ತುಮಕೂರು: ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ 14 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ 8 ಸೇರಿದಂತೆ ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 21 ರಿಂದ ಜೂನ್ 28 ರವರೆಗೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಜಿಲ್ಲೆಯಾದ್ಯಂತ ನಡೆಯಲಿದ್ದು, ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಕೊಂಡೊಯ್ಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕಳೆದ ಮುಖ್ಯ ಪರೀಕ್ಷೆಯಲ್ಲಿ ಮೊಬೈಲನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ದ ಪ್ರಕರಣ ಜಿಲ್ಲೆಯನ್ನು ರಾಜ್ಯದಲ್ಲಿ ಗುರುತಿಸುವಂತಾಯಿತು. ಯಾವುದೇ ಕಾರಣಕ್ಕೂ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರದಲ್ಲಿರುವ ಯಾರ ಬಳಿಯಲ್ಲಿಯೂ ಮೊಬೈಲ್ ಇರಕೂಡದು. ಈ ಬಗ್ಗೆ ಮುಖ್ಯ ಅಧೀಕ್ಷಕರು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಇರುವ ಮಾಹಿತಿ ಅಥವಾ ಬೇರೆ ಅವಗಢಗಳು ಸಂಭವಿಸಿದಲ್ಲಿ ಮುಖ್ಯ ಅಧೀಕ್ಷಕರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಲ್ಲ ಮುಖ್ಯ ಅಧೀಕ್ಷಕರಿಗೆ…
Author: News Desk Benkiyabale
ತುಮಕೂರು: ಗ್ರಾಮ ಪಂಚಾಯ್ತಿ ಸಿಬ್ಬಂದಿಗಳ ವೇತನವನ್ನು ನಿಗದಿತ ಸಮಯಕ್ಕೆ ನೀಡಬೇಕು ಮತ್ತು ಕನಿಷ್ಟ ವೇತನವನ್ನು ಪಾವತಿ ಮಾಡುವುದು, ಇಎಫ್‍ಎಂಎಸ್ ಅಳವಡಿಸುವುದು ಗ್ರಾಮ ಪಂಚಾಯ್ತಿ ಸಿಬ್ಬಂದಿಗಳ ಅನುಮೋದನೆ ಮತ್ತು ಮುಂಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರು ಸಿಐಟಿಯು ನೇತೃತ್ವದಲ್ಲಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದರು. ಟೌನ್‍ಹಾಲ್ ವೃತ್ತದಿಂದ ಜಿಲ್ಲಾ ಪಂಚಾಯಿತಿ ಕಚೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಪಂಚಾಯ್ತಿ ಸಿಬ್ಬಂದಿಗಳಿಗೆ 2018 ಮಾರ್ಚ್ ತಿಂಗಳಿಂದ ಇಲ್ಲಿಯವರೆಗೆ ಬಾಕಿ ಉಳಿಸಿಕೊಂಡಿರುವ ವೇತನ ಪೂರ್ಣವಾಗಿ ಪಾವತಿಸಬೇಕು. ಕೈಬಿಟ್ಟ ಹೋದ ನೌಕರರ ವಿವರವನ್ನು ಪಂಚತಂತ್ರದಲ್ಲಿ ಅಳವಡಿಸಲು ಉಪಕಾರ್ಯದರ್ಶಿಯವರು ಕ್ರಮ ಕೈಗೊಳ್ಳಬೇಕು ಹಾಗೂ ವೇತನವನ್ನು ಮಾರ್ಚ್ 1, 2018ರಿಂದ ಬಿಡುಗಡೆ ಮಾಡಬೇಕು. ಗ್ರಾಮ ಪಂಚಾಯ್ತಿ ಸಿಬ್ಬಂದಿಗಳಿಗೆ 2018 ಮಾರ್ಚ್ ತಿಂಗಳಿಗೂ ಹಿಂದೆ ಉಳಿಸಿಕೊಂಡಿರುವ ಹಿಂದಿನ ವೇತನವನ್ನು ಪಂಚಾಯ್ತಿ…
ತುಮಕೂರು: ದಲಿತರ ಸಮಸ್ಯೆಗಳನ್ನು ಅಧಿಕಾರಿಗಳು ಕಾನೂನು ಚೌಕಟ್ಟಿನಲ್ಲಿ ನಿಯಮಾವಳಿಗಳನ್ವಯ ತಮ್ಮ ಹಂತದಲ್ಲಿಯೇ ಬಗೆಹರಿಸಿದಲ್ಲಿ ಸಮಸ್ಯೆಗಳು ಉದ್ಭವವಾಗುವುದಿಲ್ಲ ಎಂದು ಉಪವಿಭಾಗಾಧಿಕಾರಿ ಶಿವಕುಮಾರ್ ಸಲಹೆ ನೀಡಿದರು. ತುಮಕೂರು ಉಪವಿಭಾಗಕ್ಕೆ ಸಂಬಂಧಿಸಿದಂತೆ ಜಿಲ್ಲಾ ಬಾಲಭವನದಲ್ಲಿಂದು ಜರುಗಿದ ಪರಿಶಿಷ್ಟ ಜಾತಿ ಮತ್ತು ವರ್ಗದ ಹಿತರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ದಲಿತರ ಸಮಸ್ಯೆಗಳನ್ನು ಆಲಿಸಿ, ಅವರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ ಅವರು ನಿರ್ಣಯವಾಗದ ಅಹವಾಲುಗಳನ್ನು ಚರ್ಚಿಸಲು ಬರುವ ವಾರ ತಮ್ಮ ಕಚೇರಿಯಲ್ಲಿಯೇ ಸಭೆ ನಡೆಸಲಾಗುವುದೆಂದರಲ್ಲದೆ ಇಂದಿನ ಸಭೆಗೆ ಗೈರು ಹಾಜರಾದ ಎಲ್ಲ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖಾ ಮುಖ್ಯಸ್ಥರಿಗೆ ಶಿಫಾರಸ್ಸು ಮಾಡಲಾಗುವುದೆಂದು ತಿಳಿಸಿದರು. ಸಭೆಯಲ್ಲಿ ಹಾಜರಿದ್ದ ತುಮಕೂರು ಉಪವಿಭಾಗಕ್ಕೊಳಪಡುವ ತುಮಕೂರು, ಗುಬ್ಬಿ ಹಾಗೂ ಕುಣಿಗಲ್ ತಾಲೂಕಿಗೆ ಸಂಬಂಧಿಸಿದ ದಲಿತ ಮುಖಂಡರು ತಮ್ಮ ಅಳಲನ್ನು ತೋಡಿಕೊಳ್ಳುತ್ತಾ ಉಪವಿಭಾಗ ವ್ಯಾಪ್ತಿಯ ಸಾಕಷ್ಟು ಗ್ರಾಮಗಳಲ್ಲಿ ಪರಿಶಿಷ್ಟ…
ತುಮಕೂರು : ವಾಲ್ಮೀಕಿ ಸಮುದಾಯಕ್ಕೆ ಸಂವಿಧಾನಬದ್ಧವಾಗಿ ದೊರೆಯಬೇಕಾಗಿರುವ ಮೀಸಲಾತಿಯನ್ನು ಶೇ. 3 ರಿಂದ ಶೇ. 7.5ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಇಂದಿಲ್ಲಿ ಒತ್ತಾಯಿಸಿದರು. ಪರಿಶಿಷ್ಟ ವರ್ಗದ 49 ಜಾತಿಗಳಿಗೆ ಮೀಸಲಾತಿ ಹಂಚಿತೆಯಲ್ಲಿ ಅನ್ಯಾಯವಾಗಿದೆ. ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಶೇ. 