Author: News Desk Benkiyabale

ನವದೆಹಲಿ:        ಏರ್‌ಸೆಲ್-ಮ್ಯಾಕ್ಸಿಸ್ ಹಗರಣ ಸಂಬಂಧ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಪಟಿಯಾಲ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಆರೋಪಪಟ್ಟಿ ಸಲ್ಲಿಸಿದೆ.       ಚಿದಂಬರಂ ಅವರನ್ನು ಮೊದಲನೇ ಆರೋಪಿ ಎಂದು ಹೆಸರಿಸಲಾಗಿದೆ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ, ಕಾರ್ತಿ ಅವರ ಅಕೌಂಟೆಂಟ್‌ ಭಾಸ್ಕರ್ ರಾಮನ್‌ ಸೇರದಂತೆ ಒಟ್ಟು 9 ಆರೋಪಿಗಳನ್ನು ಆರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ.       ₹3500 ಕೋಟಿ ಮೊತ್ತದ ಹಗರಣ ಇದಾಗಿದೆ. ಈ ಪ್ರಕರಣವನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು. ಈ ಹಿಂದೆ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.       2006ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ವೇಳೆ ಚಿದಂಬರಂ ಅವರು ವಿದೇಶಿ ಕಂಪನಿಗೆ ‘ವಿದೇಶಿ ಹೂಡಿಕೆ ಪ್ರಚಾರ ಮಂಡಳಿ’ಯ (ಎಫ್‌ಐಪಿಬಿ) ಮಂಜೂರಾತಿ ನೀಡಿದ್ದು ಹೇಗೆ ಎಂಬ ಕುರಿತು ಸಿಬಿಐ ತನಿಖೆ ನಡೆಸಿತ್ತು. ಮ್ಯಾಕ್ಸಿಸ್‌ನ ಅಂಗಸಂಸ್ಥೆ…

Read More

ಬೆಂಗಳೂರು:       ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಮಾಧ್ಯಮಗಳಲ್ಲಿ ಕೋಲಹಲ ಎಬ್ಬಿಸಿದ್ದ  ಶೃತಿ ಹರಿಹರನ್​​ಗೆ ಇದೀಗ ಸಂಕಷ್ಟ ಎದುರಾಗಿದ್ದು, ಶ್ರುತಿ ಹರಿಹರನ್ ಸೇರಿ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.       ತಮ್ಮ ಇಮೇಜ್ ಗೆ ಡ್ಯಾಮೇಜ್ ಆಗಿರುವ ಕಾರಣ, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿಂದು ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಹಾಗೂ ವಕೀಲರು ಲಿಖಿತ ದೂರು ನೀಡಿದ್ದಾರೆ. ಸೈಬರ್ ಕ್ರೈಂ ಪೊಲೀಸರು ಐಟಿ ಆ್ಯಕ್ಟ್‌ 200 ಅಡಿಯಲ್ಲಿ ಶ್ರುತಿ ಹರಿಹರನ್ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.       ಇಬ್ಬರ ನಡುವೆ ಸಂಧಾನ ನಡೆಸಲು ಚಲನಚಿತ್ರ ರಂಗದ ಪ್ರಮುಖರು ಪ್ರಯತ್ನಿಸುತ್ತಿರುವ ಮಧ್ಯೆಯೇ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

Read More