Author: News Desk Benkiyabale

ತುಮಕೂರು: ನಗರದ ಶೆಟ್ಟಿಹಳ್ಳಿ ಮುಖ್ಯ ರಸ್ತೆಯಲ್ಲಿರುವ ವಿಶಾಲಾಕ್ಷಮ್ಮ ಸದಾಶಿವಯ್ಯ ಕಲ್ಯಾಣ ಮಂಟಪದಲ್ಲಿ 2024ರ ಡಿಸೆಂಬರ್ 26ರಿಂದ 29ರವರೆಗೆ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದಕರ ಧನುರ್ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಜಗದ್ಗುರು ಪಂಚಾಚಾರ್ಯಸೇವಾ ಟ್ರಸ್ಟ್ (ರಿ) ನ ಅಧ್ಯಕ್ಷ ಟಿ.ಆರ್.ಸದಾಶಿವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಡಿಸೆಂಬರ್ 26 ರಿಂದ 29ರವರಗೆ ಪ್ರತಿದಿನ ಬೆಳಗ್ಗೆ 5 ಗಂಟೆಯಿAದ 7 ಗಂಟೆಯವರೆಗೆ ಇಷ್ಟಲಿಂಗಪೂಜೆ ಮತ್ತು ಸಂಜೆ 6:30ರಿಂದ ಜನಜಾಗೃತಿ ಧರ್ಮ ಸಮಾರಂಭ ಜರುಗಲಿದೆ. ಮುಖ್ಯ ಅಥಿತಿಗಳಾಗಿ ಶಾಸಕರಾದ ಜಿ.ಬಿ.ಜೋತಿಗಣೇಶ್,ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಂಬಿಕಾ ಹುಲಿನಾಯ್ಕರ್,ಜಿ.ಮರಿಸ್ವಾಮಿ, ಟಿ.ಸಿ.ಓಹಿಲೇಶ್ವರ್,ಶಶಿ ಹುಲಿಕುಂಟೆ ಮಠ ಅವರುಗಳು ಪಾಲ್ಗೊಳ್ಳಲಿದ್ದಾರೆ. ಹಿರಿಯರಿಗೆ ಗುರುರಕ್ಷೆ ಇರುತ್ತದೆ. ಸುದ್ದಿಗೋಷ್ಠಿಯಲ್ಲಿ ಶ್ರೀಪಂಚಾಚಾರ್ಯ ಸೇವಾ ಟ್ರಸ್ಟ್ನ ಕಾರ್ಯದರ್ಶಿ ಹೆಚ್.ಎಸ್.ಬಸ್ಮಾಂಗಿ ರುದ್ರಯ್ಯ, ಸಹಕಾರ್ಯದರ್ಶಿ ಜಿ.ಎಸ್.ಸಿದ್ದರಾಜು, ಧರ್ಮದರ್ಶಿಗಳಾದ ಜ.ಸಿ.ವಿರೂಪಾಕ್ಷ, ಶ್ರೀಮತಿ ವೈ.ಕೆ.ಜೋತಿ, ಪಾಲ್ಗೊಂಡಿದ್ದರು.

Read More

ತುಮಕೂರು: ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ 4500 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಗ್ರೀನ್ ಫೀಲ್ಡ್ ಕರ್ನಾಟಕದ ದೊಡ್ಡ ಯೋಜನೆಯಾಗಲಿದೆ ಎಂದು ಹೇಳಿದರು. ಹಾಸನ, ತಿಪಟೂರು, ಹುಳಿಯಾರು, ಗ್ರೀನ್ ಫೀಲ್ಡ್ ಕಾರಿಡಾರ್ ನಿರ್ಮಾಣವಾಗಲಿದೆ. ತುಮಕೂರು ಜಿಲ್ಲೆಯಲ್ಲಿ 40 ಕಿ.ಮೀ.ನಲ್ಲಿ ಹಾದು ಹೋಗಲಿದೆ. 500 ಕೋಟಿ ರೂ. ವೆಚ್ಚದಲ್ಲಿ ಪುಣೆ-ಬೆಂಗಳೂರು 500 ಕಿ.ಮೀ. ವ್ಯಾಪ್ತಿಯಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಆಗಲಿದೆ ಎಂದರು. ತುಮಕೂರು ಲೋಕಸಭಾ ಕ್ಷೇತ್ರದ ಪ್ರತಿ ಹೋಬಳಿಗೆ ಹೋಗಿ ಜನರ ಸಮಸ್ಯೆಗಳನ್ನು ಆಲಿಸುತ್ತೇನೆ. ಒಂದು ದಿನಕ್ಕೆ ಎರಡು ಹೋಬಳಿಯಂತೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ ಎಂದು ಅವರು ಹೇಳಿದರು. ಒಂದು ವಾರದಲ್ಲಿ ಮೂರು ದಿನ ಒಂದು ರೌಂಡ್ ಮಗಿಸಿ, ಎರಡನೇ ರೌಂಡ್‌ಗೆ…