3 ರಿಂದ 7.5ಕ್ಕೆ ಹೆಚ್ಚಿಸಬೇಕು. ಈಗಾಗಲೇ ಕೇಂದ್ರ ಸರ್ಕಾರ ಮೀಸಲಾತಿಯನ್ನು ಹೆಚ್ಚಿಸಿದೆ. ರಾಜ್ಯ ಸರ್ಕಾರ ಸಹ ಕಾನೂನಾತ್ಮಕವಾಗಿ ಇರುವ ಅಡಚಣೆಗಳನ್ನು ನಿವಾರಣೆ ಮಾಡಿ ಶೇ. 7.5 ಮೀಸಲಾತಿ ನೀಡಲೇಬೇಕು ಎಂದು ಅವರು ಆಗ್ರಹಿಸಿದರು. ರಾಜನಹಳ್ಳಿಯಿಂದ ರಾಜಧಾನಿವರೆಗೆ ಮಹರ್ಷಿ ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಹಮ್ಮಿಕೊಂಡಿರುವ ಪಾದಯಾತ್ರೆಗೆ ಚಾಲನೆ ನೀಡುವ ಮುನ್ನ ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಮಾತನಾಡಿದ ಅವರು, ಈ ಹೋರಾಟ ಯಾವುದೇ ಒಂದು ಜಾತಿಗಾಗಿ ಅಲ್ಲ. ಮೀಸಲಾತಿಯಿಂದ ಅನ್ಯಾಯಕ್ಕೆ ಒಳಗಾಗಿರುವ ಎಲ್ಲ ಜಾತಿಗಳಿಗೆ ನ್ಯಾಯ ದೊರಕಿಸಿಕೊಡುವ…
ತುಮಕೂರು: ನವಜಾತ ಶಿಶುವಿಗೆ ಆರು ತಿಂಗಳೊಳಗಾಗಿ ಶ್ರವಣ ದೋಷವನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ ಶಿಶು ಆರೋಗ್ಯವಾಗಿ ಸಾಮಾನ್ಯರಂತೆ ಇರಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು. ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ವಾಣಿ ಡೆಫ್ ಚಿಲ್ಡ್ರನ್ಸ್ ಫೌಂಡೇಷನ್ ಹಾಗೂ ಅಜೀಮ್ ಪ್ರೇಮ್‍ಜಿ ಫಿಲಂಥ್ರೋಫಿಕ್ ಇನಿಷಿಯೇಟಿವ್ಸ್ ಸಹಯೋಗದಲ್ಲಿ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿಂದು ನಡೆದ “ಸೋಹಮ್” ನವಜಾತ ಶಿಶುಗಳ ಶ್ರವಣದೋಷ ಪರೀಕ್ಷಾ ಸಾಧನ ಅನುಸ್ಥಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾಸ್ಪತ್ರೆಗೆ ಈ ಸಾಧನವನ್ನು ನೀಡಿರುವ ವಾಣಿ ಡೆಫ್ ಚಿಲ್ಡ್ರನ್ಸ್ ಫೌಂಡೇಷನ್ ಸಂಸ್ಥೆಗೆ ಅಭಿನಂದಿಸಿದ ಅವರು ಇನ್ನು ಮುಂದೆ ಈ ಸಾಧನವನ್ನು ಬಳಸಿಕೊಂಡು ಜನಿಸುವ ಮಗುವಿಗೆ ಶಬ್ದ ಕೇಳಿಸುತ್ತಿದ್ದೆಯೋ, ಇಲ್ಲವೋ ಎಂಬುದು ಮಗು ಜನಿಸಿದ ದಿನದಂದೆ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಿದೆ. ಮುಂದಿನ ದಿನಗಳಲ್ಲಿ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿಯೂ ಈ ಸೌಲಭ್ಯ ಒದಗಿಸಲಾಗುವುದು ಎಂದು…
ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ನಡೆಯುತ್ತಿರುವ ಕಳ್ಳತನಗಳಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ. ಇದಕ್ಕೆ ತುಮಕೂರು ಗ್ರಾಮಾಂತರದ ಶಾಸಕರೂ ಸಾಥ್ ನೀಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಸುರೇಶ್ ಗೌಡ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಂಗಳವಾರ ಮಾತನಾಡಿದರು. ಸರಣಿ ಕಳ್ಳತನದ ಪ್ರಕಟರಣಗಳ ಪಟ್ಟಿ ತಯಾರಿಸಿ ಎಸ್ಪಿ ಅವರಿಗೂ ಕೊಟ್ಟಿದ್ದೇವೆ. ಪೊಲೀಸರು ಕಳ್ಳತನದ ಪ್ರಕರಣಗಳಲ್ಲಿ ಎಫ್‍ಐಆರ್ ದಾಖಲಿಸಿ, ಚಾರ್ಜ್‍ಶೀಟ್ ಹಾಕುತ್ತಿಲ್ಲ. ಕಾನೂನು ಬಾಹಿರ ಚಟುವಟಿಕೆಗಳು ಕಾಣುತ್ತಿದ್ದರೂ ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ದೂರಿದರು. ಪಿಎಸ್‍ಐ 10 ಲಕ್ಷ, ಸಿಪಿಐ 15 ಲಕ್ಷ ಮತ್ತು ಡಿವೈಎಸ್ಪಿ 25 ಲಕ್ಷ ಕೊಟ್ಟು ವರ್ಗಾವಣೆ ಮಾಡಿಸಿಕೊಂಡು ಬಂದಿದ್ದಾರೆ ಎಂಬ ಮಾತುಗಳನ್ನು ಪೊಲೀಸರೇ ಹೇಳುತ್ತಿದ್ದಾರೆ. ಲಂಚ ಕೊಟ್ಟು ಬಂದವರು ಪ್ರತಿ ತಿಂಗಳು ಶಾಸಕರಿಗೆ ಮಾಮೂಲಿ ಕೊಡಬೇಕು. ನಿಮ್ಮ ಕಷ್ಟಗಳನ್ನು ಶಾಸಕರಿಗೆ ಹೋಗಿ ಹೇಳಿ ಎಂದು ಹಣ, ಒಡವೆ ಕಳೆದುಕೊಂಡ ಸಂತ್ರಸ್ತರಿಗೆ ಪೊಲೀಸರು ಹೇಳುತ್ತಿದ್ದಾರೆ ಎಂದು ಬಿ.ಸುರೇಶ್ ಗೌಡ…
ತುಮಕೂರು: ಜಿಲ್ಲೆಯಲ್ಲಿ ಭ್ರಷ್ಟಾಚಾರ ತಡೆಯುವ ನಿಟ್ಟಿನಲ್ಲಿ ಎಸಿಬಿ ಅಧಿಕಾರಿಗಳು ತಮ್ಮ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದು, ಇವರ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿ ಸೋಮವಾರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ವೈ.ಹೆಚ್.ಹುಚ್ಚಯ್ಯ ಹಾಗೂ ಮತ್ತಿತರರು ಎಸಿಬಿ ಡಿವೈಎಸ್ಪಿ ರಘುಕುಮಾರ್ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದರು. ಬಡವರು,ನಿಗರ್ತಿಕರು,ಅನ್ಯಾಯಕ್ಕೆ ಒಳಗಾದವರು ನ್ಯಾಯ ಅರಸಿ ಕೋರ್ಟುಗಳಿಗೆ ಬರುವುದು ಸಹಜ. ಆದರೆ ನ್ಯಾಯಾಲಯ ದಲ್ಲಿ ಸರಕಾರದ ಪರವಾಗಿ ದೂರದಾರರ ಪರ ವಾದ ಮಾಡಿ ನ್ಯಾಯ ಒದಗಿಸಬೇಕಾದ ಸರಕಾರಿ ವಕೀಲರೇ ಲಂಚದ ಆಸೆಗೆ ಬಿದ್ದು ಶೋಷಣೆ ಮಾಡಿದ ಪ್ರಕರಣವನ್ನು ಇತ್ತೀಚಿಗೆ ಎಸಿಬಿ ಕೈಗೆತ್ತಿಕೊಂಡು, ಆರೋಪಿಯನ್ನು ಜೈಲಿಗೆ ಕಳುಹಿಸಲು ಕ್ರಮ ವಹಿಸಿದೆ.ಇದು ನಿಜಕ್ಕೂ ಪ್ರಶಂಶನೀಯ ಕೆಲಸ,ಇದರ ಜೊತೆಗೆ ಇತ್ತೀಚಗೆ ಲೋಕಾಯುಕ್ತ ಹಲವು ಪ್ರಕರಣಗಳಲ್ಲಿ ಭ್ರಷ್ಟಾಚಾರ ಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಂಡಿದೆ.ಈ ಹಿನ್ನೆಲೆಯಲ್ಲಿ ಇಲಾಖೆಯ ಕಾರ್ಯವೈಖರಿಯನ್ನು ಮೆಚ್ಚಿ, ಅಭಿನಂದನೆ ಸಲ್ಲಿಸುತ್ತಿರುವುದಾಗಿ ವೈ.ಹೆಚ್.ಹುಚ್ಚಯ್ಯ ತಿಳಿಸಿದರು. ಒಲ್ಲದ ಮನಸ್ಸಿನಿಂದ ಅಭಿನಂದನೆ ಸ್ವೀಕರಿಸಿದ…
ತುಮಕೂರು: ಪಶ್ಚಿಮ ಬಂಗಾಳದ ಎನ್.ಆರ್.ಎಸ್. ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಕರ್ತವ್ಯ ನಿರತ ಕಿರಿಯ ವೈದ್ಯರ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ)ದ ವತಿಯಿಂದ ನಗರದಲ್ಲಿ ಮುಷ್ಕರ ನಡೆಸಲಾಯಿತು. ನಗರದ ಟೌನ್‍ಹಾಲ್ ವೃತ್ತದಲ್ಲಿರುವ ಭಾರತೀಯ ವೈದ್ಯಕೀಯ ಸಂಘದ ಕಚೇರಿ ಮುಂಭಾಗದ ಜಮಾಯಿಸಿದ ವಿವಿಧ ಖಾಸಗಿ ಆಸ್ಪತ್ರೆಗಳ ವೈದ್ಯರು ಹಲ್ಲೆಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಘೋಷಣೆಗಳನ್ನು ಕೂಗಿದರು. ನಗರದಾದ್ಯಂತ ಇರುವ ಖಾಸಗಿ ಆಸ್ಪತ್ರೆಗಳಲ್ಲಿ ಇಂದು ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಿ ಆಸ್ಪತ್ರೆಗಳನ್ನು ಬಂದ್ ಮಾಡಲಾಗಿತ್ತು. ಜತೆಗೆ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಖಾಸಗಿ ವೈದ್ಯರುಗಳು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಖಾಸಗಿ ಆಸ್ಪತ್ರೆಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಮುಷ್ಕರದ ಮಾಹಿತಿ ತಿಳಿಯದೆ ನಗರಕ್ಕೆ ಬಂದಿದ್ದ ರೋಗಿಗಳು ಚಿಕಿತ್ಸೆಗಾಗಿ ಪರದಾಡುತ್ತಿದ್ದ ದೃಶ್ಯ ಕಂಡು ಬಂತು. ಇನ್ನು ಜಿಲ್ಲಾಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗದಲ್ಲಂತೂ ರೋಗಿಗಳು ಕಿಕ್ಕಿರಿದು…
ತುಮಕೂರು : ಬೆಂಗಳೂರಿನ ಐಎಂಎ ಪ್ರಕರಣ ಮಾದರಿಯಲ್ಲಿ ತುಮಕೂರಿನಲ್ಲೂ ಸಾರ್ವಜನಿಕರಿಂದ ಕೋಟ್ಯಾಂತರ ರೂ ಸಂಗ್ರಹಿಸಿ ವಂಚಿಸಿರುವ ಪ್ರಕರಣ ಬಯಲಿಗೆ ಬಂದಿದೆ. ನಗರದ ಹೆಚ್‍ಎಂಎಸ್ ಶಾದಿ ಮಹಲ್ ಕಾಂಪ್ಲೆಕ್ಸ್‍ನಲ್ಲಿ ಈಝಿ ಮೈಂಡ್ ಮಾರ್ಕೆಟಿಂಗ್ ಇಂಡಿಯಾ ಲಿಮಿಟೆಡ್ ಎಂಬ ಹೆಸರಿನ ಕಛೇರಿ ತೆರೆದು ಅಸ್ಲಾಂ ಪಾಷಾ ಎಂಬುವವರು ಸಾರ್ವಜನಿಕರಿಂದ 250ರಿಂದ 300 ಕೋಟಿ ರೂ ಸಂಗ್ರಹಿಸಿ ನಾಪತ್ತೆಯಾಗಿದ್ದಾರೆ. ಆತ ದುಬಾಯ್‍ನಲ್ಲಿ ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಹಣ ತೊಡಗಿಸಿರುವ ಯಾರೂ ಈವರೆಗೆ ಪೊಲೀಸರಿಗೆ ದೂರು ನೀಡಿಲ್ಲ. 3-4 ತಿಂಗಳಿನಿಂದ ಕಛೇರಿ ಬಾಗಿಲು ತೆರೆದಿಲ್ಲ. ಹಣ ಹೂಡಿಕೆ ಮಾಡಿದವರು ದಿಕ್ಕು ತೋಚದೆ ಕಚೇರಿ ಬಳಿ ಬಂದು ಹೋಗುತ್ತಿದ್ದಾರೆ. ಶುಕ್ರವಾರ ಕೂಡಾ ನೂರಾರು ಜನ ಈ ಕಛೇರಿ ಮುಂದೆ ಜಮಾಯಿಸಿದ್ದರು ತುಮಕೂರು ನಿವಾಸಿಯಾದ ಅಸ್ಲಾಂ ಪಾಷಾ 3-4 ವರ್ಷದಿಂದ ಹೆಚ್‍ಎಂಎಸ್ ಶಾದಿ ಮಹಲ್ ಕಾಂಪ್ಲೆಕ್ಸ್‍ನಲ್ಲಿ ಈಝಿ ಮೈಂಡ್ ಮಾರ್ಕೆಟಿಂಗ್ ಇಂಡಿಯಾ ಲಿಮಿಟೆಡ್…
ತುಮಕೂರು: ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೊಳ್ಳುವಲ್ಲಿ ವಿಳಂಬ ಮಾಡಿ ಕರ್ತವ್ಯ ನಿರ್ಲಕ್ಷತೆ ತೋರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿಯಲ್ಲಿಂದು ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ವಿವಿಧ ಇಲಾಖೆಗಳ ಅಭಿವೃದ್ಧಿಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ಯಾವುದೇ ಗ್ರಾಮದಿಂದ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಜನರಿಂದ ದೂರು ಬಾರದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಕೊಳವೆ ಬಾವಿ ಕೊರೆಯುವುದು, ಪಂಪ್‍ಸೆಟ್/ಮೋಟಾರ್ ಅಳವಡಿಕೆ, ವಿದ್ಯುತ್ ಸಂಪರ್ಕ ಕಲ್ಪಿಸುವುದು, ಕೊಳವೆಬಾರಿ ದುರಸ್ತಿ, ಮತ್ತಿತರ ಕುಡಿಯುವ ನೀರಿನ ಕಾಮಗಾರಿಗಳನ್ನು ಯಾವುದೇ ಕ್ರಿಯಾ ಯೋಜನೆ, ಮೇಲಧಿಕಾರಿಗಳ ಅನುಮತಿಗೆ ಕಾಯದೇ ತಕ್ಷಣವೇ ಕೈಗೊಂಡು ಪರಿಹಾರ ಒದಗಿಸಬೇಕು ಎಂದರಲ್ಲದೆ ಚುನಾವಣೆ ಮತ್ತಿತರ ಕಾರಣಗಳಿಂದ ಸ್ಥಗಿತಗೊಂಡ ಕಾಮಗಾರಿಗಳನ್ನು…