ಕನ್ನೂರು: ‘ಶಬರಿಮಲೆ ಅಯ್ಯಪ್ಪ ಭಕ್ತರ ಪರವಾಗಿ ಬಿಜೆಪಿ ಅಚಲವಾಗಿ ನಿಂತಿದೆ’ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಕೇರಳದ ಕನ್ನೂರಿನಲ್ಲಿ ಶನಿವಾರ ಬಿಜೆಪಿ ಪಕ್ಷ ಕಚೇರಿಯನ್ನು ಉದ್ಘಾಟಿಸಿದ ಅವರು, ನಂತರ ಸಭೆಯೊಂದರಲ್ಲಿ ಮಾತನಾಡುತ್ತಿದ್ದರು. ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ನಡೆದ ಗಲಭೆಯ ನಂತರ 2000 ಕ್ಕೂ ಹೆಚ್ಚು ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದನ್ನು ಅವರು ಖಂಡಿಸಿದರು.
Author: News Desk Benkiyabale
ಧೆಂಕನಲ್: ಒಡಿಶಾದ ಧೆಂಕನಲ್ ಜಿಲ್ಲೆಯ ಕಮಲಾಂಗ ಎಂಬ ಹಳ್ಳಿಯಲ್ಲಿ ಶನಿವಾರ ಬೆಳಿಗ್ಗೆ ಏಳು ಆನೆಗಳು ದುರ್ಮರಣಕ್ಕೀಡಾಗಿವೆ. ವಿದ್ಯುತ್ ಸ್ಪರ್ಶದಿಂದಾಗಿ ಆನೆಗಳು ಅಸುನೀಗಿರಬಹುದು ಎಂದು ಅಂದಾಜಿಸಲಾಗಿದೆ. ವಿದ್ಯುತ್ ಹರಿಯುತ್ತಿದ್ದ ತಂತಿಯನ್ನು ಆನೆಗಳ ಗುಂಪು ಹಾದುಹೋಗುವುದಕ್ಕೆ ಪ್ರಯತ್ನಿಸಿದಾಗ ಈ ಘಟನೆ ನಡೆದಿರಬಹುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಮಾನವನಿರ್ಮಿತ ಕಾರಣಗಳಿಂದ ವನ್ಯಮೃಗಗಳು ಅಸುನೀಗುತ್ತಿರುವ ಘಟನೆ ನಿರಂತರವಾಗಿ ನಡೆಯುತ್ತಿದೆ. ಇಂಥ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಮತ್ತು ಅಕಸ್ಮಾತ್ ಇಂಥ ಘಟನೆಗಳು ನಡೆದರೆ ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪರಿಸರವಾದಿಗಳು, ವನ್ಯಜೀವಿ ಪ್ರೇಮಿಗಳು ಆಗ್ರಹಿಸಿದ್ದಾರೆ.
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗಾಂಧಿನಗರ, ರಾಜರಾಜೇಶ್ವರಿ ನಗರ ಮತ್ತು ಮಲ್ಲೇಶ್ವರಂ ವಿಭಾಗದಲ್ಲಿ ನಡೆದ ಅವ್ಯವಹಾರದಲ್ಲಿ ಭಾಗಿಯಾಗಿರುವ ಶಾಸಕರು ರಾಜೀನಾಮೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ. 2008ರಿಂದ 2012ರ ತನಕ ನಡೆದ ಅವ್ಯವಹಾರ, ನಕಲಿ ಬಿಲ್ ತಯಾರಿಕೆ, ಕಡತಗಳಿಗೆ ಬೆಂಕಿ ಹಚ್ಚಿರುವುದು ಎಲ್ಲವೂ ದೊಡ್ಡ ಹಗರಣ ನಡೆದಿದೆ ಎಂಬುದನ್ನು ಹೇಳುತ್ತಿವೆ. ಇದುವರೆಗೆ ಇದರ ಬಗ್ಗೆ ತನಿಖೆ ನಡೆಸಿದ ಸಂಸ್ಥೆಗಳು ಸಹ ಹಗರಣ ನಡೆದಿದೆ ಎಂದು ಹೇಳಿವೆ ಎಂದು ಎಎಪಿ ಹೇಳಿದೆ. ಹೈಕೋರ್ಟ್ ಬಳಿಕ ಎನ್ಜಿಟಿ ಸರದಿ: ಬಿಬಿಎಂಪಿಗೆ 5 ಕೋಟಿ ದಂಡ ಗಾಂಧಿನಗರ , ರಾಜರಾಜೇಶ್ವರಿ ನಗರ ಮತ್ತು ಮಲ್ಲೇಶ್ವರಂ ವಿಭಾಗಗಳಲ್ಲಿ 2008 ರಿಂದ 2012 ರವರೆಗೆ ನಡೆದಿರುವ 1,539 ಕೋಟಿ ರೂ. ಗಳಿಗೂ ಹೆಚ್ಚಿನ ಮೊತ್ತದ ಕಾಮಗಾರಿಗಳಲ್ಲಿನ ಅವ್ಯವಹಾರಗಳ ಬಗ್ಗೆ ಈಗಾಗಲೇ ಅನೇಕ ತನಿಖಾ ಸಂಸ್ಥೆಗಳು ವರದಿಯನ್ನು ನೀಡಿವೆ. …
ಬೆಂಗಳೂರು: ದಶಕಗಳ ಕಾಲದಿಂದ ವಿವಾದದ ಗೂಡಾಗಿರುವ ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ಗಿರಿ ಕ್ಷೇತ್ರದ ವಿವಾದ ಕುರಿತಂತೆ ದಶಕಗಳ ಬಳಿಕ ಮತ್ತೆ ವಿಚಾರಣೆ ನಡೆಸಲು ಹೈಕೋರ್ಟ್ ಮುಂದಾಗಿದೆ. ಶುಕ್ರವಾರ ಈ ಕುರಿತು ಹೈಕೋರ್ಟ್ನಲ್ಲಿ ನಡೆದ ವಿಚಾರಣೆ ವೇಳೆ, ಸುಪ್ರೀಂಕೋರ್ಟ್ನಲ್ಲಿ ಈಗಾಗಲೇ ನಡೆಯುತ್ತಿರುವ ನ್ಯಾಯಾಂಗ ನಿಂದನಾ ಅರ್ಜಿಯನ್ನು ಪರಿಗಣಿಸಿಕೊಂಡೇ ಅರ್ಜಿ ವಿಚಾರಣೆ ನಡೆಸಲು ನ್ಯಾಯಾಲಯ ನಿರ್ಧರಿಸಿತು. ಸುಪ್ರೀಂಕೋರ್ಟ್ನಲ್ಲಿರುವ ನ್ಯಾಯಾಂಗ ನಿಂದನೆ ಅರ್ಜಿಯು ಈ ವಿಚಾರಣೆಗೆ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದೆ. ಅರ್ಜಿದಾರರು ಹಾಗೂ ಸರ್ಕಾರಿ ವಕೀಲರ ಅಭಿಪ್ರಾಯ ದಾಖಲಿಸಿಕೊಂಡು ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿತು.
