ಸುತ್ತಮುತ್ತ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಭವನದ ಮುಂದೆ ಖಾಸಗಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ತೊಂದರೆಯುಂಟಾಗುತ್ತಿದ್ದು, ಕ್ರಮ ಕೈಗೊಳ್ಳಬೇಕೆಂದು ಆಯುಕ್ತರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು. ನಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಭೇಟಿ ನೀಡಿ ಆವರಣವನ್ನು ಪರಿಶೀಲಿಸಿದರು. ಆವರಣದ ಮುಂದಿರುವ ಚರಂಡಿಯಲ್ಲಿ ಶೌಚಾಲಯದ ನೀರು ಹರಿಯುತ್ತಿರುವುದರಿಂದ ದುರ್ವಾಸನೆ ಬರುತ್ತಿದ್ದು, ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ವಾರ್ತಾ ಸಹಾಯಕಿ ರೂಪಕಲಾ ಅವರು ಮನವಿ ಮಾಡಿದಾಗ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸ್ಥಳದಲ್ಲಿದ್ದ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ…
ತುಮಕೂರು: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಹಾಗೂ ಮರಳು ದಂಧೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಾಗೂ ಜನಪ್ರತಿನಿಧಿಗಳಿಂದ ಹಲವಾರು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಹಾಗೂ ಅರಣ್ಯ ಇಲಾಖೆಗಳಿಗೆ ಸೇರಿದ ಭೂಪ್ರದೇಶವನ್ನು ಕೂಡಲೇ ಜಂಟಿ ಸರ್ವೆಗೆ ಕ್ರಮ ಕೈಗೊಳ್ಳಬೇಕೆಂದು ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ಅವರು ಜಿಲ್ಲಾಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಪರವಾನಗಿ ಇಲ್ಲದೆ ಅನಧಿಕೃತವಾಗಿ ನಡೆಸುವ ಕ್ರಷರ್‍ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಗುತ್ತಿಗೆ ಪಡೆದ ಕ್ವಾರಿಗಳು ಸ್ಥಳಾಂತರಗೊಂಡಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು. ವಾಹನಗಳಲ್ಲಿ ಜಲ್ಲಿ, ಮರಳು, ಅಲಂಕಾರಿಕ ಶಿಲೆ ಮತ್ತಿತರ ಖನಿಜ ಹಾಗೂ ಗಣಿಗಾರಿಕೆ ಸರಕುಗಳನ್ನು ನಿಗಧಿತ ಭಾರಕ್ಕಿಂತ ಅತಿಯಾಗಿ ಹೇರಿಕೊಂಡು ಸಾಗಿಸುವಂತಿಲ್ಲ ಎಂದು ತಿಳಿಸಿದರಲ್ಲದೆ, ಗಣಿಬಾಧಿತ ಪ್ರದೇಶಗಳಿಗೆ ಸರ್ಕಾರ ಮೀಸಲಿಟ್ಟಿರುವ ಡಿಎಂಎಫ್(ಜಿಲ್ಲಾ ಗಣಿಗಾರಿಕೆ ನಿಧಿ) ಅನುದಾನವನ್ನು ಖರ್ಚು ಮಾಡಬೇಕೆಂದು ಅಧಿಕಾರಿಗಳಿಗೆ…
ಕೊರಟಗೆರೆ: ಅಪರಿಚಿತ ಯುವತಿಗೆ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿ ಗುರುತು ಸೀಗದ ರೀತಿಯಲ್ಲಿ ಕೊಲೆ ಮಾಡಿರುವ ಘಟನೆ ತುಂಬುಗಾನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಭಾನುವಾರ ಮುಂಜಾನೆ ರೈತ ತನ್ನ ಜಮೀನಿಗೆ ತೆರಳುವ ವೇಳೆ ಶವ ಪತ್ತೆಯಾಗಿದ್ದು, ತಾಲೂಕಿನ ಕೋಳಾಲ ಹೋಬಳಿ ತೀತಾ ಗ್ರಾಪಂ ವ್ಯಾಪ್ತಿಯ ತುಂಬಗಾನಹಳ್ಳಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಬೇರೆ ಕಡೆ ಕೊಲೆ ಮಾಡಿ ಗುರುತು ಸೀಗದೇ ಇರಲಿ ಎಂದು ದೂರದ ಅರಣ್ಯದಲ್ಲಿ ಯುವತಿಯ ಶವ ತಂದು ಸೀಮೆಎಣ್ಣೆಯಿಂದ ಸಂಪೂರ್ಣವಾಗಿ ಸುಟ್ಟು ಹಾಕಿದ್ದಾರೆ. ಕೊಲೆಯಾದ ಯುವತಿಗೆ ಸುಮಾರು 22ರಿಂದ 25ವರ್ಷ ವಯಸ್ಸಾಗಿದೆ. ಕಾಲಿಗೆ ಹೊಸ ಚಪ್ಪಲಿ, ಕೈತುಂಬ ಹಸಿರು ಬಳೆ ಮತ್ತು ಚೂಡಿದಾರ ಹಾಕಿದ್ದಾಳೆ. ಕುತ್ತಿಗೆ, ಮುಖ, ತಲೆ ಮತ್ತು ದೇಹ ಗುರುತು ಸೀಗದಂತಾಗಿದೆ. ಹಾಕಿ ಮೇಲ್ನೋಟಕ್ಕೆ ಪ್ರೀತಿಯ ಹತಾಶೆಯಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಯುವತಿಯ ಶವ ಸಂಪೂರ್ಣ ಸುಟ್ಟು ಹೋಗಿದೆ.…
ತುಮಕೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕವನ್ನು ನಿಗಧಿಪಡಿಸಲಾಗಿದೆ ಎಂದು ತುಮಕೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ. ವಿ.ವಿ.ಯಲ್ಲಿ 2011-12 ಹಾಗೂ 2012-13ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳು ಹಾಗೂ 2018-19ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ಬಿ.ಎ/ಬಿ.ಕಾಂ, ಎಂ.ಎ/ಎಂ.ಕಾಂ ವಿದ್ಯಾರ್ಥಿಗಳು 200 ರೂ.ಗಳ ದಂಡದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಜೂನ್ 29 ಅಂತಿಮ ದಿನವಾಗಿರುತ್ತದೆ. ಅದೇ ರೀತಿ 2018-19ನೇ ಸಾಲಿನಲ್ಲಿ ಪ್ರವೇಶ ಪಡೆದ ಎಂಬಿಎ ವಿದ್ಯಾರ್ಥಿಗಳಿಗೆ (ಪ್ರಥಮ ಸೆಮಿಸ್ಟರ್)ದಂಡದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಜುಲೈ 6 ಕಡೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.ksoumysore.karnataka.gov.in ಅಥವಾ ದೂರವಾಣಿ ಸಂಖ್ಯೆ 0821-2519947/2515405/2519948/2519942ನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.
ತುರುವೇಕೆರೆ: ಮುಖ್ಯಮಂತ್ರಿ ಕುಮಾರಸ್ವಾಮಿಯವರ ಗ್ರಾಮವಾಸ್ತವ್ಯಕ್ಕೆ ಅಡ್ಡಿ ಪಡಿಸುತ್ತಿರುವ ಬಿಜೆಪಿಯ ಕ್ರಮವನ್ನು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಖಂಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಗ್ರಾಮವಾಸ್ತವ್ಯದಿಂದ ಜನರ ಸಮಸ್ಯೆಗಳು ದೂರಾಗುತ್ತವೆ ಅಲ್ಲದೇ ಗ್ರಾಮಗಳ ಅಭಿವೃದ್ಧಿಯಾಗುತ್ತದೆ ಎಂಬ ನಂಬಿಕೆಯಿಂದ ಗ್ರಾಮವಾಸ್ತವ್ಯ ಮಾಡುತ್ತಿರುವ ಕುಮಾರಸ್ವಾಮಿಯವರ ಕಾರ್ಯಕ್ರಮಕ್ಕೆ ಬಿಜೆಪಿಯವರು ವಿನಾಕಾರಣ ತೊಂದರೆಕೊಡುತ್ತಿದ್ದಾರೆ. ಈ ಗ್ರಾಮವಾಸ್ತವ್ಯ ಮುಂದುವರೆದಲ್ಲಿ ಕುಮಾರಸ್ವಾಮಿಯವರ ವರ್ಚಸ್ಸು ಹೆಚ್ಚುತ್ತದೆ ಅಲ್ಲದೇ ಜನರ ಮನಸ್ಸಿನಲ್ಲಿ ಕುಮಾರಸ್ವಾಮಿ ಉಳಿದುಬಿಡುತ್ತಾರೆ ಎಂಬ ಭಯದಿಂದ ಬಿಜೆಪಿಯವರು ಸಣ್ಣತನಕ್ಕೆ ಮುಂದಾಗಿದ್ದಾರೆ. ಇದೇ ಪ್ರವೃತ್ತಿಯನ್ನು ಬಿಜೆಪಿಯವರು ಮುಂದುವರೆಸಿದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಯವರಿಗೂ ತಕ್ಕ ಪಾಠ ಕಲಿಸಬೇಕಾದೀತು ಎಂದು ಎಚ್ಚರಿಸಿದರು. ಜನ ಸಾಮಾನ್ಯರ ನೋವು ನಲಿವುಗಳಿಗೆ ಸ್ಪಂದಿಸಿರುವ ಏಕೈಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯಾಗಿದ್ದಾರೆ. ಇಂತಹ ಉತ್ತಮ ಕಾರ್ಯ ಮಾಡುತ್ತಿರುವ ಮುಖ್ಯಮಂತ್ರಿಗಳಿಗೆ ಸಹಕಾರ ನೀಡುವುದನ್ನು ಬಿಟ್ಟು ಬಿಜೆಪಿಯವರು ಪ್ರತಿಭಟನೆ ಮಾಡುತ್ತಿರುವುದು ಅವರ ಕೀಳು ಅಭಿರುಚಿಗೆ ಸಾಕ್ಷಿಯಾಗಿದೆ. ಇಂತಹ ಕೃತ್ಯಕ್ಕೆ ಕೈ ಹಾಕಬಾರದೆಂದು…
ಮಧುಗಿರಿ : ಸಾರ್ವಜನಿಕರು ನೀಡುವ ಒಂದು ಅರ್ಜಿಯು ಕೇವಲ ಕಾಗದವಲ್ಲ. ಅದರಲ್ಲಿ ನೊಂದವರ ಬದುಕು ಅಡಗಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ಕಿವಿಮಾತು ಹೇಳಿದರು. ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ದೊಡ್ಡದಾಳವಟ್ಟ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಹೋಬಳಿ ಮಟ್ಟದ ಪ್ರಥಮ ಜನಸ್ಪಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಧಿಕಾರಿಗಳು ಕೇವಲ ಅರ್ಜಿಯನ್ನು ಪಡೆದರಷ್ಟೆ ಸಾಲದು. ಅವರ ಸಮಸ್ಯೆಗೆ ಮುಂದಿನ ಜನಸ್ಪಂದನೆ ಕಾರ್ಯಕ್ರಮದ ಹೊತ್ತಿಗೆ ಸ್ಪಷ್ಟ ಪರಿಹಾರ ಕೊಡಿಸಬೇಕು. ಹಾಗೂ ಅಧಿಕಾರಿಗಳು ಈ ಕಾರ್ಯಕ್ರಮದ ಅರ್ಜಿಗೆ ಪ್ರತ್ಯೇಕ ಕಡತವನ್ನು ಇಡಬೇಕು. ಇಂದಿನ ಕಾರ್ಯಕ್ರಮದಲ್ಲಿ ಹೆಚ್ಚಾಗಿ ಕಂದಾಯ ಇಲಾಖೆಯ ಸಮಸ್ಯೆಗಳು ಇದ್ದು, ಖಾತೆ ಬದಲಾವಣೆ, ಪವತಿ ಖಾತೆ ಹಾಗೂ ಪಹಣಿ ತಿದ್ದುಪಡಿಯನ್ನು ಮಾಡಬೇಕಿದ್ದು, ಹಲವಾರು ವರ್ಷಗಳಿಂದ ಬಾಕಿಯಿದೆ. ಹಾಗೂ ಸಾಮಾನ್ಯ ವರ್ಗದ ಮನೆಗಳಿಗೆ ಬೇಡಿಕೆಯಿದ್ದು, ಹೆಚ್ಚುವರಿ 700 ಮನೆಗಳು ಹಾಗೂ ಅಂಬೇಡ್ಕರ್ ವಸತಿ ನಿಗಮದಿಂದ 1 ಸಾವಿರ ಮನೆಗಳನ್ನು…