Author: News Desk Benkiyabale

ಚಿಕ್ಕನಾಯಕನಹಳ್ಳಿ:       ವಕೀಲರ ಸಮಸ್ಯೆ ನೀಗಿಸಲು ಸ್ಟಾಂಪ್ ತೆಗೆದು ಹಾಕುವ ಮೂಲಕ ಆನ್‍ಲೈನ್ ಮೂಲಕ ಮೊಬೈಲ್‍ನಲ್ಲಿ ಆಪ್ ರೀತಿಯಲ್ಲಿ ಪೇಮೆಂಟ್ ಮಾಡುವ ವ್ಯವಸ್ಥೆಗೆ ರಾಜ್ಯ ವಕೀಲರ ಪರಿಷತ್ ಚಿಂತನೆಯಲ್ಲಿದೆ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯ ಹೆಚ್. ಎಲ್ ವಿಶಾಲ್ ರಾಘು ತಿಳಿಸಿದರು.       ಪಟ್ಟಣದ ಸಿವಿಲ್ ನ್ಯಾಯಾಲಯದ ಸಭಾಂಗಣದಲ್ಲಿ ವಕೀಲರಿಗೆ ಆಯೋಜಿಸಿದ್ದ ಕಾನೂನು ಕಾರ್ಯಗಾರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ ವಕೀಲರ ಪರಿಷತ್ ಸದಾ ನಿಮ್ಮೊಂದಿಗೆ ಕೈ ಜೋಡಿಸುತ್ತೇವೆ. ಹತ್ತು ಹಲವಾರು ವಕೀಲರ ಬೇಡಿಕೆಗೆ ಪರಿಷತ್ ಕೂಡ ಪೂರಕವಾಗಿ ಕೆಲಸ ಮಾಡಲು ಕಂಕಣ ಬದ್ದವಾಗಿದೆ ಈಗಾಗಲೇ ರಾಜ್ಯದ ನಾನಾ ಮೂಲಗಳಿಂದ ವಕೀಲರ ಸ್ಟಾಂಪ್‍ವೇಲ್‍ಪೇರ್ ಬಗ್ಗೆ ಇದ್ದ ಪ್ರಶ್ನೆಗೆ ಪೂರಕವಾಗಿ ಸ್ಟಾಂಫ್ ತೆಗೆದುಹಾಕುವಂತೆ ಇರುವ ಬೇಡಿಕೆಗೆ ಪೂರಕವಾಗಿ ಚರ್ಚೆ ನಡೆಯುತ್ತಿದ್ದು, ಆನ್‍ಲೈನ್ ಮೂಲಕವೇ ಪೇಮೆಂಟ್ ಮಾಡುವ ವ್ಯವಸ್ಥೆಯ ಮೂಲಕ ಗ್ರಾಮಾಂತರ ಪ್ರದೇಶದ ವಕೀಲರಿಗೂ ಅನುಕೂಲ ಆಗುವ ರೀತಿಯಲ್ಲಿ ಮೊಬೈಲ್ ಆಪ್ ತರುವ ಯೋಜನೆ ಮೂಲಕ…

Read More

 ತುಮಕೂರು:       ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ನವದೆಹಲಿಯ ಜಂತರ್‍ಮಂತರ್‍ನಲ್ಲಿ ಆಲ್ ಇಂಡಿಯಾ ಹ್ಯುಮರ್‍ರೈಟ್ಸ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಮಾವೇಶದಲ್ಲಿ ಅಸೋಸಿಯೇಷನ್‍ನ (AIHRA) ತುಮಕೂರು ಜಿಲ್ಲಾ ಮುಖ್ಯಸ್ಥ ನಗರದ ಸೈಯದ್ ಯೂಸುಫ್ ಉಲ್ಲಾ ಅವರಿಗೆ (AIHRA) ಅಸೋಸಿಯೇಷನ್‍ನ ರಾಷ್ಟ್ರೀಯ ಅಧ್ಯಕ್ಷ ಎಂ.ಯು.ದುವಾ ಅವರು ಉತ್ತಮ ‘ಮಾನವ ಹಕ್ಕುಗಳ ಕಾರ್ಯಕರ್ತ’ ಪುರಸ್ಕಾರ ನೀಡಿ ಗೌರವಿಸಿರುತ್ತಾರೆ.       ದೆಹಲಿಯ ಜಂತರ್‍ಮಂತರ್‍ನಲ್ಲಿ (AIHRA) ಅಸೋಸಿಯೇಷನ್ ವತಿಯಿಂದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆನಡೆಸುವ ಜೊತೆಗೆ ಕೇಂದ್ರ ಸರ್ಕಾರದ ಗಮನಸೆಳೆಯಲು ಒಂದು ದಿನದ ಪ್ರತಿಭಟನಾ ಧರಣಿಯನ್ನೂ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ದೇಶದ ನಾನಾ ಭಾಗಗಳಿಂದ ಸಾವಿರಾರು ಮಾನವಹಕ್ಕುಗಳ ಕಾರ್ಯಕರ್ತರು ಭಾಗವಹಿಸಿದ್ದರು. ದೇಶದ ಆಯ್ದ ಉತ್ತಮ ಮಾನವ ಹಕ್ಕು ಕಾರ್ಯಕರ್ತರನ್ನು ರಾಷ್ಟ್ರೀಯ ಅಧ್ಯಕ್ಷರು ಪುರಸ್ಕರಿಸಿದ್ದು, ಇವರಲ್ಲಿ ತುಮಕೂರಿನ ಸೈಯದ್ ಯೂಸುಫ್ ಉಲ್ಲಾ ಅವರೂ ಒಬ್ಬರಾಗಿ ಪುರಸ್ಕಾರ ಸ್ವೀಕರಿಸಿದ್ದಾರೆ.

Read More

 ತುಮಕೂರು:       ವಾಣಿಜ್ಯ ಬ್ಯಾಂಕ್‍ಗಳಲ್ಲಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಅರ್ಹ ಫಲಾನುಭವಿ ರೈತರು ಸ್ವಯಂ ಘೋಷಣೆಯನ್ನು ನೋಂದಾಯಿಸಿಕೊಳ್ಳಲು ಬರುವ 2019ರ ಜನವರಿ 10 ಕಡೆ ದಿನಾಂಕವಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ 226 ವಾಣಿಜ್ಯ ಬ್ಯಾಂಕ್‍ಗಳ ಶಾಖೆಗಳಲ್ಲಿನ ಸುಮಾರು 85 ಸಾವಿರ ರೈತರ ಅರ್ಹತೆಯನ್ನು ಪಡೆದಿರುತ್ತಾರೆ. ಅದೇ ರೀತಿ 1.22ಲಕ್ಷ ರೈತರು ಸಹಕಾರ ಸಂಘ/ ಬ್ಯಾಂಕ್‍ಗಳಲ್ಲಿ ಬೆಳೆ ಸಾಲ ಪಡೆದಿದ್ದು, ಸಾಲ ಮನ್ನಾ ಯೋಜನೆಯಡಿ ಅರ್ಹತೆ ಪಡೆದಿರುತ್ತಾರೆ ಎಂದು ತಿಳಿಸಿದರು.       ಜಿಲ್ಲೆಯ ವಾಣಿಜ್ಯ ಬ್ಯಾಂಕ್‍ಗಳಲ್ಲಿ ಸಾಲ ಪಡೆದ ರೈತರ ಸಂಖ್ಯೆಯನ್ನು ಆಧರಿಸಿ ಜನವರಿ 10 ಕಡೆಯ ದಿನಾಂಕ ಎಂದು ನಿಗಧಿಪಡಿಸಲಾಗಿದೆ. ಆದರೆ ಇದೇ ಕೊನೆಯ ದಿನ ಆಗಿರುವುದಿಲ್ಲ. ಪರಿಸ್ಥಿತಿ ಅವಲೋಕಿಸಿ ದಿನಾಂಕವನ್ನು ವಿಸ್ತರಿಸಲಾಗುವುದು ಎಂದು ಅವರು…

Read More

 ತುಮಕೂರು:      ರಾಷ್ಟ್ರೀಯ ಹೆದ್ದಾರಿ 206ರ ರಸ್ತೆ ನಿರ್ಮಾಣ ಕಾಮಗಾರಿ ಉದ್ದೇಶಕ್ಕೆ ತುಮಕೂರು ನಗರದ ನಾಗರಕಟ್ಟೆ, ದರ್ಗಾ ಸೇರಿದಂತೆ 8 ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವುದು ಸೂಕ್ಷ್ಮ ವಿಷಯವಾಗಿದ್ದು, ಎಲ್ಲಾ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ರವರು ತಿಳಿಸಿದ್ದಾರೆ.        ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು-ಶಿವಮೊಗ್ಗ 206 ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ತುಮಕೂರು ನಗರದ ನಾಗರಕಟ್ಟೆ, 2 ದರ್ಗಾ ಸೇರಿದಂತೆ 8 ಧಾರ್ಮಿಕ ಕಟ್ಟಡಗಳು ತೆರವುಗೊಳಿಸುವ ಕುರಿತು ಸಂಬಂಧಿಸಿದವರಿಗೆ ತುಮಕೂರು ನಗರ ಪಾಲಿಕೆ ನೋಟೀಸ್ ಜಾರಿ ಮಾಡಿದೆ ಎಂದು ಅವರು ಹೇಳಿದರು.       ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ವಿಚಾರ ಸೂಕ್ಷ್ಮ ವಿಷಯವಾಗಿದ್ದು, ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ ಎಲ್ಲಾ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು.       ತುಮಕೂರು ನಗರದಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಜೀವನಾಧಾರಕ್ಕೆ ತೊಂದರೆಯಾಗದಂತೆ ಸ್ಮಾರ್ಟ್…

Read More

 ತುಮಕೂರು :       ತುಮಕೂರು ನಗರದವರೆಗೂ ಮೆಟ್ರೋ ರೈಲು ಸಾರಿಗೆಯನ್ನು ವಿಸ್ತರಿಸಲು ಚಿಂತನೆ ನಡೆಸಿದ್ದು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅನಗತ್ಯ ಕಾಮಗಾರಿಗಳನ್ನು ತೆಗೆದುಕೊಳ್ಳದೆ ರಸ್ತೆ, ಚರಂಡಿ ಸೇರಿದಂತೆ ಅತ್ಯಗತ್ಯವಾಗಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಎಂದು ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅವರು ಇಂದಿಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.       ತುಮಕೂರು ನಗರದಲ್ಲಿಂದು ವರ್ತುಲ ರಸ್ತೆಯ ಜೀರ್ಣೋದ್ದಾರ, ಸ್ಮಾರ್ಟ್ ರಸ್ತೆ ನಿರ್ಮಾಣಗಳಿಗೆ ಶಂಕುಸ್ಥಾಪನೆ, ಸ್ಮಾರ್ಟ್ ಲಾಂಜ್ ಸೇರಿದಂತೆ ಸ್ಮಾರ್ಟ್ ಸಿಟಿ ಯೋಜನೆಯ ಮೊದಲ ಹಂತದ 195 ಕೋಟಿ ರೂ. ವೆಚ್ಚ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದ ಬಳಿಕ ಅವರು ಮಾತನಾಡಿದರು.       ಮೆಟ್ರೊ ರೈಲನ್ನು ತುಮಕೂರು ನಗರದವರೆಗೂ ವಿಸ್ತರಿಸಲು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ತುಮಕೂರು ನಗರದಲ್ಲಿ ಪ್ರತಿದಿನ 50 ಸಾವಿರ ಜನ ಓಡಾಡುತ್ತಾರೆ ಮೆಟ್ರೊ ವಿಸ್ತರಣೆ ನಮ್ಮ ಕನಸು. ವೈಫೈ ಸೇರಿದಂತೆ ಎಲ್ಲಾ ಆಧುನಿಕ ಸೌಲಭ್ಯಗಳು ತುಮಕೂರಿನಲ್ಲಿ ಸಿಗುವಂತಾಗಬೇಕು. ಕಳೆದ…

Read More

 ತುಮಕೂರು  :       ಸಂತ ಶ್ರೇಷ್ಠ ಕನಕದಾಸರ ಕೀರ್ತನೆಗಳಲ್ಲಿರುವ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಸಂಸದರಾದ ಎಸ್.ಪಿ. ಮುದ್ದಹನುಮೇಗೌಡ ಅವರು ಕರೆ ನೀಡಿದರು.       ತುಮಕೂರು ನಗರದ ಬಾಲಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸರ 531ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಕನಕದಾಸರು ಜೀವಿಸಿದ್ದ ಕಾಲದಲ್ಲಿ ಸಮಾಜದಲ್ಲಿದ್ದ ಜಾತಿ ಸಂಘರ್ಷವನ್ನು ತೊಡೆದು ಹಾಕಲು ತಮ್ಮ ಕೀರ್ತನೆಗಳ ಮೂಲಕ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿದರು. ಇಂತಹ ಸಂತಶ್ರೇಷ್ಠ ಕನಕದಾಸರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.       ರಾಜ್ಯಸರ್ಕಾರವು ಬಾಡ ಗ್ರಾಮವನ್ನು ಅಭಿವೃದ್ಧಿಪಡಿಸಲು ಹಾಗೂ ಕನಕದಾಸರ ಕೀರ್ತನೆಗಳನ್ನು ದೇಶ-ವಿದೇಶಗಳಲ್ಲಿ ಪ್ರಚುರಪಡಿಸುವ ಉದ್ದೇಶದಿಂದ ಕಾಗಿನೆಲೆ ಅಭಿವೃದ್ದಿ ಪ್ರಾಧಿಕಾರವನ್ನು ರಚಿಸಿ, ಆ ಮೂಲಕ ಹಲವಾರು ಕ್ರಾಂತಿಕಾರಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು.       ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ…

Read More

ತುಮಕೂರು:        ತುಮಕೂರು ಲೋಕಸಭಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಚತುಷ್ಪಥದ ರಸ್ತೆ ಅಭಿವೃದ್ಧಿಗೆ ಮಂಜೂರಾತಿ ದೊರೆತಿದ್ದು, ಡಿ.16ರಂದು ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಂಸದ ಮುದ್ದಹನುಮೇಗೌಡ ತಿಳಿಸಿದರು.      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಮೇಲೆ ಸಾಕಷ್ಟು ಒತ್ತಡ ತಂದಿದ್ದರಿಂದ ನಾಲ್ಕು ನಾಲ್ಕು ಪಥದ ರಸ್ತೆ ಅಭಿವೃದ್ಧಿಗೆ ಮಂಜೂರಾತಿ ಆಗಿದ್ದು, 2032 ಕೋಟಿ ರು ಟೆಂಡರ್ ಆಗಿದೆ. ಮೊದಲ ಮತ್ತು ಎರಡನೇ ಹಂತದ ರಸ್ತೆ ಅಭಿವೃದ್ಧಿಗೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ವಿವರಿಸಿದರು.       ತುಮಕೂರು ಲೋಕಸಭೆ ವ್ಯಾಪ್ತಿಯಲ್ಲಿ ಎನ್‌ಎಚ್‌ಎಐ ಯೋಜನೆ ಕೈಗೆತ್ತಿಕೊಂಡಿದೆ. ಸುಮಾರು 96 ಕಿ.ಮೀ. ರಸ್ತೆ ಅಭಿವೃದ್ಧಿ ಆಗಲಿದೆ. ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಡಿ16ರಂದು ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್‌ನಲ್ಲಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರು ಎಂದರು.       ತುಮಕೂರು ಗ್ರಾಮಾಂತರ, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಗುಬ್ಬಿ, ತಿಪಟೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ನಾಲ್ಕು ಪಥದ ರಸ್ತೆ…

Read More

ನವದೆಹಲಿ:       ಈ ವರ್ಷಾಂತ್ಯದ ಒಳಗಾಗಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಈಗಿರುವ ಬಲ್ಬ್‌ಗಳ ಬದಲಾಗಿ ಎಲ್‌ಇಡಿಗೆ ಪರಿವರ್ತಿಸುವಂತೆ ಕೇಂದ್ರ ಲೋಕೋಪಯೋಗಿ ಇಲಾಖೆ (ಸಿಪಿಡಬ್ಲ್ಯೂಡಿ) ಎಲ್ಲ ಅಧಿಕಾರಿಗಳಿಗೂ ಸೂಚನೆ ನೀಡಿದೆ.       ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕೇಂದ್ರ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಹಿಸುತ್ತದೆ. ಇದರ ವ್ಯಾಪ್ತಿಗೆ ಒಳಪಡುವ 1,241 ಕಟ್ಟಡಗಳಲ್ಲಿ ಆದಷ್ಟು ಬೇಗ ಈ ಕೆಲಸ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಈಗಾಗಲೇ 223 ಕಟ್ಟಡಗಳಲ್ಲಿ ಎಲ್‌ಇಡಿಗೆ ಪರಿವರ್ತಿಸುವ ಕೆಲಸ ಪೂರ್ಣಗೊಂಡಿದ್ದು, 230 ಕಟ್ಟಡಗಳಲ್ಲಿ ಕೆಲಸ ನಡೆಯುತ್ತಿದೆ.       ಕೇಂದ್ರ ಸರ್ಕಾರದ ಎಲ್ಲ ಕಟ್ಟಡಗಳ ನಿರ್ವಹಣೆ ಹಾಗೂ ಅಂತರರಾಷ್ಟ್ರೀಯ ಗಡಿಗಳಲ್ಲಿ ಬೇಲಿ ಹಾಕುವ ಕೆಲಸವನ್ನು ಸಿಪಿಡಬ್ಲ್ಯೂಡಿ ನಿರ್ವಹಿಸುತ್ತದೆ. ಇದಲ್ಲದೇ, ಸ್ನೇಹಹಸ್ತ ಕಾರ್ಯಕ್ರಮಗಳ ಅಡಿಯಲ್ಲಿ ವಿದೇಶಗಳಲ್ಲಿ ಕೂಡ ಭಾರತ ಸರ್ಕಾರದ ನೆರವಿನೊಂದಿಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತದೆ.

Read More

ಕೊಲೊಂಬೋ:        ಸುಪ್ರೀಂಕೋರ್ಟ್ ಆದೇಶದಿಂದ ಕೊನೆಗೂ ಶ್ರೀಲಂಕಾದ ಪ್ರಧಾನಿ ಹುದ್ದೆಗೆ ಮಹೀಂದ್ರ ರಾಜಪಕ್ಸೆ ಶನಿವಾರ ರಾಜೀನಾಮೆ ನೀಡುವ ಮೂಲಕ ಲಂಕಾ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ವಿವಾದಿತ ನಿರ್ಧಾರದ ಜಟಾಪಟಿ ಅಂತ್ಯಗೊಂಡಂತಾಗಿದೆ.       ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ಶನಿವಾರ ಬೆಳಗ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಷ್ಟಕ್ಕೂ, ರಾಜಪಕ್ಸೆ ಅವರು ಶನಿವಾರ ರಾಜೀನಾಮೆ ನೀಡುವ ಬಗ್ಗೆ ಶುಕ್ರವಾರ ಸಂಜೆಯೇ ಎಲ್ಲೆಡೆ ಸುದ್ದಿ ಹರಿದಾಡಿತ್ತು.        ಈ ಹಿನ್ನೆಲೆಯಲ್ಲಿ ರನಿಲ್ ವಿಕ್ರಮಸಿಂಘೆ ಅವರ ಹಾದಿ ಸುಗಮವಾದಂತಾಗಿದ್ದು, ಭಾನುವಾರ ಲಂಕಾದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.        ಶುಕ್ರವಾರ ಮತ್ತೆ ಸುಪ್ರೀಂಕೋರ್ಟ್ ರಾಜಪಕ್ಸೆ ಕುರಿತಂತೆ ನೀಡಿರುವ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಇದರಿಂದ ಕಾನೂನು ಸಮರದಲ್ಲಿ ಸೋಲು ಕಂಡ ರಾಜಪಕ್ಸೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.    

Read More

ಲಖನೌ:        ಸೋನಿಯಾ ಗಾಂಧಿ ಪ್ರತಿನಿಧಿಸುವ ಉತ್ತರ ಪ್ರದೇಶದ ರಾಯ್ ಬರೇಲಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಭೇಟಿ ನೀಡಲಿದ್ದಾರೆ. ಇದು ರಾಯ್‌ಬರೇಲಿಗೆ ಅವರ ಮೊದಲ ಭೇಟಿ.       ಮುಂದಿನ ವರ್ಷ ಕುಂಭೇಮೇಳ ನಡೆಯಲಿರುವ ಅಲಹಾಬಾದ್‌ಗೂ ಅವರು ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ. ಹಮ್‌ಸಫರ್ ಪೆಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿರುವ ಪ್ರಧಾನಿ, ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಉತ್ತರ ಪ್ರದೇಶ ಬಿಜೆಪಿ ಮಾಧ್ಯಮ ಸಹಸಂಚಾಲಕ ನವೀನ್ ಶ್ರೀವಾಸ್ತವ ತಿಳಿಸಿದ್ದಾರೆ.        ಇದೇ ವೇಳೆ ₹1,100 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೂ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಚುನಾವಣಾ ರಣತಂತ್ರ?       2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಏಟು ನೀಡಲು ಸೋನಿಯಾಗಾಂಧಿ ಅವರ ತವರು ಕ್ಷೇತ್ರಕ್ಕೆ ಭೇಟಿ ನೀಡುವ ಮೂಲಕ ಪ್ರಧಾನಿ ರಣತಂತ್ರ ಹೆಣೆಯುತ್ತಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.       ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನಾಂಕಕ್ಕೂ ಮುನ್ನವೇ…

Read More