ಕೊರಟಗೆರೆ: ಸಾಲಭಾದೆ ತಾಳಲಾರದೆ ಮನನೊಂದ ವ್ಯಕ್ತಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಜರುಗಿದೆ. ಕೊರಟಗೆರೆ ಪಟ್ಟಣದ ಕೆ.ಟಿ ದೊಡ್ಡಯ್ಯ (45ವರ್ಷ)ಎಂಬ ವ್ಯಕ್ತಿಯೇ ಸಾಲಭಾದೆ ತಾಳಲಾದರೆ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ದೊಡ್ಡಯ್ಯ ಕೊರಟಗೆರೆ ಪಟ್ಟಣದಲ್ಲಿ ಟೀ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದು, ಕೆಲ ದಿನಗಳಿಂದ ಗಟ್ಲಗೊಲ್ಲಹಳ್ಳಿಯ ಅತ್ತೆ ಮನೆಯಲ್ಲಿ ವಾಸವಿದ್ದ ಎನ್ನಲಾಗಿದ್ದು, ವಿಪರಿತ ಕೈಸಾಲ ಮಾಡಿಕೊಂಡು ಸಾಲಭಾದೆ ತಾಳಲಾರದೆ ಮನನೊಂದು ರಸ್ತೆ ಬದಿಯ ಮರವೊಂದಕ್ಕೆ ನೇಣು ಬಿಗಿದುಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಸಿಪಿಐ ಮುನಿರಾಜು ಹಾಗೂ ಪಿಎಸ್ಐ ಮಂಜುನಾಥ್ ಕ್ರಮ ಕೈಗೊಂಡು ಹೆಚ್ಚಿನ ತನಿಖೆ ನೆಡೆಸುತ್ತಿದ್ದಾರೆ ಎನ್ನಲಾಗಿದೆ.
ತುಮಕೂರು: ಹಾಡಹಗಲೇ ಮಹಿಳೆಯರಿಗೆ ಚಾಕು ತೋರಿಸಿ ಚಿನ್ನಾಭರಣಗಳನ್ನು ಸುಲಿಗೆ ಮಾಡಿದ್ದ ಐವರು ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಕಳವು ಮಾಡಲು ಸುಪಾರಿ ನೀಡಿದ್ದ ಮಹಿಳೆ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ತೀವ್ರ ಶೋಧಕಾರ್ಯ ನಡೆದಿದೆ. ಅ.12ರಂದು ಇಲ್ಲಿನ ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಾ ನಗರದ ತಮ್ಮ ಮನೆ ಎದುರು ಕುಳಿತಿದ್ದ ವೆಂಕಟಲಕ್ಷ್ಮಿ ಎಂಬುವರು ನೆರೆಮನೆಯ ಸರಸ್ವತಿ ಹಾಗೂ ರೇಖಾ ಅವರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಅಲ್ಲಿಗೆ ಆಗಮಿಸಿದ್ದ ನಾಲ್ವರು ಅಪರಿಚಿತರು ಮನೆಯೊಳಗೆ ನುಗ್ಗಿ, ಮಹಿಳೆಯರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನಾಭರಣಗಳನ್ನು ದೋಚಿದ್ದರು. ಈ ಕುರಿತು ಪೊಲೀಸರಿಗೆ ದೂರು ನೀಡಿದ್ದ ವೆಂಕಟಲಕ್ಷ್ಮಮ್ಮ, ತಮ್ಮ 12 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ, ಸರಸ್ವತಿಯವರ 3 ಗ್ರಾಂ ತೂಕದ ತಾಳಿ ಸರ ಹಾಗೂ ಮೂರು ಮೊಬೈಲ್ಗಳನ್ನು ಕಳ್ಳರು ಕಸಿದುಕೊಂಡೊಯ್ದಿರುವುದಾಗಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಬೆಂಗಳೂರು ಅಂದ್ರಹಳ್ಳಿ ಮುಖ್ಯರಸ್ತೆ…
ವಿಶಾಖಪಟ್ಟಣಂ: ಆಂಧ್ರಪ್ರದೇಶ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವರಿಷ್ಠ , ಮಾಜಿ ಮುಖ್ಯಮಂತ್ರಿ ವೈ.ಎಸ್. ಆರ್. ಪುತ್ರ ಜಗನ್ ರೆಡ್ಡಿಗೆ ವಿಶಾಖಪಟ್ಟಣಂ ಏರ್ಪೋರ್ಟ್ನಲ್ಲಿ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಏರ್ಪೋರ್ಟ್ಗೆ ಆಗಮಿಸಿ ಲಾಂಜ್ನಲ್ಲಿ ಕುಳಿತಿದ್ದ ವೈ.ಎಸ್.ಜಗನ್ಮೋಹನ್ ರೆಡ್ಡಿ ಜತೆ ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಆಗಮಿಸಿದ ದುಷ್ಕರ್ಮಿ ಕೃತ್ಯ ಎಸಗಿದ್ದಾನೆ. ಕೋಳಿ ಕಾಳಗಕ್ಕೆ ಬಳಸುವ ಚಾಕುವಿನಿಂದ ಜಗನ್ ಎದ ಭುಜಕ್ಕೆ ಇರಿದ್ದಾನೆ. ಜಗನ್ ಅವರಿಗೆ ಏರ್ಪೋರ್ಟ್ನಲ್ಲಿಯೇ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಜಗನ್ ಜತೆಗೇ ಇದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಚಾಕು ಇರಿದ ವ್ಯಕ್ತಿ ಹೋಟೆಲ್ವೊಂದರಲ್ಲಿ ಸರ್ವರ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.
ನವದೆಹಲಿ: ಏರ್ಸೆಲ್-ಮ್ಯಾಕ್ಸಿಸ್ ಹಗರಣ ಸಂಬಂಧ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಪಟಿಯಾಲ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಆರೋಪಪಟ್ಟಿ ಸಲ್ಲಿಸಿದೆ. ಚಿದಂಬರಂ ಅವರನ್ನು ಮೊದಲನೇ ಆರೋಪಿ ಎಂದು ಹೆಸರಿಸಲಾಗಿದೆ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ, ಕಾರ್ತಿ ಅವರ ಅಕೌಂಟೆಂಟ್ ಭಾಸ್ಕರ್ ರಾಮನ್ ಸೇರದಂತೆ ಒಟ್ಟು 9 ಆರೋಪಿಗಳನ್ನು ಆರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ. ₹3500 ಕೋಟಿ ಮೊತ್ತದ ಹಗರಣ ಇದಾಗಿದೆ. ಈ ಪ್ರಕರಣವನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು. ಈ ಹಿಂದೆ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು. 2006ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ವೇಳೆ ಚಿದಂಬರಂ ಅವರು ವಿದೇಶಿ ಕಂಪನಿಗೆ ‘ವಿದೇಶಿ ಹೂಡಿಕೆ ಪ್ರಚಾರ ಮಂಡಳಿ’ಯ (ಎಫ್ಐಪಿಬಿ) ಮಂಜೂರಾತಿ ನೀಡಿದ್ದು ಹೇಗೆ ಎಂಬ ಕುರಿತು ಸಿಬಿಐ ತನಿಖೆ ನಡೆಸಿತ್ತು. ಮ್ಯಾಕ್ಸಿಸ್ನ ಅಂಗಸಂಸ್ಥೆ…
ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಮಾಧ್ಯಮಗಳಲ್ಲಿ ಕೋಲಹಲ ಎಬ್ಬಿಸಿದ್ದ ಶೃತಿ ಹರಿಹರನ್ಗೆ ಇದೀಗ ಸಂಕಷ್ಟ ಎದುರಾಗಿದ್ದು, ಶ್ರುತಿ ಹರಿಹರನ್ ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ತಮ್ಮ ಇಮೇಜ್ ಗೆ ಡ್ಯಾಮೇಜ್ ಆಗಿರುವ ಕಾರಣ, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿಂದು ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಹಾಗೂ ವಕೀಲರು ಲಿಖಿತ ದೂರು ನೀಡಿದ್ದಾರೆ. ಸೈಬರ್ ಕ್ರೈಂ ಪೊಲೀಸರು ಐಟಿ ಆ್ಯಕ್ಟ್ 200 ಅಡಿಯಲ್ಲಿ ಶ್ರುತಿ ಹರಿಹರನ್ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇಬ್ಬರ ನಡುವೆ ಸಂಧಾನ ನಡೆಸಲು ಚಲನಚಿತ್ರ ರಂಗದ ಪ್ರಮುಖರು ಪ್ರಯತ್ನಿಸುತ್ತಿರುವ ಮಧ್ಯೆಯೇ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿದೆ.