ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಸಂಘಗಳ ಒಕ್ಕೂಟ, ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯತ್ ಸಂಯುಕ್ತಾಶ್ರಯದಲ್ಲಿ 2018-19ನೇ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವವು ಡಿಸೆಂಬರ್ 7 ರಿಂದ 9ರವರೆಗೆ ಮೂರು ದಿನಗಳ ಕಾಲ ತುಮಕೂರು ನಗರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ಕುಮಾರ್ ಕೆ. ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನೋತ್ಸವ ಪ್ರಯುಕ್ತ ಗಾಜಿನಮನೆಯಲ್ಲಿ ಡಾ: ಗುಬ್ಬಿವೀರಣ್ಣ ವೇದಿಕೆ, ಬಾಲಭವನದಲ್ಲಿ ಅಮರ ಶಿಲ್ಪಿ ಜಕಣಾಚಾರಿ ವೇದಿಕೆ, ವಿಶ್ವವಿದ್ಯಾನಿಲಯದಲ್ಲಿ ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿ ವೇದಿಕೆ, ಕನ್ನಡಭವನದಲ್ಲಿ ಬಿ.ಎಂ.ಶ್ರೀ ವೇದಿಕೆ ಹಾಗೂ ವಿಶ್ವವಿದ್ಯಾನಿಲಯದಲ್ಲಿ ವಿಶ್ವೇಶ್ವರಯ್ಯ ಆಡಿಟೋರಿಯಂನಲ್ಲಿ ತೀ.ನಂ.ಶ್ರೀ ವೇದಿಕೆಯನ್ನು ನಿರ್ಮಿಸಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸ್ಪರ್ಧೆಗಳನ್ನು ನಡೆಸಲಾಗುವುದು ಎಂದು ಅವರು ತಿಳಿಸಿದರು. ಡಿಸೆಂಬರ್ 7ರಂದು ಸಂಜೆ 4 ಗಂಟೆಗೆ ಮುಖ್ಯ ವೇದಿಕೆಯಾದ ಡಾ: ಗುಬ್ಬಿ ವೀರಣ್ಣ ವೇದಿಕೆ (ಗಾಜಿನಮನೆ, ಅಮಾನಿಕೆರೆ)ಯಲ್ಲಿ ಸನ್ಮಾನ್ಯ ಉಪ ಮುಖ್ಯ ಮಂತ್ರಿಗಳು ಹಾಗೂ ಮಾನ್ಯ ಗೃಹ, ಬೆಂಗಳೂರು ನಗರಾಭಿವೃದ್ದಿ ಮತ್ತು…
Author: News Desk Benkiyabale
ಬೆಂಗಳೂರು: ಡಿಸೆಂಬರ್ 5ರೊಳಗೆ ಎಲ್ಲಾ ರೈತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದೀಗ ಕೇಂದ್ರ ಸರ್ಕಾರ ಹಣ ನೀಡದೆ ಹೋದರೂ ಕೂಡಾ ರಾಜ್ಯ ಸರ್ಕಾರ ರೈತರ ಸಾಲಮನ್ನಾಕ್ಕೆ ಬದ್ಧವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಷ್ಟ್ರೀಕೃತ ರಾಷ್ಟ್ರೀಯ ಬ್ಯಾಂಕುಗಳಲ್ಲಿ ಮೊದಲ ಹಂತವಾಗಿ 17 ಲಕ್ಷ ರೈತರ 50 ಸಾವಿರದವರೆಗಿನ ಸಾಲಮನ್ನಾಗೆ ಈಗಾಗಲೇ ಅಧಿಕಾರಿಗಳಿಗೂ ಆದೇಶಿಸಿದ್ದೇನೆ. ಮೊದಲ ಹಂತದಲ್ಲಿ ಜನವರಿಯಲ್ಲಿ 50 ಸಾವಿರ ಸಾಲಮನ್ನಾ ಆಗಲಿದೆ. ರಾಜ್ಯದಲ್ಲಿ ಒಟ್ಟು 2 ಲಕ್ಷದ 20ಸಾವಿರ NP ಖಾತೆಗಳಿದ್ದು, ಮರುಪಾವತಿಯಾಗದ ಖಾತೆಗಳೆಂದು ಗುರುತಿಸಲಾಗಿದೆ. ಬ್ಯಾಂಕ್ನವರು ಮುಂಚಿತವಾಗಿ ಅಸಲಿನಲ್ಲಿ ಶೇ. 50 ರಷ್ಟು ಬಿಡಲಾಗುತ್ತದೆ ಎಂದಿದ್ದ ಬ್ಯಾಂಕ್ ಈಗ ಹಿಂದೆ ಸರಿದಿವೆ. ನಾವು ಶೇ. 50ರಷ್ಟು ಹಣ ನೀಡಲು ಮುಂದಾಗಿದ್ದೇವೆ. ಅಲ್ಲದೇ ಸದ್ಯ ಪ್ರಾಯೋಗಿಕವಾಗಿ ಎಲ್ಲಾ ತಾಲೂಕುಗಳಲ್ಲಿ ಸಾಲಮನ್ನಾ ಮಾಡಲಾಗಿದೆ ಎಂದು ಹೇಳಿದರು. ರೈತರ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ…
ದಾವಣಗೆರೆ : ‘ಕೆಲಸ ಮಾಡುವವರನ್ನು ಜನರು ಮರೆತಿದ್ದಾರೆ. ಜನರಿಗೆ ಸೇವೆ ಮಾಡಿದ ನನ್ನನ್ನು ಸಹ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದರು’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಎಂ.ಪಿ. ರವೀಂದ್ರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರುm ಜನ ಯಾವುದಕ್ಕೆ ವೋಟ್ ಕೊಡ್ತಾರೆ ಎಂದು ನನಗೆ ಅರ್ಥವಾಗುತ್ತಿಲ್ಲ. ಜನ ನನ್ನನ್ನ ಚಾಮುಂಡಿ ಕ್ಷೇತ್ರದಲ್ಲಿ ಸೋಲಿಸಿದ್ರು. ನನ್ನ ಅದೃಷ್ಟ ಬದಾಮಿ ಕೈ ಹಿಡಿಯಿತು. ಚುಣಾವಣೆಯ ಮುಂಚೆ ಎಲ್ಲಾ ಚೆನ್ನಾಗಿತ್ತು. ಆದ್ರೆ ಚುನಾವಣೆ ಫಲಿತಾಂಶ ಬಂದಾಗ ದಿಗ್ಭ್ರಮೆ ಆಯಿತು ಅಂತಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿ ಕ್ಷೇತ್ರದಲ್ಲಿ ತಮಗಾದ ಸೋಲಿನ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು. ರವೀಂದ್ರ ಇನ್ನೂ ಇದ್ದಿದ್ರೆ ಅವರ ತಂದೆ ಎಂ.ಪಿ. ಪ್ರಕಾಶ್ ಸರಿಸಮನಾಗಿ ಬೆಳೆಯುತ್ತಿದ್ರು. ಹರಪನಹಳ್ಳಿಯನ್ನು 371 J ಗೆ ಸೇರಿಸಲು ಒತ್ತಾಯಿಸಿದ್ರು. ದಾವಣಗೆರೆ ಜಿಲ್ಲೆಯಿಂದ ಹರಪನಹಳ್ಳಿ ಬಿಡುಗಡೆಯಾಗುತ್ತೆ. ಬಿಡುಗಡೆ ಹೊಂದಿ ಬಳ್ಳಾರಿಗೆ ಸೇರ್ಪಡೆಯಾಗತ್ತೆ. ಇನ್ನು ಅಧಿಕೃತವಾಗಿ ಆದೇಶ…
ತುಮಕೂರು: ಸಚಿವ ರೇವಣ್ಣ, ರಾವಣ ಇದ್ದ ಹಾಗೆ ಎಂದು ಮಾಜಿ ಶಾಸಕ ಬಿ.ಸುರೇಶ್ಗೌಡ ಹರಿಹಾಯ್ದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ರೇವಣ್ಣ ಜಿಲ್ಲೆಗೆ ಹರಿಯುತ್ತಿದ್ದ ಹೇಮಾವತಿ ನೀರನ್ನು ಏಕಾಏಕಿ ನಿಲ್ಲಿಸಿದ್ದಾರೆ. ಜಿಲ್ಲೆಯ ಪಾಲಿಗೆ ರೇವಣ್ಣ, ರಾವಣರಾಗಿದ್ದಾರೆ ಎಂದರು. ಹೇಮಾವತಿ ಡ್ಯಾಮ್ ಪೂರ್ಣ ತುಂಬಿದ್ದರೂ ಜಿಲ್ಲೆಗೆ ನೀರು ಬಿಡುತ್ತಿಲ್ಲ. ಜಿಲ್ಲೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿ ಮೂವರು ಸಚಿವರಿದ್ದಾರೆ. ಆದರೆ ನೀರು ತರುವಲ್ಲಿ ಮೂವರೂ ವಿಫಲರಾಗಿದ್ದಾರೆ. ಮೈತ್ರಿ ಸರಕಾರ ಬೀಳುವ ಭಯದಲ್ಲಿ ರೇವಣ್ಣರನ್ನು ಜಿಲ್ಲೆಯ ಸಚಿವರು ಏನು ಕೇಳುತ್ತಿಲ್ಲ ಎಂದು ಆರೋಪಿಸಿದರು. ಕೇಂದ್ರ ಸರಕಾರ ವಿಫಲ: ಕೇಂದ್ರ ಸಚಿವ ರಮೇಶ್ ಜಿಗಜಿಗಣಿ ಮಾಧ್ಯಮದವರೊಂದಿಗೆ ಮಾತನಾಡುವಾಗ, ಸರಿಯಾಗಿ ಯೋಜನೆಗಳನ್ನು ತಲುಪಿಸುವಲ್ಲಿ ನಮ್ಮ ಸರಕಾರ ವಿಫಲವಾಗಿದೆ ಎಂದು ಬಾಯಿತಪ್ಪಿ ನುಡಿದರು. ಇದರಿಂದ ಗಲಿಬಿಲಿಗೊಂಡ ಪಕ್ಕದ್ದಲೇ ಇದ್ದ ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ, ರಾಜ್ಯ ಸರಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವರಿಗೆ ತಿಳಿಸಿದರು. ತಕ್ಷಣ ಎಚ್ಚೆತ್ತ…
ಬೆಂಗಳೂರು: ವಕೀಲ ಸಿರಾಜಿನ್ ಪಾಷ ಮತ್ತು ಬಿ.ಎಸ್.ಯಡಿಯೂರಪ್ಪ ನಡುವಿನ ಕಾನೂನು ಹೋರಾಟಕ್ಕೆ ತೆರೆ ಬಿದ್ದಿದೆ. ಯಡಿಯೂರಪ್ಪ ವಿರುದ್ಧದ 5 ಕೇಸುಗಳನ್ನು ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಮಂಗಳವಾರ ಸುಪ್ರೀಂಕೋರ್ಟ್ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ 5 ಪ್ರಕರಣಗಳನ್ನು ವಜಾಗೊಳಿಸಿದೆ. ಇದರಿಂದಾಗಿ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಶಿವಮೊಗ್ಗ ಮೂಲದ ವಕೀಲ ಸಿರಾಜಿನ್ ಪಾಷಾ 5 ಕೇಸುಗಳನ್ನು ದಾಖಲಿಸಿದ್ದರು. ಈ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಕಾನೂನು ಹೋರಾಟ ನಡೆಸುತ್ತಿದ್ದರು. ಯಡಿಯೂರಪ್ಪ ಹಾಗೂ ಕುಟುಂಬ ಸದಸ್ಯರ ವಿರುದ್ಧ ಡಿನೋಟಿಫಿಕೇಷನ್ ಸೇರಿದಂತೆ ವಿವಿಧ ಪ್ರಕರಣಗಳು ಬಾಕಿ ಇದ್ದವು. ಹಲವಾರು ವರ್ಷಗಳಿಂದ ಈ ಪ್ರಕರಣಗಳ ವಿಚಾರಣೆ ನಡೆಯುತ್ತಿತ್ತು. ಇಂದು ಪ್ರಕರಣಗಳನ್ನು ವಜಾಗೊಳಿಸಿ ಕೋರ್ಟ್ ಆದೇಶ ನೀಡಿದೆ.
ತುಮಕೂರು: ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ ಪ್ರವಾದಿ ಮಹಮದ್(ಸ) ಅವರ ಜೀವನ ಮತ್ತು ಸಂದೇಶಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಜಮಾಆತೆ-ಇಸ್ಲಾಮಿ ಹಿಂದ್ ರಾಜ್ಯದಾದ್ಯಂತ ನವೆಂಬರ್ 16ರಿಂದ 30ರ ತನಕ ಹಮ್ಮಿಕೊಂಡಿದ್ದ ಸೀರತ್ ಅಭಿಯಾನಕ್ಕೆ ಇತ್ತೀಚಗೆ ಹಿರೇಮಠದ ಡಾ.ಶ್ರೀ ಶಿವಾನಂದಶಿವಾಚಾರ್ಯ ಮಹಾಸ್ವಾಮೀಜಿ ಚಾಲನೆ ನೀಡಿದರು. ಪ್ರವಾದಿ ಮಹಮ್ಮದರ ಜೀವನ ಮತ್ತು ಸಂದೇಶಗಳಿರುವ ಪುಸ್ತಕಗಳನ್ನು ಸ್ವೀಕರಿಸುವ ಮೂಲಕ ಸೀರತ್ ಅಭಿಯಾನಕ್ಕೆ ಚಾಲನೆ ನೀಡಿದ ಹಿರೇಮಠ ಶ್ರೀಗಳು ಮಾತನಾಡಿ,ಇದೊಂದು ಉತ್ತಮ ಬೆಳವಣಿಗೆ, ಇದು ಧರ್ಮ, ಧರ್ಮಗಳ ನಡುವೆ ಇರುವ ಕಂದಕಗಳನ್ನು ತೊಡೆದು ಹಾಕಿ,ಎಲ್ಲರೂ ಸಹೋದರತೆಯಿಂದ ಬಾಳಲು ಸಹಕಾರಿಯಾಗಲಿದೆ.ಎಲ್ಲ ಧರ್ಮಗಳ ಲ್ಲಿಯೂ ಮೂಲಭೂತವಾದಿಗಳಿದ್ದಾರೆ.ದಾರ್ಶಾನಿಕರ ಸಂದೇಶಗಳನ್ನು ತಮ್ಮ ಸ್ವಾರ್ಥಕ್ಕೆ ತಕ್ಕಂತೆ ಅರ್ಥೈಸಿಕೊಂಡು ಮನುಷ್ಯ, ಮನುಷ್ಯರ ನಡುವೆ ಕಂದಕ ಸೃಷ್ಟಿ ಮಾಡುವ ಜನರಿದ್ದಾರೆ.ಇದರ ಬಗ್ಗೆ ಎಲ್ಲ ಧರ್ಮಗಳ ಪ್ರಜ್ಞಾವಂತ ಜನತೆ ಎಚ್ಚೆತ್ತು ಕೊಳ್ಳಬೇಕಿದೆ. ಧರ್ಮ ಗ್ರಂಥಗಳ ಅಪವ್ಯಾಖ್ಯಾನಕ್ಕೆ ಅವಕಾಶ ನೀಡದೆ, ಜನರಿಗೆ ಅಯಾಯ ಪ್ರಾದೇಶಿಕ ಭಾಷೆಗಳ ಮೂಲಕ ಧರ್ಮ ಗ್ರಂಥಗಳ ಸಾರಗಳನ್ನು…
ತುಮಕೂರು : ತುಮಕೂರು ಜಿಲ್ಲೆಯ 10 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಎಲ್ಲಾ ಕಾಮಗಾರಿಗಳಿಗೆ ಡಿಸೆಂಬರ್ 30ರೊಳಗೆ ಕಾಮಗಾರಿಗಳ ಆದೇಶವನ್ನು ನೀಡಿ ಆದಷ್ಟು ಶೀಘ್ರ ಕುಡಿಯುವ ನೀರಿನ ಕೊರತೆ ಬಾರದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ಅವರು ತಾಲ್ಲೂಕು ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಗ್ರಾಮೀಣ ಕುಡಿಯುವ ನೀರು ಯೋಜನೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ತುಮಕೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಬರಗಾಲ ಸಂದರ್ಭದಲ್ಲಿ ಕುಡಿಯುವ ನೀರು ಒದಗಿಸಲು ಈಗಾಗಲೇ ಪ್ರತಿ ತಾಲ್ಲೂಕಿಗೆ 50ಲಕ್ಷ ರೂ.ನಂತೆ ಜಿಲ್ಲೆಗೆ 5 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಬರಗಾಲದ ಸಂದರ್ಭದಲ್ಲಿ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದು ಎಂಬುದರ ಬಗ್ಗೆ ಪಿಡಿಓಗಳಿಂದ ಮಾಹಿತಿ ಪಡೆದು…
ವಿಜಯಪುರ : ಪ್ರೀತಿ ನಿರಾಕರಿಸಿದ್ದಕ್ಕೆ ಹಾಗೂ ಆ ವಿಷಯವನ್ನು ಪೋಷಕರಿಗೆ ತಿಳಿಸಿದ ಕಾರಣ ಅಪ್ರಾಪ್ತ ಬಾಲಕಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಧಾರುಣ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಕೊಲೆಯಾದ ಬಾಲಕಿಯನ್ನು ರತ್ನಾಪುರ ಗ್ರಾಮದ ಪ್ರಾಜಕ್ತಾ ಬಲಭೀಮ ನರಳೆ (14) ಎಂದು ಗುರುತಿಸಲಾಗಿದೆ. ಶಂಕರ್ ಹಿಪ್ಪರಕರ, ಮೋಹನ್ ಎಡವೆ ಎಂಬ ಇಬ್ಬರು ಅಪ್ರಾಪ್ತೆಗೆ ಪ್ರೀತಿಸು ಎಂದು ಬೆನ್ನು ಬಿದ್ದಿದ್ದರು. ಶುಕ್ರವಾರ ಹೀಗೆ ಆಕೆಗೆ ಇಬ್ಬರೂ ಕಿರುಕುಳ ನೀಡಿದ್ದಾರೆ. ಮನೆಯಲ್ಲಿ ವಿಷಯ ತಿಳಿಸದಂತೆ ಬೆದರಿಕೆ ಹಾಕಿದ್ದರು. ಆದರೆ ಅಪ್ರಾಪ್ತೆ ಇವರ ಪ್ರೀತಿಯನ್ನು ನಿರಾಕರಿಸಿ ತನ್ನ ಪೋಷಕರಿಗೆ ಈ ವಿಷಯವನ್ನು ತಿಳಿಸಿದ್ದಳು. ಬಾಲಕಿ ಪೋಷಕರು ಪ್ರಾಜಕ್ತಳನ್ನು ಮರುದಿನ ಅಂದರೆ ಶನಿವಾರ ಶಾಲೆ ಬಿಡಿಸಿ ಮನೆಯಲ್ಲಿ ಇರಿಸಿಕೊಂಡಿದ್ದರು. ಇಬ್ಬರಿಗೂ ಮದುವೆಯಾಗಿದ್ರೂ, ಪ್ರಾಜಕ್ತ ಹಿಂದೆ ಬಿದ್ದಿದ್ದರು. ಪ್ರಾಜಕ್ತಾ ಶನಿವಾರ ಶಾಲೆಗೆ ಹೋಗದಿದ್ದಾಗ ಮನೆಯಲ್ಲಿ ವಿಷಯ ತಿಳಿಸಿದ್ದಾಳೆ ಎಂದು ತಿಳಿದ ಇಬ್ಬರು ಆರೋಪಿಗಳು ನಮ್ಮ ಮಗಳಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ…
ಬಳ್ಳಾರಿ: ಬರದ ಕಾರಣವೊಡ್ಡಿ ಹಂಪಿ ಉತ್ಸವ ರದ್ದು ಮಾಡಲು ಸರಕಾರ ಮುಂದಾಗಿರುವುದಕ್ಕೆ ಮಾಜಿ ಸಚಿವ, ಗಣಿಧಣಿ ಜಿ.ಜನಾರ್ದನ ರೆಡ್ಡಿ ಅವರು ವಿರೋಧ ವ್ಯಕ್ತ ಪಡಿಸಿದ್ದು, ಅದ್ಧೂರಿ ಉತ್ಸವಕ್ಕೆ ಆರ್ಥಿಕ ನೆರವು ಸೇರಿದಂತೆ ಸಕಲ ರೀತಿಯಲ್ಲಿ ಸಹಕರಿಸುವುದಾಗಿ ಹೇಳಿಕೊಂಡಿದ್ದಾರೆ. ಈ ಮೂಲಕ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಸವಾಲು ಹಾಕಿದ್ದಾರೆ. ಕೋಟಿ ಕೋಟಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ಮಾಡ್ತೀರಿ. ಉಪ ಚುನಾವಣೆ ಗೆಲ್ಲೋದಕ್ಕೆ ನೀರಿನಂತೆ ಹಣ ಖರ್ಚು ಮಾಡ್ತೀರಿ. ಅವೆಲ್ಲದಕ್ಕೂ ಇರದ ಬರ, ಹಂಪಿ ಉತ್ಸವದ ವಿಚಾರಕ್ಕೆ ಏಕೆ ಬರುತ್ತೆ ಅಂತ ಪ್ರಶ್ನಿಸಿದ್ದಾರೆ. ಅಲ್ಲದೇ ಹಂಪಿ ಉತ್ಸವ ಮಾಡಲು ನಿಮ್ಮ ಕೈಲಿ ಆಗಲಿಲ್ಲ ಅಂದ್ರೆ ಹೇಳಿ. ನಾನು ದುಡ್ಡು ಕೊಡ್ತೇನೆ. ಹಂಪಿ ಉತ್ಸವ ನಡೆಸಿ ಅಂತ ದೋಸ್ತಿ ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ. https://www.facebook.com/galijanardhanreddy/posts/587319671711530 …
ಬೆಂಗಳೂರು: ಆರೋಗ್ಯ ತಪಾಸಣೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದಗಂಗಾ ಮಠಾಧ್ಯಕ್ಷರಾದ ಡಾ.ಶಿವಕುಮಾರ ಸ್ವಾಮೀಜಿ ಸೋಮವಾರ ಮಧ್ಯಾಹ್ನ ಮಠಕ್ಕೆ ಮರಳಿದರು. ಡಿ.1 ರಂದು ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಶಿವಕುಮಾರ ಸ್ವಾಮೀಜಿಗಳು, ನಗರದ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಶ್ರೀಗಳ ಆರೋಗ್ಯ ತಪಾಸಣೆ ನಡೆಸಿದಾಗ ರಕ್ತ ಹಾಗೂ ಕಿಡ್ನಿಯಲ್ಲಿ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು. ಜತೆಗೆ ಎರಡು ಸ್ಟಂಟ್ಗಳನ್ನು ಸಹ ಶಸ್ತ್ರಚಿಕಿತ್ಸೆ ಇಲ್ಲದೆ ಅಳವಡಿಸಲಾಗಿದೆ. ರವಿವಾರ ಶ್ರೀಗಳು ಚೇತರಿಸಿಕೊಂಡಿದ್ದರು. ಆದರೆ, ಶ್ರೀಗಳು ಮಠಕ್ಕೆ ತೆರಳಲೇಬೇಕು ಎಂದು ಹಠ ಮಾಡಿದರು. ಹಾಗಾಗಿ ಸೋಮವಾರ ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಿದ್ದೇವೆ ಎಂದು ವೈದ್ಯ ಡಾ.ರವೀಂದ್ರ ಅವರು ಸುದ್ದಿಗಾರರಿಗೆ ತಿಳಿಸಿದರು. ಶಿವಕುಮಾರ ಸ್ವಾಮೀಜಿಗಳಿಗೆ ಇನ್ನೂ 3-4 ಆಂಟಿ ಬಯೋಟೆಕ್ ಚಿಕಿತ್ಸೆ ನೀಡಬೇಕಾಗಿದೆ. ಹೀಗಾಗಿ, ಇನ್ನೆರಡು ಮೂರು ದಿನ ಆಸ್ಪತ್ರೆಯಲ್ಲೆ ಇರಿಸಿಕೊಳ್ಳಲು ನಿರ್ಧರಿಸಿದ್ದೆವು.…