Author: News Desk Benkiyabale

ಹುಬ್ಬಳ್ಳಿ:       ನಿರ್ಮಾಣ ಹಂತದ ಕಟ್ಟಡದ ಗೋಡೆ ಮನೆಯ ಮೇಲೆ‌ ಬಿದ್ದು ಮನೆಯೊಂದು ಜಖಂಗೊಂಡ ಘಟನೆ ಹುಬ್ಬಳ್ಳಿ ನಗರದ ಕೇಶ್ವಾಪುರದಲ್ಲಿ‌ ನಡೆದಿದೆ.       ಮಹ್ಮದ್ ಅಲಿ ಮಕಾಂದಾರ ಎನ್ನುವವರಿಗೆ ಸೇರಿದ ಮನೆಯೇ ಜಖಂಗೊಂಡಿದೆ. ಪಕ್ಕದ ಮನೆಯ ನಿರ್ಮಾಣ ಹಂತದ ಗೋಡೆ ಮಹ್ಮದ್ ಅಲಿಯವರ ಮನೆ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇರದಿದಕ್ಕೆ ಭಾರಿ ಅನಾಹುತ ತಪ್ಪಿದೆ.       ಆದ್ರೆ ಮನೆಯಲ್ಲಿ ಮೇಲ್ಛಾವಣಿ ಸೇರಿದಂತೆ ಮನೆಯಲ್ಲಿನ ವಸ್ತುಗಳಿಗೆ ಹಾನಿಯಾಗಿವೆ. ಬಿಲ್ಡರ್ ರಾಜು ಹಿರೇಮಠ ಅವರ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಹಾನಿಗೊಳದಗಾದ ಮಹ್ಮದ್ ಅಲಿ ಆರೋಪಿಸಿದ್ದಾರೆ. ಸ್ಥಳಕ್ಕೆ ಕೇಶ್ವಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.       ಧಾರವಾಡ ಕಟ್ಟಡ ದುರಂತ ಪ್ರಕರಣ ಮಾಸುವ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ನಿರ್ಮಾಣ‌ ಹಂತದ ಕಟ್ಟಡ ಕುಸಿದಿದೆ.

Read More

ತುಮಕೂರು:       ರಂಗ ಕಲೆ ನಶಿಸುವ ಹಾದಿಯತ್ತ ಮುಖ ಮಾಡಿದ್ದು, ಪ್ರತಿಯೊಬ್ಬರು ರಂಗ ಕಲೆಯನ್ನು ಉಳಿಸಿ, ಬೆಳಸಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ.ಕೆ.ಎನ್.ಗಂಗಾನಾಯಕ್ ಹೇಳಿದರು       ನಗರದ ಸಾಹಿತ್ಯ ಪರಿಷತ್ ಭವನದಲ್ಲಿ ನಾಟಕಮನೆ ತುಮಕೂರು ವತಿಯಿಂದ ಹೇಮಾದ್ರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಗುರುಶ್ರೀ ಕಾಲೇಜ್ ಆಫ್ ಕಾಮರ್ಸ್ ಅಂಡ್ ಸೋಷಿಯಲ್ ವರ್ಕ್, ರಾಜ್ಯ ಯುವ ಬರಹಗಾರರ ಒಕ್ಕೂಟ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ರಂಗಭೂಮಿ ದಿನಾಚರಣೆಯನ್ನು ನಗಾರಿ ಭಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯುವಜನತೆ ಸಿನಿಮಾ ಗೀಳಿನಲ್ಲಿ ಸಿಲುಕಿ ಒದ್ದಾಡುತ್ತಿದ್ದು, ಇದರಿಂದ ಹೊರಬಂದು ಪಠ್ಯೇತರ ಚಟುವಟಿಕೆಗಳಾದ ನಾಟಕ, ರಂಗಕಲೆ, ಮತ್ತಿತರೆ ಸಾಂಸ್ಕೃತಿಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು. ಕಲೆಗೆ ಮೂಲ ಗ್ರೀಕ್ ದೇಶ, ಸಾಹಿತ್ಯ, ರಂಗಕಲೆ, ನಾಟಕ ಹೀಗೆ ಬೇರೆ ಬೇರೆ ಕಲೆಗಳೂ ಸಹ ಗ್ರೀಕ್‍ನಲ್ಲೇ ಮೊದಲು ಹುಟ್ಟಿದ್ದು,…

Read More

ತುಮಕೂರು:       ರಾಜ್ಯದಲ್ಲಿ ಏ. 18 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹಾಗೂ ಮಾಜಿ ಸಂಸದ ಜಿ.ಎಸ್. ಬಸವರಾಜು ಇಂದು ಮಧ್ಯಾಹ್ನ ತಮ್ಮ ಉಮೇದುವಾರಿಕೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಅವರಿಗೆ ಸಲ್ಲಿಸಿದರು.       ನಗರದ ಕಾಲ್ಟ್ಯಾಕ್ಸ್‍ನಲ್ಲಿರುವ ಶ್ರೀ ಸಿದ್ದಿವಿನಾಯಕ ದೇವಾಲಯಕ್ಕೆ ಮಾಜಿ ಸಚಿವರಾದ ವಿ. ಸೋಮಣ್ಣ, ಮಾಜಿ ಶಾಸಕ ಬಿ.ಸುರೇಶ್‍ಗೌಡ, ಸೊಗಡು ಶಿವಣ್ಣ, ಶಾಸಕರಾದ ಜೆ.ಸಿ. ಮಾಧುಸ್ವಾಮಿ, ಜಿ.ಬಿ. ಜ್ಯೋತಿಗಣೇಶ್, ಬಿ.ಸಿ. ನಾಗೇಶ್ ಸೇರಿದಂತೆ ಕಾರ್ಯಕರ್ತರೊಂದಿಗೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ಸಿದ್ದಿವಿನಾಯಕನಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.       ನಂತರ ಸಿದ್ದಿವಿನಾಯಕ ದೇವಾಲಯದಲ್ಲಿ ವಿವಿಧ ಜಾನಪದ ಕಲಾ ತಂಡಗಳ ಆಕರ್ಷಕ ಪ್ರದರ್ಶನದೊಂದಿಗೆ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು ಹಾಗೂ ಅಪಾರ ಬೆಂಬಲಿಗರೊಂದಿಗೆ ಬೃಹತ್ ಮಟ್ಟದಲ್ಲಿ ಟೌನ್‍ಹಾಲ್ ವೃತ್ತ, ಎಂ.ಜಿ. ರಸ್ತೆ ಮುಖೇನ…

Read More

ತುರುವೇಕೆರೆ :       ತಾಲೂಕಿನ ಮಾಜಿ ಶಾಸಕ ಹೆಚ್.ಬಿ.ನಂಜೇಗೌಡ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮನೆಗೆ ವಿಧಾನ ಪರಿಷತ್ ಸದಸ್ಯ ಬೆಮಲ್ ಕಾಂತರಾಜ್ ರವರೊಂದಿಗೆ ತೆರಳಿದ ಮಾಜಿ ಶಾಸಕ ಹೆಚ್.ಬಿ.ನಂಜೇಗೌಡ ತಮ್ಮ ಮಾತೃ ಪಕ್ಷ ಜೆಡಿಎಸ್ ಗೆ ಸೇರ್ಪಡೆಗೊಂಡರು.        ತಮ್ಮ ರಾಜಕೀಯ ಗುರುಗಳಾಗಿರುವ ದೇವೇಗೌಡರೇ ತಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಅವರ ಗೆಲುವಿಗೆ ಶ್ರಮಿಸುವುದು ತಮ್ಮ ಕರ್ತವ್ಯವಾಗಿದೆ. ಜಿಲ್ಲೆಯ ಸರ್ವತೋಮುಖ ಅಭಿವೃಧ್ಧಿಗೆ ದೇವೇಗೌಡರು ಶ್ರಮಿಸುವರು. ಅವರ ಗೆಲುವು ನೂರಕ್ಕೆ ನೂರರಷ್ಟು ಖಚಿತ ಎಂದು ಹೇಳಿದ ನಂಜೇಗೌಡರು ತಾಲೂಕಿನಲ್ಲಿ ದೇವೇಗೌಡರಿಗೆ ನಿರೀಕ್ಷೆಗೂ ಮೀರಿದ ಮತಗಳು ಲಭಿಸುವುವು. ಅವರು ಸ್ಪರ್ಧಿಸುತ್ತಿರುವುದು ಜೆಡಿಎಸ್ ಕಾರ್ಯಕರ್ತರಿಗೆ ರೋಮಾಂಚನವನ್ನು ಉಂಟು ಮಾಡಿದೆ. ಮುಂಬರುವ ದಿನಗಳಲ್ಲಿ ಬೆಮಲ್ ಕಾಂತರಾಜ್ ಹಾಗೂ ಇನ್ನಿತರ ಮುಖಂಡರ ನೇತೃತ್ವದಲ್ಲಿ ಜೆಡಿಎಸ್ ನ್ನು ಭದ್ರಗೊಳಿಸಲಾಗುವುದು ಎಂದು ಹೆಚ್.ಬಿ.ನಂಜೇಗೌಡ ಹೇಳಿದರು.       ಆಶಾಭಾವನೆ – ಜಿಲ್ಲೆಯ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಮಾಜಿ ಪ್ರಧಾನಿ ದೇವೇಗೌಡರ…

Read More

ತುಮಕೂರು:       ಕಾಂಗ್ರೆಸ್ ಪಕ್ಷದಲ್ಲಿ ಹಾಲಿ ಸಂಸದರಿಗೆಲ್ಲರಿಗೂ ಸೀಟು ನೀಡಿ ಮುದ್ದಹನುಮೇಗೌಡರೊಬ್ಬರಿಗೆ ಟಿಕೆಟ್ ಕೈ ತಪ್ಪಿರುವುದು ನನಗೂ ನೋವು ತಂದಿದೆ. ಆದರೆ ದೋಸ್ತಿ ಪಕ್ಷಗಳ ಕ್ಷೇತ್ರ ಹಂಚಿಕೆಯಲ್ಲಿ ತುಮಕೂರು ಜೆಡಿಎಸ್ ಪಕ್ಷಕ್ಕೆ ದೊರೆತಿರುವುದರಿಂದ ಉಭಯ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರ ಒತ್ತಾಯದ ಮೇರೆಗೆ ಈ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದರು.       ನಗರದಲ್ಲಿ ನಿನ್ನೆ ಸಂಜೆ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕೇವಲ ತುಮಕೂರು ಕ್ಷೇತ್ರಕ್ಕೆ ಮಾತ್ರ ಸೀಮಿತವಲ್ಲ. ರಾಜ್ಯದ 28 ಕ್ಷೇತ್ರಗಳಿಗೂ ಹೋಗಿ ಪ್ರಚಾರ ಮಾಡಬೇಕಾಗಿದೆ. 28 ಕ್ಷೇತ್ರಗಳಲ್ಲೂ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.       ರಾಜ್ಯದ 28 ಕ್ಷೇತ್ರಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಅವರು ಹೇಳಿದರು. ನಾನು 29 ವರ್ಷಗಳ ಕಾಲ ಎಂಪಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದೇನೆ. ಹಾಗಾಗಿ ನಾನು ಚುನಾವಣೆಗೆ…

Read More

ತುಮಕೂರು :       ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ದೇವೇಗೌಡರಿಗೆ ನೀಡಿದ ಹಿನ್ನೆಯಲ್ಲಿ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.       ಹೌದು, ಇತ್ತೀಚೆಗೆ ಪರಮೇಶ್ವರ್ ಬಲಗೈ ಬಂಟ ಬಲರಾಮಯ್ಯ ಮನೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಪಕ್ಷದ ವ್ಯಕ್ತಿಗೆ ಟಿಕೆಟ್ ನೀಡಬೇಕೆಂದು ರೊಚ್ಚಿಗೆದ್ದಿದ್ದರು, ಹಾಗೂ ಮುದ್ದಹನುಮೇಗೌಡರಿಗೆ ಯಾವುದೇ ಕಾರಣಕ್ಕೂ ವಾಪಾಸ್ ತೆಗೆಯಬಾರದೆಂಬ ಬೇಡಿಕೆಯನ್ನೂ ಸಹ ಕಾರ್ಯಕರ್ತರು ಇಟ್ಟಿದ್ದರು. ಇದಾದ ಬಳಿಕ ಮುದ್ದಹನುಮೇಗೌಡರಿಗೆ ಬಿಫಾರಂ ನೀಡದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಾವಿರಾರು ಬೆಂಬಲಿಗರೊಂದಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.       ಮೈತ್ರಿ ಅಭ್ಯರ್ಥಿಯಾದ ದೇವೇಗೌಡರ ಉಮೇದುವಾರಿಕೆ ಸಲ್ಲಿಸಲು ಕಾಂಗ್ರೆಸ್ ಕಾರ್ಯಕರ್ತರ ಕೊರತೆ ಎದ್ದು ಕಾಣುತ್ತಿತ್ತು. ಅದೇ ಮುದ್ದಹನುಮೇಗೌಡರ ಮೆರವಣಿಗೆಯಲ್ಲಿ ಕೊರಟಗೆರೆ ಕ್ಷೇತ್ರದ ಸಾವಿರಾರು ಮುಖಂಡರು ಆಗಮಿಸುವ ಮೂಲಕ ಪರಮೇಶ್ವರ್ ರವರಿಗೆ ನಾವು ಪಕ್ಷ ಬಿಟ್ಟು ಬೇರೆಯವರಿಗೆ ಮತ ನೀಡುವುದಿಲ್ಲಾ ಎಂಬ ಸಂದೇಶ ನೀಡಿದಂತಾಗಿದೆ. ಇದೆಲ್ಲವನ್ನೂ ಗಮನಿಸಿದಾಗ ನಿಷ್ಠಾವಂತ ಕಾರ್ಯಕರ್ತನ ಮನಸ್ಸಲ್ಲಿ ಪರಮೇಶ್ವರ್ ಮರೆಯಾಗುತ್ತಿದ್ದಾರಾ..? ಅಥವಾ ಅವರೇ ಪಕ್ಷದಿಂದ…

Read More

ತುಮಕೂರು:      ತುಮಕೂರು ಲೋಕಸಭಾ ಕ್ಷೇತ್ರ ರಾಷ್ಟ್ರ ರಾಜಕಾರಣದಲ್ಲಿ ಗಮನಸೆಳೆಯುತ್ತಿದೆ. ಕಾರಣ ಜೆಡಿಎಸ್ ನ ವರಿಷ್ಠ ಹೆಚ್.ಡಿ.ದೇವೆಗೌಡರು ತುಮಕೂರಿನಿಂದ ಆಯ್ಕೆ ಬಯಸಿ ಸ್ಪರ್ಧೆ ಗಿಳಿದಿರುವುದು ಒಕ್ಕಲಿಗರ ಪರಮೋಚ್ಛ ನಾಯಕನೆಂದು ಬಿಂಬಿತವಾಗಿರುವ ದೇವೆಗೌಡರು ತನ್ನ ಕುಟುಂಬ ರಾಜಕಾರಣದಿಂದಲೇ ಹೆಸರುವಾಸಿಯಾದವರು.       ತನ್ನ ಮೊಮ್ಮಕ್ಕಳಿಗಾಗಿ ಕ್ಷೇತ್ರ ಬಿಟ್ಟು ತುಮಕೂರಿನಲ್ಲಿ ಸ್ಪರ್ಧೆಗಿಳಿದಿರುವ ದೊಡ್ಡ ಗೌಡರು ಸ್ಥಳೀಯ ಜೆಡಿಎಸ್ ನಾಯಕರ ಹಾಗೂ ಮುಖಂಡರ ಆಂತರಿಕ ಕ್ರೋದಾಗ್ನಿಗೆ ತುತ್ತಾಗಿಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಾರಣ ಗೌಡರು ಇಲ್ಲಿ ಆಯ್ಕೆಯಾಗಿಬಿಟ್ಟರೆ ಹಾಸನದ ರಾಜಕಾರಣದ ರೀತಿಯಲ್ಲಿ ಹಿಡಿತ ಸಾಧಿಸುತ್ತಾರೆ, ಸ್ಥಳೀಯ ನಾಯಕರಿಗೆ ಕವಡೆಕಾಸಿನ ಕಿಮ್ಮತ್ತಿರುವುದಿಲ್ಲ ಎನ್ನುವುದು ಕೆಲವರ ಅಭಿಪ್ರಾಯ ದೇವೆಗೌಡರ ಸ್ಪರ್ಧೆಯಿಂದ ಬೇಸತ್ತಿರುವ ಕಾಂಗ್ರೆಸ್ ಮುಖಂಡರು ತಮ್ಮ ಪಕ್ಷದ ಉಳಿವಿಗಾಗಿ ಹಾಗೂ ತಮ್ಮ ಮುಂದಿನ ರಾಜಕೀಯ ಅಸ್ತಿತ್ವಕ್ಕಾಗಿ ಚಿಂತಸುವ ಅನಿವಾರ್ಯತೆ ಎದುರಾಗಿದೆ.       ರಾಜ್ಯ ಕಾಂಗ್ರೆಸ್ ನಾಯಕರ ಮೈತ್ರಿ ಸ್ಥಳೀಯ ಮುಖಂಡರ ಆಂತರಿಕ ವೈಶಮ್ಯಗಳನ್ನು ಶಮನ ಮಾಡಲು ಸಾಧ್ಯವಿಲ್ಲ ಆದ್ದರಿಂದ ಮೇಲ್ನೋಟಕ್ಕೆ ಮಾತ್ರ…

Read More

  ತುಮಕೂರು:       ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರ ಸಲ್ಲಿಕೆ ಕಾರ್ಯ ಭರದಿಂದ ಸಾಗಿ ಇಡೀ ದೇಶದ ಜನತೆ ತಿರುಗಿ ನೊಡುವ ರೀತಿಯಲ್ಲಿ ಗಮನ ಸೆಳೆದಿರುವುದು ಹೆಚ್.ಡಿ.ದೇವೆಗೌಡರು ಕಣಕ್ಕಿಳಿದಿರುವುದು ವಿಶೇಷ. ಆದರೆ, ವಿಶೇಷವೆಂದರೆ ದೊಡ್ಡ ಗೌಡರ ನಾಮಪತ್ರ ಸಲ್ಲಿಕೆಗೂ ಮುನ್ನ ಖಾಲಿ ಕೊಡಗಳ ಸ್ವಾಗತ ‘ಗೋ ಬ್ಯಾಕ್ ದೇವೇಗೌಡ’ ಎಂಬ ಪದಗಳು ಗೌಡರನ್ನ ಪೇಚಿಗೆ ಸಿಲುಕಿಸಿತ್ತು.       ಹೆಚ್.ದೇವೇಗೌಡ ಅವರು ಇಂದು ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜ್ಯೋತಿಷಿಗಳ ಸಲಹೆಯಂತೆ 2.11ಕ್ಕೆ ಸರಿಯಾಗಿ ದೇವೇಗೌಡರು, ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.       ಹೆಚ್.ಡಿ.ದೇವೇಗೌಡರಿಗೆ ಡಿಸಿಎಂ ಡಾ.ಜಿ ಪರಮೇಶ್ವರ್ ಹಾಗೂ ಮಾಜಿ ಶಾಸಕ ಕೆಕೆ ಷಡಕ್ಷರಿ, ಡಾ||ರಫೀಕ್ ಅಹಮದ್, ರಮೇಶ್ ಬಾಬು ಸಾಥ್ ನೀಡಿದರು.       ನಾಮಪತ್ರ ಸಲ್ಲಿಕೆಗೂ ಮುನ್ನ ತುಮಕೂರಿನ ಸರ್ಕಾರಿ ಕಾಲೇಜು ಮೈದಾನದಿಂದ ಡಿಸಿ ಕಚೇರಿವರೆಗೂ ಹೆಚ್ಡಿಡಿ ತೆರೆದ…

Read More

ತುಮಕೂರು:       ತುಮಕೂರು ಲೋಕಸಭೆ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಸೋಮವಾರ ಮಧ್ಯಾಹ್ನ 2.15 ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಪ್ರಧಾನ ಮಂತ್ರಿ ಎಚ್​.ಡಿ. ದೇವೇಗೌಡ ತಿಳಿಸಿದ್ದಾರೆ.        ಅವರು ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆದರು.        ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತುಮಕೂರಿನಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಇತ್ತು. ಡಿಸಿಎಂ ಜಿ. ಪರಮೇಶ್ವರ್, ಮಾಜಿ‌ ಸಚಿವ ಟಿ.ಬಿ. ಜಯಚಂದ್ರ‌ ಸೇರಿ ಜೆಡಿಎಸ್ ಮುಖಂಡರು ನಾನು ತುಮಕೂರುನಿಂದ ಸ್ಪರ್ಧೆ ಮಾಡುವಂತೆ ತೀರ್ಮಾನ ಮಾಡಿದ್ದಾರೆ. ಪರಮೇಶ್ವರ್​ ಅವರು ಮನೆಗೇ ಬಂದು ನೀವು ತುಮಕೂರಿನಿಂದ ಸ್ಪರ್ಧಿಸಬೇಕು, ನಿಮಗೆ‌ ಬಿಟ್ಟಿರುವ ಸೀಟು ನೀವೆ ನಿಂತು ಕೊಳ್ಳಬೇಕು. ನಾವೆಲ್ಲ ಬೆಂಬಲಿಸುತ್ತೇವೆ ಎಂದಿದ್ದರು ಹಾಗಾಗಿ ನಾಳೆ ನಾಮಪತ್ರ ಸಲ್ಲಿಸುವೆ ಎಂದರು.

Read More

ತುಮಕೂರು:      ತುಮಕೂರು ಲೋಕಸಭಾ ಕ್ಷೇತ್ರ ರಾಷ್ಟ್ರ ರಾಜಕಾರಣದ ಕೆಂಗಣ್ಣಿಗೆ ಗುರಿಯಾಗುವಂತೆ ಕಂಡುಬರುತ್ತಿದೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ತುಮಕೂರು ಸ್ಪರ್ಧಿಸುವ ನಿರ್ಧಾರ ಅಂತಿಮಗೊಂಡಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ  ಹೆಚ್.ಡಿ.ದೇವೇಗೌಡರು ಜೆಡಿಎಸ್ ನ ಪಾಬಲ್ಯ ಅತ್ಯಧಿಕವಾಗಿರುವ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದರೆ, ಅನಾಯಾಸವಾಗಿ ಜಯಗಳಿಸಬಹುದೆಂಬ ಲೆಕ್ಕಾಚಾರದಲ್ಲಿದ್ದಾರೆ.       ಕಳೆದ ಲೋಕಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್ ನ ಸಂಸದ ಎಸ್.ಪಿ.ಮುದ್ದಹನುಮೇಗೌಡರಿಗೆ ಟಾಂಗ್ ನೀಡಿ ಜೆಡಿಎಸ್ ಪಕ್ಷವು ತನ್ನ ವಶಕ್ಕೆ ತುಮಕೂರು ಕ್ಷೇತ್ರವನ್ನ ಪಡೆದುಕೊಂಡಿರುವುದರಿಂದ ಸಂಸದ ಮುದ್ದಹನುಮೇಗೌಡರ ಆಕ್ರೋಶಕ್ಕೂ ಹೊರತಾಗಿಲ್ಲ. ಬೇರೆ ಕ್ಷೇತ್ರಗಳ ರೀತಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನ ಹೊಂದಾಣಿಕೆ ಎರಡೂ ಪಕ್ಷಗಳ ಸ್ಪಷ್ಟ ನಿಲುವು ಒಮ್ಮತವಾಗಿ ಕಂಡುಬರುತ್ತಿಲ್ಲ. ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನರಾಗ ಹೆಚ್ಚಾಗುತ್ತಿದೆ. ಹೇಮಾವತಿ ನೀರನ್ನು ತುಮಕೂರಿಗೆ ಸಮರ್ಪಕವಾಗಿ ಹರಿಸಿಲ್ಲವೆಂಬ ಕೂಗು ಉಲ್ಬಣಗೊಂಡಿದೆ.        ಬಿಜೆಪಿ ಪಕ್ಷದಲ್ಲಿ ಮಾಜಿ ಶಾಸಕ ಬಿ.ಸುರೇಶ ಗೌಡ ಮತ್ತು ಜಿ.ಎಸ್.ಬಸವರಾಜು ರವರ ಹೆಸರು ದೆಹಲಿ ವಲಯ ತಲುಪಿದ್ದು, ಅಲ್ಲಿ…

Read More