ತುಮಕೂರು: ಹಾಡಹಗಲೇ ಮಹಿಳೆಯರಿಗೆ ಚಾಕು ತೋರಿಸಿ ಚಿನ್ನಾಭರಣಗಳನ್ನು ಸುಲಿಗೆ ಮಾಡಿದ್ದ ಐವರು ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಕಳವು ಮಾಡಲು ಸುಪಾರಿ ನೀಡಿದ್ದ ಮಹಿಳೆ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ತೀವ್ರ ಶೋಧಕಾರ್ಯ ನಡೆದಿದೆ. ಅ.12ರಂದು ಇಲ್ಲಿನ ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಾ ನಗರದ ತಮ್ಮ ಮನೆ ಎದುರು ಕುಳಿತಿದ್ದ ವೆಂಕಟಲಕ್ಷ್ಮಿ ಎಂಬುವರು ನೆರೆಮನೆಯ ಸರಸ್ವತಿ ಹಾಗೂ ರೇಖಾ ಅವರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಅಲ್ಲಿಗೆ ಆಗಮಿಸಿದ್ದ ನಾಲ್ವರು ಅಪರಿಚಿತರು ಮನೆಯೊಳಗೆ ನುಗ್ಗಿ, ಮಹಿಳೆಯರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನಾಭರಣಗಳನ್ನು ದೋಚಿದ್ದರು. ಈ ಕುರಿತು ಪೊಲೀಸರಿಗೆ ದೂರು ನೀಡಿದ್ದ ವೆಂಕಟಲಕ್ಷ್ಮಮ್ಮ, ತಮ್ಮ 12 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ, ಸರಸ್ವತಿಯವರ 3 ಗ್ರಾಂ ತೂಕದ ತಾಳಿ ಸರ ಹಾಗೂ ಮೂರು ಮೊಬೈಲ್‌ಗಳನ್ನು ಕಳ್ಳರು ಕಸಿದುಕೊಂಡೊಯ್ದಿರುವುದಾಗಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಬೆಂಗಳೂರು ಅಂದ್ರಹಳ್ಳಿ ಮುಖ್ಯರಸ್ತೆ…
Author: News Desk Benkiyabale
ವಿಶಾಖಪಟ್ಟಣಂ: ಆಂಧ್ರಪ್ರದೇಶ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವರಿಷ್ಠ , ಮಾಜಿ ಮುಖ್ಯಮಂತ್ರಿ ವೈ.ಎಸ್. ಆರ್. ಪುತ್ರ ಜಗನ್ ರೆಡ್ಡಿಗೆ ವಿಶಾಖಪಟ್ಟಣಂ ಏರ್ಪೋರ್ಟ್ನಲ್ಲಿ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಏರ್ಪೋರ್ಟ್ಗೆ ಆಗಮಿಸಿ ಲಾಂಜ್ನಲ್ಲಿ ಕುಳಿತಿದ್ದ ವೈ.ಎಸ್.ಜಗನ್ಮೋಹನ್ ರೆಡ್ಡಿ ಜತೆ ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಆಗಮಿಸಿದ ದುಷ್ಕರ್ಮಿ ಕೃತ್ಯ ಎಸಗಿದ್ದಾನೆ. ಕೋಳಿ ಕಾಳಗಕ್ಕೆ ಬಳಸುವ ಚಾಕುವಿನಿಂದ ಜಗನ್ ಎದ ಭುಜಕ್ಕೆ ಇರಿದ್ದಾನೆ. ಜಗನ್ ಅವರಿಗೆ ಏರ್ಪೋರ್ಟ್ನಲ್ಲಿಯೇ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಜಗನ್ ಜತೆಗೇ ಇದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಚಾಕು ಇರಿದ ವ್ಯಕ್ತಿ ಹೋಟೆಲ್ವೊಂದರಲ್ಲಿ ಸರ್ವರ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.
ನವದೆಹಲಿ: ಏರ್‌ಸೆಲ್-ಮ್ಯಾಕ್ಸಿಸ್ ಹಗರಣ ಸಂಬಂಧ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಪಟಿಯಾಲ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಆರೋಪಪಟ್ಟಿ ಸಲ್ಲಿಸಿದೆ. ಚಿದಂಬರಂ ಅವರನ್ನು ಮೊದಲನೇ ಆರೋಪಿ ಎಂದು ಹೆಸರಿಸಲಾಗಿದೆ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ, ಕಾರ್ತಿ ಅವರ ಅಕೌಂಟೆಂಟ್ ಭಾಸ್ಕರ್ ರಾಮನ್ ಸೇರದಂತೆ ಒಟ್ಟು 9 ಆರೋಪಿಗಳನ್ನು ಆರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ. ₹3500 ಕೋಟಿ ಮೊತ್ತದ ಹಗರಣ ಇದಾಗಿದೆ. ಈ ಪ್ರಕರಣವನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು. ಈ ಹಿಂದೆ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು. 2006ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ವೇಳೆ ಚಿದಂಬರಂ ಅವರು ವಿದೇಶಿ ಕಂಪನಿಗೆ ‘ವಿದೇಶಿ ಹೂಡಿಕೆ ಪ್ರಚಾರ ಮಂಡಳಿ’ಯ (ಎಫ್‌ಐಪಿಬಿ) ಮಂಜೂರಾತಿ ನೀಡಿದ್ದು ಹೇಗೆ ಎಂಬ ಕುರಿತು ಸಿಬಿಐ ತನಿಖೆ ನಡೆಸಿತ್ತು. ಮ್ಯಾಕ್ಸಿಸ್‌ನ ಅಂಗಸಂಸ್ಥೆ…
ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಮಾಧ್ಯಮಗಳಲ್ಲಿ ಕೋಲಹಲ ಎಬ್ಬಿಸಿದ್ದ ಶೃತಿ ಹರಿಹರನ್ಗೆ ಇದೀಗ ಸಂಕಷ್ಟ ಎದುರಾಗಿದ್ದು, ಶ್ರುತಿ ಹರಿಹರನ್ ಸೇರಿ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ತಮ್ಮ ಇಮೇಜ್ ಗೆ ಡ್ಯಾಮೇಜ್ ಆಗಿರುವ ಕಾರಣ, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿಂದು ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಹಾಗೂ ವಕೀಲರು ಲಿಖಿತ ದೂರು ನೀಡಿದ್ದಾರೆ. ಸೈಬರ್ ಕ್ರೈಂ ಪೊಲೀಸರು ಐಟಿ ಆ್ಯಕ್ಟ್ 200 ಅಡಿಯಲ್ಲಿ ಶ್ರುತಿ ಹರಿಹರನ್ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇಬ್ಬರ ನಡುವೆ ಸಂಧಾನ ನಡೆಸಲು ಚಲನಚಿತ್ರ ರಂಗದ ಪ್ರಮುಖರು ಪ್ರಯತ್ನಿಸುತ್ತಿರುವ ಮಧ್ಯೆಯೇ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿದೆ.