ತುಮಕೂರು: ಎಷ್ಟೇ ಬೆಲೆ ತೆತ್ತರೂ, ಕೃತಕವಾಗಿ ತಯಾರಿಸಲಾಗದಿರುವ ರಕ್ತಕ್ಕೆ ಪರ್ಯಾಯ ಮತ್ತೊಂದಿಲ್ಲವೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಹೆಚ್.ಐ.ವಿ. ಮತ್ತು ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಆಸ್ಪತ್ರೆ ಮತ್ತು ರಕ್ತನಿಧಿ ಕೇಂದ್ರ, ಜಿಲ್ಲಾ ಪೊಲೀಸ್ ಇಲಾಖೆ, ಸಂಜೀವಿನಿ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿಂದು ಏರ್ಪಡಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟನೆ ಹಾಗೂ ಕಾರಾಗೃಹ ಇಲಾಖೆ ಪ್ರಶಿಕ್ಷಣಾರ್ಥಿಗಳ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯ ಜನಸಂಖ್ಯೆಗನುಗುಣವಾಗಿ 11000 ಯುನಿಟ್(ಪಿಂಟ್) ರಕ್ತದ ಅವಶ್ಯಕತೆಯಿದ್ದು, ಕೇವಲ 4500 ಯುನಿಟ್ನಷ್ಟು ಮಾತ್ರ ದಾನಿಗಳಿಂದ ರಕ್ತಸಂಗ್ರಹವಾಗುತ್ತಿದೆ. ಅಲ್ಲದೆ ಅಪಘಾತ, ಅನಾರೋಗ್ಯ, ಮತ್ತಿತರ ತುರ್ತು ಸಂದರ್ಭಗಳಲ್ಲಿ ರೋಗಿಯ ರಕ್ತದ ಗುಂಪಿಗೆ ಹೊಂದಿಕೆಯಾಗುವ ರಕ್ತ ಪೂರೈಕೆ ಮಾಡಲು ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಅಮೂಲ್ಯವಾದ ರಕ್ತವನ್ನು ದಾನ…
Author: News Desk Benkiyabale
ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ತಂಡ ಜೂನ್ 11ರಂದು ತುಮಕೂರು ಹಾಗೂ ಗುಬ್ಬಿ ತಾಲ್ಲೂಕುಗಳಿಗೆ ಅನಿರೀಕ್ಷಿತ ಭೇಟಿ ನೀಡಿ ನಕಲಿ ವೈದ್ಯರ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಗುಬ್ಬಿ ತಾಲ್ಲೂಕು ತಾಳೆಕೊಪ್ಪದ ಮಾರುತಿ ಪಾಲಿಕ್ಲಿನಿಕ್, ಚೇಳೂರಿನ ಸಂಜೀವಿನಿ ಕ್ಲಿನಿಕ್ ಹಾಗೂ ಹೆಲ್ತ್ ಸೆಂಟರ್; ತುಮಕೂರು ತಾಲ್ಲೂಕು ಗೂಳೂರು ಹಾಗೂ ರಾಜೀವ್ ಗಾಂಧಿ ನಗರದಲ್ಲಿರುವ ಶಿಫಾ ಕ್ಲಿನಿಕ್ಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರೀಕ್ಷಿಸಿದ ನಂತರ ನಕಲಿ ವೈದ್ಯರಿರುವುದು ಕಂಡು ಬಂದಿದೆ. ಕೂಡಲೇ ಕ್ರಮ ಕೈಗೊಂಡು ಸದರಿ ಆಸ್ಪತ್ರೆಗಳನ್ನು ಮುಚ್ಚಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ: ಶರತ್ ಚಂದ್ರ ತಿಳಿಸಿದ್ದಾರೆ.
ಮಧುಗಿರಿ : 2019-20 ರಲ್ಲಿ 107.92 ಕೋಟಿ ರೂ. ಅನುದಾನ ನಿಗದಿಯಾಗಿದ್ದು, 108.22 ಕೋಟಿ ರೂ. ಬಿಡುಗಡೆಯಾಗಿ 104.16 ಕೋಟಿ ರೂ. ಖರ್ಚಾಗಿದೆ. ಉಳಿಕೆ 8.55 ಕೋಟಿ ರೂ.ಗಳನ್ನು ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಬಳಸಲು ಅನುಮೋದನೆಗೆ ಸಭೆ ಒಪ್ಪಿಗೆ ಸೂಚಿಸಿದೆ ಎಂದು ತಾಪಂ ಅಧ್ಯಕ್ಷೆ ಇಂದಿರಾ ದೇನಾನಾಯಕ್ ತಿಳಿಸಿದರು. ಅವರು ಪಟ್ಟಣದ ತಾಪಂ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಕಟ್ಟಡದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಭಿವೃದ್ಧಿ ಇಲಾಖೆಯು ಬಾಡಿಗೆಗೆ ಇದೆ. ಆದರೆ ವರ್ಷವಾದರೂ ಬಾಡಿಗೆ ನೀಡದ ಸಿಡಿಪಿಓಗೆ ಬಾಡಿಗೆ ನೀಡಲಿ, ಇಲ್ಲ ಕಚೇರಿ ಖಾಲಿ ಮಾಡಲಿ. ಕಚೇರಿಯನ್ನು ಖಾಲಿ ಮಾಡಿದರೆ ಅದನ್ನು ಅಕ್ಷರ ದಾಸೋಹ ಕಾರ್ಯ ನಿರ್ವಹಣೆಗೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿ, ಪಂಚಾಯತ್ ರಾಜ್ ಇಲಾಖೆಯು ಜೀವಗೊಂಡನಹಳ್ಳಿ-ಕದಿರೆಹಳ್ಳಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸುತ್ತಿದ್ದು, ಎಂಜಿನಿಯರ್ ಅನುಪಸ್ಥಿತಿಯಲ್ಲಿ ಕಳಪೆ ಕಾಮಗಾರಿ ಮಾಡಲಾಗಿದೆ. ಈ ಬಗ್ಗೆ ಶಿಸ್ತು…
ಹುಳಿಯಾರು : ಬುಧವಾರ ರಾತ್ರಿ ಪಟ್ಟಣದ ಬಾರ್, ದಿನಸಿ ಅಂಗಡಿ, ಕಬ್ಬಿಣದ ಅಂಗಡಿ, ಎಪಿಎಂಸಿಯಲ್ಲಿ ನ 3 ಅಂಗಡಿಗಳು ಸೇರಿ ಒಟ್ಟು ಆರು ಅಂಗಡಿಗಳ ರೋಲಿಂಗ್ ಷಟರ್ ಮೀಟಿ ಕಳ್ಳತನ ಮಾಡಲಾಗಿದೆ. ಗಡಾರಿಯಿಂದ ರೋಲಿಂಗ್ ಶೆಟರ್ ಮೀಟಿ ಒಳನುಗ್ಗಿ ಕಳವು ಮಾಡಿದ್ದಾರೆ. ಸಿಸಿ ಟಿವಿ ಕ್ಯಾಮರಾದಲ್ಲಿ ಕಳ್ಳರ ಚಲನವಲನ ದಾಖಲಾಗಿದೆ. ಕೇವಲ ಕ್ಯಾಶ್ ಕೌಂಟರ್ ಗಳನ್ನು ಮಾತ್ರ ಗುರಿಯಾಗಿಸಿಕೊಂಡು ಕಳ್ಳರು ಕಳ್ಳತನ ಮಾಡಿದ್ದಾರೆ ಎಂದು ಪೆÇಲೀಸರು ಹೇಳಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ಸಪ್ತಗಿರಿ ಟ್ರೇಡರ್ಸ್, ಗಜಣ್ಣ ಅವರ ಅಂಗಡಿ, ಚಿಕ್ಕಬಿದರೆ ಚಂದ್ರಣ್ಣ ಅವರ ನಂದಿ ಟ್ರೇಡರ್ಸ್, ತೋಟದ ಶೇಖರಣ್ಣ ಅವರ ಎಸ್ಸೆಸ್ಸಾರ್ ಸ್ಟಿಲ್ಸ್, ವಿಶ್ವನಾಥ್ ಅವರ ಕೆಸಿಎಸ್ ಟ್ರೇಡರ್ಸ್ ಅಂಗಡಿಗಳಲ್ಲಿ ಕಳ್ಳತನವಾಗಿದೆ.
ತುಮಕೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಗಿರೀಶ್ ಕಾರ್ನಾಡ್ ಅವರ ಗೌರವಾರ್ಥ ಸರ್ಕಾರ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಮೇಯರ್ ಲಲಿತಾ ರವೀಶ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದ ಮಹಾನಗರ ಪಾಲಿಕೆ ತುರ್ತು ಸಭೆಯನ್ನು ಜೂನ್ 13ಕ್ಕೆ ಮುಂದೂಡಲಾಯಿತು. ಡಾ.ಗಿರೀಶ್ ಕಾರ್ನಾಡ್ ಹಾಗೂ ಪೌರಾಡಳಿತ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರ ನಿಧನಕ್ಕೆ ಸಂತಾಪ ಕೋರಿ ಸಭೆ ಶ್ರದ್ಧಾಂಜಲಿಯನ್ನು ಸಲ್ಲಿಸಿತು. ಸಂಸದ ಜಿ.ಎಸ್.ಬಸವರಾಜ್ ಮಾತನಾಡಿ, ‘ಡಾ.ಗಿರೀಶ್ ಕಾರ್ನಾಡ್ ಅವರು ದೇಶ ಕಂಡ ಶ್ರೇಷ್ಠ ಸಾಹಿತಿ, ನಾಟಕಕಾರರು, ಭಾಷಾ ಜ್ಞಾನಿಯಾಗಿದ್ದರು. ಜ್ಞಾನಪೀಠ ಪ್ರಶಸ್ತಿ ಪಡೆದಿದ್ದ ಅವರು ಕರ್ನಾಟಕಕ್ಕೆ ದೇಶ, ವಿದೇಶಗಳಲ್ಲಿ ಹೆಸರು ತಂದುಕೊಟ್ಟವರು. ಇಂಥವರು ನಮ್ಮ ನಾಡಿನವರು ಎಂದು ಹೇಳಿಕೊಳ್ಳಲು ಹೆಮ್ಮೆ’ ಎಂದು ನುಡಿದರು. ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರೂ ಜನಸ್ನೇಹಿ ಜನಪ್ರತಿನಿಧಿಯಾಗಿದ್ದರು. ಕ್ಷೇತ್ರದ ಅಭಿವೃದ್ಧಿ, ಬಡವರ ಪರ ಕಾಳಜಿಯುಳ್ಳವರಾಗಿದ್ದರು. ಕಿರಿಯ ವಯಸ್ಸಿನಲ್ಲೇ ಅವರು ನಿಧನವಾಗಿದ್ದು ರಾಜ್ಯ ಒಬ್ಬ ಉತ್ತಮ ಪ್ರಜಾಪ್ರತಿನಿಧಿ ಕಳೆದುಕೊಂಡಂತಾಗಿದೆ’ . ಈ…
ತುರುವೇಕೆರೆ: ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡರನ್ನು ಸೋಲಿಸಿದ ಅಪಕೀರ್ತಿ ತುಮಕೂರು ಜಿಲ್ಲೆಗೆ ಬಂದಿದೆ ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪರ ಮನೆಯ ಬಳಿಯಲ್ಲಿ ಸೋಮವಾರ ತಾಲೂಕು ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಲೋಕಸಭಾ ಹಾಗೂ ಪಟ್ಟಣ ಪಂಚಾಯ್ತಿ ಚುನಾವಣೆಯ ಆತ್ಮಾವಲೋಕನ ಕಾರ್ಯಕರ್ತರ ಸಭೆಯಲ್ಲಿ ಹಾಗೂ ಯುವ ಜೆಡಿಎಸ್ ವತಿಯಿಂದ ಆಯೋಜಿಸಿದ್ದ ತಮ್ಮ 68 ನೇ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ಪ್ರಜಾಪ್ರಭುತ್ವ ವ್ಯವಸ್ಥೆ ಕಗ್ಗೋಲೆಯಾಗಿದೆ. ಚುನಾವಣೆಯ ಮೌಲ್ಯ ಕುಸಿಯುತ್ತಿದೆ. ಹಣ ಇದ್ದವರು ಗೆಲ್ಲುತ್ತಾರೆ, ಇಲ್ಲದವರು ಸೋಲುತ್ತಿದ್ದಾರೆ ಪ್ರಾಮಾಣಿಕ ಸೇವೆ ಮಾಡುವರಿಗೆ ಅವಕಾಶ ಸಿಗದಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಲೋಕಸಭಾ ಚುನಾವಣೆಯಲ್ಲಿ ಹೆಚ್.ಡಿ.ದೇವೇಗೌಡರಿಗೆ ತಾಲೂಕಿನಿಂದ ಅಧಿಕ ಮತಗಳನ್ನು ನೀಡಿದ್ದಾರೆ. ಆದರೆ ಇನ್ನು ಹತ್ತು ಸಾವಿರ ಮತಗಳನ್ನು ನಿರೀಕ್ಷಿಸಲಾಗಿತ್ತು. ಹೆಚ್ಚು ಮತ ಬೀಳದೇ ಸೋಲುಂಟಾಯಿತು. ಕಾಂಗ್ರೇಸ್-ಜೆಡಿಎಸ್ ಜೊತೆ ಮೈತ್ರಿಯಿಂದ ರಾಜ್ಯದಲ್ಲಿ ಬಿಜೆಪಿ ಹೆಚ್ಚು ಲೋಕಸಭಾ…
ತುಮಕೂರು: ಜಿಲ್ಲಾದ್ಯಂತ ಜೂನ್ 11 ರಿಂದ 20ರವರೆಗೆ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ|| ಕೆ.ರಾಕೇಶ್ಕುಮಾರ್ ನಿಷೇಧಾಜ್ಞೆ ಹೊರಡಿಸಿದ್ದಾರೆ. ಪರೀಕ್ಷೆಯನ್ನು ಸುಸೂತ್ರವಾಗಿ ಲೋಪದೋಷವಿಲ್ಲದಂತೆ ನಡೆಸಲು ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚುವುದು. ಅನಧಿಕೃತ ವ್ಯಕ್ತಿಗಳು ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವ ಅನಧಿಕೃತ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಿದೆ ಎಂದು ಅವರು ತಿಳಿಸಿದ್ದಾರೆ.
