ಚಿಕ್ಕನಾಯಕನಹಳ್ಳಿ: ಹೆಚ್.ಡಿ ದೇವೇಗೌಡರು ಪ್ರಧಾನಮಂತ್ರಿಯಾದಾಗ ಜಯಲಲಿತರ ಪಕ್ಷದ ಓಟಿನ ಆಸೆಗಾಗಿ ಕಾವೇರಿ ನೀರನ್ನು ತಮಿಳುನಾಡಿನ ಬಿಟ್ಟಿದ್ದರು ಎಂದು ಶಾಸಕ ಜೆ.ಸಿ ಮಾಧುಸ್ವಾಮಿ ಆರೋಪಿಸಿದರು. ಮಂಗಳವಾರ ತಾಲ್ಲೂಕಿನ ಜೆ.ಸಿ ಪುರದಲ್ಲಿ ಶೆಟ್ಟಿಕೆರೆ ಹೋಬಳಿ ಮಟ್ಟದ ಬಿಜೆ.ಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ ಹಿಂದುಳಿದವರ ಬಗ್ಗೆ ದೇವೇಗೌಡರು ಮೊಸಳೆ ಕಣ್ಣೀರು ಹಾಕುತ್ತಾರೆ. ದೇವೇಗೌಡರು ಗೌಡರು ಮೇಲೆ ಬರದಂತೆ ತುಳಿಯುತ್ತಾರೆ. ನಾಗೇಗೌಡರು ಮಂತ್ರಿಗಳಾದ ಸಂದರ್ಭದಲ್ಲಿ ಹೇಮಾವತಿ ನಾಲೆಯ ನೀರನ್ನು ಜಿಲ್ಲೆಗೆ ಅಲಾಟ್ ಮಾಡಿದ್ದರು. ದೇವೇಗೌಡರು ಜಾತಿ ಜಾತಿಗಳಲ್ಲಿ ವಿಷ ಬೀಜ ಬಿತ್ತಿ ಎಲ್ಲರನ್ನು ಎತ್ತಿ ಕಟ್ಟುತ್ತಿದ್ದಾರೆ ಕುಮಾರಸ್ವಾಮಿಯವರು ಸಂತೋಷಜಯಚಂದ್ರ ಚುನಾವಣೆಗೆ ನಿಲ್ಲದೆ ಹೋಗಿದ್ದರೆ ಸಿ.ಬಿ.ಸುರೇಶ್‍ಬಾಬು ಗೆಲ್ಲುತ್ತಿದ್ದರು. ಇದರಿಂದ ಜೆ.ಸಿಮಾಧುಸ್ವಾಮಿಯವರನ್ನು ವಿಧಾನಸೌಧದ ಮೆಟ್ಟಿಲು ಹತ್ತಲು ಬಿಡುತ್ತಿರಲಿಲ್ಲ ಎಂದು ಹೇಳಿದ್ದಾರೆ ಆದರೆ ಕುಮಾರಸ್ವಾಮಿ ಇನ್ನೂ ರಾಜಕಾರಣಕ್ಕೆ ಬರುವ ಮುನ್ನ ನಾನು ವಿಧಾನಸೌಧದ ಮೆಟ್ಟಿಲ್ಲನ್ನು ಹತ್ತಿದ್ದೇನೆ 1962ರಲ್ಲಿ ಹೇಮಾವತಿ ಅಣೇಕಟ್ಟೆ ನಿರ್ಮಿಸಲು ನಿಜಲಿಂಗಪ್ಪನವರು ಶಂಕುಸ್ಥಾಪನೆ ನೆರವೇರಿಸಿದ್ದರು. …
Author: News Desk Benkiyabale
ತುಮಕೂರು: ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಜಿಲ್ಲೆಗೆ ಸೀಮಿತಗೊಳಿಸದೇ, ದೇಶದಲ್ಲಿ ಬಿಜೆಪಿ ವಿರುದ್ಧ ದೊಡ್ಡ ಶಕ್ತಿಯ ನ್ನಾಗಿ ಅವರನ್ನು ಕಾಣಬೇಕಿದ್ದು, ದೇವೇಗೌಡ ಅವರನ್ನು ಗೆಲ್ಲಿಸಬೇಕಾದ ಅನಿವಾರ್ಯತೆ ಇದ್ದು ಈ ನಿಟ್ಟಿನಲ್ಲಿ ಕಾರ್ಯ ಕರ್ತರು