Read More

ತುಮಕೂರು: ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ ಎಂದು ನಾಗವಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಗೌರಮ್ಮ ಮೂಡ್ಲಯ್ಯ ಅಭಿಪ್ರಾಯಪಟ್ಟರು. ಗ್ರಾಮಾಂತರದ ನಾಗವಲ್ಲಿ ಗ್ರಾಮದ ಕರ್ನಾಟಕ ಪಬ್ಲೀಕ್ ಶಾಲೆಯ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ(ರಿ) ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳ ಮತ್ತು ನೌಕರರ ಸಂಘ, ತುಮಕೂರು ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ತುಮಕೂರು ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಹಳ್ಳಿಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರ ಪಾತ್ರ ಬಹಳ ಮುಖ್ಯವಾಗಿದೆ. ಹಳ್ಳಿಗಳಲ್ಲಿನ ಸಮಸ್ಯೆಗಳ ಪರಿಹಾರ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಹಳ್ಳಿಗಳಲ್ಲಿ ಮುಖ್ಯವಾಗಿ ಚರಂಡಿ,ಕುಡಿಯುವ ನೀರು ಮತ್ತು ಇತರೆ ಕೆಲಸ ಕಾರ್ಯಗಳಿಗೆ ಸದಾ ಒತ್ತು ನೀಡುತ್ತಿರುವ ಅಧಿಕಾರಿಗಳ ಆರೋಗ್ಯಕ್ಕೆ ಕ್ರೀಡಾಕೂಟ ಸಹಕಾರಿ ಎಂದು ಹೇಳಿದರು. ತುಮಕೂರು…

Read More

ತುಮಕೂರು: ಜಾಗತಿಕ ಸ್ಥಿತಿಗತಿ ನೋಡಿದರೆ ಆಂತರಿಕ ಶಾಂತಿಯ ಅಗತ್ಯವಿದೆ. ವಿಶ್ವದಲ್ಲಿ ಶಾಂತಿ ನೆಲೆಸಲು ಯೋಗ, ಧ್ಯಾನ ಬದುಕಿನ ಅನಿವಾರ್ಯ ಅಂಗವಾಗಬೇಕು ಎಂದು ಯೋಗ ಗುರು ಡಾ. ಎಂ. ಕೆ. ನಾಗರಾಜರಾವ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಯೋಗ ಅಧ್ಯಯನ ಮತ್ತು ಸಂಶೋಧನ ವಿಭಾಗವು ಶನಿವಾರ ಆಯೋಜಿಸಿದ್ದ ‘ವಿಶ್ವ ಧ್ಯಾನ ದಿನ’ ಆಚರಣೆಯಲ್ಲಿ ಮಾತನಾಡಿದರು. ಯೋಗ, ಧ್ಯಾನದ ಮಹತ್ವ ಹಾಗೂ ಅಭ್ಯಾಸ ಕ್ರಮಗಳ ಕುರಿತು ತಿಳಿಸುತ್ತ, ಪರರನ್ನು ಹಿಮ್ಮೆಟ್ಟಿಸುವ ಕ್ರೌರ್ಯ ಮನೋಭಾವ ನಾಶವಾಗಲು, ಸ್ವ-ಅರಿವಿನ ವಿಚಾರ ಮಾಡಲು ಮನಃಶಾಂತಿ ಆಂತರ್ಯದಲ್ಲಿ ನೆಲೆಸಬೇಕಿದೆ. ಶಾಂತಿ ನೆಲೆಸಲು ಧ್ಯಾನ ಸಹಕಾರಿಯಾಗಲಿದೆ ಎಂದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ., ಯೋಗ ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಂಯೋಜಕ ಡಾ. ಎ. ಎಂ. ಮಂಜುನಾಥ, ನೆದರ್ಲ್ಯಾಂಡ್ ಯೋಗ ಶಿಕ್ಷಕಿ ವೆಂಡಿ ಮ್ಯಾಂಡ್ರೆಸ್, ಜರ್ಮನಿಯ ಸುಸಾನ ಸ್ಟಾçಸ್ಬರ್ಗರ್, ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ನಾಗರಿಕರು ಭಾಗವಹಿಸಿದ್ದರು.

Read More

ತುಮಕೂರು: ಶಿಕ್ಷಣ ಸಂಸ್ಥೆಯ ಸ್ಥಾಪನೆಯ ಮೂಲಕ ನುರಾರು ಜನರಿಗೆ ಉದ್ಯೋಗ ಮತ್ತು ಲಕ್ಷಾಂತರ ಮಂದಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದಾರಿದೀಪವಾದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶಿಕ್ಷಣ ಭೀಷ್ಮ ಡಾ.ಹೆಚ್.ಎಂ.ಗAಗಾಧರಯ್ಯನವರ 29ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಸಿದ್ಧಾರ್ಥ ನಗರದಲ್ಲಿ ಇಂದು ನಡೆಯಿತು. ಬೌದ್ಧ ಭಿಕ್ಖು ಮಹಾಸಂಘದ ಬಂತೇಜಿ ಮತ್ತು ಸಹಸದಸ್ಯರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಿವಂಗತ ಡಾ.ಹೆಚ್.ಎಮ್.ಗಂಗಾಧರಯ್ಯನವರ 29ನೇ ವರ್ಷದ ಪುಣ್ಯಸ್ಮರಣೆಯನ್ನು ಬೌದ್ಧ ಬಿಕ್ಕುಗಳಿಂದ ತಿಸರಣ ಗಮನ ಮತ್ತು ಗ್ರಹಣ ಹಾಗೂ ಪುಣ್ಯಾನುಮೋದನಾ ಸ್ಮರಣೆ ಮತ್ತು ನುಡಿ ನಮನವನ್ನು ಸಲ್ಲಿಸಲಾಯಿತು. ದಿವಂಗತ ಡಾ.ಹೆಚ್.ಎಮ್.ಗಂಗಾಧರಯ್ಯ, ಶ್ರೀಮತಿ ಗಂಗಾಮಾಳಮ್ಮ ಮತ್ತು ಡಾ.ಜಿ.ಶಿವಪ್ರಸಾದ್ರವರ ಸಮಾಧಿಗೆ ಪೂಜೆ ಮಾಡಿ ಪುಷ್ಪಮಾಲೆ ಸಲ್ಲಿಸುವ ಮೂಲಕ ಧಾರ್ಮಿಕ ಕೈಂಕರ್ಯಗಳನ್ನು ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಹಾಗೂ ಕುಟುಂಬದ ಸದಸ್ಯರು ವಿಧಿ ವಿಧಾನಗಳನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ, ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ…

Read More

ತುಮಕೂರು: ಮನುಷ್ಯರಿಂದಲೇ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ, ಸಮಾಜದ ನೆಮ್ಮದಿಗೆ ಅಗತ್ಯವಾದ ನಡವಳಿಕೆಗಳನ್ನು ಮನುಷ್ಯ ರೂಪಿಸಿಕೊಳ್ಳುವ ಮೂಲಕ ಮಾನವ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಜಯಂತ್ ಕುಮಾರ್ ಕರೆ ನೀಡಿದರು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿAದು ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ನಾಗರಿಕರು ಮಾನವ ಹಕ್ಕುಗಳ ವ್ಯಾಪ್ತಿಯನ್ನು ತಿಳಿಯುವುದು ಅವಶ್ಯಕವಾಗಿದೆ. ಕವಿ ರವೀಂದ್ರನಾಥ ಠಾಗೋರ್ ಹೇಳುತ್ತಾರೆ “ಚಿಟ್ಟಿಗಳು ವರ್ಷಗಳ ಕಾಲ ಜೀವಿಸುವುದಿಲ್ಲ, ಕೆಲವು ದಿನವಷ್ಟೇ ಅವುಗಳ ಜೀವನ. ಅವು ಇರುವಷ್ಟು ಕಾಲ ಪರಸ್ಪರ ನೆಮ್ಮದಿ, ಸುಖದಿಂದ ಬಾಳುತ್ತವೆ” ಇದೇ ರೀತಿ ಮನುಷ್ಯರು ಕೂಡ ಸುಖವಾಗಿ ಜೀವಿಸಬೇಕು. ಇತರರಿಗೆ ತೊಂದರೆ ಕೊಟ್ಟು ಜೀವಿಸುವಂತಹ ಕ್ರಿಯೆ, ಭಾವನೆಗಳನ್ನು ತ್ಯಜಿಸಬೇಕೆಂದು ತಿಳಿಸಿದರು.…

Read More

ತುಮಕೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವವರಿಗೆ ಕರ್ನಾಟಕ ರಣಧೀರರ ವೇದಿಕೆ (ರಿ.) ಕೊಡಮಾಡುವ ರಾಣಿ ಚೆನ್ನಭೈರಾದೇವಿ ಪ್ರಶಸ್ತಿ 2024ಕ್ಕೆ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜûಮ್ ಜûಮ್ ಭಾಜನರಾಗಿದ್ದಾರೆ. ಕನ್ನಡ ನಾಡು-ನುಡಿ, ನೆಲ, ಜಲ, ಭಾಷೆ, ಸಾಹಿತ್ಯ ಹಾಗೂ ಸಮಾಜಸೇವೆಯಲ್ಲಿ ಸೇವೆ ಸಲ್ಲಿಸಿರುವವರಿಗೆ ಈ ಪ್ರಶಸ್ತಿ ನೀಡಲಾಗುವುದು. ಇತ್ತೀಚೆಗೆ ನೆಲಮಂಗಲದಲ್ಲಿ ನಡೆದ 5ನೆಯ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಭುವನೇಶ್ವರಿ ಹಬ್ಬ ಮತ್ತು ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರ 2024ರ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ರಣಧೀರರ ವೇದಿಕೆ (ರಿ.) ಸಂಸ್ಥಾಪಕ ಅಧ್ಯಕ್ಷ ಶಂಕರ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪ ಗೌಡ ಕೆ. ಎಸ್., ಮತ್ತಿತರ ಗಣ್ಯರು ಈ ಸಂದರ್ಭ ಹಾಜರಿದ್ದರು.

Read More

ತುಮಕೂರು: ಸುವರ್ಣಸೌಧದಲ್ಲಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ಗೂಂಡಾ ವರ್ತನೆ, ಕೊಲೆ ಬೆದರಿಕೆ ಹಾಕಿ, ಅವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿರುವ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಶಾಂತಿ, ಅರಾಜಕತೆ, ಅಭದ್ರತೆ ಸೃಷ್ಟಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಷ್ಟು ದಿನದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ಜನರನ್ನು ವಂಚಿಸುತ್ತಾ ಬಂದಿದೆ. ತನ್ನ ಆಡಳಿತ ಹುಳುಕನ್ನು ಜನ ಪ್ರಶ್ನೆ ಮಾಡಬಾರದು ಎಂದು ವಿವಾದಗಳನ್ನು ಸೃಷ್ಟಿಮಾಡಿಕೊಂಡು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರವನ್ನು ಸರ್ಕಾರ ಮಾಡುತ್ತಿದೆ ಎಂದು ದೂರಿದರು. ಜಿಲ್ಲಾ…

Read More

ತುಮಕೂರು: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಾನಾಯಕ ಡಾ. ಬಿ.ಆರ್ ಅಂಬೇಡ್ಕರ್ ಪ್ರಜಾ ಸೇನೆ, ಆಲ್ ಇಂಡಿಯಾ ಬಹುಜನ ಸಮಾಜದ ಪಾರ್ಟಿ ಸೇರಿದಂತೆ ವಿವಿಧ ದಲಿತ ಪರ ಸಂಘಟನೆಗಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್‌ಹಾಲ್ ವೃತ್ತದಲ್ಲಿ ಜಮಾಯಿಸಿದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಅಮಿತ್ ಶಾ ಹೇಳಿಕೆ ವಿರುದ್ಧ ಆಕ್ರೋಶ ಹೊರ ಹಾಕಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಅಂಬೇಡ್ಕರ್ ಹೆಸರು ಉಚ್ಛರಿಸುವುದು ಈಗ ಫ್ಯಾಷನ್ ಆಗಿದೆ. ಅಂಬೇಡ್ಕರ್ ಹೆಸರು ಉಚ್ಛರಿಸುವ ಬದಲು ದೇವರ ಹೆಸರನ್ನು ಉಚ್ಛರಿಸಿದರೆ ಏಳು ಜನ್ಮದವರೆಗೂ ಸ್ವರ್ಗ ಪಡೆಯಬಹುದು ಎಂದು ಹೇಳಿಕೆ ನೀಡುವ ಮೂಲಕ ಅಂಬೇಡ್ಕರ್‌ರವರಿಗೆ…

Read More

ತುಮಕೂರು: ಇತ್ತೀಚಗೆ ಕೇಂದ್ರದ ಗೃಹ ಸಚಿವ ಅಮಿತ್ ಷಾ ಅವರು ಸಂಸತ್ತಿನಲ್ಲಿ ಮಾತನಾಡುವ ವೇಳೆ, ಅಂಬೇಡ್ಕರ್ ಎಂಬುದು ವ್ಯಸನವಾಗಿದೆ. ಅಂಬೇಡ್ಕರ್ ಅವರ ಬದಲು ದೇವರ ಹೆಸರು ಹೇಳಿದ್ದರೆ ಸ್ವರ್ಗ ಪ್ರಾಪ್ತಿಯಾಗುತಿತ್ತು ಎಂದು ನೀಡಿರುವ ಹೇಳಿಕೆಯನ್ನು ಖಂಡಿಸಿ, ರೈತರು, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು, ರೈತ-ಕಾರ್ಮಿಕ ಸಂಘಟನೆ, ಸ್ಲಂ ಜನಾಂದೋಲನ ಸಮಿತಿ ಸದಸ್ಯರು, ಸ್ವಾತಂತ್ರ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ಸ್ವಾತಂತ್ರ ಚೌಕದಲ್ಲಿ ಸಮಾವೇಶಗೊಂಡಿದ್ದ ಮುಖಂಡರು, ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅಮಿತ್ ಷಾ ಅವರನ್ನು ಕೂಡಲೇ ಕೇಂದ್ರ ಸಚಿವ ಸಂಪುಟದಿAದ ಕೈಬಿಡಬೇಕು, ಹಾಗೆಯೇ ಅವರ ಹೇಳಿಕೆಯನ್ನು ಸಮರ್ಥಿಸುತ್ತಿರುವ ಪ್ರಧಾನಿ ಮೋದಿ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಹಿರಿಯ ಚಿಂತಕ ಕೆ.ದೊರೆರಾಜು ಮಾತನಾಡಿ, ಅಂಬೇಡ್ಕರ್ ಎಂಬುದು ವ್ಯಕ್ತಿಯಲ್ಲ. ಅದೊಂದು ಶಕ್ತಿ. ಇಡೀ ವಿಶ್ವವೇ ಅವರ ವಿದ್ವತ್‌ಗೆ ತಲೆಬಾಗಿದೆ. ಸಾವಿರಾರು ಭಾಷೆ, ಜಾತಿ, ಧರ್ಮಗಳಿರುವ ಭಾರತದಂತಹ ಬಹು ಸಂಸ್ಕೃತಿಯ ನಾಡಿಗೆ ಹೊಂದುವAತಹ, ಎಲ್ಲರಿಗೂ ಸಮಪಾಲು ದೊರೆಯುವಂತ ಸಂವಿಧಾನವನ್ನು ನೀಡಿದ್ದಾರೆ. ಇಂತಹ ಸರ್ವಗುಣ ಸಂಪನ್ನ ವ್ಯಕ್ತಿಯ ಬಗ್ಗೆ…

Read More