ತುಮಕೂರು: ಜಗತ್ತಿಗೆ ಯೋಗ ಹೇಳಿಕೊಟ್ಟವರು ಭಾರತೀಯರು.ಆದರೆ ಇಂದು ಪ್ರಪಂಚದಲ್ಲಿ ಯೋಗ ಅಭ್ಯಾಸವಿಲ್ಲದ ದೇಶಗಳೇ ಇಲ್ಲ.ಇದು ಭಾರತೀಯರೆಲ್ಲರೂ ಹೆಮ್ಮೆ ಪಡುವ ವಿಚಾರ ಎಂದು ಯೋಗ ಗುರು ಡಾ.ಎಂ.ಕೆ.ನಾಗರಾಜರಾವ್ ತಿಳಿಸಿದ್ದಾರೆ. ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ ಕಾಲೇಜು ಯೋಗಾಸನ ಸ್ಪರ್ಧೆ ಹಾಗೂ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆಗೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಒಂದು ಸಮೀಕ್ಷೆಯ ಪ್ರಕಾರ 2028ನೇ ವರ್ಷದ ವೇಳೆಗೆ ಜಗತ್ತಿನಲ್ಲಿ 18 ಮಿಲಿಯನ್ ಯೋಗ ಮ್ಯಾಟ್‌ಗಳು ಮಾರಾಟವಾಗಲಿವೆ ಎಂಬ ನಿರೀಕ್ಷೆಯಿದೆ ಎಂದರು. ಯೋಗ ಎನ್ನುವಂತಹದ್ದು, ಅನುಭವಿಸಿ ಮಾಡುವ ಒಂದು ದೈಹಿಕ ಚಟುವಟಿಕೆ. ಯೋಗಕ್ಕೆ ಭಾರತವೇ ತವರೂರಾದರೂ ವಿದೇಶಗಳ ರೀತಿ ಶಿಸ್ತು ಮತ್ತು ಶಾಸ್ತಿçÃಯ ಬದ್ದ ಅಭ್ಯಾಸ ನಮ್ಮಲ್ಲಿ ಕಡಿಮೆಯಾಗಿದೆ.ಇದು ಭಾರತೀಯರು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ವಿಚಾರವಾಗಿದೆ. ಯೋಗವನ್ನು ಒಂದು ಚಿಕಿತ್ಸೆ,ಔಷದಿ ಎನ್ನುವ ರೀತಿಯಲ್ಲಿ ನೋಡುವ ಬದಲು ಒಂದು ಜೀವನ ಕ್ರಮವಾಗಿ ಅಳವಡಿಸಿಕೊಂಡರೆ ಹೆಚ್ಚಿನ ಉಪಯೋಗವಾಗಲಿದೆ.45ವರ್ಷದ ನಂತರ ಒಂದಿಲೊAದು ರೋಗವಿಲ್ಲ ಎಂದು ಹೇಳುವ…
Author: News Desk Benkiyabale
ತುಮಕೂರು: ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿಬೇಕು ಎಂದು ಕೋರಿ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಸೋಮವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಒಕ್ಕೂಟದ ಮುಖಂಡರು, ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಅವರು ಜಾರಿಗೆ ತಂದ ಕ್ರಾಂತಿಕಾರಿ ಯೋಜನೆಗಳು, ಜನಪರ ಕಾರ್ಯಕ್ರಮಗಳು ಹಿಂದುಳಿದವರು, ಶೋಷಿತರಿಗೆ ನೆರವಾಗಿವೆ. ಧ್ವನಿ ಇಲ್ಲದ ವರ್ಗದ ಧ್ವನಿಯಾಗಿ ಅರಸು ಅವರು ಹಲವಾರು ಕಾರ್ಯಕ್ರಮಗಳ ಮೂಲಕ ನಾಡಿಗೆ ಕೊಡುಗೆ ನೀಡಿದ್ದಾರೆ. ಹಿಂದುಳಿದ ವರ್ಗಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ಜಾರಿಗೆ ತಂದು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸಿದ್ದರು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಲು ಕಾರಣಕರ್ತರು. ಇವರ ಸೇವೆ ಸದಾ ಸ್ಮರಣೀಯ. ಇಂತಹ ಮಹನೀಯರಿಗೆ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪÀ್ರಶಸ್ತಿ ನೀಡಿ ಅವರ ಸೇವೆಯನ್ನು ಗೌರವಿಸಬೇಕು ಎಂದು ಮುಖ್ಯಮಂತ್ರಿಗಳಿಗೆ…
ತುಮಕೂರು: ಚಲಿಸುತ್ತಿದ್ದ ಖಾಸಗಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಡಿಯಾದ ಪರಿಣಾಮ ದೆಹಲಿ ಮೂಲದ ಪತ್ರಕರ್ತೆ ಸೇರಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಸುಮಾರು 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಿರಾ ತಾಲ್ಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ಸರಹದ್ದಿನ ರಾಷ್ಟಿçÃಯ ಹೆದ್ದಾರಿ-48ರಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತಪಟ್ಟಿರುವವರನ್ನು ದೆಹಲಿ ಮೂಲದ ಪತ್ರಕರ್ತೆ ಊರ್ವಿ ನಯನ್ (25), ಪ್ರಿಯಾಂಕ (25) ಹಾಗೂ ಶುಬಾಳಿ ಸಿಂಗ್ (28) ಎಂದು ಗುರುತಿಸಲಾಗಿದೆ. ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಮಾರ್ಗಮಧ್ಯೆ ಸೋಮವಾರ ಮುಂಜಾನೆ 4.15 ರಲ್ಲಿ ಸಿರಾ ತಾಲ್ಲೂಕು ಕಳ್ಳಂಬೆಳ್ಳ ಸಮೀಪದ ಚಿಕ್ಕನಹಳ್ಳಿ ಸೇತುವೆ ಬಳಿ ರಾಷ್ಟಿçÃಯ ಹೆದ್ದಾರಿ-48 ರಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ಪಲ್ಟಿ ಹೊಡೆದಿದೆ. ಈ ಪರಿಣಾಮ ಬಸ್‌ನಲ್ಲಿದ್ದ ಸುಮಾರು 29 ಪ್ರಯಾಣಿಕರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಗಾಯಗೊಂಡಿರುವ ಗಾಯಾಳುಗಳನ್ನು ಸಿರಾ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದು…
ತುಮಕೂರು: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಹಿಂದೂ ದೇವಾಲಯಗಳ ಧ್ವಂಸದAತಹ ಕೃತ್ಯಗಳನ್ನು ಖಂಡಿಸಿ ಇದೇ 4ರಂದು ಬುಧವಾರ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿವಿಧ ಮಠಾಧೀಶರು, ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಈ ಹೋರಾಟ ಬೆಂಬಲಿಸಿ ವಿವಿಧ ಮಠಗಳ ಸ್ವಾಮೀಜಿಗಳು, ಸಂಘಸAಸ್ಥೆಗಳ ಮುಖಂಡರು ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹೋರಾಟ ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಹೇಳಿದರು. ಬೆಟ್ಟದಹಳ್ಳಿ ಗವಿ ಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಸಖಲ ಜೀವಿಗಳಿಗೂ ಲೇಸು ಬಯಸುವುದೇ ಎಲ್ಲಾ ಧರ್ಮಗಳ ಆಶಯವಾಗಿದೆ. ಪ್ರಕೃತಿ ನಮಗೆ ಎಲ್ಲವನ್ನೂ ಕೊಟ್ಟಿದೆ. ಇಲ್ಲಿ ಎಲ್ಲರೂ ಸಮಾನವಾಗಿ ಬದುಕಲು ಆಶ್ರಯ ನೀಡಿದೆ. ಆದರೆ ಹಿಂಸೆಯನ್ನು ಪ್ರತಿಪಾದಿಸುತ್ತಾ ದೌರ್ಜನ್ಯ ಮಾಡುವುದನ್ನು ಯಾವ ಧರ್ಮವೂ ಒಪ್ಪುವುದಿಲ್ಲ. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಕೃತ್ಯಗಳನ್ನು ಖಂಡಿಸುತ್ತೇವೆ ಎಂದರು. ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಧರ್ಮಗುರುಗಳು ಸಂದೇಶ ನೀಡಬೇಕು, ಬಾಂಗ್ಲಾದಲ್ಲಿ ಹಿಂಸೆಯ ಕೃತ್ಯದಲ್ಲಿ ಭಾಗವಹಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು ಶಾಂತಿ…
