ತುಮಕೂರು: ಅತಿ ಹೆಚ್ಚಿನ ಖರ್ಚಿನಿಂದ ಕೂಡಿರುವ ಸಿಟಿ ಸ್ಕ್ಯಾನ್ ಹಾಗೂ ಎಂಆರ್ಐ ಸ್ಕ್ಯಾನ್ಗಳು ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕ್ರಸ್ನ ಡಯೋಗ್ನೋಸ್ಟಿಕ್ ಸೆಂಟರ್ನ ಬ್ಯುಸಿನೆಸ್ ಮ್ಯಾನೇಜರ್ ಧನಂಜಯ್ ತಿಳಿಸಿದರು. ನಗರದ ಜಿಲ್ಲಾ ಆಸ್ಪತ್ರೆಯ ಸ್ಕ್ಯಾನಿಂಗ್ ಸೆಂಟರ್ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಸಹಭಾಗಿತ್ವದಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್ಐ ಸ್ಕ್ಯಾನಿಂಗ್ ಆರಂಭಗೊಂಡು ಸುಮಾರು ಒಂದೂವರೆ ವರ್ಷಗಳು ಕಳೆದಿದ್ದು, ಇಲ್ಲಿಯವರೆಗೆ ಒಟ್ಟು 10 ಸಾವಿರಕ್ಕೂ ಹೆಚ್ಚು ಮಂದಿಗೆ ಈ ಸೌಲಭ್ಯ ದೊರೆತಿದೆ. ಪ್ರತಿನಿತ್ಯ 25 ರಿಂದ 30 ಮಂದಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದರು. ನಗರದ ಜಿಲ್ಲಾ ಆಸ್ಪತ್ರೆಯ ಸ್ಕ್ಯಾನಿಂಗ್ ಸೆಂಟರ್ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಸಹಭಾಗಿತ್ವದಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್ಐ ಸ್ಕ್ಯಾನಿಂಗ್ ಆರಂಭಗೊಂಡು ಸುಮಾರು ಒಂದೂವರೆ ವರ್ಷಗಳು ಕಳೆದಿದ್ದು, ಇಲ್ಲಿಯವರೆಗೆ ಒಟ್ಟು 10 ಸಾವಿರಕ್ಕೂ…
Author: News Desk Benkiyabale
ತುಮಕೂರು: ಮಹಾನಗರ ಪಾಲಿಕೆಯಲ್ಲಿ ಐವರು ಪೌರ ಕಾರ್ಮಿಕರನ್ನು ವಜಾ ಮಾಡಲಾಗಿದ್ದು, ಹಾಗು ಒಬ್ಬ ಪೌರ ಕಾರ್ಮಿಕನನ್ನ ಅಮಾನತುಗೊಳಿಸಲಾಗಿದೆ. ಪಾಲಿಕೆಗೆ ಅನಧಿಕೃತವಾಗಿ ಗೈರು ಸುದೀರ್ಘ ಗೈರು ಹಾಜರಾದ ಹಿನ್ನೆಲೆಯಲ್ಲಿ ಪಾಲಿಕೆಯ ಹಿರಿಯ ಅಧಿಕಾರಿಗಳು ನೀಡಿದ ವರದಿಯ ಆಧಾರದ ಮೇಲೆ ಪಾಲಿಕೆಯ ಆಯುಕ್ತ ಭೂಬಾಲನ್ ರವರು ಐವರು ನೇರ ಪಾವತಿ ಪೌರ ಕಾರ್ಮಿಕರುಗಳಾದ ಎಂ.ಜಿ.ವೆಂಕಟಸ್ವಾಮಿ, ಎನ್.ಮಂಜುನಾಥ್, ಹುಲಿರಾಮಯ್ಯ, ಗೋವಿಂದರಾಜು, ಸಿದ್ದರಾಜುರವರನ್ನು ಸೇವೆಯಿಂದ ವಜಾ ಮಾಡಲಾಗಿದ್ದು, ಖಾಯಂ ಪೌರ ಕಾರ್ಮಿಕರಾದ ಟಿ.ಕೆ. ಮಂಜುನಾಥ್ ರವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸದರಿ ಇವರುಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದು, ಮೌಖಿಕ ಆದೇಶಗಳನ್ನ ಹಾಗೂ ಎಚ್ಚರಿಕೆಗಳನ್ನ ನೀಡಿದ್ದರೂ ಸಹಾ ಸೇವೆಗೆ ಹಾಜರಾಗದ ಹಿನ್ನೆಲೆಯಲ್ಲಿ ಈ ರೀತಿಯ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗಿದೆ. ಪರಿಸರ ಇಲಾಖೆಯ ಅಧಿಕಾರಿಗಳು ನೀಡಿದ ವರದಿಯ ಆಧಾರದ ಮೇಲೆ ಪಾಲಿಕೆಯ ಆಯುಕ್ತ ಭೂಬಾಲನ್ ರವರು ಸೇವೆಯಿಂದ ವಜಾ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.
ಶಿರಾ: ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಕಾರಿನಲ್ಲಿದ್ದ 8 ಮಂದಿಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ತಾವರೆಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಬುಧವಾರ ನಡೆದಿದೆ. ಜಯತಿ(6) ಮತ್ತು ಸುಧಮ್ಮ (55) ಮೃತಪಟ್ಟವರು. ಶಿವಣ್ಣ, ಮೇಘನ, ಬಾಲಮ್ಮ, ಮಂಜಮ್ಮ, ಹಿಮ, ಸುಬಧ ಗಾಯಗೊಂಡವರು ಎಂದು ತಿಳಿದು ಬಂದಿದ್ದು, ಇವರೆಲ್ಲರೂ ತುಮಕೂರಿನಲ್ಲಿ ಸಂಬಂಧಿಕರ ಮದುವೆಗೆಂದು ಹೋಗಿ ವಾಪಸ್ ತಮ್ಮ ಊರಾದ ಹಿರಿಯೂರು ತಾಲೂಕಿನ ಎ.ವಿ.ಕೊಟ್ಟಿಗೆ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಗಾಯಗೊಂಡವರನ್ನು ಹಿರಿಯೂರು, ಸಿರಾ ಮತ್ತು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು : ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿರುವ ಪರಿಸರ ಸ್ವಚ್ಛತೆ ಕಾಪಾಡಿದರೆ ಮಾತ್ರ ರೋಗ ನಿಯಂತ್ರಣ ಮಾಡಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಸಾರ್ವಜನಿಕರಿಗೆ ಕಿವಿ ಮಾತು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ ಹಾಗೂ ನರ್ಸಿಂಗ್ ಕಾಲೇಜುಗಳ ಸಹಯೋಗದಲ್ಲಿ ನಗರದ ಬಿಜಿಎಸ್ ವೃತ್ತದಲ್ಲಿ ಏರ್ಪಡಿಸಿದ್ದ, ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು. ಮನೆಯಲ್ಲಿ ಅನಗತ್ಯ ನೀರಿನ ಶೇಖರಣೆಯನ್ನು ತಪ್ಪಿಸಿ, ಮನೆಯ ಸುತ್ತಮುತ್ತಲಿನಲ್ಲಿ ಮಳೆ ನೀರು ನಿಲ್ಲದಂತೆ ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡಬೇಕು, ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ನೀರು ಸಂಗ್ರಹ ಮಾಡುತ್ತಾರೆ, 1 ವಾರಕ್ಕಿಂತ ಹೆಚ್ಚು ನೀರನ್ನು ಸಂಗ್ರಹಿಸಬಾರದು. ಈಗಾಗಲೇ ಆಶಾ ಕಾರ್ಯಕರ್ತೆಯರು ನೀರು ಸಂಗ್ರಹವಾಗಿರುವ ತೊಟ್ಟಿಗಳಿಗೆ ಲಾರ್ವಾಹಾರಿಗಳನ್ನು…
ತುಮಕೂರು: ನಗರದ 15ನೇ ವಾರ್ಡು ಹಲವು ಸಮಸ್ಯೆಗಳ ಆಗರವಾಗಿದ್ದು,ರೈಲ್ವೆ ನಿಲ್ದಾಣ ರಸ್ತೆಯಲ್ಲಿನ ಯುಜಿಡಿ ಸಮಸ್ಯೆ ಹಾಗೂ ರಸ್ತೆಗೆ ಡಾಂಬರೀಕರಣ,ಉಪ್ಪಾರಹಳ್ಳಿ ಅಂಡರ್ಪಾಸ್ ಬಳಿಯ ಕಸವಿಲೇವಾರಿ ಘಟಕದ ಸ್ಥಳಾಂತರ ಮತ್ತು ಜನರಿಗೆ ರೈಲ್ವೆ ಹಳಿ ದಾಟಲು ಪಾದಚಾರಿ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ವಾರ್ಡಿನ ಕೌನ್ಸಿಲರ್ ಶ್ರೀಮತಿ ಗಿರಿಜಾ ಧನಿಯಕುಮಾರ್ ಒತ್ತಾಯಿಸಿದ್ದಾರೆ. ಗುರುವಾರ ಬೆಳಗ್ಗೆ ಉಪ್ಪಾರಹಳ್ಳಿ ರೈಲ್ವೆ ಅಂಡರ್ಪಾಸ್ ಬಳಿ ಆ ಭಾಗದ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದ ನಂತರ ಮಾತನಾಡಿದ ಅವರು,ರೈಲ್ವೆ ನಿಲ್ದಾಣ ರಸ್ತೆಗೆ ಡಾಂಬರು ಹಾಕಿ ಹತ್ತಾರು ವರ್ಷಗಳೇ ಕಳೆದಿದೆ. ಹಲವು ಬಾರಿ ಮನವಿ ಮಾಡಿದ ನಂತರ ಲೋಕಸಭಾ ಚುನಾವಣೆಗೂ ಮೊದಲು ರಸ್ತೆಯ ಅಗಲೀಕರಣಕ್ಕೆ ಸಂಸದರು ಮತ್ತು ಸ್ಥಳೀಯ ಶಾಸಕರು ಗುದ್ದಲಿಪೂಜೆ ನೆರವೇರಿಸಿದ್ದರು.ಆದರೆ ಇದುವರೆಗೂ ಕೆಲಸ ಆರಂಭವಾಗಿಲ್ಲ.ಇದರಿಂದ ರಸ್ತೆಯಲ್ಲಿ ಒಡಾಡುವ ಜನರು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಹೋಗಬೇಕಾಗಿದೆ.ಅಲ್ಲದೆ ಕೆಲ ತಿಂಗಳ ಹಿಂದೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯವರು ನಿರ್ಮಿಸಿದ್ದ…
ತುಮಕೂರು: ಮುಂದಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಗಳ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶೇ. 100ರಷ್ಟು ಪಾಸು ಆಗುವ ರೀತಿಯಲ್ಲಿ ಕಲಿಕಾ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾಕಲ್ಯಾಣ್ ಅವರು ನಿಲಯಪಾಲಕರಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವ್ಯಾಪ್ತಿಯ ವಸತಿಯ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ನಿಲಯಾರ್ಥಿಗಳ ಹತ್ತನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಸತಿ ನಿಲಯಗಳಲ್ಲಿರುವ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವ್ಯಾಸಂಗ ಮಾಡುವ ಎಲ್ಲಾ ನಿಲಯಾರ್ಥಿಗಳು ಪಾಸು ಆಗಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶೇ. 100ರಷ್ಟು ಫಲಿತಾಂಶ ಬರಬೇಕು. ಆ ನಿಟ್ಟಿನಲ್ಲಿ ವಿಸ್ತರಣಾಧಿಕಾರಿಗಳು, ಮೇಲ್ವಿಚಾರಕರು ಹಾಗೂ ವಾರ್ಡನ್ಗಳು ಗಮನಹರಿಸಬೇಕು ಎಂದರು. …
ತುಮಕೂರು: ಮಹಾನಗರ ಪಾಲಿಕೆಯಲ್ಲಿ ಆಧುನಿಕ ಯಂತ್ರೋಪಕರಣಗಳ ಬಳಕೆ ಮಾಡುತ್ತಿದ್ದು, ತುಮಕೂರು ನಗರ ಸ್ಮಾರ್ಟ್ ಸಿಟಿಯಾದ ಬೆನ್ನಲ್ಲೇ ಮಹಾನಗರ ಪಾಲಿಕೆಯ ಆಯುಕ್ತರಾಗಿ ಬಂದಿರುವ ಭೂಬಾಲನ್ ರವರು ಹಣ ಸೋರಿಕೆಯನ್ನು ತಡೆಯುವ ನಿಟ್ಟಿನಲ್ಲಿ ನೂತನ ತಾಂತ್ರಿಕೆಯುಳ್ಳ ನೇರ ನಗದಿನ ಹೊಸ ರೀತಿಯ ಡಿಜಿಟಲ್ ಯಂತ್ರವನ್ನು ಬಳಕೆ ಮಾಡಿದ್ದು, ಅದರಿಂದ ಸ್ಥಳದಲ್ಲಿಯೇ ನಗದನ್ನ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂಧಿ ಹಣವನ್ನ ಸ್ವೀಕರಿಸುತ್ತಿದ್ದು, ಅಲ್ಲಿಯೇ ರಶೀತಿ ದೊರೆಯುತ್ತಿದೆ. ನಗದು ಮತ್ತು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ಗಳನ್ನು ಬಳಕೆ ಮಾಡಿ, ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಹಣವನ್ನು ಕಟ್ಟಬಹುದು. ಇದನ್ನು ಸಾರ್ವಜನಿಕರು ಸದುಪಯೋಗಪಸಿಕೊಳ್ಳುವುದರಿಂದ ಮಹಾನಗರ ಪಾಲಿಕೆಗೆ ಸಂದಾಯವಾಗಬೇಕಿದ್ದ ತೆರಿಗೆ ಹಣ ನೇರವಾಗಿ ಪಾಲಿಕೆಯ ಖಾತೆಗೆ ಜಮಾವಣೆಗೊಳ್ಳಲಿದ್ದು, ಹಣ ನೀಡಿದವರಿಗೆ ಸ್ಥಳದಲ್ಲಿಯೇ ರಶೀತಿ ದೊರೆಯುತ್ತದೆ. ಈ ಹಿಂದೆ ಕೈ ಬರಹದ ರಶೀತಿಗಳನ್ನ ನೀಡುತ್ತಿದ್ದು, ಅದರಿಂದ ಹಣ ದುರುಪಯೋಗವಾಗುತ್ತದೆಂದು ಭಾವಿಸಿ, ಹೊಸ ರೀತಿಯ ತಾಂತ್ರಿಕತೆಯನ್ನು ಬಳಕೆ ಮಾಡಿದ್ದಾರೆ. ಸದರಿ ಯಂತ್ರೋಪಕರಣಗಳನ್ನ…
ತುಮಕೂರು: ಮಹಾನಗರ ವ್ಯಾಪ್ತಿಯಲ್ಲಿ ಡಾಕ್ಟರ್ ವಾಟರ್ ಸಂಸ್ಥೆ ವತಿಯಿಂದ ಈವರೆಗೂ 7 ಸ್ಥಳಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಿದ್ದು, 7 ಘಟಕಗಳಲ್ಲಿಯೂ ನೀರಿನ ಮಾಪನಗಳನ್ನು(ವಾಟರ್ ಮೀಟರ್) ಅಳವಡಿಸುವಂತೆ ಮಹಾನಗರ ಪಾಲಿಕೆ ಡಾಕ್ಟರ್ ವಾಟರ್ ಸಂಸ್ಥೆಗೆ ನೋಟಿಸ್ ನೀಡಿದೆ. ನಗರದ ವಾರ್ಡ್ ಸಂಖ್ಯೆ – 7ರಲ್ಲಿ ಶಿಶುವಿಹಾರ, ವಾರ್ಡ್ ಸಂಖ್ಯೆ -25 ರಲ್ಲಿ ಮುನ್ಸಿಪಲ್ ಲೇಔಟ್ ಮತ್ತು ವಾರ್ಡ್ ಸಂಖ್ಯೆ-32 ರಲ್ಲಿ ಗೋಕುಲದಲ್ಲಿ 2014 ನೇ ಸಾಲಿನಲ್ಲಿ ನಿರ್ಮಿಸಿದ್ದು ಕರ್ನಾಟಕ ಮುನ್ಸಿಪಲ್ ಕಾಯ್ದೆ ಸೆಕ್ಷನ್ 175C(ii) ರೀತ್ಯಾ ಈ ಮೂರು ಸ್ಥಳಗಲ್ಲಿ ನಿಮಗೆ ಘಟಕ ನಿರ್ವಹಣೆ ಮಾಡಲು ನೀಡಲಾದ ಪರವಾನಗಿ ಅವಧಿ 2017 ಏ ಇಸವಿಗೆ ಮುಕ್ತಾಯವಾಗಿರುತ್ತದೆ. ಈ ಅವಧಿಯಲ್ಲಿ ವಾಟರ್ ಹೆಲ್ತ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಿಂದ ಕರ್ನಾಟಕ ಮುನ್ಸಿಪಲ್ ಕಾಯ್ದೆ ಸೆಕ್ಷನ್ 176(6b(i)) ರೀತ್ಯಾ ಯಾವುದೇ ಶುಲ್ಕ ತುಮಕೂರು ಮಹಾನಗರ ಪಾಲಿಕೆಗೆ ಪಾವತಿಯಾಗಿರುವುದಿಲ್ಲ ಹಾಗೂ 8-9-2017ರ ನಂತರದಲ್ಲಿ ಪರವಾನಗಿ ನವೀಕರಿಸಿಕೊಂಡಿರುವುದಿಲ್ಲ.…
ತುಮಕೂರು : ರಾಜ್ಯ ಚುನಾವಣಾ ಆಯೋಗವು ವಿವಿಧ ಕಾರಣಗಳಿಂದ ತೆರವಾಗಿರುವ ತುಮಕೂರು ಜಿಲ್ಲೆಯ ವಿವಿಧ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ಉದ್ದೇಶಿಸಿದ್ದು, ಮೇ 13 ರಿಂದ 31ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಚುನಾವಣೆ ನಡೆಯಲಿರುವ ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾ: ಕೆ.ರಾಕೇಶ್ಕುಮಾರ್ ಅವರು ಆದೇಶಿಸಿದ್ದಾರೆ. ಗುಬ್ಬಿ ತಾಲ್ಲೂಕಿನ ಹೊಸಕೆರೆ, ತ್ಯಾಗಟೂರು, ಜಿ.ಹೊಸಹಳ್ಳಿ, ಹಿಂಡಸ್ಕೆರೆ, ಸಿ.ಎಸ್.ಪುರ, ಬ್ಯಾಡಗೆರೆ ಗ್ರಾಮಪಂಚಾಯತಿ; ಕುಣಿಗಲ್ ತಾಲೂಕಿನ ತೆರೇದಕುಪ್ಪೆ; ಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರು; ತುರುವೇಕೆರೆ ತಾಲೂಕಿನ ಮುನಿಯೂರು(2 ಕ್ಷೇತ್ರ) ಹಾಗೂ ದಬ್ಬೇಘಟ್ಟ; ಮಧುಗಿರಿ ತಾಲೂಕಿನ ಸಿಂಗನಹಳ್ಳಿ, ಶಿರಾ ತಾಲೂಕಿನ ತಡಕಲೂರು; ಪಾವಗಡ ತಾಲೂಕಿನ ಕೊಡಮಡಗು ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯಲಿರುವ ಗ್ರಾಮಪಂಚಾಯತಿಗಳ ವ್ಯಾಪ್ತಿಯಲ್ಲಿ ಮೇ 13 ರಿಂದ 31ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆ ಮುಕ್ತಾಯಗೊಳ್ಳುವವರೆಗೆ ಸದರಿ…
ತುಮಕೂರು : ತುಮಕೂರು ಜಿಲ್ಲೆ ತೀವ್ರ ಬರದಿಂದ ತತ್ತರಿಸಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನರೇಗಾ ಯೋಜನೆಯಡಿ ದುಡಿಯಲು ಕೆಲಸವನ್ನು ಒದಗಿಸಲು ತುರ್ತು ಕ್ರಮ ಕೈಕೊಳ್ಳುವಂತೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ತುಮಕೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಸಮಪರ್ಕವಾಗಿ ಬರನಿರ್ವಹಣೆ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಇರುವ ಕಡೆ, ಹೊಸದಾಗಿ ಬೋರ್ವೆಲ್ಗಳನ್ನು ಕೊರೆಯಲಾಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಿ, ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯ 74 ಗ್ರಾಮ ಪಂಚಾಯಿತಿಗಳ 122 ಗ್ರಾಮಗಳಿಗೆ 455 ಟ್ರಿಪ್ಗಳಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 182 ಖಾಸಗಿ ಕೊಳವೆ ಬಾವಿಗಳನ್ನು…