ಹೋರಾಟಕ್ಕೆ ಸಿದ್ಧರಾಗಬೇಕಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದ ಕೊಲ್ಲಾಪುರದಮ್ಮ ಸಮುದಾಯಭವನದಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತ ನಾಡಿದ ಅವರು, ಮೈತ್ರಿ ಸರ್ಕಾರ ರಚನೆಯಾದಾಗಲೇ ಲೋಕಸಭೆ ಚುನಾವಣೆಯಲ್ಲಿ ಮೋದಿಯನ್ನು ಸೋಲಿಸಲು ಸಿದ್ಧರಾಗಿ ದ್ದೆವೆ. ದೇಶದಲ್ಲಿ ಶಾಂತಿ ನೆಲೆಸಲು, ಸಂವಿಧಾನವನ್ನು ಉಳಿಸಲು ಮಹಾಘಟಿಬಂಧನ್ ಮೂಲಕ ಒಂದಾಗಿದ್ದೇವೆ. ಸಂವಿಧಾನ ಬದಲಿಸಬೇಕು ಎನ್ನುವವರನ್ನು ಅಧಿಕಾರದಿಂದ ಕೆಳಗಿಳಿಸಬೇಕಿದೆ ಎಂದರು. ತುಮಕೂರು ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲು ಮೈತ್ರಿ ಸರ್ಕಾರ ಭದ್ರವಾಗಿದೆ. ಬದ್ಧವಾಗಿದೆ. ಸರ್ಕಾರ ಬೀಳುತ್ತದೆ ಎನ್ನುವುದು ಅವರ ಭ್ರಮೆ ಅಷ್ಟೇ, ಜಿಲ್ಲೆಗೆ ಅಗತ್ಯವಿರುವ ನೀರಾವರಿ ಯೋಜನೆಯನ್ನು ಮೈತ್ರಿ ಸರ್ಕಾರ ಮಾಡಲಿದೆ. ಈಗಾಗಲೇ 0-72 ರವರೆಗೆ ಕೆನಾಲ್ ಅಗಲೀಕರಣ ಮಾಡಲಾಗಿದ್ದು,…
ಮಧುಗಿರಿ: ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜನಪ್ರತಿನಿಧಿಗಳು ಬರಗಾಲವನ್ನು ಎದುರಿಸಲು ವಿಫಲವಾಗಿದ್ದಾರೆ ಹಾಗೂ ಅಧಿಕಾರಿಗಳು ಈ ಮೊದಲೇ ಮುಂಜಾಗ್ರತ ಕ್ರಮ ಕೈಗೊಂಡಿಲ್ಲದೇ ಇರುವುದರಿಂದ ತಾಲ್ಲೂಕಿನಲ್ಲಿ ನೀರಿನ ಹಾಹಾಕಾರ ಹೆಚ್ಚಾಗಿದೆ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಸರಕಾರವಿರಲಿ ಜನರ ಯೋಗ ಕ್ಷೇಮವನ್ನು ವಿಚಾರಿಸುವಂತಹ ಶಾಸಕರಿರಬೇಕು. ಆದರೆ ತಾಲ್ಲೂಕಿನ ಚಿತ್ರಣವೇ ಬೇರೆಯಾಗಿದೆ. ಈ ಹಿಂದೆ ನಾನು ಶಾಸಕನಾಗಿದ್ದಾಗ ನೀರಿನ ಬವಣೆ ಅಷ್ಟಾಗಿ ಕಂಡುಬಂದಿರಲಿಲ್ಲ ಕಳೆದ ಬಾರಿಗಿಂತ ಈ ಬಾರಿ ಅವಧಿಗೂ ಮುಂಚೆಯೇ ಹೆಚ್ಚಾಗಿ ಹೇಮಾವತಿ ನೀರು ಹರಿದಿದೆ. ಹೇಮಾವತಿ ನೀರನ್ನು ಸಿದ್ದಾಪುರ ಕೆರೆಗೆ ಹರಿಸಿ ಅಲ್ಲಿಂದ ಬಿಜವರದ ಕೆರೆಗೆ ನೀರು ಹರಿಸಲಾಗಿತ್ತು ಆದರೂ ಈಗ ನೀರಿನ ಬವಣೆ ಹೆಚ್ಚಾಗಿ ಕಂಡು ಬರುತ್ತಿದೆ ಎಂದರು. ಲೋಕಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಜಿಪಂ-ತಾಪಂ ಚುನಾವಣೆ ಎದುರಾಗಲಿದ್ದು ನನ್ನ ಕ್ಷೇತ್ರದಲ್ಲಿನ…
ತುಮಕೂರು: ಜಿಲ್ಲೆಗೆ ದೇವೇಗೌಡರು ಹೇಮಾವತಿ ನೀರು ಕೊಡುತ್ತಿಲ್ಲ ಎಂಬ ವಿರೋಧಿಗಳ ಹೇಳಿಕೆಯಲ್ಲಿ ಸತ್ವವಿಲ್ಲ. ಮನಸ್ಸಿಗೆ ಬಂದಂತೆ ಪ್ರಚಾರ ಮಾಡುವವರನ್ನು ಸಮಾಧಾನಪಡಿಸಲು ಆಗುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು. ತುಮಕೂರಿಗೆ ಬರಬೇಕಾದ ನೀರನ್ನು ದೇವೇಗೌಡರು ಹಿಡಿದಿಟ್ಟುಕೊಳ್ಳುತ್ತಿದ್ದಾರೆ ಎಂಬ ಕೆಲವರ ಹೇಳಿಕೆಗೆ ನಾನು ಹೆಚ್ಚು ಮಹತ್ವ ಕೊಡುವುದಿಲ್ಲ. ನೀರಾವರಿ ವಿಷಯದ ಬಗ್ಗೆ ಮಾತನಾಡುವವರು ತಿಳಿದುಕೊಂಡು ಮಾತನಾಡಬೇಕು. ಪ್ರಚಾರಕ್ಕಾಗಿ ಹೇಳಿಕೆ ನೀಡಿದರೂ ಅದರಲ್ಲಿ ಸತ್ವ ಇರಬೇಕು ಎಂದು ಗುಡುಗಿದರು.ನಗರದಲ್ಲಿ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿಗೆ ನನ್ನ ಮೊದಲ ಆದ್ಯತೆ, ಜಿಲ್ಲೆಯ ಹಳ್ಳಿಗಳಿಗೆ ನೀರು ಒದಗಿಸಲು ಹೆಚ್ಚು ಆಸಕ್ತಿ ವಹಿಸಬೇಕು. ಇದಕ್ಕಾಗಿ ನಾನು ಶ್ರಮಿಸುತ್ತಾ ಬಂದಿದ್ದೇನೆ ಎಂದರು. ಇಂದಿರಾಗಾಂಧಿ ಅವರು ಪ್ರಧಾನಿಯಾಗಿದ್ದಾಗ ನಾನು ರಾಜ್ಯದಲ್ಲಿ ನೀರಾವರಿ ಮಂತ್ರಿಯಾಗಿದ್ದೆ. ಆಗ ನೀರಿನ ಬಳಕೆ ಹಾಗೂ ನದಿ ಜೋಡಣೆ ಬಗ್ಗೆ ಒಂದು ಸಮಿತಿಯನ್ನು ರಚಿಸಿದ್ದು, ಅದರ ಅಧ್ಯಕ್ಷನಾಗಿ ನಾನು ಕಾರ್ಯನಿರ್ವಹಿಸಿದ್ದೆ.…
ತುಮಕೂರು: ಹೇಮಾವತಿ ನೀರಿನ ವಿಚಾರದಲ್ಲಿ ತುಮಕೂರಿನ ರೈತರಿಗೆ ವಂಚಿಸಿರುವವರು ಯಾವ ನೈತಿಕತೆಯಲ್ಲಿ ಇಂದು ತುಮಕೂರು ಜನತೆಯ ಮುಂದೆ ಮತ ಯಾಚಿಸುತ್ತಿದ್ದಾರೆ. ಒಂದು ವೇಳೆ ತುಮಕೂರು ಜನತೆ ದೇವೇಗೌಡರನ್ನು ಬೆಂಬಲಿಸಿದರೆ ತುಮಕೂರು ಜಿಲ್ಲೆಯನ್ನು ಮರಳುಗಾಡು ಮಾಡುತ್ತಾರೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಹೇಳಿದರು. ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಪಕ್ಷದ ಮುಖಂಡರುಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು ದೇವೇಗೌಡರ ಕುಟುಂಬ ಹೇಮಾವತಿ ನೀರಿನ ವಿಚಾರದಲ್ಲಿ ತುಮಕೂರಿನ ರೈತರ ಕಣ್ಣಲ್ಲಿ ರಕ್ತ ಸುರಿಸಿದ್ದಾರೆ, ಹೇಮಾವತಿ ನಾಲೆಗೆ ಮಣ್ಣು ಸುರಿದು ನೀರನ್ನು ತಡೆದಿರುವುದನ್ನು ನಮ್ಮ ತುಮಕೂರು ಜನತೆ ಮರೆತಿಲ್ಲ, ಈ ಚುನಾವಣೆ ಸ್ವಾಭಿಮಾನದ ಪ್ರಶ್ನೆಯಾಗಿದ್ದು ತುಮಕೂರಿನ ಮತದಾರರು ಪ್ರಜ್ನಾವಂತರಿದ್ದು ಸರಿಯಾದ ಆಯ್ಕೆ ಕೈಗೊಳ್ಳುತ್ತಾರೆ ಎನ್ನುವ ನಂಬಿಕೆಯಿದೆ ಎಂದರು. ಲೋಕಸಭೆಗೆ ನಾನು ನಾಲ್ಕುಬಾರಿ ಸಂಸದನಾಗಿ ಆಯ್ಕೆಯಾಗಿದ್ದೇನೆ ಜಿಲ್ಲೆಗೆ ನಾನು ಮಾಡಿರುವ ಕೆಲಸಗಳನ್ನು ಶ್ವೇತಪತ್ರದ ಮೂಲಕ ಜನರಿಗೆ ತಿಳಿಸುತ್ತೇನೆ, ರಾಷ್ಟ ನಿರ್ಮಾಣಕ್ಕೆ…
ತುಮಕೂರು: ರಸ್ತೆ ಪಕ್ಕ ನಿಲ್ಲಿಸಿದ್ದ ಕಾರಿನ ಗಾಜು ಹೊಡೆದ ಕಳ್ಳರು ಕಾರಿನಲ್ಲಿದ್ದ ಕ್ಯಾಮೆರಾ, ಹಾರ್ಡ್ ಡಿಸ್ಕ್ ಹಾಗೂ 49 ಸಾವಿರ ರೂ. ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಇಲ್ಲಿನ ಎಂ.ಜಿ. ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ಕೋರಾ ಹೋಬಳಿಯ ಕೋಡಿಹಳ್ಳಿ ವಾಸಿ ರಾಜಣ್ಣ ಎಂಬುವರು ತುಮಕೂರಿನ ಎಂ.ಜಿ. ರಸ್ತೆಯಲ್ಲಿರುವ ಎಸ್‍ಬಿಐ ಬ್ಯಾಂಕ್‍ಗೆ ಹಣ ಕಟ್ಟಲು ಹೋದಾಗ ಕಾರಿನ ಹಿಂದಿನ ಬಾಗಿಲ ಗಾಜು ಹೊಡೆದಿರುವ ಕಳ್ಳರು ಕಾರಿನಲ್ಲಿದ್ದ ಕ್ಯಾಮೆರಾ, ನಗದು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ರಾಜಣ್ಣ ಪೊಲೀಸ್ ರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ತುಮಕೂರು ನಗರ ಠಾಣೆ ಪೊಲೀಸ್ ರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ತುಮಕೂರು: ಮಾಜಿ ಪ್ರಧಾನಿ, ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್ ಡಿ ದೇವೇಗೌಡ ಹಾಗು ಗ್ರಾಮಾಂತರ ಶಾಸಕ ಡಿ.ಸಿ.ಗೌರೀಶಂಕರ್ ವಿರುದ್ದ ಅವಹೇಳನಕಾರಿ ಮಾತನಾಡಿದ್ದ ಮಾಜಿ ಶಾಸಕ ಸುರೇಶ್ ಗೌಡರ ಉದ್ದಟತನದ ನಡವಳಿಕೆ ಖಂಡಿಸಿ ಗ್ರಾಮಾಂತರ ಭಾಗದ ಸಾವಿರಾರು ಕಾರ್ಯಕರ್ತರು ಗ್ರಾಮಾಂತರ ಕ್ಷೇತ್ರದ ನಾಗವಲ್ಲಿಯಲ್ಲಿ ಭಾನುವಾರ ಬೃಹತ್ ಮೌನ ಪ್ರತಿಭಟನೆ ನಡೆಸಿದರು. ನಾಗವಲ್ಲಿ ಸರ್ಕಲ್‍ನಲ್ಲಿ ಜಮಾಯಿಸಿದ ಸಾವಿರಾರು ಕಾರ್ಯಕರ್ತರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ, ಶಾಸಕ ಡಿ ಸಿ ಗೌರೀಶಂಕರ್ ಹಾಗು ಜೆಡಿಎಸ್ ಪಕ್ಷದ ಪರವಾಗಿ ಘೋಷಣೆ ಕೂಗಿದರು, ನಡುರಸ್ತೆಯಲ್ಲೇ ಕುಳಿತು ಜೆಡಿಎಸ್ ಪಕ್ಷದ ವರಿಷ್ಟರು ಹಾ ಶಾಸಕ ಡಿ ಸಿ ಗೌರೀಶಂಕರ್ ಮತ್ತು ಅವರ ಕುಟುಂಬದ ವಿರುದ್ದ ಅವಹೇಳನಕಾರಿ ಮಾತನಾಡಿರುವ ಮಾಜಿ ಶಾಸಕ ಸುರೇಶ್ ಗೌಡ ಬಹಿರಂಗವಾಗಿ ಹೇಳಿಕೆ ವಾಪಾಸು ಪಡೆಯುವಂತೆ ಆಗ್ರಹಿಸಿದರು. ಪ್ರತಿಭಟನಾನಿರತರನ್ನುದ್ದೇಶಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಿರೇಹಳ್ಳಿಮಹೇಶ್ ಮಾತನಾಡಿ ಮಾಜಿ…
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರ ಸ್ಪರ್ಧೆಯಿಂದ ರಾಷ್ಟ್ರ ರಾಜಕಾರಣದ ಕೆಂಗಣ್ಣಿಗೆ ಗುರಿಯಾಗಿತ್ತು. ತಮ್ಮ ಇಳಿ ವಯಸ್ಸಿನಲ್ಲಿ ಮೊಮ್ಮಕ್ಕಳಿಬ್ಬರನ್ನು ಕಣಕ್ಕಿಳಿಸಿ, ತನ್ನ ಸ್ಪರ್ಧೆ ಬಯಸಿ ತುಮಕೂರಿಗೆ ಅಡಿಯಿಟ್ಟ ದೇವೇಗೌಡರು ತನ್ನ ಕೊನೆಯ ಚುನಾವಣೆ ಎಂದಿದ್ದರಾದರೂ ಹಾಲಿ ಸಂಸದ ಮುದ್ದಹನುಮೇಗೌಡರ ಬೆಂಬಲಿಗರ ಆಕ್ರೋಷ ದೇವೇಗೌಡರ ನಿದ್ದೆ ಕೆಡಿಸಿತ್ತು. ದೇವೇಗೌಡರು ಜಾತ್ಯಾತೀತ ಜನತಾದಳದ ಪರಮೋಚ್ಚ ನಾಯಕರಾಗಿದ್ದರೂ ತುಮಕೂರು ಜಿಲ್ಲೆಯ ರಾಜಕಾರಣದ ವ್ಯಾಪ್ತಿಗೆ ಗೌಡರ ಪಾದಾರ್ಪಣೆಯನ್ನ ವ್ಯಾಪಕವಾಗಿ ವಿರೋಧಿಸಿದ್ದ ಇಲ್ಲಿನ ಒಕ್ಕಲಿಗ ಸಮುದಾಯವು ಸೇರಿದಂತೆ ಇತರರು ಯಾರೂ ಒಪ್ಪಿಕೊಂಡಿರಲಿಲ್ಲ. ಹಾಗಾಗಿ ಟಿಕೆಟ್ ವಂಚಿತ ಹಾಲಿ ಸಂಸದ ಮುದ್ದಹನುಮೇಗೌಡರ ಪರವಾಗಿ ದೇವೇಗೌಡರ ವಿರೋಧಿ ಬಣ ತೊಡೆತಟ್ಟಿ ನಿಂತಿತ್ತು. ಮುದ್ದಹನುಮೇಗೌಡರಿಗೆ ಬೆಂಬಲವಾಗಿ ನಿಂತಿತ್ತು. ಮುದ್ದಹನುಮೇಗೌqರ ಬಂಡಾಯ ಸ್ಪರ್ಧೆ ಗೌಡರ ಕುಟುಂಬವಲ್ಲದೇ ಇಡೀ ಜೆಡಿಎಸ್ ಪಕ್ಷದ ನಾಯಕರ ನಿದ್ದೆಗೆಡಿಸಿತ್ತು. ಒಕ್ಕಲಿಗರ ಮತಗಳು ಇಬ್ಭಾಗವಾಗಿ ದೇವೇಗೌಡರ ವಿರೋಧಿ ಮತಗಳು ಮುದ್ದಹನುಮೇಗೌಡರ ಕಡೆ ವಾಲುತ್ತವೆ ಎಂ¨ ಭೀತಿಯಿಂದ ಮುದ್ದಹನುಮೇಗೌಡರ ಉಮೇದುವಾರಿಕೆಯನ್ನು ಹಿಂಪಡೆಯುವಂತೆ ರಾಜಿ-ಸಂಧಾನಗಳು ನಡೆಯುತ್ತಲೇ ಇದ್ದವು. ಆರಂಭದಲ್ಲಿ…
ಚಿಕ್ಕನಾಯಕನಹಳ್ಳಿ : ಶಾಸಕರಾಗಿರುವ ಮಾಧುಸ್ವಾಮಿರವರು ಮೂರು ತಿಂಗಳಲ್ಲಿ ತಾಲ್ಲೂಕಿಗೆ ನೀರು ಹರಿಸುತ್ತೇನೆ ಎಂದು ಹೇಳಿದ್ದರು ಒಂದು ವರ್ಷವಾಯಿತು ತಾಲ್ಲೂಕಿನಲ್ಲಿ ಇದುವರೆವಿಗೂ ಯಾವುದೇ ಅಭಿವೃದ್ದಿ ಮಾಡಿಲ್ಲ, ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ತಂದಂತಹ ಯೋಜನೆಗಳಿಗೆ ಗುದ್ದಲಿ ಪೂಜೆ ನೆರವೇರಿಸುತ್ತಿರುವುದೇ ಅವರ ಅಭಿವೃದ್ದಿಯಾಗಿದೆ ಎಂದು ಮಾಜಿ ಶಾಸಕ ಸಿ.ಬಿ.ಸುರೇಶ್‍ಬಾಬು ಆರೋಪಿಸಿದರು.\ ಪಟ್ಟಣದ ತಮ್ಮ ಗೃಹ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಅಭಿವೃದ್ದಿಯ ಕೆಲವು ಕಾಮಗಾರಿಗಳು ಶಂಕುಸ್ಥಾಪನೆ ಮಾಡಿದ್ದರೂ ಪುನಃ ಶಂಕಸ್ಥಾಪನೆ ಮಾಡಿ ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ಶಾಸಕರು ಪ್ರಯತ್ನಿಸುತ್ತಿದ್ದಾರೆ, ನನ್ನ ಅಭಿವೃದ್ದಿ ಕಾರ್ಯಗಳನ್ನು ತಮ್ಮ ಅಭಿವೃದ್ದಿ ಕಾರ್ಯಗಳೆಂದು ಬೆಂಬಲಿಸಲು ಶಾಸಕರು ಹೊರಟಿದ್ದಾರೆ ನಾನು ಒಂದು ವರ್ಷ ಏನು ಮಾತನಾಡಬಾರದು ಎಂದು ಸುಮ್ಮನಿದ್ದೆ ಎಂದ ಅವರು, ತಾಲ್ಲೂಕಿನ ಅಭಿವೃದ್ದಿಗಾಗಿ ಮುಖ್ಯಮಂತ್ರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ನಮ್ಮ ಕ್ಷೇತ್ರದ ಅಭಿವೃದ್ದಿ ಕಾಮಗಾರಿಗಳಿಗೆ ನನ್ನ ಬೆಂಬಲವಿದೆ, ಈಗಾಗಲೇ ತುಮಕೂರು ಜಿಲ್ಲೆಗೆ 5ಸಾವಿರ ಕೋಟಿ ಅನುದಾನವನ್ನು…
ಮೈಸೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬೈಕ್ ನಲ್ಲಿ ಮೂವರು ವಿದ್ಯಾರ್ಥಿಗಳು ತೆರಳುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ಮಾಕನಪುರ ಮತ್ತು ಕಸವನಹಳ್ಳಿ ಸಮೀಪ ಈ ಘಟನೆ ನಡೆದಿದೆ. ಹಗಿನವಾಳು ಗ್ರಾಮದಿಂದ ಪರೀಕ್ಷೆ ಬರೆಯಲು ಕಸುವಿನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ನಂಜನಗೂಡು ತಾಲೂಕಿನ ಹಗಿನವಾಳು ಗ್ರಾಮದ ನಿವಾಸಿ ಮಣಿಕಂಠ (16) ಮೃತ ವಿದ್ಯಾರ್ಥಿ. ಪರೀಕ್ಷೆ ಬರೆಯಲು ದ್ವಿಚಕ್ರ ವಾಹನದಲ್ಲಿ ಮೂವರು ಸಹಪಾಠಿಗಳು ತೆರಳುತ್ತಿದ್ದರು. ಈ ವೇಳೆ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ. ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಮಣಿಕಂಠ ಸಾವಿಗೀಡಾದರೆ, ದರ್ಶನ್ (16) ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ತುರ್ತು ನಿಗಾ…