ತುಮಕೂರು : ಜಿಲ್ಲೆಯಲ್ಲಿ ಮಳೆಯಿಂದಾಗಿ ಜನ-ಜಾನುವಾರು, ಮನೆ ಸೇರಿದಂತೆ ಬೆಳೆ ಹಾನಿ ಸಂಭವಿಸಿದಲ್ಲಿ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಹಾನಿ ಗೊಳಗಾದವರಿಗೆ ಶೀಘ್ರವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಉಪವಿಭಾಗಾಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ತಹಶೀಲ್ದಾರರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯ ತುಮಕೂರು, ತುರುವೇಕೆರೆ ಹಾಗೂ ಕುಣಿಗಲ್ ತಾಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಈವರೆಗೆ ಮಳೆಯಿಂದ ಹಾನಿಯಾಗಿರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿದರು. ಬೆಳೆ ಹಾನಿಯಲ್ಲಿ ಪರಿಹಾರ ಹಣ ಪಾವತಿಯನ್ನು ವಿಳಂಬ ಮಾಡದೆ ಶೀಘ್ರವಾಗಿ ಬಾಕಿ ಉಳಿದ ಪರಿಹಾರ ಹಣ ನೀಡಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಜಿಲ್ಲೆಯಲ್ಲಿ ವಕ್ಫ್ ಆಸ್ತಿಗೆ ಸಂಬAಧಿಸಿದAತೆ ರೈತರಿಗೆ ನೋಟಿಸ್ ನೀಡಿರುವ ಪ್ರಕರಣಗಳಿದ್ದಲ್ಲಿ ಕೂಡಲೇ ನನ್ನ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ…
ತುಮಕೂರು: ಮುಂಜಾನೆ ಗೆಳೆಯರ ಬಳಗ ಹಾಗೂ ವಿಘ್ನೇಶ್ವರ ಗೆಳೆಯರ ಬಳಗದವತಿಯಿಂದ ನಗರದ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ 2024ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪಡೆದ ವೀರಶೈವ ಬ್ಯಾಂಕಿನ ಉಪಾಧ್ಯಕ್ಷರಾದ ಹೆಬ್ಬಾಕ ಮಲ್ಲಿಕಾರ್ಜುನಯ್ಯ ಅವರಿಗೆ ಅಭಿನಂದನೆ ಹಾಗೂ ಗೆಳೆಯರ ಬಳಗದ ಮಾರ್ಕೇಟ್ ದಿನೇಶ ಮತ್ತು ಕೃಷ್ಣರಾವ್ ಅವರ ಹುಟ್ಟು ಹಬ್ಬದ ಅಂಗವಾಗಿ ಮೂವರನ್ನು ಅಭಿನಂದಿಸಲಾಯಿತು. ಮುAಜಾನೆ ಗೆಳೆಯರ ಬಳಗದ ಅಧ್ಯಕ್ಷ ಹಾಗೂ ಹಿರಿಯ ಕ್ರೀಡಾಪಟು ಟಿ.ಕೆ.ಆನಂದ್ ಮಾತನಾಡಿ,ವಿದ್ಯಾರ್ಥಿ ದಿಸೆಯಿಂದಲೂ ನಾಯಕತ್ವದ ಗುಣ ಹೊಂದಿರುವ ಹೆಬ್ಬಾಕ ಮಲ್ಲಿಕಾರ್ಜುನ್ ಅವರು,ಸಹಕಾರ ಕ್ಷೇತ್ರವಲ್ಲದೆ ಎಲ್ಲಾ ಕ್ಷೇತ್ರದಲ್ಲಿಯೂ ತಮ್ಮದೇ ಆದ ರೀತಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ.ಕ್ರೀಡಾಪಟುಗಳಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ಅವರು ರಾಜ್ಯಮತ್ತು ರಾಷ್ಟçಮಟ್ಟದಲ್ಲಿ ಸಾಧನೆ ಮಾಡಲು ಸಹಕಾರಿಯಾಗಿದ್ದಾರೆ.ಅವರಿಗೆ ಈ ಬಾರಿಯ ಸಹಕಾರ ರತ್ನ ಪ್ರಶಸ್ತಿ ಬಂದಿರುವುದು ನಮ್ಮಂತಹ ಹಲವರಿಗೆ ಸಂತೋಷವಾಗಿದೆ.ಅವರು ಈ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆಯನ್ನು ಮಾಡುವಂತಾಗಲಿ ಎಂದರು ಮುAಜಾನೆ ಗೆಳೆಯರ ಬಳಗದ ಧನಿಯಕುಮಾರ್ ಮಾತನಾಡಿ, ಸರಳ ಸಜ್ಜನಿಕೆಗೆ ಹೆಸರಾದ ಹೆಬ್ಬಾಕ ಮಲ್ಲಿಕಣ್ಣ ಅವರಿಗೆ ಈ ಬಾರಿಯ…
