ಗುಬ್ಬಿ: ಕೆರೆಯಲ್ಲಿ ಕುರಿ ಮೈತೊಳೆಯಲು ಹೋದ ವ್ಯಕ್ತಿಯೋರ್ವ ಆಯತಪ್ಪಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕಗ್ಗರೆಯಲ್ಲಿ ನಡೆದಿದೆ. ರಾಜಣ್ಣ(46) ಸಾವನ್ನಪ್ಪಿರುವ ದುರ್ದೈವಿ. ರಾಜಣ್ಣ ತಮ್ಮ ಕುರಿಗಳನ್ನು ಕಗ್ಗರೆ ಕೆರೆಯಲ್ಲಿ ತೊಳೆಯುತ್ತಿರುವಾಗ ಆಯತಪ್ಪಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತರಿಗೆ ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: News Desk Benkiyabale
ತುಮಕೂರು: ತುಮಕೂರು ನಗರವನ್ನು ಬೆಂಗಳೂರಿನಂತೆ ಅಭಿವೃದ್ಧಿಪಡಿಸಲು ಪ್ರಥಮಾದ್ಯತೆ ನೀಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಯು.ಟಿ.ಖಾದರ್ ತಿಳಿಸಿದರು. ಮಹಾನಗರಪಾಲಿಕೆ, ತುಮಕೂರು ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನೆ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು ಅಭಿವೃದ್ಧಿಯಲ್ಲಿ ಬೆಂಗಳೂರಿನ ನಂತರ ತುಮಕೂರು ನಗರ ಮುಂಚೂಣಿಯಲ್ಲಿದ್ದು, ಬೆಂಗಳೂರಿನ ಮಾದರಿಯಲ್ಲಿ ತುಮಕೂರು ನಗರಕ್ಕೂ ರಸ್ತೆ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯವನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಇದರಿಂದ ಬೆಂಗಳೂರಿನ ಜನದಟ್ಟಣೆ ಕಡಿಮೆಯಾಗಲಿದೆ ಎಂದು ತಿಳಿಸಿದರು. ನಗರದ ಅಭಿವೃದ್ಧಿಗಾಗಿ ಗುಬ್ಬಿಗೇಟ್‍ನಿಂದ ಐಡಿಎಸ್‍ಎಂಟಿ ಬಡಾವಣೆವರೆಗೆ ಹೊರ ವರ್ತುಲದಲ್ಲಿ 2 ಕಿ.ಮೀ. ಉದ್ದದ ರಿಂಗ್ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲು ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ರೈತರಿಗೆ ಭೂಸ್ವಾಧೀನ ವೆಚ್ಚ ಅನುಮೋದನೆಗಾಗಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಕ್ಯಾತ್ಸಂದ್ರ ವಸತಿ ಬಡಾವಣೆಯಲ್ಲಿ ಪ್ರಾಧಿಕಾರದ ವತಿಯಿಂದ ಕ್ರೀಡಾ ಸಮುಚ್ಛಯ ನಿರ್ಮಾಣ…
ತುಮಕೂರು: ಪುಲ್ವಾಮದಲ್ಲಿ ಭಯೋತ್ಪಾಧಕರ ಧಾಳಿಯಿಂದ ವೀರ ಮರಣವನ್ನಪ್ಪಿದ ಮಂಡ್ಯದ ಯೋಧ ಗುರು ಕುಟುಂಬಕ್ಕೆ ಗ್ರಾಮಾಂತರ ಶಾಸಕ ಡಿ.ಸಿ.ಗೌರೀಶಂಕರ್ ವೈಯಕ್ತಿಕವಾಗಿ 1 ಲಕ್ಷ ಪರಿಹಾರ ಘೋಷಿಸಿದ್ದಾರೆ . ಅವರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಹೆಬ್ಬೂರು ಹೋಬಳಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಾದ ಕಣಕುಪ್ಪೆ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ.ಹೆಬ್ಬೂರು ಕೊಲ್ಲಾಪುರದಮ್ಮ ದೇವಸ್ಥಾನದ ಬಳಿ ಸಿ ಸಿ ನಿರ್ಮಾಣಕ್ಕೆ ಶಂಕು ಸ್ತಾಪನೆ.ಗರಗದ ಕುಪ್ಪೆ ಆಂಜನೇಯ ಸ್ವಾಮಿ ದೇವಸ್ತಾನದ ಬಳಿ ರಸ್ತೆ ನಿರ್ಮಾಣಕ್ಕೆ ಶಂಕು ಸ್ತಾಪನೆ, ಕೋಡಿ ಮುದ್ದನಹಳ್ಳಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆ,ಗೋವಿಂದರಾಜಪುರ ಸಿ ಸಿ ರಸ್ತೆ ನಿರ್ಮಾಣಕ್ಕೆ ಶಂಕುಸ್ತಾಪನೆ ರಿಸಾಲ ಗ್ರಾಮದಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುದ್ದಲಿಪೂಜೆ ,ನಾಗೇನಹಳ್ಳಿಯಲ್ಲಿ ದೇವಸ್ತಾನ ನಿರ್ಮಾಣಕ್ಕೆ ಶಂಕುಸ್ತಾಪನೆ,ಹೆಬ್ಬೂರಿನಲ್ಲಿ ಪಶು ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಹೆಬ್ಬೂರು ಸರ್ಕಲ್ ನಲ್ಲಿ ಶಾಲಾ ಮಕ್ಕಳ ಜೊತೆ ಅಗಲಿದ ವೀರ ಯೋಧರ ನಿಧನಕ್ಕೆ ಕಂಬನಿ ಮಿಡಿದು ಸಂತಾಪ…
ತುಮಕೂರು: ಕೃಷಿ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಕೊಟ್ಟಿರುವ ನರೇಂದ್ರ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಲು ರಾಜ್ಯಾದ್ಯಾಂತ ರೈತಮೋರ್ಚಾದಿಂದ ಗೋ-ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತುಮಕೂರಿನ ಸೋಮೇಶ್ವರ ದೇವಸ್ಥಾನದಲ್ಲಿ ಗೋ-ಪೂಜೆ ಮಾಡುವ ಮೂಲಕ ಕಾರ್ಯಕ್ರಮವನ್ನು ರಾಜ್ಯ ರೈತಮೋರ್ಚಾ ಉಪಾಧ್ಯಕ್ಷರಾದ ಶ್ರೀ ಎಸ್.ಶಿವಪ್ರಸಾದ್ ಉದ್ಘಾಟಿಸಿ, ಮಾತನಾಡುತ್ತಾ ರೈತನ ವಾರ್ಷಿಕ ವರಮಾನ ದ್ವಿಗುಣಗೊಳಿಸಲು ಕಳೆದೈದು ವರ್ಷಗಳಿಂದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ (ಪ್ರತಿವರ್ಷ 6000 ರೂಪಾಯಿ) ಬೇವು ಮಿಶ್ರಿತ ಯೂರಿಯದೊಂದಿಗೆ ದೇಶದ ರೈತರಿಗೆ ಸಮರ್ಪಕ ರಸಗೊಬ್ಬರಗಳನ್ನು ನೀಡಿರುವುದು, ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಿ ವಿದ್ಯುತ್ ಸಂಪರ್ಕ ಇಲ್ಲದ 18452 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಮಾಡಿರುವುದು, ಇ-ಮಾರುಕಟ್ಟೆಗಳಿಗೆ ಅನುದಾನ ನೀಡಿ ಉತ್ತಮ ಮಾರುಕಟ್ಟೆ ವ್ಯವಸ್ಥೆ ಮಾಡಿರುವುದು, ರೈತರ 22 ಬೆಳೆಗಳಿಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಜಾಸ್ತಿ ಬೆಂಬಲ ಬೆಲೆಯೊಂದಿಗೆ ಖರೀದಿ ಮಾಡುತ್ತಿರುವುದು, ವಿಶೇಷವಾಗಿ ಗೋವುಗಳ ರಕ್ಷಣೆ, ದೇಶೀಯ ತಳಿಗಳನ್ನು…
ತುಮಕೂರು: ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿಯಿರುವ 870 ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅನುಮತಿ ನೀಡಲಾಗಿದ್ದು, ಶೀಘ್ರದಲ್ಲೇ ಕೆಪಿಎಸ್‍ಸಿ ಇಂದ ಅಧಿಸೂಚನೆ ಪ್ರಕಟವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ್ ತಿಳಿಸಿದರು. ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳ ಸಹಯೋಗದಲ್ಲಿಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 2 ದಿನಗಳ ತುಮಕೂರು-ಚಿತ್ರದುರ್ಗ ಜಿಲ್ಲೆಗಳ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಸುಮಾರು 12 ಲಕ್ಷ ಪದವೀಧರ ನಿರುದ್ಯೋಗಿಗಳಿದ್ದು, ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆಗಳಲ್ಲಿ ಖಾಲಿಯಿರುವ ಸಾವಿರಾರು ಹುದ್ದೆಗಳನ್ನು ಪಟ್ಟಿ ಮಾಡಲಾಗಿದೆ. ಶೀಘ್ರದಲ್ಲೇ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿ ವಿವಿಧ ಕೋರ್ಸ್ ಮುಗಿಸಿರುವ…
ತುಮಕೂರು : ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ಮಲ್ಟಿ-ಯುಟಿಲಿಟಿ ಮಾಲ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಯೋಜನೆಯ ಅಧ್ಯಕ್ಷೆ ಡಾ: ಶಾಲಿನಿ ರಜನೀಶ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಬೋರ್ಡ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ತುಮಕೂರು ಕೈಗಾರಿಕಾ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಯುಟಿಲಿಟಿ ಮಾಲ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಸ್ಮಾರ್ಟ್ ಸಿಟಿ ಲಿಮಿಟೆಡ್ ಸಂಸ್ಥೆ ವತಿಯಿಂದ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ನಗರವನ್ನು ಅಭಿವೃದ್ಧಿಪಡಿಸಲಾಗುವುದು. ಸುಮಾರು 19592 ಚ.ಮೀ.(sqm)ಅಳತೆಯಲ್ಲಿ ಮೂರು ಅಂತಸ್ತಿನ ಮಲ್ಟಿ-ಯುಟಿಲಿಟಿ ಮಾಲ್ ಅನ್ನು ನಿರ್ಮಾಣ ಮಾಡಲಾಗುವುದು. ಖಾಯಂ ಹೆಲಿಪ್ಯಾಡ್ ಸೇರಿದಂತೆ ಉದ್ಯಮಿಗಳು ಸಭೆ ನಡೆಸಲು ಸಭಾಂಗಣ, ಹೋಟೆಲ್, ರೆಸ್ಟೋರೆಂಟ್, ಸೆಲೋನ್ ಸೆಂಟರ್, ಎಟಿಎಂಗಳು, ಸೂಪರ್ ಮಾರುಕಟ್ಟೆ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ಈ ಮಾಲ್ ಒಳಗೊಂಡಿರುತ್ತದೆ ಎಂದು ತಿಳಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ…
ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ 18 ವರ್ಷ ತುಂಬಿದವರೆಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕೆಂದು 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್ ಭರತ್‍ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿವಿಪ್ಯಾಟ್ ಹಾಗೂ ಇವಿಎಂ ಪ್ರಾತ್ಯಕ್ಷಿಕೆ, ಸಾರ್ವಜನಿಕರಿಗೆ ಮತದಾನ ಜಾಗೃತಿಗಾಗಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ 100 ರಷ್ಟು ಮತದಾನವಾಗಬೇಕು. ಅರ್ಹ ಮತದಾರರು ಮತಪಟ್ಟಿಗೆ ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಚುನಾವಣೆಯ ಬಗ್ಗೆ ತಪ್ಪು ಕಲ್ಪನೆ ಹೊಂದಿದವರಿಗೆ ಮೊದಲು ಜಾಗೃತಿ ಮೂಡಿಸಬೇಕು. ಮನೆ ಮನೆಗೆ ಭೇಟಿ ನೀಡಿ ವಿವಿಪ್ಯಾಟ್ ಮತ್ತು ಇವಿಎಂ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಣೇಶ್ ಮಾತನಾಡಿ ಮತದಾನ ಪ್ರಮಾಣದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿ…
ಗುಬ್ಬಿ : ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಎಂಬ ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷಣೆ ಕೇವಲ ಘೋಷಣೆಯಾಗಿ ಉಳಿದಿರುವುದಕ್ಕೆ ಸಾಕಷ್ಟು ನಿರ್ದೇಶನಗಳಿದ್ದು ಇದರಿಂದ ಪೋಷಕರುಗಳು ಸರ್ಕಾರಿ ಶಾಲೆಗಳತ್ತ ತಮ್ಮ ಮಕ್ಕಳು ಹೆಜ್ಜೆ ಹಾಕದಂತಹ ಸ್ಥಿತಿಯನ್ನು ಶಾಲಾ ಶಿಕ್ಷಕವೃಂದ ಮತ್ತು ಶಿಕ್ಷಣ ಇಲಾಖೆ ತಂದಿಟ್ಟಿರುವುದು ಎಷ್ಟು ಸರಿ. ಸಣ್ಣ ಕೈಗಾರಿಕಾ ಸಚಿವರ ಕ್ಷೇತ್ರದಲ್ಲೇ ಸೂರಿಲ್ಲದೇ ಮಕ್ಕಳುಗಳು ಧಾರ್ಮಿಕ ಸೂರಿನಡಿಯಲ್ಲಿ ಪಾಠವನ್ನು ಕೇಳುವಂತಹ ಸ್ಥಿತಿ ತಲುಪಿರುವುದು ಈ ತಾಲ್ಲೂಕಿನ ಸರ್ಕಾರಿ ಶಾಲಾ ಮಕ್ಕಳ ದುರಂತವೇ ಸರಿ. ಗುಬ್ಬಿ ಸಮೀಪವೇ ಇರುವ ಹೇರೂರು ಗ್ರಾಮ ಪಂಚಾಯ್ತಿಗೆ ಹೊಂದಿಕೊಂಡಿರುವ ಕಿಟ್ಟದಕುಪ್ಪೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಇದ್ದು ಸುಮಾರು 1-7ನೇ ತರಗತಿಯ ಸುಮಾರು 70 ಮಕ್ಕಳುಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಸುಮಾರು 5 ಜನ ಶಿಕ್ಷಕರಿದ್ದು ಸುಮಾರು 4 ಕೊಠಡಿಗಳು ಶಿಥಿಲಾವಸ್ಥೆತ ತಲುಪಿದ್ದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪ್ರತಿ ಕೆ.ಡಿ.ಪಿ…
ತುಮಕೂರು: ಶ್ರೀನಗರದಲ್ಲಿ ಭಾರತೀಯ ಸೇನಾ ಯೋಧರ ಮೇಲೆ ಮಾಡಿರುವ ಉಗ್ರರ ದಾಳಿ ಖಂಡನೀಯ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಅತ್ಯಂತ ಭೀಕರವಾದ ಈ ದಾಳಿ ಹೇಡಿತನದ ಪರಮಾವಧಿ. ಉಗ್ರರು ಪದೇ ಪದೇ ಇಂಥ ಘೋರ ಕೃತ್ಯವನ್ನು ಎಸಗುತ್ತಲೇ ಬಂದಿದ್ದಾರೆ. ಉಗ್ರರಿಗೆ ಪಾಕಿಸ್ತಾನದ ಬೆಂಬಲವಿದೆ ಎಂದು ಸುದ್ದಿ ಕೇಳಿಬರುತ್ತಿದೆ. ಶಾಂತಿಯಿಂದ ಇರಲು ಬಯಸುವ ನಮ್ಮ ಭಾರತದಲ್ಲಿ ಪುನರಾವರ್ತಿತವಾಗಿ ಇಂಥ ಘಟನೆಗಳು ಸಂಭವಿಸುತ್ತಿರುವುದು ವಿಷಾದದ ಸಂಗತಿ. ಭಾರತ ಇದಕ್ಕೆ ತಕ್ಕ ಉತ್ತರ ಕೊಡಲಿದೆ. ಇಲ್ಲದೇ ಹೋದಲ್ಲಿ ಗಡಿಭಾಗದಲ್ಲಿರುವ ಯೋಧರು ಹಾಗೂ ಜನಸಾಮಾನ್ಯರಿಗೆ ಉಳಿಗಾಲವಿರುವುದಿಲ್ಲ. ದಾಳಿಯಲ್ಲಿ ಬಲಿಯಾದ ಮಂಡ್ಯ ಜಿಲ್ಲೆಯ ಯೋಧನಿಗೆ ರಾಜ್ಯ ಸರ್ಕಾರದ ವತಿಯಿಂದ ಪರಿಹಾರ ನೀಡಲಾಗುವುದು. ಮಾನವೀಯತೆ ಇರುವ ಪ್ರತಿಯೊಬ್ಬರೂ ಈ ಕೃತ್ಯವನ್ನು ಖಂಡಿಸಲೇಬೇಕು ಎಂದು ತಿಳಿಸಿದರು. ದೇಶದ ಭದ್ರತೆ,…
ತುಮಕೂರು: ಗ್ರಾಮೀಣ ಭಾಗದ ಜನರ ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ ನೀಡುತ್ತಿರುವ 3500 ರೂ.ಗಳ ಸಂಭಾವನೆಯನ್ನು 4000 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ ತಿಳಿಸಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಆಸ್ಪತ್ರೆ, ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ, ಕಿದ್ವಾಯ್ ಸಂಸ್ಥೆ, ಅಪೋಲೋ ಆಸ್ಪತ್ರೆ, ಬಿ.ಜಿ.ಎಸ್. ಆಸ್ಪತ್ರೆ ಹಾಗೂ ಭಾರತೀಯ ವೈದ್ಯಕೀಯ ಸಂಘಗಳ ಸಹಯೋಗದಲ್ಲಿ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದಲ್ಲಿಂದು ಏರ್ಪಡಿಸಿದ್ದ ಬೃಹತ್ ಆರೋಗ್ಯ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 3500 ರೂ.ಗಳ ಸಂಭಾವನೆ ನೀಡಲಾಗುತ್ತಿತ್ತು. ಪ್ರಸ್ತುತ 500 ರೂ.ಗಳನ್ನು ಹೆಚ್ಚಳ ಮಾಡಿ ಆಯವ್ಯಯದಲ್ಲಿ ಮಂಡಿಸಲಾಗಿದೆ. ಹುದ್ದೆಯನ್ನು ಖಾಯಂಗೊಳಿಸುವ ಬಗ್ಗೆ ಆಶಾ ಕಾರ್ಯಕರ್ತೆಯರಿಂದ ಬೇಡಿಕೆಯಿದ್ದು, ಮುಂಬರುವ ದಿನಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು…