ತುಮಕೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಶೋಷಿತ ಸಮುದಾಯ ಆಳುವ ವರ್ಗವಾದಾಗ ಮಾತ್ರ.ಸಮಾನತೆ, ಸ್ವಾತಂತ್ರ, ಸಾಮಾಜಿಕ ನ್ಯಾಯ ಮತ್ತು ಸೋದರತೆಯನ್ನು ಪ್ರತಿಪಾದಿಸುವ ಭಾರತದ ಸಂವಿಧಾನಕ್ಕೆ ಭದ್ರತೆ ದೊರೆಯಲು ಸಾಧ್ಯ ಎಂದು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಬಾಬಾ ಸಾಹೇಬ್ ಜೀನರಾಳ್ಕರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಬಡ್ಡಿಹಳ್ಳಿಯಲ್ಲಿರುವ ಬುದ್ದ ಬಯಲು ವಿಹಾರಧಾಮದಲ್ಲಿ ಕರ್ನಾಟಕ ಸರಕಾರಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ನೌಕರರ ಸಮನ್ವಯ ಸಮಿತಿಯವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಅಂಗವಾಗಿ ಆಯೋಜಿಸಿದ್ದ ಭಾರತದ ಸಂವಿಧಾನ ಮತ್ತು ಅದರ ಮುಂದಿರುವ ಸವಾಲುಗಳು ಎಂಬ ಸಂವಾದವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಪಟ್ಟು,ಕೆಲ ದೆಶಕಗಳ ಹಿಂದೆಷ್ಟೇ ಅಕ್ಷರ ಲೋಕಕ್ಕೆ ತನ್ನನ್ನು ತೆರೆದುಕೊಂಡಿರುವ ನಿಮ್ನ ವರ್ಗಗಳು ಆಳುವ ವರ್ಗವಾದಾಗ,ಸಮಾನತೆ, ಸ್ವಾತಂತ್ರ, ಭಾತೃತ್ವ ಮತ್ತು ಸಾಮಾಜಿಕ ನ್ಯಾಯವೆಂಬ ಬುದ್ದನ ಕರುಣೆ ಮತ್ತು ಪ್ರೀತಿ ಎಂಬ ತತ್ವದಡಿಯಲ್ಲಿ ರಚಿತವಾಗಿರುವ ಭಾರತದ ಸಂವಿಧಾನ ಸಂಪೂರ್ಣವಾಗಿ ಜಾರಿಯಾಗಿ, ದೇಶದ…
Author: News Desk Benkiyabale
ಕೊಡಗು : ಇಂದು ಸಿಎಂ, ಸಂಸದರ ನಡುವೆ ವಾಕ್ಸಮರ ಏರ್ಪಟ್ಟು, ಸಂಸದ ಪ್ರತಾಪ್ ಸಿಂಹ ಮೇಲೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾದ ಘಟನೆ ನಡೆದಿದೆ. ಇಂದು ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ನೂರಾರು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಮನೆ ನಿರ್ಮಾಣ ಕಾಮಗಾರಿ ಹಾಗೂ ಶಂಕುಸ್ಥಾಪನೆ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮ ಇಂದು ನಡೆಯಿತು. ಇದೇ ವೇಳೆ ಕಾರ‍್ಯಕ್ರಮದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಕೂಡ ಜಿಲ್ಲೆಯ ಜನರಿಗೆ ಸ್ಪಂದಿಸಿದೆ. ಕೇರಳಕ್ಕೆ ಮಾತ್ರ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ನೀಡಿದೆ. ಕೊಡಗನ್ನು ನಿರ್ಲಕ್ಷ್ಯ ಮಾಡಿದೆ ಎಂದು ಸುಳ್ಳು ಪ್ರಚಾರ ಮಾಡಲಾಗಿದೆ ಎಂದು ಹೇಳಿದರು. ಇನ್ನು ಸಾರಾ ಮಹೇಶ್, ಪರಮೇಶ್ವರ್ ಹೇಳಿಕೆಗೆ ಟಾಂಗ್ ನೀಡಿದ ಪ್ರತಾಪ್ ಸಿಂಹ ಹೇಳಿಕೆಯಿಂದ ಗರಂ ಆದ ಸಿಎಂ ನೇರ ಸಂಸದರತ್ತ ಕೈ ಸನ್ನೆ ಮಾಡಿ ನಿಲ್ಲಿಸಿ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ, ಆಯ್ತು ಆಯ್ತು ಎಂದರು. ಏನೇನೋ ಹೇಳಿ…
ತುಮಕೂರು: ನಗರದ 15ನೇ ವಾರ್ಡಿಗೆ ಸಂಬಂಧಿಸಿದಂತೆ ಶುಕ್ರವಾರ ವಾರ್ಡಿನ ಸದಸ್ಯರ ಸಂಪರ್ಕ ಕಚೇರಿಯನ್ನು ಎಸ್.ಎಸ್.ಪುರಂ ಮುಖ್ಯರಸ್ತೆಯ ವಾಸವಿ ದೇವಾಲಯದ ಎದುರಿನ ಕಾಗ್ಗರೆ ಕಾಂಪ್ಲೆಕ್ಸ್ ಕಚೇರಿಯನ್ನು ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ ಉದ್ಘಾಟಿಸಿ, ಎಸ್.ಮಲ್ಲಿಕಾರ್ಜುನಯ್ಯ ಹೆಸರಿನ ಸಭಾಂಗಣಕ್ಕೆ ಧನಿಯ ರಾಜಣ್ಣ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವಿ.ಸೋಮಣ್ಣ ಪಾಲಿಕೆ ಸದಸ್ಯರ ಈ ಕಚೇರಿ ಎಲ್ಲಾ ವರ್ಗದ ಜನರು ಬಂದು ತಮ್ಮ ಕಷ್ಟ ಸುಖಃಗಳನ್ನು ಹೇಳಿ ಪರಿಹರಿಸಿಕೊಂಡು ಹೋಗುವಂತಹ ಒಂದು ಕಚೇರಿಯಾಗಲಿ ಎಂದು ಶುಭ ಹಾರೈಸಿದರು. ವಾರ್ಡಿನ ಸದಸ್ಯರಾದ ಗಿರಿಜಾ ಧನಿಯಕುಮಾರ್ ಮಾತನಾಡಿ,ನಗರದ 15ನೇ ವಾರ್ಡು ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು,ಗಾಂಧಿನಗರದಿಂದ ಎಸ್.ಎಸ್.ಪುರವರೆಗೂ ಇದೆ.ಇಲ್ಲಿನ ಹೆಚ್ಚಿನ ಜನರು ವ್ಯಾಪಾರಸ್ಥರು, ಉದ್ದಿಮೆದಾರರು ಮತ್ತು ಸರಕಾರಿ, ಅರೆ ಸರಕಾರಿ ಹಾಗೂ ಖಾಸಗಿ ವಲಯಗಳ ನೌಕರರೇ ಹೆಚ್ಚು, ಜೊತೆಗೆ ವ್ಯಾಪಾರಿ ಕೇಂದ್ರವೂ ಹೌದು. ಈ ಹಿನ್ನೆಲೆಯಲ್ಲಿ ಅವರ ಪ್ರತಿಯೊಂದು ಸಮಸ್ಯೆಗೂ ಸದಸ್ಯರನ್ನು ಹುಡುಕಿಕೊಂಡು ಪಾಲಿಕೆಗೆ ಅಲೆಯುವ ಬದಲು, ವಾರ್ಡಿನ ಮಧ್ಯಭಾಗದಲ್ಲಿ…
ತುರುವೇಕೆರೆ: ಪಟ್ಟಣದ ದಬ್ಬೇಗಟ್ಟ ರಸ್ತೆ ಅಗಲೀಕರಣ ಕಾಮಗಾರಿಗೆ ತೊಡಕಾಗಿರುವ ರಸ್ತೆ ಬದಿಯ ಮರಗಳ ತೆರವು ಕಾರ್ಯಾಚರಣೆಯನ್ನು ಕೂಡಲೇ ಅರಣ್ಯ ಇಲಾಖೆ ತೆರವುಗೊಳಿಸಿಕೊಡಬೇಕೆಂದು ಶಾಸಕ ಮಸಾಲಜಯರಾಮ್ ಸೂಚಿಸಿದರು. ಪಟ್ಟಣದ ದಬ್ಬೇಗಟ್ಟ ರಸ್ತೆಯಲ್ಲಿರುವ 12ಲಕ್ಷರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸಾಮಾಜಿಕ ಅರಣ್ಯ ವಲಯ ಕಚೇರಿಯ ಉಧ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ದಬ್ಬೇಗಟ್ಟ ರಸ್ತೆ ಅಗಲೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲು ರಸ್ತೆ ಬದಿಯಲ್ಲಿರುವ ಮರಗಳು ತೊಡಕಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಮರಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಶೀಘ್ರಗತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು, ಮರಗಳ ತೆರವು ಕಾರ್ಯಾಚರಣೆ ಮುಗಿದ ತತ್‍ಕ್ಷಣದಿಂದಲೇ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಲಾಗುವುದು, ಅಗಲೀಕರಣದ ಸಂಧರ್ಭದಲ್ಲಿ ರಸ್ತೆ ಇಕ್ಕೆಲಗಳಲ್ಲಿರುವ ಕಟ್ಟದ ಮಾಲೀಕರ ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ. ಇದೇ ರಸ್ತೆಯಲ್ಲಿ ನಮ್ಮ ಪಕ್ಷದ ಕಚೇರಿಯಿದೆ ಮೊದಲ ಹಂತದಲ್ಲಿಯೇ ನಮ್ಮ ಪಕ್ಷದ ಕಚೇರಿಯಿಂದಲೇ ಕಟ್ಟದ ತೆರವು ಕಾಮಗಾರಿ ಆರಂಭವಾಗುತ್ತದೆ ನನಗೆ ನೂರು ಜನರ ಹಿತಕ್ಕಿಂತ ಸಹಸ್ರಾರು ಜನರ ಒಳಿತು ಮುಖ್ಯ…
ತುಮಕೂರು : ಪ್ರಸ್ತುತ ದಿನಗಳಲ್ಲಿ ಗ್ರಾಮಂತರ ಪ್ರದೇಶಗಳಲ್ಲಿ ಸಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿರುವ ಸರ್ಕಾರೇತರ ಸಂಸ್ಥೆಗಳ ಪಾತ್ರ ಅತ್ಯಂತ ಅವಶ್ಯಕವಾದುದ್ದು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಶಿವಕುಮಾರ್ ತಿಳಿಸಿದರು. ತಾಲೂಕಿನ ಗೂಳೂರು ಗ್ರಾಮದ ಸರಕಾರಿ ಶಾಲಾ ಅವರಣದಲ್ಲಿ ಯಶಸ್ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಹೆಚ್1,ಎನ್1 ಮತ್ತು ಸ್ವಚ್ಛತೆ ಬಗ್ಗೆ ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದಿನ ಒತ್ತಡದ ಬದುಕಿನಲ್ಲಿ ಮಾನುಷ್ಯನ ನೆಮ್ಮದಿ ಜೀವನಕ್ಕೆ ಆರೋಗ್ಯ ಅತಿ ಅವಶ್ಯಕವಾಗಿದ್ದು ಅರೋಗ್ಯವನ್ನು ಕಪಾಡಿಕೊಳ್ಳಲು ಮುಂಜಾಗ್ರತವಾಗಿ ಹೆಚ್ಚರಿಕೆವಯಿಸಬೇಕಾಗಿದೆ ಎಂದು ತಿಳಿಸಿದರು. ಹೆಚ್1,ಎನ್1 ನಂತಹ ರೋಗದ ಬಗ್ಗೆ ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳು ನಿಜಕ್ಕೂ ಅರ್ಥಪೂರ್ಣವಾಗಿದೆ ಯಶಸ್ ಫೌಂಡೇಷನ್ ಈ ನಿಟ್ಟಿನಲ್ಲಿ ಸಮಾಜ ಸೇವೆ ಮಾಡುತ್ತಿದ್ದು, ಈ ಸಂಸ್ಥೆ ಗ್ರಾಮೀಣ ಬಾಗಗಳಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳು ಹೆಚ್ಚಿನ ಮಟ್ಟದಲಿ ನಡಸಿ ಜನರ ಅರೋಗ್ಯ ಸುಧಾರಣೆಗೆ ದಾರಿ ದೀಪಾವಾಗಲಿ ಇಂತಹ ಕಾರ್ಯಕ್ರಮಗಳಿಗೆ…
ಚೆನ್ನೈ: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಶತಾಯುಷಿ ಶ್ರೀ ಸಿದ್ದಗಂಗಾ ಶ್ರೀ ಏರ್ ಅಂಬುಲೆನ್ಸ್ ಮೂಲಕ ಚೆನ್ನೈಗೆ ಆಗಮಿಸಿದ್ದು, ಇಲ್ಲಿಂದ ಶ್ರೀಗಳನ್ನು ಅಂಬುಲೆನ್ಸ್ ಮೂಲಕ ಚೆನ್ನೈನಲ್ಲಿರುವ ಪ್ರತಿಷ್ಠಿತ ರೆಲಾ ವೈದ್ಯಕೀಯ ಸಂಸ್ಥೆಗೆ ಕರೆದುಕೊಂಡು ಬರಲಾಗಿದೆ. ಇದೇ ವೇಳೆ ಶ್ರೀಗಳಿಗ ದೈನಂದಿನ ಪೂಜಕಾರ‍್ಯಗಳಿಗೆ ಯಾವುದೇ ತೊಂದರೆಯಾಗದ ನಿಟ್ಟಿನಲ್ಲಿ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯಲ್ಲಿ ಶ್ರೀಗಳು ಪೂಜಾ ಕಾರ‍್ಯಗಳನ್ನು ನಡೆಸುವುದಕ್ಕೆ ಸಿದ್ದತೆ ಮಾಡಲಾಗಿದೆ ಎನ್ನಲಾಗಿದೆ. ಇನ್ನು ಆಸ್ಪತ್ರೆಯಲ್ಲಿ ಸ್ವಾಮೀಜಿಗೆ ಈಗಾಗಲೇ 5 ಸ್ಟಂಟ್ ಅಳವಡಿಸಲಾಗಿದ್ದು, ಮತ್ತೆ ಸ್ಟಂಟ್ ಅಳವಡಿಸಲು ಸಾಧ್ಯವಿಲ್ಲ. ಹೀಗಾಗಿ ಶಾಶ್ವತ ಪರಿಹಾರಕ್ಕಾಗಿ ಚೆನ್ನೈನಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ ಎನ್ನಲಾಗಿದೆ. ವ್ಹೀಲ್ ಚೇರ್ ಬೇಡ ಎಂದ ಶ್ರೀಗಳು: ಶ್ರೀಗಳು ಲವವಲಿಕೆಯಿಂದ ಇದ್ದು , ಚೆನ್ನೈನಲ್ಲಿ ವ್ಹೀಲ್ ಚೇರ್ ಬೇಡ ಎಂದು ಕಾಲ್ನಡಿಗೆಯಲ್ಲೇ ಒಳಗೆ ತೆರಳಿದ್ದಾರೆ. ಮಠದಿಂದ ಪೊಲೀಸ್ ಬೆಂಗಾವಲಿನೊಂದಿಗೆ ಅಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ಕರೆತಂದು ಎಚ್‌ಎಎಲ್‌ನಿಂದ ಏರ್ ಅಂಬುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಗಿದೆ. …
ತುಮಕೂರು: ನಗರದ ಜಿಲ್ಲಾಸ್ಪತ್ರೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಇಂದು ಭೇಟಿ ನೀಡಿ ಕರಡಿ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು. ಹೂ ಬಿಡಿಸುವ ವೇಳೆ ಕರಡಿ ದಾಳಿಗೆ ಒಳಗಾಗಿ ತೀವ್ರ ಸ್ವರೂಪದ ಗಾಯಗಳಾಗಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಸಮೀಪದ ಸೂರನಹಳ್ಳಿ ಗ್ರಾಮದ ಕರೀಂಸಾಬ್ ಮತ್ತು ರೇಣುಕಮ್ಮ ಅವರನ್ನು ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಗಾಯಾಳುಗಳನ್ನು ಮಾತನಾಡಿಸಿ ಸಾಂತ್ವನ ಹೇಳಿದರು. ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಬಳಿ ಮಾತನಾಡಿದ ಡಾ. ಜಿ. ಪರಮೇಶ್ವರ್ ಅವರು ಕರಡಿ ದಾಳಿ ನಡೆದ ಬಗ್ಗೆ ಮಾಹಿತಿ ಪಡೆದುಕೊಂಡು, ಧೈರ್ಯದಿಂದ ಇರುವಂತೆ ಹೇಳಿ, ಸರ್ಕಾರದಿಂದ ನೀಡುವ 20 ಸಾವಿರ ರೂ.ಗಳನ್ನು ಸಂತ್ರಸ್ತರ ಬ್ಯಾಂಕ್ ಖಾತೆ ಆರ್‌ಟಿಜಿಎಸ್ ಮಾಡುವ ಆದೇಶ ಪತ್ರವನ್ನು ನೀಡಿದರು. ಅಲ್ಲದೆ ತಾವು ಸಹ ವೈಯುಕ್ತಿಕವಾಗಿ…
ತುಮಕೂರು: ಕರ್ನಾಟಕ ಸರ್ಕಾರ 2 ಸದನಗಳ ಒಪ್ಪಿಗೆ ಪಡೆದು ರೂಪಿಸಿರುವ ಮೀಸಲಾತಿ ಆಧಾರದಲ್ಲಿ ಬಡ್ತಿ ಪಡೆದ ಪರಿಶಿಷ್ಟ ಜಾತಿ ಮತ್ತು ಪಗಂಡಗಳ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜೇಷ್ಠತೆ ವಿಸ್ತರಿಸುವ ಕಾಯ್ದೆ 2017 ಜಾರಿಗೆ ತರಬೇಕೆಂದು ಒತ್ತಾಯಿಸಿ ಇಂದು ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ದೇವರಾಜಅರಸು ಅವರ ಕಾಲದಲ್ಲಿ ಜಾರಿಗೆ ತಂದಿದ್ದ ಬಡ್ತಿ ಮೀಸಲಾತಿ ಕಾಯ್ದೆ ವಿರುದ್ಧ ಬಿ.ಕೆ.ಪವಿತ್ರ ಪ್ರಕರಣ ತೀರ್ಪಿನಿಂದ ಉಂಟಾದ ನಷ್ಟವನ್ನು ತಡೆಯುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಅಂದಿನ ಸರ್ಕಾರ ಸದರಿ ಕಾಯ್ದೆಯನ್ನು ಎಲ್ಲ ಇಲಾಖೆಗಳ ಮಾಹಿತಿ ಪಡೆದು ರೂಪಿಸಿತ್ತು. ಸದರಿ ಕಾಯ್ದೆ ಕರ್ನಾಟಕ ಸರ್ಕಾರದ ಮೇಲ್ಮನೆ ಹಾಗೂ ಕೆಳಮನೆಯಲ್ಲಿ ವಿಸ್ಕøತವಾಗಿ ಚರ್ಚೆಯಾಗಿ ಅನುಮೋದನೆಗೊಂಡು, ರಾಷ್ಟ್ರಪತಿಗಳ ಅಂಕಿತ ಪಡೆದು, ರಾಜ್ಯಪತ್ರದಲ್ಲಿ ಪ್ರಕಟಗೊಂಡು ತಿಂಗಳುಗಳೇ ಕಳೆಯುತ್ತಿದ್ದರು, ಕುಮಾರಸ್ವಾಮಿ ಅವರ ನೇತೃತ್ವದ ರಾಜ್ಯ ಸರ್ಕಾರ ಇದುವರೆಗೆ ಕಾಯ್ದೆಯನ್ನು ಜಾರಿಗೆ ತರಲು ಮೀನಾಮೇಷ ಎಣಿಸುತ್ತಿದ್ದು,…
ತುಮಕೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದ ಕಾರಣ ರಾತ್ರಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ಆದರೆ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಬೆಳಿಗ್ಗೆಯಿಂದ ಎಂದಿನಂತೆ ಲವಲವಿಕೆಯಿಂದ ಇದ್ದಾರೆ. ಕಳೆದ ರಾತ್ರಿ ಶ್ರೀಗಳ ಹೃದಯಬಡಿತದಲ್ಲಿ ಕೊಂಚ ಏರುಪೇರಾಗಿತ್ತು. ಅಲ್ಲದೆ ಶೀತ, ಕೆಮ್ಮು, ಜ್ವರ ಸಹ ಕಾಣಿಸಿಕೊಂಡಿತ್ತು. ಇದರಿಂದ ಶ್ರೀಕ್ಷೇತ್ರ ಸೇರಿದಂತೆ ಕಲ್ಪತರುನಾಡಿನಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿರುವ ವಿಚಾರ ತಿಳಿಯುತ್ತಿದ್ದಂತೆ ಶ್ರೀಗಳ ಆಪ್ತ ವೈದ್ಯರಾದ ಡಾ. ಪರಮೇಶ್ ನೇತೃತ್ವದ ತಂಡ ಮಠಕ್ಕೆ ತೆರಳಿ ಶ್ರೀಗಳಿಗೆ ಚಿಕಿತ್ಸೆ ನೀಡಿದರು. ನಂತರ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ವೈದ್ಯರಾದ ಡಾ. ರವೀಂದ್ರ ನೇತೃತ್ವದ ವೈದ್ಯರ ತಂಡವೂ ಶ್ರೀಕ್ಷೇತ್ರಕ್ಕೆ ಆಗಮಿಸಿ ತಡರಾತ್ರಿವರೆವಿಗೂ ಶ್ರೀಗಳ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದರು. ವೈದ್ಯರ…
ತುಮಕೂರು: ನಗರದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ದಳದ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ಬಗ್ಗೆ ರೈಲ್ವೆ ಪ್ರಯಾಣಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರಯಾಣಿಕರ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಯಿತು. ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ರೈಲ್ವೆ ರಕ್ಷಣಾ ದಳದ ಉಪನಿರೀಕ್ಷಕ ಕುಬೇರಪ್ಪ ಅವರು, ರೈಲ್ವೆ ರಕ್ಷಣಾ ದಳದ ಮುಖ್ಯ ಸುರಕ್ಷಾ ಆಯುಕ್ತರ ಆದೇಶದ ಮೇರೆಗೆ ಮಾನವ ಕಳ್ಳ ಸಾಗಾಣಿಕೆ ಬಗ್ಗೆ ರೈಲ್ವೆ ಪ್ರಯಾಣಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ವಿಶೇಷವಾಗಿ ಮಹಿಳೆಯರು, ಮತ್ತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು. ತಾವು ಪ್ರಯಾಣಿಸುವ ಸ್ಥಳದಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದರೆ ತುರ್ತಾಗಿ ಆರ್‌ಪಿಎಫ್ ಟಾಲ್ ಫ್ರೀ ನಂ. 182ಗೆ ಕರೆ ಮಾಡುವಂತೆ ಅವರು ಮನವಿ ಮಾಡಿದರು. ರೈಲಿನಲ್ಲಿ ಪ್ರಯಾಣಿಸುವಾಗ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಅಪರಿಚಿತರಿಂದ ಯಾವುದೇ ರೀತಿಯ ತಿಂಡಿ, ತಿನಿಸುಗಳನ್ನು ಪಡೆಯಬಾರದು. ಒಂದು ವೇಳೆ ಅಂತಹವರಿಂದ ಏನನ್ನಾದರೂ…