ತುಮಕೂರು: ನಗರದ ಶ್ರೀ ಸಿದ್ಧಾರ್ಥ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಮಕ್ಕಳ ದಂತ ಚಿಕಿತ್ಸಾ ವಿಭಾಗದ ವತಿಯಿಂದ ‘ಮಕ್ಕಳ ಮತ್ತು ಶಿಶು ವೈದ್ಯರ ದಿನಾಚರಣೆ’ ಅಂಗವಾಗಿ ತುಮಕೂರಿನ ಹೆಗ್ಗರೆಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ದಂತ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಶಾಲೆಯ ಆವರಣದಲ್ಲಿ ಏರ್ಪಟ್ಟ ಕಾರ್ಯಕ್ರಮವನ್ನು ಶ್ರೀ ಸಿದ್ಧಾರ್ಥ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಮಕ್ಕಳ ದಂತ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ಜ್ಯೋತ್ಸ್ನಾ ವಿ.ಸೆಟ್ಟಿ ಅವರು ಉದ್ಘಾಟಿಸಿ, ಸರಿಯಾದ ಆಹಾರ ಸೇವನೆ, ಫ್ಲೋರೈಡ್ ಬಳಕೆ ಮತ್ತು ಮೌಖಿಕ ನೈರ್ಮಲ್ಯದ ಅಭ್ಯಾಸವನ್ನು ಮಕ್ಕಳಿಗೆ ತಿಳಿಸುವ ಅಗತ್ಯವಿದೆ ಎಂದರು. ದೈಹಿಕ ಮತ್ತು ಮಾನಸಿಕ ಅಸ್ವಸ್ಥತೆಗಳ ಬಾಯಿಯ ಮೇಲೆ ಪರಿಣಾಮಗಳ ಬೀರುತ್ತವೆ. ಈ ಬಗ್ಗೆ ಮಕ್ಕಳಿಗೆ ಜ್ಞಾನದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕಾಲಕಾಲಕ್ಕೆ ಮಕ್ಕಳ ಮೌಖಿಕ ತಪಾಸಣೆ ಮತ್ತು ಆರೋಗ್ಯ ಜಾಗೃತಿ ನಡೆಸಬೇಕಾಗಿದೆ ಎಂದು ಡಾ.ಜ್ಯೋತ್ಸ್ನಾ ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ವೈದ್ಯರಾದ ಡಾ.ವೀಣಾ ಎಸ್, ಡಾ.ಅಂಬಿಕಾ ಕೆ, ಡಾ.ಮಹೇಶ್ ಕುಮಾರ್, ಶಾಲೆಯ ಮುಖ್ಯ ಶಿಕ್ಷಕರಾದ…
ತುರುವೇಕೆರೆ: ರೈತರು ತಮ್ಮ ಕೃಷಿಯಲ್ಲಿ ಅದುನಿಕತೆ ಅಳವಡಿಸಿಕೊಂಡು ಸಮಗ್ರ ಕೃಷಿಯಲ್ಲಿ ಸಾಧನೆ ಮಾಡಬೇಕು ಎಂದು ರಾಜ್ಯ ಸರ್ಕಾರದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ತಾಲೂಕಿನ ಮಾಯಸಂದ್ರ ಟಿ.ಬಿ.ಕ್ರಾಸ್ ಬಳಿಯ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ವತಿಯಿಂದ ನೂತವಾಗಿ ಪ್ರಾರಂಬವಾಗಿರುವ ಖಾಸಗಿ ಕೃಷಿ ವಿಜ್ಞಾನ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು ರೈತರು ಸಂಪ್ರಾದಾಯಿಕ ಕೃಷಿ ಮಾಡುವ ಬದಲು ಕೃಷಿಯಿಂದ ಯಾವ ರೀತಿಯಲ್ಲಿ ಲಾಭ ಮಾಡಬೇಕು ಎಂಬುದನ್ನು ರೈತರು ಕಲಿಯಬೇಕಿದೆ. ರೈತರು ತಮ್ಮ ಜಮೀನಿನಲ್ಲಿ ಒಂದೇ ಬೆಳೆ ಬೆಳೆಯುವ ಬದಲು ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ವಿವಿದ ಬೆಳೆಗಳ ಸಂಶೋದನೆ ಮಾಡಿದ ತೆಳಿಗಳನ್ನು ಆಯ್ಕೆ ಮಾಡಿಕೊಂಡು ರೈತ ಸಂಪರ್ಕ ಕೇಂದ್ರದಲ್ಲಿ ಮಾಹಿತಿ ಪಡೆದು ಸರ್ಕಾರದಿಂದ ಸಿಗುವಂತಹ ಸವಲತ್ತು ಪ್ರೋಜನ ಪಡೆದುಕೊಂಡು ಕೃಷಿ ಮಾಡುವಂತೆ ಸಲಹೆ ನೀಡಿದರು. ಸುಮಾರು 57 ವರ್ಷಗಳ ನಂತರ ಖಾಸಗಿ ಕೃಷಿ ವಿಜ್ಞಾನ ಕಾಲೇಜು ಸರ್ಕಾರ ನೀಡಲಾಗಿದೆ. ಸರ್ಕಾರದ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ಮಾತ್ರ ಕೃಷಿ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಇತ್ತು. ಪ್ರತಿ ವರ್ಷ ಸರ್ಕಾರದ ಕೃಷಿ…
ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ವತಿಯಿಂದ ಭಾನುವಾರ(ಡಿ.02) ಆಯೋಜಿಸಲಾಗಿದ್ದ ಸರ್ಕಾರದ ನಾನಾ ಯೋಜನೆಗಳ 750 ಕೋಟಿ ರೂ. ಮೊತ್ತದ 23,000 ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಇಡೀ ದೇಶದಲ್ಲಿ ರಾಜ್ಯದ GDP ನಂಬರ್ ಒನ್ ಆಗಿದೆ. ದೇಶದ GDP ಇನ್ನೂ 8 ಇದೆ. ಆದರೆ ರಾಜ್ಯದ ಉಆP 10 ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದು ವಿವರಿಸಿದರು. ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ…
ಹೆಬ್ಬೂರು: ಕನ್ನಡಕ್ಕೂ ಮತ್ತು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಒಂದು ನಂಟಿದೆ ಎಂದು ಮುಖಂಡರು ಹಾಗೂ ತುಮಕೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯರಾದ ಮಂಜುನಾಥ್ ಹೆತ್ತೇನಹಳ್ಳಿ ತಿಳಿಸಿದರು. ಹೋಬಳಿಯ ಅಂಬೇಡ್ಕರ್ ಆಟೋ ಚಾಲಕರ ಸಂಘದಿoದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾಷಾವಾರು ಪ್ರಾಂತ್ಯಗಳ ಸ್ವಾಯತ್ತತೆ ಬಗ್ಗೆ ಅಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನ ಸಭೆಯಲ್ಲಿ ಮಾತನಾಡಿದ್ದರು. ಇಲ್ಲದಿದ್ದರೆ ಇಂತಹ ಹೆಮ್ಮೆಯ ಕರುನಾಡನ್ನು ಕಟ್ಟಿಕೊಳ್ಳಲು ನಮಗೆ ಸಾಧ್ಯವಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ಭಾರತ ಆಚಾರ, ವಿಚಾರ ಹಾಗೂ ಭಾಷೆಗಳಲ್ಲಿ ವೈವಿಧ್ಯತೆಯನ್ನು ಹೊಂದಿರುವ ದೇಶವೆಂದು ಭಾವಿಸಿದ್ದ ಅಂಬೇಡ್ಕರ್ ಅವರಿಗೆ ವೈವಿಧ್ಯಮಯ ದೇಶ ಸಂವಿಧಾನದ ಮೂಲಕ ಮಾತ್ರವೇ ಏಕತೆ ಸಾಧಿಸಲು ಸಾಧ್ಯ ಎಂದು ತಿಳಿದಿತ್ತು ಎಂದು ಹೇಳಿದರು. ನಮ್ಮ ದೇಶವನ್ನು ಹೊರತು ಪಡಿಸಿ ಇಡೀ ಪ್ರಪಂಚ ಬಾಬಾ ಸಾಹೇಬರನ್ನು ನೋಡಿದ್ದು ಜ್ಞಾನದ ದೃಷ್ಟಿಯಿಂದ ಮಾತ್ರ. ಬಾಬಾ ಸಾಹೇಬರ ವಿವೇಚನೆಗೆ ಬರದಂತಹ ಯಾವ ವಿಷಯಗಳೂ ಈ ಪ್ರಪಂಚದಲ್ಲಿ ಇಲ್ಲ. ವರ್ಷದ 365 ದಿನಗಳು ಹಾಗೂ…