ತುಮಕೂರು: ಅಮರ ಶಿಲ್ಪಿ ಜಕಣಾಚಾರಿ ಅವರು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ವಿಶೇಷವಾದ ಕೌಶಲ್ಯವನ್ನು ತಮ್ಮ ಪ್ರತಿಭೆ ಮೂಲಕ ತೋರಿಸಿದ್ದಾರೆ. ಇಂದಿನ ಯುವ ಶಿಲ್ಪಿಗಳಿಗೆ ಅಮರಶಿಲ್ಪಿ ಜಕಣಾಚಾರಿ ಸ್ಫೂರ್ತಿಯಾಗಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಹೇಳಿದರು. ನಗರದ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ವಿಶ್ವ ಕರ್ಮ ಸೇವಾ ಸಮಿತಿ ಸಹಯೋಗದಲ್ಲಿ ಅತ್ಯಂತ ಸರಳವಾಗಿ ಏರ್ಪಡಿಸಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಅಮರಶಿಲ್ಪಿ ಜಕಣಾಚಾರಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿ ಅವರು ಮಾತನಾಡಿದರು. ಶಿಲ್ಪಿಗಳು ದೇಶದ ನಾಗರಿಕತೆಯ ರಾಯಭಾರಿಗಳು. ಶಿಲ್ಪಿಗಳು ಲೋಹದ ಜತೆ, ಮರಗಳ ಜತೆ, ಪ್ರಕೃತಿ ಜತೆ, ಭವಿಷ್ಯಕ್ಕೆ ಬೇಕಾಗಿರುವ ಕುರುಹುಗಳನ್ನು ಬಿಟ್ಟು ಹೋಗುವಂತಹ ಕೆಲಸ ಮಾಡಿ ಸಂಸ್ಕöÈತಿ, ಕಲೆಯನ್ನು ಜೀವಂತವಾಗಿಡುವ ಕೆಲಸವನ್ನು ಮಾಡುತ್ತಾರೆ ಎಂದರು. ತುಮಕೂರು ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ಕೈದಾಳವನ್ನು ಅಮರಶಿಲ್ಪಿ…
Author: News Desk Benkiyabale
ತುಮಕೂರು: ಮತ, ಧರ್ಮ, ಮೌಢ್ಯಗಳ ಅಂಧಶ್ರದ್ಧೆಯನ್ನು ತೊರೆದು ವಿಜ್ಞಾನ ಮತ್ತು ಅಧ್ಯಾತ್ಮದ ಮೊರೆ ಹೋದಾಗ ‘ನಮಗೂ-ಲೋಕಕ್ಕೂ ಕಲ್ಯಾಣವಾಗಲಿದೆ’ ಎಂದು ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿದಾನಂದ ಗೌಡ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಕುವೆಂಪು ಅಧ್ಯಯನ ಪೀಠ ಬುಧವಾರ ಆಯೋಜಿಸಿದ್ದ ಕುವೆಂಪು: ಮಾತು ಮಂಥನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಆತ್ಮಶ್ರೀಗಾಗಿ ವಿಜ್ಞಾನ ಮತಿಗಳಾಗಿ’ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಉತ್ತಮ ಆರೋಗ್ಯದ, ಭಾವನೆಗಳ, ಬುದ್ಧಿಯ ಬೆಸುಗೆಯಲ್ಲಿ ‘ತಾನು ಯಾರು?’ ಎಂಬುದನ್ನು ಅರಿತು ಆತ್ಮದ ಅರಿವು-ಆತ್ಮಶ್ರೀ ಸಾಧಿಸಬೇಕು. ಉತ್ತಮ ಆಲೋಚನೆಗಳನ್ನು, ಭಾವನೆಗಳನ್ನು ಅನುಭವಿಸಬೇಕು. ಅಧ್ಯಯನಶೀಲತೆ, ಏಕಾಗ್ರತೆ, ಸಂಯಮದ ಆತ್ಮಾನುಸಂಧಾನದಲ್ಲಿ ತಪಸ್ವಿಗಳಾಗಬೇಕು ಎಂದು ತಿಳಿಸಿದರು. ಆತ್ಮದ ಸಾರ್ವಭೌಮತ್ವವನ್ನು ಸಾಧಿಸಿದರೆ ಬದುಕು ಗಟ್ಟಿಗೊಳ್ಳುತ್ತದೆ. ಇದರಿಂದ ಆತ್ಮಹತ್ಯೆಗಳ, ಮನಸ್ತಾಪಗಳ ಸಂಖ್ಯೆ ಕ್ಷೀಣಿಸಲಿದೆ. ‘ನಾನು ಯಾರು?’ ಎಂಬ ಆತ್ಮಾವಲೋಕನವಾದರೆ ಪ್ರತ್ಯೇಕತೆಯ ಭಾವ ಕಳಚಿ ಏಕತೆಯ ಬೆಸುಗೆ ಚಿಗುರಿ ಸಮಾನತೆ ಸ್ಪುಟಿಸಲಿದೆ. ವೇದೋಪನಿಷತ್ತುಗಳ ಆಂತರಿಕ ಮಿತಿ ತೊರೆದು ವೈಜ್ಞಾನಿಕ ಮನೋಭಾವದಿಂದ ಎಲ್ಲವನ್ನೂ ಸ್ವೀಕರಿಸಿದರೆ ಪಕ್ಷಪಾತವಿರದ, ವಸ್ತುನಿಷ್ಠತೆಯ ಪ್ರಾಯೋಗಿಕ ಪುರಾವೆಗೆ ಸಾಕ್ಷಿಯಾಗುತ್ತೇವೆ…
ತುಮಕೂರು: ಹಿರಿಯ ಅಂತರರಾಷ್ಟಿçÃಯ ಅಥ್ಲೇಟಿಕ ಕ್ರೀಡಾಪಟು ಟಿ.ಕೆ.ಆನಂದ ಅವರ 77ನೇ ಹುಟ್ಟು ಹಬ್ಬದ ಅಂಗವಾಗಿ ಇಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸನ್ಮಾನ ಮತ್ತು ದಾರಿ ದೀಪ ಚಾರಿಟಬಲ್ ಟ್ರಸ್ಟ್ಗೆ ಸಹಕಾರ ನೀಡಿದ ಹಿರಿಯರನ್ನು ಗೌರವಿಸುವ ಕಾರ್ಯಕ್ರಮ ಮುಂಜಾನೆ ಗೆಳೆಯರ ಬಳಗದಿಂದ ಹಮ್ಮಿಕೊಳ್ಳಲಾಗಿತ್ತು. ಪ್ರೌಢಶಾಲಾ ವಿಧ್ಯಾರ್ಥಿಯಾಗಿದ್ದ ದಿನದಿಂದಲೂ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಹಲವಾರು ರಾಜ್ಯ, ರಾಷ್ಟç ಮತ್ತು ಅಂತರರಾಷ್ಟಿçÃಯ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಪದಕಗಳ ಪಡೆದಿರುವ ಟಿ.ಕೆ. ಆನಂದ, ತಮ್ಮಂತೆಯೇ ಕ್ರೀಡೆ, ಸಾಹಿತ್ಯ, ಸಹಕಾರ, ಸಮಾಜ ಸೇವೆಯಲ್ಲಿ ಸಾಧನೆ ಮಾಡಿದ ಹಿರಿಯ, ಕಿರಿಯ ಕ್ರೀಡಾಪಟುಗಳನ್ನು ಗುರುತಿಸಿ, ಪ್ರೋತ್ಸಾಹಿಸುತ್ತಾ, ಕ್ರೀಡಾ ವಾತಾರಣ ಸೃಷ್ಟಿಸಿ, ಹಲವರ ಸಾಧನೆಗೆ ಸ್ಪೂರ್ತಿ ನೀಡಿದ್ದಾರೆ. ಇಂತಹ ವ್ಯಕ್ತಿಯ 77ನೇ ಜನ್ಮ ದಿನವನ್ನು ಸಮಾಜದ ಎಲ್ಲ ವರ್ಗದವರು ಸೇರಿ ಆಚರಿಸುವ ಮೂಲಕ ಮತ್ತಷ್ಟು ಸ್ಪೂರ್ತಿದಾಯಕ ಕೆಲಸಗಳನ್ನು ಉತ್ತೇಜನ ನೀಡಿದರು. ಹಿರಿಯ ಕ್ರೀಡಾಪಟು ಟಿ.ಕೆ.ಆನಂದ್ ಅವರನ್ನು ಅಭಿನಂದಿಸಿ ಮಾತನಾಡಿದ ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಧನಿಯಕುಮಾರ್,ವಿದ್ಯಾರ್ಥಿ ದಿಸೆಯಿಂದಲೂ ಇಂದಿನ ಗೃಹ ಸಚಿವರಾದ…
ಚಿಕ್ಕನಾಯಕನಹಳ್ಳಿ; ತಾಲೂಕಿನ ಕೃಷಿಕ ಸಮಾಜದ ಚುನಾವಣಾ ಪ್ರತಿನಿಧಿಗಳಾಗಿ2025 ಹಾಗೂ 2030 ನೇ ಸಾಲಿಗೆ ಈ ಕೆಳಕಂಡವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಜಯಚಾಮರಾಜೇಂದ್ರಪುರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಂಕಜ್ ನಲ್ಲಿ ನಿವಾಸಿ ಆರ್ ಗಂಗಾಧರಯ್ಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪಿ ದೊಡ್ಡ ರಂಗಪ್ಪ ಪ್ರಧಾನ ಕಾರ್ಯದರ್ಶಿಯಾಗಿ ಡಿ ಆರ್ ವಿಶ್ವನಾಥ್ ಜಿಲ್ಲಾ ಪ್ರತಿನಿಧಿಯಾಗಿ ಬಿ ಎನ್ ಲೋಕೇಶ್ ಖಜಾಂಚಿಯಾಗಿ ಹೆಚ್ಚಿಸಿ ಪ್ರಕಾಶ್ ಇವರುಗಳು ಅವಿರೋಧ ಆಯ್ಕೆ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಹಾಗೂ ತಾಲೂಕ್ ಕೃಷಿಕ ಸಮಾಜ ಮತ್ತು ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ಘೋಷಿಸಿದ್ದಾರೆ.