ತುಮಕೂರು: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 525 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳಿಗೆ ಇಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ್ ಚಾಲನೆ ನೀಡಿದರು. ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿಂದು ಅವರು 49.97 ಕೋಟಿ ರೂ. ವೆಚ್ಚದಲ್ಲಿ ಸ್ಪೋಟ್ರ್ಸ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಶಂಕುಸ್ಥಾಪನೆ; 31 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವ ಹೇಮಾವತಿ ನೀರನ್ನು ಅಮಾನಿಕೆರೆಗೆ ಹರಿಸುವ ಹಾಗೂ 25.50ಕೋಟಿ ರೂ. ವೆಚ್ಚದಲ್ಲಿ ಅಮಾನಿಕೆರೆ ನೀರನ್ನು ಪಿ.ಎನ್.ಪಾಳ್ಯ ವಾಟರ್ ಪ್ಲಾಂಟ್ಗೆ ಹರಿಸುವ ಕಾಮಗಾರಿಗೆ ಶಂಕುಸ್ಥಾಪನೆ; ಜಿಲ್ಲಾಸ್ಪತ್ರೆ ಆವರಣದಲ್ಲಿ 56 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಮೆಡಿಕಲ್ ಫೆಸಿಲಿಟಿ ಸೆಂಟರ್ ಮತ್ತು ಟ್ರಾಮಾಕೇರ್ ಸೆಂಟರ್ ಶಂಕುಸ್ಥಾಪನೆ, ಪಾಲಿಕೆ ಆವರಣದಲ್ಲಿ 42ಲಕ್ಷ ರೂ. ವೆಚ್ಚದ ಐಸಿಎಂಸಿಸಿ ಕಟ್ಟಡದ ಉದ್ಘಾಟನೆ; ಕೆಎಸ್ಆರ್ಟಿಸಿ ಬಸ್ನಿಲ್ದಾಣದಲ್ಲಿ 93.78 ಕೋಟಿ ರೂ. ವೆಚ್ಚದಲ್ಲಿ ಇಂಟಿಗ್ರೇಟೆಡ್ ಬಸ್ ಟರ್ಮಿನಲ್ ರಿಡೆವಲಪ್ಮೆಂಟ್ ಕಾಮಗಾರಿ ಹಾಗೂ 16.08 ಕೋಟಿ ರೂ. ವೆಚ್ಚದ ಸ್ಮಾರ್ಟ್…
ತುಮಕೂರು: ಸ್ಮಾರ್ಟ್ ಸಿಟಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಹಾಲಿ ಶಾಸಕ ಜ್ಯೋತಿಗಣೇಶ್ ತನ್ನ ಬೆಂಬಲಿಗರೊಂದಿಗೆ ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಕೇಂದ್ರ ಸರ್ಕಾರದ ಮಹತ್ತರ ಯೋಜನೆಗಳಲ್ಲೊಂದಾದ ಸ್ಮಾರ್ಟ್ಸಿಟಿ ಯೋಜನೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನ ಸಮಾರಂಭದ ಕಾರ್ಯಕ್ರಮವನ್ನು ತುಮಕೂರು ನಗರದಲ್ಲಿ ಸ್ಮಾರ್ಟ್ಸಿಟಿ ಅಧಿಕಾರಿಗಳು ಆಯೋಜಿಸಿದ್ದರಾದರೂ, ಆಯೋಜನೆಯ ಸಂದರ್ಭದಲ್ಲಿ ಸರ್ಕಾರದ ಶಿಷ್ಟಾಚಾರವನ್ನ ಗಣನೆಗೆ ತೆಗೆದುಕೊಳ್ಳಬೇಕೆಂಬ ಕನಿಷ್ಠ ಪ್ರಜ್ಞೆ ಅವರಲ್ಲಿರಲಿಲ್ಲ. ಕೇವಲ ರಾಜ್ಯ ಸರ್ಕಾರದ ಕೈಗೊಂಬೆಗಳಂತೆ ವರ್ತಿಸುತ್ತಿರುವ ಸ್ಮಾರ್ಟ್ಸಿಟಿ ಅಧಿಕಾರಿ ರಂಗಸ್ವಾಮಿ ಸಮಾರಂಭದ ಆಹ್ವಾನ ಪತ್ರಿಕೆ ಮತ್ತು ಪೋಸ್ಟರ್ ಹಾಗೂ ಬ್ಯಾನರ್ ಗಳಲ್ಲಿ ಹಾಲಿ ಪ್ರಧಾನಮಂತ್ರಿ ನರೇಂದ್ರಮೋದಿ, ತುಮಕೂರಿನ ಹಾಲಿ ಸಂಸದ ಜಿ.ಎಸ್.ಬಸವರಾಜು, ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರ ಭಾವಚಿತ್ರಗಳನ್ನು ಹಾಕಿಸದೇ ನಿರ್ಲಕ್ಷಿಸಿದ್ದು, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ರವರ ಭಾವಚಿತ್ರಗಳನ್ನ ಮಾತ್ರ ಮುದ್ರಿಸಿದ ಬ್ಯಾನರ್ ಗಳನ್ನ ವೇದಿಕೆ ಮತ್ತು ನಗರದ ಬಹುತೇಕ ಕಡೆಗಳಲ್ಲಿ ಹಾಕಿಸಲಾತ್ತು. ಹಾಲಿ ಸಂಸದ ಜಿ.ಎಸ್.ಬಸವರಾಜು, ತುಮಕೂರು ನಗರ ಶಾಸಕ…
ತುಮಕೂರು : ಹೆಗ್ಗೆರೆ ಬಸ್ ನಿಲ್ದಾಣದ ಬಳಿ ಗಾಂಜಾ ಹೊಂದಿದ್ದ ಸೂಡಾನ್ ದೇಶದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ದಾಳಿ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ. ಜೂ.4 ರಂದು ಸಂಜೆ 5 ಗಂಟೆಗೆ ಪೊಲೀಸರು ದಾಳಿ ನಡೆಸಿದ್ದು, ಹೆಗ್ಗೆರೆ ಬಸ್ ನಿಲ್ದಾಣದಲ್ಲಿ ಓರ್ವ ವ್ಯಕ್ತಿ ಕಪ್ಪು ಬಣ್ಣದ ಬ್ಯಾಗ್ ಹಾಕಿ ಅದರೊಳಗೆ ಗಾಂಜಾ ಮತ್ತು ಗಾಂಜಾ ಸೇದುವ ಉಪಕರಣಗಳು ಇದ್ದುದು ಕಂಡುಬಂದಿದೆ. ಆತನ ಮೇಲೆ ಅನುಮಾನ ಬಂದು ಆತನ ವಿಳಾಸ ವಿಚಾರಿಸಲಾಗಿ, ಆತ ಸೂಡಾನ್ ದೇಶದವನಾಗಿದ್ದು, ಮೊಹಮ್ಮದ್ ಮುಸ ಎಂದು ತಿಳಿದುಬಂದಿದೆ. ಹಾಲಿ ವಿದ್ಯಾರ್ಥಿ ಆಚಾರ್ಯ ಕಾಲೇಜಿನಲ್ಲಿ ಓದುತ್ತಿದ್ದು, ವಾಸ ಬೆಂಗಳೂರು ಎಂದು ತಿಳಿದುಬಂದಿರುತ್ತದೆ. ಈ ವ್ಯಕ್ತಿಯು ಮೆಡಿಕಲ್ ಕಾಲೇಜು ಫ್ರೆಂಡ್ಸ್ ಗಳಿಗೆ ಮಾರಾಟ ಮಾಡಲು ತಂದಿರುವುದಾಗಿ ತಿಳಿಸಿರುತ್ತಾನೆ. ಈತನಿಂದ 1280ಗ್ರಾಂ ಗಾಂಜಾ ಸೊಪ್ಪು ಹಾಗೂ ಉಪಕರಣಗಳನ್ನು ವಶಪಡಿಸಿಕೊಂಡ ಪ್ರಕರಣ ದಾಖಲಾಗಿದೆ. ಈ ದಾಳಿಯಲ್ಲಿ ಪಾಲ್ಗೊಂಡಿದ್ದ…