Author: News Desk Benkiyabale

ತುಮಕೂರು:       ರಾಜ್ಯದ ಲೋಕೋಪಯೋಗಿ ಸೇರಿದಂತೆ ವಿವಿಧ ಅಭಿವೃದ್ಧಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಜಿನಿಯರ್‍ಗಳು ಕರ್ತವ್ಯದ ನಂತರ ಬಿಡುವಿನ ವೇಳೆಯಲ್ಲಿ ಹವ್ಯಾಸಕ್ಕೆಂದು ಹಳೆಯ ಜನಪ್ರಿಯ ಕನ್ನಡ ಹಾಗೂ ಹಿಂದಿ ಚಲನಚಿತ್ರ ಗೀತೆಗಳನ್ನು ಹಾಡುತ್ತ,ಹಾಡುತ್ತ ಒಂದು ತಂಡವಾಗಿ ರೂಪುಗೊಂಡಿದ್ದಾರೆ. ಮುಖ್ಯ ಇಂಜಿನಿಯರ್ ಡಿ.ಉದಯಶಂಕರ್ ಈ ತಂಡದ ಸಂಸ್ಥಾಪಕ ಅಧ್ಯಕ್ಷರಾಗಿ “ನಾದೋಪಾಸನ” ಎಂಬ ಹೆಸರಿನ ನೊಂದಾಯಿತ ಸಂಗೀತ ತಂಡವೊಂದನ್ನು ರಚಿಸಿಕೊಂಡಿದ್ದಾರೆ. ಇವರು ಈಗಾಗಲೇ ರಾಜಧಾನಿ ಬೆಂಗಳೂರಿನ ವಿವಿಧೆಡೆ ಐದಾರು ಸಂಗೀತ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಮೈಸೂರು ದಸರಾ, ಚಿತ್ರಕಲಾಪರಿಷತ್ತಿನ ಚಿತ್ರಸಂತೆ, ಕರ್ನಾಟಕ ಸಚಿವಾಲಯ ಕ್ಲಬ್, ಇಂಜಿನಿಯರ್ಸ್ ಕ್ಲಬ್ ಮೊದಲಾದೆಡೆ ಜನಾಕರ್ಷಣೀಯ ಕಾರ್ಯಕ್ರಮಗಳನ್ನು ನೀಡಿ ಜನಮನ್ನಣೆ ಪಡೆದಿದ್ದಾರೆ.       “ಒಳಿತು ಮಾಡು ಮನುಜ ನೀನಿರೋದು ಮೂರು ದಿವಸ” ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮಗಳನ್ನು ನೀಡುತ್ತ, ಅಂಧರು, ಅಶಕ್ತರು ಹಾಗೂ ಅನಾಥರನ್ನು ಸಂಗೀತ ಸಂಜೆಗೆ ಕರೆಸಿ, ಅವರ ಮನರಂಜಿಸಿ, ಅಲ್ಲಿ ಸಹೃದಯರು ಉದಾರವಾಗಿ ನೀಡುವ ನಿಧಿಯನ್ನು ಈ ತಂಡಗಳಿಗೆ ನೀಡುತ್ತ ಬಂದಿದೆ.    …

Read More

 ತುಮಕೂರು:       ಸಾವಿರಾರು ಮಕ್ಕಳ ಜನನಕ್ಕೆ ಕಾರಣವಾಗಿರುವ ಮಹಾತಾಯಿ ಪದ್ಮಶ್ರೀ ಡಾ|| ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ನಗರದಲ್ಲಿನ ವೃತ್ತಕ್ಕೆ ಅವರ ಹೆಸರನ್ನು ನಾಮಕರಣ ಮಾಡುವಂತೆ ಜಿಲ್ಲಾಡಳಿತಕ್ಕೆ ಡಿಸಿಎಂ ಪರಮೇಶ್ವರ್ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ ತಿಳಿಸಿದರು.       ವಾರ್ಡ್.12 ಗಂಗಸಂದ್ರದಲ್ಲಿ ಡಾ.ಸೂಲಗಿತ್ತಿ ನರಸಮ್ಮ ಸ್ಮಾರಕ ಶಂಕುಸ್ಥಾಪನೆ ಹಾಗೂ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಸ್ತ್ರಚಿಕಿತ್ಸಾ ತಜ್ಞರಿಗಿಂತ, ಹೈಟೆಕ್ ಆಸ್ಪತ್ರೆಗಳ ಅತ್ಯಾಧುನಿಕ ಉಪಕರಣಗಳ ನೆರವಿಲ್ಲದೆ ಸಾವಿರಾರು ಹೆರಿಗೆಯನ್ನು ಯಶಸ್ವಿಯಾಗಿ ಮಾಡಿರುವ ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ವೃತ್ತ, ರಸ್ತೆ, ಪಾರ್ಕ್‍ಗೆ ನಾಮಕರಣ ಮಾಡುವಂತೆ ಈಗಾಗಲೇ ಉಪಮುಖ್ಯಮಂತ್ರಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆ ಸೂಲಗಿತ್ತಿ ನರಸಮ್ಮ ಅವರ ಹೆಸರು ನಾಮಕರಣ ಮಾಡಲು ಶೀಘ್ರ ಕ್ರಮವಹಿಸಬೇಕಿದೆ ಎಂದು ಹೇಳಿದರು.       ಸೂಲಗಿತ್ತಿ ನರಸಮ್ಮ ಅವರು ಈ ನಾಡಿನ ಆಸ್ತಿ, ಅವರು…

Read More

 ತುಮಕೂರು:       ನಗರದ ಜೆಸಿ ರಸ್ತೆಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಸ್ಥರಿಗೆ ಯಾವುದೇ ನೋಟೀಸ್ ನೀಡದೇ, ಜೆಸಿಬಿ ಯಂತ್ರಗಳ ಮೂಲಕ ಅಂಗಡಿಗಳನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರಸ್ತೆ ಬದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.       ಟೌನ್‍ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವ್ಯಾಪಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರಸ್ತೆ ಬದಿ ವ್ಯಾಪಾರಿಗಳ ಸಂಘದ ರಾಜ್ಯಾಧ್ಯಕ್ಷ ಬಾಬಾ ಮಾತನಾಡಿ ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸದೇ ಸುಪ್ರೀಂಕೋರ್ಟ್ ಆದೇಶ ನೀಡಿದ್ದರೂ, ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಅಕ್ರಮವಾಗಿ ಒಕ್ಕಲೆಬ್ಬಿಸುವ ಪ್ರಯತ್ನವನ್ನು ಮಾಡಲಾಗುತ್ತಿದ್ದು, ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಬೀದಿಬದಿ ವ್ಯಾಪಾರಿಗಳ ಹಿತ ಕಾಯುವಂತೆ ಮನವಿ ಮಾಡಿದರು.       ಕಳೆದ 10-15 ವರ್ಷಗಳಿಂದ ಅಲ್ಲಿಯೇ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ವ್ಯಾಪಾರಿಗಳಿಗೆ ನೋಟೀಸ್ ನೀಡದೆ, ವ್ಯಾಪಾರಿಗಳ ಕುಂದುಕೊರತೆ ಸಭೆ ಕರೆಯದೇ ಅಂಗಡಿ/ತಳ್ಳುವಗಾಡಿಗಳನ್ನು ತೆರವುಗೊಳಿಸಿರುವುದರಿಂದ…

Read More

 ತುಮಕೂರು :       ಸರ್ಕಾರಿ ನೌಕರರು ಕೆಲಸದ ಒತ್ತಡ ಹಾಗೂ ಮಾನಸಿಕ ಒತ್ತಡಗಳಿಂದ ಮುಕ್ತರಾಗಲು ಕ್ರೀಡೆ ಸಹಕಾರಿ ಎಂದು ಸಂಸದ ಎಸ್.ಪಿ. ಮುದ್ದಹನುಮೇಗೌಡ ಅಭಿಪ್ರಾಯಪಟ್ಟರು.       ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿಂದು ಏರ್ಪಡಿಸಲಾಗಿದ್ದ “ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ”ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಸರ್ಕಾರಿ ನೌಕರರು ಬೆಳಗಿನಿಂದ ಸಂಜೆಯವರೆಗೂ ಒತ್ತಡದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಅಲ್ಲದೆ ಕುಳಿತಲ್ಲೇ ಕೆಲಸ ಮಾಡುವುದರಿಂದ ಸ್ಥೂಲಕಾಯ ಉಂಟಾಗಿ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇರುತ್ತದೆ. ಇದರಿಂದ ಮಾನಸಿಕ ಒತ್ತಡ, ಅನಾರೋಗ್ಯ ಸಮಸ್ಯೆಯನ್ನು ಅನುಭವಿಸುತ್ತಿರುತ್ತಾರೆ. ನಿಯಮಿತವಾಗಿ ಯೋಗ, ಧ್ಯಾನ, ದೈಹಿಕ ವ್ಯಾಯಾಮ, ಕ್ರೀಡಾಭ್ಯಾಸವನ್ನು ರೂಢಿಸಿಕೊಳ್ಳುವುದರಿಂದ ಇಂತಹ ಸಮಸ್ಯೆಗಳಿಂದ ದೂರವಾಗಬಹುದು. ಅಲ್ಲದೆ ಸೇವಿಸುವ ಆಹಾರದಲ್ಲಿಯೂ ಸಮತೋಲನವನ್ನು ಕಾಪಾಡಿಕೊಳ್ಳಬೇಕೆಂದು ಅವರು ಕಿವಿಮಾತು ಹೇಳಿದರು.      …

Read More

ತುಮಕೂರು :       ಸಿದ್ದಗಂಗಾ ಶ್ರೀಗಳಾದ ಡಾ: ಶಿವಕುಮಾರ ಸ್ವಾಮೀಜಿ ಅವರು ಶೀಘ್ರ ಗುಣಮುಖರಾಗಲಿ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರು ಆಶಿಸಿದರು.        ನಗರದ ಸಿದ್ದಗಂಗಾ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶಿವಾನಂದ ಪಾಟೀಲ್ ಅವರು ನಡೆದಾಡುವ ದೇವರು, ಸಿದ್ದಗಂಗೆಯ ಸಿದ್ದಿ ಪುರುಷ ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯ ವಿಚಾರಿಸಿದರು.       ಇಲ್ಲಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ಮುನ್ನ ಸಿದ್ದಗಂಗಾ ಆಸ್ಪತ್ರೆಗೆ ಆಗಮಿಸಿದ ಸಚಿವ ಶಿವಾನಂದ ಪಾಟೀಲ್ ಅವರು ಶ್ರೀಗಳ ದರ್ಶನಾಶೀರ್ವಾದ ಪಡೆದು ಆರೋಗ್ಯ ವಿಚಾರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಆಸ್ಪತ್ರೆಯ ವೈದ್ಯರು ಸಹ ಶ್ರೀಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದರು.       ಶ್ರೀಗಳು ಅತಿ ಶೀಘ್ರವಾಗಿ ಗುಣಮುಖರಾಗಲಿದ್ದಾರೆ. ಸಿದ್ದಗಂಗಾ ಆಸ್ಪತ್ರೆಯ ವೈದ್ಯರ…

Read More

 ತುಮಕೂರು :       ಜಿಲ್ಲಾಸ್ಪತ್ರೆಯು ಇತರೆ ಜಿಲ್ಲೆಗಳಿಗೆ ಮಾದರಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.       ಜಿಲ್ಲಾಸ್ಪತ್ರೆಗಿಂದು ಭೇಟಿ ನೀಡಿ ಪರಿಶೀಲಿಸಿದ ಅವರು, ತುಮಕೂರಿನ ಜನತೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಹೋಗದಂತೆ ಜಿಲ್ಲಾಸ್ಪತ್ರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಸರ್ಕಾರದ ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಗಳಿಂದ ಆಸ್ಪತ್ರೆಗಳಿಗೆ ಆದಾಯ ಬರುತ್ತಿದ್ದು, ಈ ಯೋಜನೆಯಡಿ ತುಮಕೂರು ಜಿಲ್ಲಾಸ್ಪತ್ರೆಯು ಮಾಹೆಯಾನ 30ಲಕ್ಷ ರೂ.ಗಳಿಗೂ ಹೆಚ್ಚು ಆದಾಯವನ್ನು ಗಳಿಸುವ ಮೂಲಕ ಇತರೆ ಜಿಲ್ಲೆಗಳಿಗಿಂತ ಮುಂಚೂಣಿಯಲ್ಲಿದೆ. ಗಳಿಸಿದ ಆದಾಯದ ಹಣವನ್ನು ಶೇ. 50ರಷ್ಟು ಜಿಲ್ಲಾಸ್ಪತ್ರೆಯ ಅಭಿವೃದ್ಧಿ, ಶೇ. 30ರಷ್ಟು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಪ್ರೋತ್ಸಾಹಧನಕ್ಕಾಗಿ ವಿನಿಯೋಗಿಸಲಾಗುವುದಲ್ಲದೆ ಉಳಿದ ಶೇ.20ರಷ್ಟು ಹಣವನ್ನು ಸರ್ಕಾರದ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದರು.        ಸ್ಮಾರ್ಟ್ ಸಿಟಿ ಯೋಜನೆಯಡಿ ಜಿಲ್ಲಾಸ್ಪತ್ರೆಯಲ್ಲಿ ಹೊಸದಾಗಿ ಅಪಘಾತ ಚಿಕಿತ್ಸಾ ವಿಭಾಗ ಹಾಗೂ 100 ಹಾಸಿಗೆಗಳುಳ್ಳ ಸುಸಜ್ಜಿತ…

Read More

ತುಮಕೂರು:       ಹನ್ನೆರಡು ಬೇಡಿಕೆಗಳ ಆಧಾರದಲ್ಲಿ ರಾಷ್ಟ್ರಮಟ್ಟದಲ್ಲಿ ಕರೆ ನೀಡಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಜೆಸಿಟಿಯು ಅಡಿಯಲ್ಲಿ ತುಮಕೂರು ನಗರದ ಟೌನ್‍ಹಾಲ್ ಬಳಿ ನೂರಾರು ಕಾರ್ಮಿಕರು ಬೆಳಗ್ಗೆ 9 ಗಂಟೆಗೆ ಸಮಾವೇಶಗೊಂಡರು. ಅಂಗನವಾಡಿ ನೌಕರರು, ಆಶಾ, ಕೈಗಾರಿಕಾ ಕಾರ್ಮಿಕರು, ಪೌರಕಾರ್ಮಿಕರು, ಬಿಎಸ್‍ಎನ್‍ಎಲ್ ನೌಕರರು, ಜೀವ ವಿಮಾ ನೌಕರರು, ಗುತ್ತಿಗೆ ಕಾರ್ಮಿಕರು ಮಧ್ಯಾಹ್ನ 12 ಗಂಟೆಯವರೆಗೆ ಘೋಷಣೆಗಳನ್ನು ಕೂಗುತ್ತ ಟೌನ್‍ಹಾಲ್ ವೃತ್ತದಲ್ಲಿ ಧರಣಿ ನಡೆಸಿದರು.       ಧರಣಿಯ ಕಾರ್ಮಿಕರನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ, ಇಪ್ಪತ್ತು ಕೋಟಿ ಕಾರ್ಮಿಕರು ಬೀದಿಗಿಳಿದು ಮುಷ್ಕರ ನಡೆಸಿದಾಗ್ಯೂ ಕೇಂದ್ರ ಸರ್ಕಾರ ಕಾರ್ಮಿಕರ ಬೇಡಿಕೆಯ ಬಗ್ಗೆ ಮಾತುಕತೆ ಆಹ್ವಾನಿಸದೆ ನಿರ್ಲಕ್ಷ್ಯ ವಹಿಸಿರುವುದು ಸರ್ಕಾರಕ್ಕೆ ದುಡಿಯುವ ಜನರ ಬಗ್ಗೆ ಇರುವ ತಾತ್ಸಾರಕ್ಕೆ ಸಾಕ್ಷಿ ಎಂದರು.       ಇದೊಂದು ರಾಜಕೀಯ ಪ್ರೇರಿತ ಹೋರಾಟ ಹಾಗೂ ಬಂದ್ ವಿಫಲವಾಗಿದೆ ಎಂದು ಬೊಬ್ಬೆ ಇಡುತ್ತಿರುವವರನ್ನು ತರಾಟೆಗೆ ತೆಗೆದುಕೊಂಡ ಅವರು, ಕನಿಷ್ಠ ಕೂಲಿ,…

Read More

 ಕೊರಟಗೆರೆ:       ಪ್ರೀತಿಸಿ ಯುವತಿಯ ಜೊತೆ ಮದುವೆಯಾದ ದ್ವೇಷದ ಕಿಚ್ಚಿನಿಂದ ಬೆಂಗಳೂರು ನಗರದ ಶಾಸಕರೊಬ್ಬರ ತಮ್ಮನ ಕಡೆಯ 8ಜನ ಆರೋಪಿಗಳ ತಂಡ ತುಮಕೂರು ತಾಲೂಕಿನ ಬಳಗೆರೆ ಗ್ರಾಮದ ರೌಡಿಶೀಟರ್ ಮನುಗೆ ಮಧ್ಯಪಾನ ಮಾಡಿಸಿ ಕುಡಿದ ಮತ್ತಿನಲ್ಲಿ ಕೈ ಮತ್ತು ಕಾಲಿಗೆ ಹಗ್ಗದಿಂದ ಕಟ್ಟಿ ಲಾಂಗ್ ಮತ್ತು ಮಚ್ಚಿನಿಂದ 14ಭಾರಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸೋಮವಾರ ಮಧ್ಯರಾತ್ರಿ ನಡೆದಿದೆ.         ತಾಲೂಕಿನ ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾಮದ ರೈತರಾದ ಸೂಲಪ್ಪ ಮತ್ತು ತಿಮ್ಮಪ್ಪ ಎಂಬುವರ ಜಮೀನಿನ ಮೂಲಕ ಕಲ್ಲು ಗಣಿಗಾರಿಕೆಗೆ ಹಾದುಹೋಗುವ ಮಣ್ಣಿನ ನಡುರಸ್ತೆಯಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದ ಕಾಪಾಕ್ಷಿಪಾಳ್ಯದ ವಾಸಿಯಾದ ಮನು(38) ಎಂಬುವನೇ 8ಜನರಿಂದ ಕೊಲೆಯಾದ ದುರ್ದೈವಿ.        ಮೃತ ಮನು ಮೂಲತಃ ತುಮಕೂರು ಗ್ರಾಮಾಂತರ ತಾಲೂಕಿನ ಹೆಬ್ಬೂರು ಹೋಬಳಿ ಬಳಗೆರೆ ಗ್ರಾಮದ ವಾಸಿ. ಪ್ರಸ್ತುತ ಬೆಂಗಳೂರು ನಗರದ ಕಾಮಾಕ್ಷಿಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಬೆಂಗಳೂರು ನಗರ…

Read More

ನವದೆಹಲಿ:       ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಎರಡು ದಿನಗಳ ಕಾಲ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಎರಡು ದಿವಸಗಳ ರಾಷ್ಟ್ರವ್ಯಾಪಿ ಮುಷ್ಕರದಲ್ಲಿ ಮೊದಲ ದಿವಸದ ಮುಷ್ಕರ ಕೆಲ ನಿಮಿಷಗಳ ಹಿಂದಷ್ಟೆ ಮುಕ್ತಾಯವಾಗಿದೆ.       ಇನ್ನು ಎರಡು ದಿವಸಗಳ ಬಂದ್ ಪೈಕಿ ಮೊದಲನೇ ದಿವಸದ ಬಂದ್ ಇಂದು ಮುಕ್ತಾಯವಾಗಿದ್ದು, ಎಂದಿನಿಂತೆ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಇನ್ನು ನಾಳೆ ಕೂಡ ಬಂದ್ ಮುಂದುವರೆಯಲಿದ್ದು, ನಾಳೆ ಬೆಂಗಳೂರು ಸೇರಿ ರಾಜ್ಯಾದಂತ್ಯ ಸರಕಾರಿ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎನ್ನಲಾಗುತ್ತಿದೆ.       ನಾಳೆಯೂ ಕೂಡ ಸರಕಾರಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ಇಲ್ಲಿ ತನಕ ಯಾವುದೇ ಅಧಿಕೃತ ಆದೇಶವು ಬಂದಿಲ್ಲ. ಇನ್ನು ಖಾಸಗಿ ಶಾಲೆಗಳು ಪರಿಸ್ಥಿತಿ ನೋಡಿಕೊಂಡು ಶಾಲೆಗೆ ರಜೆ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಬಹುದಾಗಿದೆ ಅಂತ ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಅವರು ಮಾಧ್ಯಗಮಳಿಗೆ ಮಾಹಿತಿ ನೀಡಿದ್ದಾರೆ.    …

Read More

ಕಾರವಾರ:       ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆ ಮೆರವಣಿಗೆ ವೇಳೆ ಅಂಗನವಾಡಿ ಸಹಾಯಕ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ.       ಮೃತ ಮಹಿಳೆಯನ್ನು ಮುಂಡಗೋಡು ತಾಲೂಕಿನ ಶಿಡ್ಲಗುಂಡಿ ಗ್ರಾಮದ ಅಂಗನವಾಡಿಯ ಸಹಾಯಕಿ ಶಾಂತವ್ವ ಚಕ್ರಸಾಲಿ (57) ಎಂದು ಗುರುತಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ತಾಲೂಕು ಪಂಚಾಯಿತಿ ಎದುರು ಮಂಗಳವಾರ ಪ್ರತಿಭಟನೆ ಮೆರವಣಿಗೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಶಾಂತವ್ವ ಏಕಾಏಕಿ ಕುಸಿದು ಬಿದ್ದಿದ್ದಾರೆ.       ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆಸ್ಪತ್ರೆ ಬಳಿ ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು ಜಮಾಯಿಸಿದ್ದಾರೆ.

Read More