ತುಮಕೂರು: ರಾಜ್ಯ ಸರ್ಕಾರಿ ನಿವೃತ್ತ ನೌಕರರು ಆರೋಗ್ಯ ಕಾಪಾಡಿಕೊಂಡು ಸಾಮಾಜಿಕ ಚಟಿವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸಂಘದ ಜಿಲ್ಲಾ ಶಾಖೆಯ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನಿವೇಶನ, ಅನುದಾನ ಪಡೆಯಲು ಜಿಲ್ಲಾ ಸಚಿವ ಡಾ.ಪರಮೇಶ್ವರ್ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಬಳಿಗೆ ನಿಯೋಗ ತೆರಳಿ ಅನುಕೂಲ ಪಡೆಯಬೇಕು, ನಿಮ್ಮ ನಿಯೋಗಕ್ಕೆ ತಾವೂ ಕೈ ಜೋಡಿಸುವುದಾಗಿ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳಿಧರ ಹಾಲಪ್ಪ ಹೇಳಿದರು. ನಗರದ ಬಾಲಭವನದಲ್ಲಿ ಮಂಗಳವಾರ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ನಿವೃತ್ತ ನೌಕರರ ದಿನಾಚರಣೆ ಹಾಗೂ ಹಿರಿಯ ಚೇತನಗಳಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಾಕಷ್ಟು ಕಾರ್ಖಾನೆಗಳು ಇವೆ, ಅವುಗಳ ಸಿಎಸ್‌ಆರ್ ಫಂಡ್ ಅನ್ನು ಕೇಳಿ ಪಡೆದು ಬಳಕೆ ಮಾಡಿಕೊಳ್ಳಿ ಎಂದು ಸಲಹೆ ಮಾಡಿದರು. ಹಲವು ವರ್ಷ ಕಾಲ ಸರ್ಕಾರಿ ಸೇವೆ ಸಲ್ಲಿಸಿ ಅನುಭವ, ಆಡಳಿತ ಸಾಮರ್ಥ್ಯ ಹೊಂದಿರುವ ನಿವೃತ್ತ ನೌಕರರನ್ನು ಜಿಲ್ಲಾಡಳಿತದ ವಿವಿಧ ಸಮಿತಿಗಳಿಗೆ ನೇಮಕ ಮಾಡುವಂತೆ ಮನವಿ…
ತುಮಕೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸರಕಾರದಿಂದ ನೀಡುವ ಸೌಲಭ್ಯ ಹಾಗೂ ಕಾನೂನು ಸೇವೆಗಳ ಬಗ್ಗೆ ದಲಿತ ಕಾಲೋನಿಗಳಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರದಿಂದ ಪ.ಜಾತಿ ಮತ್ತು ಪ.ಪಂಗಡದವರಿಗೆ ನೀಡಲಾಗುತ್ತಿರುವ ಸವಲತ್ತುಗಳ ಬಗೆಗಿನ ಮಾಹಿತಿ ಕೊರತೆಯಿಂದ ಅನೇಕರು ಸೌಲಭ್ಯ ವಂಚಿತರಾಗುತ್ತಿದ್ದು, ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಕಾರ್ಮಿಕ ನೀತಿಗೆ ವಿರೋಧವಾಗಿ ಕೆಲವು ಕೈಗಾರಿಕೆಗಳಲ್ಲಿ ಸಮಯ ಮೀರಿ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ ಎಂದು ಸಮಿತಿ ಸದಸ್ಯರು ಆರೋಪಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕೈಗಾರಿಕೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚನೆ ನೀಡಿದರು. ಪ.ಜಾತಿ ಮತ್ತು ಪ.ಪಂಗಡದವರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸಲಾದ ಕೊಳವೆ ಬಾವಿಗಳಲ್ಲಿ ನೀರು ಸಿಗದೆ ಹೋದರೂ…
ತುಮಕೂರು : ಜಿಲ್ಲೆಯ ಪಾವಗಡ ತಾಲ್ಲೂಕಿನ ನಿವೇಶನ ರಹಿತರಿಗೆ ವಿವಿಧ ವಸತಿ ಯೋಜನೆಗಳಡಿ 2,800 ನಿವೇಶನಗಳ ವಿತರಣೆ ಮಾಡಲು ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ತಿಳಿಸಿದರು. ಪಾವಗಡ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ನೀವೇಶನ ರಹಿತರಿಗೆ ನಿವೇಶನ ವಿತರಣೆ ಮಾಡಲು ಸುಮಾರು 189 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಈಗಾಗಲೇ ವಿತರಣೆ ಮಾಡಲು ಉದ್ದೇಶಿತ ನಿವೇಶನಗಳನ್ನು ಸಮತಳ ಮಾಡಿಸಲಾಗಿದೆ ಎಂದರು. ನಿವೇಶನ ವಿತರಣೆ ಪಾರದರ್ಶP Àತೆಯಿಂದ ಕೂಡಿರಬೇಕು. ಅರ್ಹ ಫಲಾನುಭವಿಗಳಿಗೆ ಮಾತ್ರ ನಿವೇಶನ ಹಂಚಿಕೆಯಾಗಬೇಕು ಎಂದರಲ್ಲದೆ, ತಾಲ್ಲೂಕಿನಲ್ಲಿ ಕೈಗೊಂಡಿರುವ ಜಲಜೀವನ್ ಮಿಷನ್ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿಗಳಲ್ಲಿ ಲೋಪ ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮವಹಿಸುವುದಾಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ(ಅಭಿವೃದ್ಧಿ) ಸಂಜೀವಪ್ಪ, ಮುಖ್ಯ ಕಾರ್ಯಪಾಲಕ ಅಭಿಯಂತರರು ಕುಮಾರಸ್ವಾಮಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಜಾನಕೀರಾಮ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು…
ತುಮಕೂರು: ಇಪಿಎಸ್-95 ಪಿಂಚಿಣಿದಾರರ ಸಮಸ್ಯೆಗಳ ಕುರಿತು ಪ್ರಧಾನಿ ಮತ್ತು ವಿತ್ತ ಸಚಿವರ ಜೊತೆ ಎರಡರೆಡು ಬಾರಿ ಚರ್ಚೆ ನಡೆಸಿದ್ದು, ಸುಪ್ರಿಂಕೋರ್ಟಿನ ಆದೇಶದಂತೆ ಕನಿಷ್ಠ 7500 ರೂ ಮಾಸಿಕ ಪಿಂಚಿಣಿ ನೀಡುವ ಭರವಸೆಯನ್ನು ನೀಡಿದ್ದಾರೆ. ಒಂದು ವೇಳೆ ಸರಕಾರ ಮಾತಿಗೆ ತಪ್ಪಿದರೆ, ದೇಶದ 78 ಲಕ್ಷ ನಿವೃತ್ತ ನೌಕರರು ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯುವುದು ಅನಿವಾರ್ಯವಾಗಲಿದೆ ಎಂದು ಎನ್.ಎ.ಸಿ. ರಾಷ್ಟಿçÃಯ ಅಧ್ಯಕ್ಷರಾದ ಕಮಾಂಡರ್ ಅಶೋಕ್ ರಾವುತ್ ತಿಳಿಸಿದ್ದಾರೆ. ನಗರದ ಕೊಲ್ಲಾಪುರದಮ್ಮ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ತುಮಕೂರು ವಿಭಾಗ, ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಟ್ರಸ್ಟ್ (ರಿ) ವತಿಯಿಂದ ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಟ್ರಸ್ಟ್ಗೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ತಮ್ಮ ಜೀವಿತಾವಧಿಯನ್ನು ಜನರ ಸೇವೆಗೆ ಮುಡಿಪಾಗಿಟ್ಟಿರುವ ನಾವುಗಳು ಮಾಸಿಕ 800 ರೂಗಳಿಂದ 1800ವರೆಗೆ ಮಾತ್ರ ಪಿಂಚಿಣಿ ಪಡೆಯುತ್ತಿದ್ದು,ಇಂದಿನ ಬೆಲೆ ಹೆಚ್ಚಳದಲ್ಲಿ ಯಾವುದಕ್ಕೂ ಸಾಲದಾಗಿದೆ. ಹಾಗಾಗಿ ಸುಪ್ರಿಂಕೋರ್ಟಿನ ಆದೇಶದಂತೆ ಕನಿಷ್ಠ ಮಾಸಿಕ 7500 ರೂ ಪಿಂಚಿಣಿ ಮತ್ತು ಡಿ.ಎ. ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ…
ತುಮಕೂರು : ಯುವ ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯಡಿ ನೀಡುವ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು. ಜಿಲ್ಲಾಧಿಕಾರಿ ಕೊಠಡಿಯಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, 2023ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾದಲ್ಲಿ ಉತ್ತೀರ್ಣರಾದ ಸರ್ಕಾರ/ಖಾಸಗಿ ಉದ್ಯೋಗ ಹೊಂದದೇ ಇರುವ, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ರಾಜ್ಯದಲ್ಲಿ ವಾಸವಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್, ಇಲಾಖೆಯ ಸಿಬ್ಬಂದಿ ಅರುಣ್…
ತುಮಕೂರು : ರಾಜ್ಯದಲ್ಲಿ ಕೃಷಿ ಕ್ಷೇತ್ರವನ್ನು ಸಬಲೀಕರಣಗೊಳಿಸುವ ಸಲುವಾಗಿ ಸೌರಶಕ್ತಿ ಮೂಲಕ ಹಗಲಿನಲ್ಲಿ ರೈತರಿಗೆ ವಿದ್ಯುತ್ ಪೂರೈಕೆ ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಜಿಲ್ಲೆಯ ಶಿರಾ ತಾಲ್ಲೂಕು ಚಂಗಾವರ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ಪಿಎಂ ಕುಸುಮ್ ಘಟಕ ಸಿ ಯೋಜನೆಯಡಿ ನಿರ್ಮಿಸುತ್ತಿರುವ 2.4 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲಾಂಟ್ ಅಳವಡಿಕೆ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುವಾಗುವಂತೆ ತಡೆರಹಿತ ಸುಸ್ಥಿರ ವಿದ್ಯುತ್ ಸರಬರಾಜು ಮಾಡಲು ಈ ಸೋಲಾರ್ ಪ್ಲಾಂಟ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲೆಯ ಶಿರಾ ತಾಲ್ಲೂಕಿನ ಚಂಗಾವರದಲ್ಲಿ ನಿರ್ಮಿಸಿರುವ ಸೋಲಾರ್ ಪ್ಲಾಂಟ್‌ನಿAದ 944 ಕೃಷಿ ಪಂಪ್ ಸೆಟ್‌ಗಳಿಗೆ ವಿದ್ಯುತ್ ಒದಗಿಸಲು ಸಾಧ್ಯವಾಗಲಿದೆ. ಈ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕಾಗಿ 11 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಚಂಗಾವರದಲ್ಲಷ್ಟೇ ಅಲ್ಲದೆ ಶಿರಾ ತಾಲ್ಲೂಕಿನ ಚಿಕ್ಕಬಾಣಗೆರೆಯಲ್ಲಿಯೂ 25 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು 6.5 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್…