ತುಮಕೂರು: ತುಮಕೂರು ಮಹಾ ನಗರಪಾಲಿಕೆ ಆಯುಕ್ತರಾಗಿ ಐ.ಎ.ಎಸ್. ಅಧಿಕಾರಿ ಟಿ. ಭೂಪಾಲನ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಉಡುಪಿ ಜಿಲ್ಲೆ ಕುಂದಾಪುರ ಉಪವಿಭಾಗದ ಹಿರಿಯ ಉಪವಿಭಾಗಾಧಿಕಾರಿಗಳಾಗಿದ್ದ ಟಿ. ಭೂಪಾಲನ್ ಅವರು ಈ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ಎಲ್. ಮಂಜುನಾಥಸ್ವಾಮಿ ಅವರಿಂದ ಅಧಿಕಾರ ವಹಿಸಿಕೊಂಡರು.
Author: News Desk Benkiyabale
ತುಮಕೂರು: ಜಿಲ್ಲಾದ್ಯಂತ ಫೆಬ್ರುವರಿ 3 ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ನಿಗಧಿತ ಗುರಿಯನ್ನು ಸಾಧಿಸಬೇಕೆಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಜರುಗಿದ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಚಾಲನಾ ಸಮಿತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪ್ರತೀ ಬಾರಿ 2 ಸುತ್ತಿನಲ್ಲಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿತ್ತು. ಈ ಬಾರಿ ಒಂದೇ ಸುತ್ತಿನಲ್ಲಿ ಹಮ್ಮಿಕೊಳ್ಳುತ್ತಿರುವುದರಿಂದ 0-5 ವರ್ಷದೊಳಗಿನ ಯಾವೊಂದು ಮಗುವೂ ಲಸಿಕೆಯಿಂದ ತಪ್ಪಿಹೋಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕೆಂದು ನಿರ್ದೇಶನ ನೀಡಿದರು. ಮಸೀದಿಗಳು ಹಾಗೂ ಖಾಸಗಿ ಸೇರಿದಂತೆ ಎಲ್ಲ ಸರ್ಕಾರಿ ಶಾಲೆಗಳ ಪ್ರಾರ್ಥನಾ ಸಭೆಯಲ್ಲಿ ಕಾರ್ಯಕ್ರಮದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಬೇಕಲ್ಲದೆ ಕಾರ್ಯಕ್ರಮದ ಹಿಂದಿನ ದಿನ ಶಾಲಾ ಮಕ್ಕಳಿಂದ ವಿಶೇಷವಾಗಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸುವುದರ ಜೊತೆಗೆ ಭಾನುವಾರದಂದು ಶಾಲೆಗಳನ್ನು ತೆರೆದಿಡಬೇಕು. ತಮ್ಮ ಸುತ್ತಮುತ್ತಲಿನ 5 ವರ್ಷದೊಳಗಿರುವ ಮಕ್ಕಳನ್ನು ಪಲ್ಸ್ ಪೋಲಿಯೋ ಬೂತ್‍ಗಳಿಗೆ ಕರೆತರುವಂತೆ…
ತುಮಕೂರು: ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ನಗರದಲ್ಲಿರುವ ಮಹಿಳಾ ಪೊಲೀಸ್ ಠಾಣೆಯನ್ನು ಅಗತ್ಯ ಸಿಬ್ಬಂದಿಗಳನ್ನು ಒದಗಿಸಿ ಮತ್ತಷ್ಟು ಬಲವರ್ಧನೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಕೋನ ವಂಶಿಕೃಷ್ಣ ಅವರು ತಿಳಿಸಿದರು. ತಮ್ಮ ಕಛೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನತೆ ನಿರ್ಭಯವಾಗಿ ಓಡಾಡಬೇಕು. ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವುದು ಇಲಾಖೆಯ ಪ್ರಥಮಾದ್ಯತೆ. ಜನರ ಸುರಕ್ಷತೆಗಾಗಿ ಮಾಧ್ಯಮದವರು ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಹಕರಿಸಬೇಕೆಂದು ಮನವಿ ಮಾಡಿದರು. ಈ ವಾರದಲ್ಲಿ ರೌಡಿ ಪರೇಡ್ :- ಜಿಲ್ಲೆಯಲ್ಲಿ ಯಾವುದೇ ರೀತಿಯ ಅಪರಾಧಗಳು ನಡೆಯದಂತೆ ಕ್ರಮ ಕೈಗೊಳ್ಳಲು ಈ ವಾರದಲ್ಲಿ ಜಿಲ್ಲಾ ಮಟ್ಟದ “ರೌಡಿ ಪರೇಡ್” ನಡೆಸಲಾಗುವುದು. ಈ ಪರೇಡ್‍ನಲ್ಲಿ ರೌಡಿ ಶೀಟರ್ ಪಟ್ಟಿಯಲ್ಲಿರುವವರ ಮೇಲೆ ನಿಗಾ ಇಡಲಾಗುವುದು. ಪ್ರತೀ ದಿನ ಅವರ ಮೊಬೈಲ್ ಸಂಖ್ಯೆ ಹಾಗೂ ಠಿಕಾಣಿಗಳ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಲಾಗುವುದೆಂದು…
ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ರಾಷ್ಟ್ರೀಯ ಮುಖಂಡರು ಆಗಮಿಸುವ ಹಿನ್ನೆಲೆ ನಗರದ ಹೊರಲವಯದಲ್ಲಿ ಹೆಲಿಪ್ಯಾಡ್ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಶ್ರೀಗಳ ಆರೋಗ್ಯ ವಿಚಾರಿಸಲು ಮುಖಂಡರು. ಸೆಲೆಬ್ರಿಟಿಗಳು ಉದ್ಯಮಿಗಳು ರಾಷ್ಟ್ರೀಯ ಮುಖಂಡರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಡಿತನಹಳ್ಳಿ ಗೇಟ್ ಬಳಿ 3, ಟ್ರಕ್ ಟರ್ಮಿನಲ್ ಬಳಿ 2, ಮಹಾತ್ಮಗಾಂಧಿ ಸ್ಟೇಡಿಯಂ ಬಳಿ 1, ತುಮಕೂರು ವಿವಿ ಆವರಣದಲ್ಲಿ 4 ಹೀಗೆ ಒಟ್ಟು 10 ಹೆಲಿಪ್ಯಾಡ್ಗಳನ್ನ ನಿರ್ಮಾಣ ಮಾಡಲಾಗುತ್ತಿದೆ. ಮಹಾತ್ಮ ಗಾಂಧಿ ಸ್ಟೇಡಿಯಂ ಸೇರಿದಂತೆ ವಿವಿಧ ಕಡೆ 10 ಹೆಲಿಪ್ಯಾಡ್ ಗಳನ್ನು ನಿರ್ಮಿಸಲಾಗುತ್ತಿದೆ.
ತುಮಕೂರು: ಶ್ರೀಗಳು ಆಸ್ಪತ್ರೆಯಲ್ಲಿ ಹೇಗಿದ್ದಾರೋ ಹಾಗೆ ಇದ್ದಾರೆ, ನಮ್ಮ ನಿರೀಕ್ಷೆಗೆ ತಕ್ಕಂತೆ ಗುಣಮುಖರಾಗಿಲ್ಲ ಎಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಬಿಜಿಎಸ್ ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಹೇಳಿದರು. ದೇಹದಲ್ಲಿ 2.8 ಪ್ರೊಟೀನ್ ಅಂಶವಿದೆ, ನಿಮಿಷಗಳ ಕಾಲ ಉಸಿರಾಡುತ್ತಾರೆ. ಕೆಲವೊಮ್ಮೆ ಕೃತಕ ಉಸಿರಾಟವನ್ನು ನೀಡಲಾಗುತ್ತಿದೆ. ಶಸ್ತ್ರಚಿಕಿತ್ಸೆ ನಡೆದ ಒಂದು ತಿಂಗಳ ಬಳಿಕ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲವೆಂದು ತಿಳಿಸಿದರು. ಅವರ ವಯಸ್ಸು ಜಾಸ್ತಿ ಆಗಿರುವುದರಿಂದ ಗುಣಮುಖರಾಗಲು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದೆ. ಅಲ್ಲದೆ ಶ್ವಾಸಕೋಶ ಹಾಗೂ ಹೊಟ್ಟೆಯ ಭಾಗದಲ್ಲಿ ನೀರು ತುಂಬಿಕೊಂಡಿರುವುದರಿಂದ ತೊಂದರೆ ಉಂಟಾಗುತ್ತಿದೆ ಎಂದು ಮಾಧ್ಯಮದವರಿಗೆ ಡಾಕ್ಟರ್ ರವೀಂದ್ರ ಮಾಹಿತಿ ನೀಡಿದ್ದಾರೆ.
ತುಮಕೂರು: ನಗರದ ಸಿದ್ದಗಂಗಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಭೇಟಿ ನೀಡಿ ಈ ಶತಮಾನದ ಸಿದ್ದಿಪುರುಷ, ತ್ರಿವಿಧ ದಾಸೋಹಮೂರ್ತಿ, ಕಾಯಕಯೋಗಿ, ನಡೆದಾಡುವ ದೇವರು ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯವನ್ನು ವಿಚಾರಿಸಿದರು. ಶ್ರೀಗಳು ಚಿಕಿತ್ಸೆ ಪಡೆಯುತ್ತಿರುವ ಶ್ರೀಕ್ಷೇತ್ರದ ಹಳೇಮಠದ ಕೊಠಡಿಗೆ ಶಾಸಕ ಎಸ್. ಸುರೇಶ್‌ಕುಮಾರ್, ಬಿ.ವೈ.ವಿಜಯೇಂದ್ರರವರೊಂದಿಗೆ ತೆರಳಿದ ಯಡಿಯೂರಪ್ಪನವರು ಶ್ರೀಗಳ ದರ್ಶನ ಪಡೆದು ಖುದ್ಧ ಆರೋಗ್ಯವನ್ನು ವಿಚಾರಿಸಿದರು. ಹಳೇ ಮಠದ ಕೊಠಡಿಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಸಿದ್ದಗಂಗಾ ಆಸ್ಪತ್ರೆಯ ವೈದ್ಯರು, ಕಿರಿಯ ಶ್ರೀಗಳಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರೊಂದಿಗೆ ಶ್ರೀಗಳ ಆರೋಗ್ಯ, ಅವರಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ಮಾಹಿತಿ ಪಡೆದು ಸುದೀರ್ಘವಾಗಿ ಚರ್ಚೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಡೆದಾಡುವ ದೇವರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ದರ್ಶನ ಮಾಡಿ ಬಂದಿದ್ದೇವೆ. ಆಸ್ಪತ್ರೆಯಲ್ಲಿ ನೀಡಬೇಕಾದ ಚಿಕಿತ್ಸೆಯನ್ನೆ ಮಠದಲ್ಲೂ ನೀಡಲಾಗುತ್ತಿದೆ. ಆದರೆ ಅವರ ಆರೋಗ್ಯದಲ್ಲಿ ನಿರೀಕ್ಷೆ ಮಟ್ಟಕ್ಕೆ ಚೇತರಿಕೆ ಕಂಡು…
ತುಮಕೂರು: ರಾಜ್ಯದ 156 ತಾಲ್ಲೂಕುಗಳು ಬರದಲ್ಲಿ ನರಳುತ್ತಿದ್ದರೆ, ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ದೊಂಬರಾಟವಾಡುತ್ತಿದ್ದು, ರೈತರ ಸ್ಥಿತಿ ಗಂಭೀರವಾಗಿದ್ದರು, ರೆಸಾರ್ಟ್ ರಾಜಕಾರಣ ಮಾಡುತ್ತಿರುವ ಶಾಸಕರುಗಳನ್ನು ಜನರೇ ಕ್ಷೇತ್ರ ಬಿಟ್ಟು ಓಡಿಸುತ್ತಾರೆ ಎಂದು ರಾಜ್ಯ ರೈತಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ತಿಳಿಸಿದ್ದಾರೆ. ನಗರದ ಕನ್ನಡಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರದಿಂದ ತತ್ತರಿಸಿರುವ ರೈತರಿಗೆ ಸೂಕ್ತ ಪರಿಹಾರ ದೊರೆಯುತ್ತಿಲ್ಲ, ಪರಿಹಾರವನ್ನು ದೊರಕಿಸಿಕೊಡಬೇಕಾದ ಶಾಸಕರುಗಳು ಜವಾಬ್ದಾರಿ ಇಲ್ಲದೆ ರೆಸಾರ್ಟ್‍ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ರೈತರ ಸಂಕಷ್ಟದ ಅರಿವಿಲ್ಲದ ಜನಪ್ರತಿನಿಧಿಗಳಿಗೆ ಜನರ ಬಗ್ಗೆ ಕಳಕಳಿ ಇಲ್ಲದಂತಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಬರ ಅಧ್ಯಯನ ನಡೆಸಿದ ಬಿಜೆಪಿ ಮಾಡಿದ್ದು ಕೇವಲ ರಾಜಕೀಯ ಗಿಮಿಕ್ ಅಷ್ಟೇ, ಬರ ಅಧ್ಯಯನದ ನಾಟಕವಾಡಿದರೆ ಹೊರತು ಕೇಂದ್ರದಿಂದ ನಯಾಪೈಸೆ ಅನುದಾನವನ್ನು ಪರಿಹಾರಕ್ಕಾಗಿ ಬಿಡುಗಡೆ ಮಾಡಿಸಲಿಲ್ಲ, ಮತಗಳಿಕೆಗಾಗಿ ಬರ ಅಧ್ಯಯನವನ್ನು ಮಾಡಿದರೆ ಹೊರತು ನಿಜವಾದ ರೈತ ಪರ ಕಳಕಳಿಯಿಲ್ಲ, ಬರದಿಂದ ಜನರು…
ತುಮಕೂರು: ಈ ಪುಣ್ಯಕಾಲದಲ್ಲಿ ದರ್ಶನ ಮಾಡಲು ಬಂದೆ ದರ್ಶನ ಆಗಿದೆ. ಭಗವಂತ ಯಾವಾಗ ತೀರ್ಮಾನ ಮಾಡ್ತಾನೋ ನಮಗೆ ಗೊತ್ತಿಲ್ಲಾ. ಇನ್ನೂ ಉಸಿರಾಡುವಶಕ್ತಿ ಶ್ರಿ ಗಳಿಗೆ ಇದೆ. ಇಂಥ ದಿನವೇ ಅಂತಾ ನಾನು ಹೇಳಲು ಸಾಧ್ಯವಿಲ್ಲ. ಪರಮೇಶ್ವರ ಕರೆದಾಗ ಹೋಗಬೇಕು ಎಂದು ಮಾಜಿ ಪ್ರಧಾನಿ , ಜೆಡಿಎಸ್ ರಾಷ್ಟ್ರೀಯ ಅದ್ಯಕ್ಷ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ. ಅವರು ಇಂದು ಶ್ವಾಸಕೋಶದ ತೊಂದರೆಯಿಂದಾಗಿ ಮಠದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಡಾ||ಶ್ರೀ ಶಿವಕುಮಾರ ಸ್ವಾಮೀಜಿ ದರ್ಶನ ಮಾಡಿ ಶ್ರೀ ಗಳು ಶೀಘ್ರವಾಗಿ ಗುಣಮುಖ ರಾಗಲೆಂದು ಆಶಿಸಿದರು. ಶ್ರೀ ಗಳಿಗೆ ನೀಡಲಾಗುವ ಚಿಕಿತ್ಸಾ ವಿಧಾನದ ಬಗ್ಗೆ ಕಿರಿಯ ಶ್ರೀ ಗಳಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ವೈದ್ಯರಿಂದ ಅವರಿಂದ ಮಾಹಿತಿ ಪಡೆದರು. ನಂತರ ಮಾದ್ಯಮ ದೂಂದಿಗೆ ಮಾತನಾಡಿ,ಗುರುಗಳಿಗೆ 111 ವರ್ಷವಾಗಿದೆ. ಹೀಗಾಗಿ ಸ್ವಾಭಾವಿಕವಾಗಿ ಅವರ ಆರೋಗ್ಯದಲ್ಲಿ ಏರು ಪೇರಾಗಿದೆ. ಸುಮಾರು 89 ವರ್ಷಗಳಿಗೂ ಅಧಿಕ ಕಾಲ ಅವರು ಮಠದಲ್ಲಿ ಸೇವೆ ಸಲ್ಲಿಸಿದ್ದು, ಲಕ್ಷಾಂತರ ಮಕ್ಕಳಿಗೆ…
ತುಮಕೂರು : ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದ ಸ್ಥಿತಿ ಯಥಾಪ್ರಕಾರವಾಗಿದ್ದು ನಿನ್ನೆಯಂತೆ ಮುಂದುವರೆದಿದೆ ಎಂದು ಸದ್ಧಗಂಗಾ ಆಸ್ಪತ್ರೆಯ ವೈದ್ಯ ಡಾ. ಪರಮೇಶ್ ತಿಳಿಸಿದ್ದಾರೆ. ಸ್ವಾಮೀಜಿಯವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಠದಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ವೆಂಟಿಲೇಟರ್ ಇಲ್ಲದೆ ಒಂದು ಗಂಟೆ ಕಾಲ ಉಸಿರಾಟ ಮಾಡುತ್ತಿದ್ದಾರೆ. ಬಳಿಕ ವೆಂಟಿಲೇಟರ್ ಅಳವಡಿಕೆ ಮಾಡಲಾಗುತ್ತಿದೆ. ಶ್ರೀ ಗಳ ದೇಹದಲ್ಲಿ ಸೋಂಕು ಕಡಿಮೆಯಾಗಿದೆ. ದೇಹದಲ್ಲಿ ಶಕ್ತಿ ಇಲ್ಲದ ಕಾರಣ ಜೀರ್ಣಕ್ರಿಯೆ ಆಗುತ್ತಿಲ್ಲ. ಶಕ್ತಿಗಾಗಿ ಪ್ರೋಟಿನ್ ವಿಟಮಿನ್ ಅಲ್ಬುಮಿನ್ ಅಗತ್ಯವಿದೆ. ಇದೆಲ್ಲಾ ಕಡಿಮೆ ಇರುವುದರಿಂದ ಉಸಿರಾಟದ ತೊಂದರೆ ಆಗುತ್ತಿದೆ. ಸದ್ಯಕ್ಕೆ ದ್ರವಾಹಾರ ನೀಡಲಾಗುತ್ತಿಲ್ಲ. ಮೆಡಿಸಿನ್ ಮಾತ್ರ ಅವರಿಗೆ ನೀಡಲಾಗುತ್ತಿದೆ. ಬೆಳಗ್ಗೆ ಮತ್ತು ಸಂಜೆ ರಕ್ತ ಪರೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಭಕ್ತಾದಿಗಳು ಪದೇ ಪದೇ ಮಠಕ್ಕೆ ಬರುವುದು ಬೇಡ. ಸ್ವಾಮೀಜಿ ಅವರಿಗೆ ವಿಶ್ರಾಂತಿ ಅಗತ್ಯವಿದೆ. ನೀವು ಬಂದರೂ ಶ್ರೀಗಳ ದರ್ಶನ ಮಾಡಲು…
ತುಮಕೂರು: ಮೈಸೂರಿನ ಮಹರಾಜ ಯದುವೀರ್ ಒಡೆಯರ್ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್ ಒಡೆಯರ್, ನಾನು ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದೆ. ಹಾಗೇ ಶ್ರೀಗಳನ್ನು ನೋಡಲು ಬಂದಿದ್ದೇನೆ. ಶ್ರೀಗಳು ಆರೋಗ್ಯವಾಗಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಅಂತ ಚಾಮುಂಡೇಶ್ವರಿ ತಾಯಿಯಲ್ಲಿ ಪ್ರಾರ್ಥನೆ ಮಾಡ್ತೇನೆ. ಶ್ರೀಗಳು ವಿಶ್ರಾಂತಿಯಲ್ಲಿದ್ದರಿಂದ ಅವರನ್ನು ಎಚ್ಚರಿಸಲು ಹೋಗಲಿಲ್ಲ. ಅವರ ಜೊತೆ ಮಾತನಾಡುವ ಅವಕಾಶ ಸಿಗಲಿಲ್ಲ. ಹಾಗಾಗಿ ನಾನು ಅವರ ಆಶೀರ್ವಾದ ಪಡೆದುಕೊಂಡು, ಅವರನ್ನು ನೋಡಿಕೊಂಡು ಬಂದೆ” ಎಂದು ಹೇಳಿದರು.