Author: News Desk Benkiyabale

ತುಮಕೂರು: ಶಿಕ್ಷಣದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯವಾಗಲಿದೆ. ಪುರುಷ ಸಮಾಜವು ಮಹಿಳೆಯ ಜೊತೆ ನಿಂತು ಸರ್ವರೀತಿಯಲ್ಲೂ ಶಕ್ತಿ ತುಂಬಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷೀ ಚೌಧರಿ ಹೇಳಿದರು. ತುಮಕೂರು ವಿವಿಯ ಮಹಿಳಾ ಅಧ್ಯಯನ ಕೇಂದ್ರವು ಪೊಲೀಸ್ ಬೇಟೆ ಕನ್ನಡ ವಾರ ಪತ್ರಿಕೆಯ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ‘ಮಹಿಳಾ ಸಬಲೀಕರಣ ಎತ್ತ ಸಾಗಿದೆ?’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ ಶೇ.27 ಮಹಿಳೆಯರು ಮಾತ್ರ ಉನ್ನತ ಶಿಕ್ಷಣದ ಮೆಟ್ಟಿಲೇರಿ ಬದುಕನ್ನು ರೂಪಿಸಿಕೊಳ್ಳುತ್ತಿದ್ದಾರೆ. ಶಾಲಾ, ಕಾಲೇಜು, ಪದವಿ ಹಂತದಲ್ಲೇ ಬಹುತೇಕ ಹೆಣ್ಣುಮಕ್ಕಳು ವಿದ್ಯಾಭ್ಯಾಸ ನಿಲ್ಲಿಸಿ ಸಾಂಸಾರಿಕ ಜೀವನಕ್ಕೆ ಧುಮುಕುತ್ತಿರುವುದು ವಿಪರ್ಯಾಸ ಎಂದರು. ಹರೆಯದ ವಯಸ್ಸಿನಲ್ಲಿ ಪ್ರೀತಿ-ಪ್ರೇಮದ ಬಲೆಯಲ್ಲಿ ಬಿದ್ದು ವಿದ್ಯಾರ್ಥಿಗಳು ಬದುಕನ್ನು ನಾಶಮಾಡಿಕೊಳ್ಳುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳೇ ಬದುಕೆಂದು ನಿರ್ಧರಿಸಿ ನಡೆಯುತ್ತಿದ್ದಾರೆ. ಮೊಬೈಲ್ ಬಳಕೆ ಉಸಿರಾಟಕ್ಕಿಂತಲೂ ಮುಖ್ಯವೆಂದು ಭಾವಿಸಿರುವವರನ್ನು ಸಬಲೀಕರಣದತ್ತ ಕೊಂಡೊಯ್ಯುವುದಾದರೂ ಹೇಗೆಂದು ವಿದ್ಯಾರ್ಥಿಗಳನ್ನು ಪ್ರಶ್ನಿಸಿದರು. ಕುಲಸಚಿವೆ ನಾಹಿದಾ ಜûಮ್ ಜûಮ್ ಮಾತನಾಡಿ, ಬದುಕಿನ ಶೇ.16.6 ಭಾಗವನ್ನು…

Read More

ತುಮಕೂರು: ಬಡವರು,ದೀನ ದಲಿತರು, ಶೋಷಿತರ ಪರವಾಗಿ ಸದಾ ಮಿಡಿಯುತಿದ್ದ ಮಾಜಿ ಪ್ರಧಾನ ಮಂತ್ರಿಗಳಾದ ಇಂದಿರಾಗಾAಧಿ ಅವರು,ಈ ದೇಶ ಕಂಡು ಅಪ್ರತಿಮ ರಾಜಕಾರಣಿ, ಆಡಳಿತಗಾರರಾಗಿದ್ದರು ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ತಿಳಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರು ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು,ಮೊದಲ ಪ್ರಧಾನಿ ನೆಹರು ಅವರ ಸುಪುತ್ರಿಯಾಗಿ,ಸುಮಾರು 17 ವರ್ಷಗಳ ಕಾಲ ಭಾರತದ ಚುಕ್ಕಾಣಿ ಹಿಡಿದು, ತಮ್ಮ ಗಟ್ಟಿ ನಿರ್ಧಾರಗಳಿಂದ ಉಕ್ಕಿನ ಮಹಿಳೆ ಎಂಬ ಬಿರುದು ಪಡೆದರು.ಅವರು ಜಾರಿಗೆ ತಂದ 20 ಅಂಶಗಳ ಕಾರ್ಯಕ್ರಮ ಹಾಗೂ,ಬ್ಯಾಂಕುಗಳ, ಸಾರಿಗೆ ರಾಷ್ಟಿçÃಕರಣ ಅತಿ ಮಹತ್ವದ ವಿಚಾರಗಳಾಗಿವೆ ಎಂದರು. ಕಾAಗ್ರೆಸ್ ಪಕ್ಷ ಭಾರತವಲ್ಲದೆ, ನೆರೆ ಹೊರೆಯ ರಾಷ್ಟçಗಳು ಸುಭೀಕ್ಷೆವಾಗಿರಬೇಕು ಎಂದು ಭಾವಿಸಿದ್ದರು.ಆದರೆ ಫಲವಾಗಿ ಅಮೃತಸರದ ಗೋಲ್ಡನ್‌ಟೆಂಪಲ್ ವಿವಾದ ಹಾಗೂ ಶ್ರೀಲಂಕಾಕ್ಕೆ ಭಾರತೀಯ ಶಾಂತಿ ಪಾಲನಾ ಪಡೆಯನ್ನು ಕಳುಹಿಸಿದ್ದ ಕ್ಕಾಗಿ ಇಂದಿರಾಗಾAಧಿ ಮತ್ತು ರಾಜೀವ್‌ಗಾಂಧಿ ಹುತಾತ್ಮರಾದರು.ಆದರೆ ಭಾರತೀಯ ಜನತಾ ಪಾರ್ಟಿಯ…

Read More

ತುಮಕೂರು : ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮೀಣ ಕೈಗಾರಿಕೆ, ಕಾರ್ಮಿಕ, ರೇಷ್ಮೆ, ಕಂದಾಯ, ವಿಕಲ ಚೇತನರ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ಹಾಲು ಒಕ್ಕೂಟ, ವಿವಿಧ ನಿಗಮಗಳು, ಎನ್‌ಆರ್‌ಎಲ್‌ಎಂ ಸೇರಿದಂತೆ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುವ ಯೋಜನೆಗಳಡಿ 1.46 ಲಕ್ಷ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಶಂಕುಸ್ಥಾಪನೆ ಮತ್ತು ಉದ್ಘಾಟನೆಗೆ ಸಿದ್ಧವಿರುವ ಲೋಕೋಪಯೋಗಿ, ಅಗ್ನಿಶಾಮಕ, ಪೊಲೀಸ್, ಸಣ್ಣ ನೀರಾವರಿ, ಸಮಾಜ ಕಲ್ಯಾಣ,…

Read More

ತುಮಕೂರು: ಜಿಲ್ಲಾಡಳಿತ ಕೇವಲ ದಾಖಲೆಗಾಗಿ ಮಾತ್ರ ದಲಿತರ ಕುಂದುಕೊರತೆ ಸಭೆ ನಡೆಸುತ್ತಿದ್ದು,ಹತ್ತಾರು ವರ್ಷಗಳಿಂದ ದಲಿತರನ್ನು ಕಾಡುತ್ತಿರುವ ನಿವೇಶನ ಹಕ್ಕುಪತ್ರ,ಸ್ಮಶಾನ,ಕಾರ್ಮಿಕ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಹಲವಾರು ಸವಲತ್ತುಗಳು ಇಂದಿಗೂ ದಲಿತ ಸಮುದಾಯಕ್ಕೆ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ ಎಂದು ಕರ್ನಾಟಕ ಮಹಾಜನ ಪರಿವಾರ ಸಮಿತಿಯ ರಾಜ್ಯಾಧ್ಯಕ್ಷ ಹಂಚಿಹಳ್ಳಿ ರಾಮುಸ್ವಾಮಿ ಆರೋಪಿಸಿದ್ದಾರೆ. ನಗರದ ಮೇಳೆಹಳ್ಳಿಯಲ್ಲಿ ಕರ್ನಾಟಕ ಮಹಾಜನ ಪರಿವಾರ ಸಮಿತಿಯ ವಾರ್ಷಿಕೋತ್ಸವ ಹಾಗೂ ದಲಿತರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ಹಲವಾರು ಬಾರಿ ಕಾರ್ಮಿಕ ಇಲಾಖೆ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಗೆ ಮನವಿ ಮಾಡಿದ್ದರು,ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳು ದೊರೆಯುತ್ತಿಲ್ಲ.ಮಹಿಳೆಯರು ಕಚೇರಿಗೆ ಅಲೆಯುವುದೇ ಆಗಿದೆ. ಸಮಸ್ಯೆಗೆ ಪರಿಹಾರ ದೊರೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕರ್ನಾಟಕ ಮಹಾಜನ ಪರಿವಾರ ಸಮಿತಿ ಹುಟ್ಟಿ ಹತ್ತುವರ್ಷಗಳೇ ಕಳೆದಿವೆ.ಇದು ಕೇವಲ ದಲಿತರ ಹಕ್ಕುಗಳಿಗೆ ಮಾತ್ರ ಹೋರಾಟ ಮಾಡುತ್ತಿಲ್ಲ.ಕಾರ್ಮಿಕರು,ಮಹಿಳೆಯರು, ಹಿಂದುಳಿದ ವರ್ಗಗಳ ಸಮಸ್ಯೆಗಳಿಗೆ ಸ್ಪಂದಿಸಿ ಹಲವಾರು ಹೋರಾಟ ಗಳನ್ನು ರೂಪಿಸಿದೆ.ಕಾರ್ಮಿಕರು ಸೂರಿಲ್ಲದ ಹತ್ತಾರು ವರ್ಷಗಳಿಂದ ಕಡಿಮೆ ವೇತನಕ್ಕೆ ದುಡಿಯುತ್ತಿದ್ದು, ಜಿಲ್ಲಾಡಳಿತ…

Read More

ತುಮಕೂರು ನಗರದ ಶಿರಾಗೇಟ್ ಕನಕ ವೃತ್ತದಲ್ಲಿ ಭಕ್ತ ಕನಕದಾಸರ 537ನೇ ಜಯಂತಿಯ ಪ್ರಯುಕ್ತ ರೇವಣಸಿದ್ದೇಶ್ವರ ಮಠದ ಶ್ರೀ ಬಿಂದು ಶೇಖರ್ ಒಡೆಯರ್ ಸಾನಿಧ್ಯದಲ್ಲಿ ಕನಕದಾಸರ ಪುತ್ತಳಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿ ಉತ್ಸವಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಚಾಲನೆ ನೀಡಿದರು. ಶಾಸಕ ಜಿಬಿ ಜ್ಯೋತಿಗಣೇಶ್ ಜಿ.ಪಂ ಸಿಇಓ ಜಿ.ಪ್ರಭು,ಪ್ರಜಾ ಪ್ರಗತಿ ಸಂಪಾದಕರಾದ ಎಸ್ ನಾಗಣ್ಣ, ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ,ಪಾಲಿಕೆ ಆಯುಕ್ತರಾದ ಬಿ ವಿ ಆಶ್ವೀಜ,ಪೋಲಿಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಕಾಳಿದಾಸ ವಿದ್ಯಾರ‍್ಧಕ ಸಂಘದ ಅಧ್ಯಕ್ಷ ಮೈಲಪ್ಪ ,ಕುರುಬ ಸಂಘದ ಜಿಲ್ಲಾಧ್ಯಕ್ಷ ಟಿ ಆರ್ ಸುರೇಶ್ ಪಾಲಿಕೆ ಮಾಜಿ ಸದಸ್ಯರುಗಳಾದ ಎನ್ ಮಹೇಶ್,ಕೆಂಪರಾಜು,ಇಂದ್ರ ಕುಮಾರ್ , ಲಕ್ಷಿ÷್ಮ ನರಸಿಂಹರಾಜು,ಭೀಮ ರಾಜು, ಕಸಾಪ ಅಧ್ಯಕ್ಷರಾದ ಕೆ ಎಸ್ ಸಿದ್ದಲಿಂಗಪ್ಪ, ರ‍್ಮರಾಜ್,ಜ್ವಾಲಾಮಾಲ ರಾಜಣ್ಣ,ಅನಿಲ್ ಕುಮಾರ್ , ನಳಿನಾ ಇಂದ್ರ ಕುಮಾರ್ ,ಯೋಗೀಶ್ ,ಹಾಗೂ ಜನಾಂಗದ ಮುಖಂಡರು ಗಳು ಉಪಸ್ಥಿತರಿದ್ದರು.

Read More

ತುಮಕೂರು : ಕನಕದಾಸರು ತಮ್ಮ ಕೀರ್ತನೆ ಮತ್ತು ವಚನಗಳ ಮೂಲಕ ವೈಚಾರಿಕತೆಗೆ ಹೊಸ ಅರ್ಥ ತಂದು ಕೊಟ್ಟ ಶ್ರೇಷ್ಠ ದಾಸಸಂತರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಳಿದಾಸ ವಿದ್ಯಾವರ್ಧಕ ಸಂಘ ಮತ್ತು ಜಿಲ್ಲೆಯ ಕುರುಬರ ಸಂಘ ಸಂಸ್ಥೆಗಳ ವತಿಯಿಂದ ಸೋಮವಾರ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆದ ಸಂತಶ್ರೇಷ್ಠ ಕನಕದಾಸರ 537ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನಕದಾಸರು ಬಾಲ್ಯದಲ್ಲಿ ಅಪಾರ ದೈವಭಕ್ತಿಯನ್ನು ಹೊಂದಿದ್ದರು. ದೇವರಿಲ್ಲದ ಸ್ಥಳವೇ ಇಲ್ಲಾ ದೇವರು ನಮ್ಮ ಸರಿ-ತಪ್ಪುಗಳನ್ನು ಗಮನಿಸುತ್ತಿರುತ್ತಾನೆ. ಸರಿದಾರಿಯಲ್ಲಿ ನಡೆದಾಗ ಮಾತ್ರ ದೇವರಿಗೆ ನಾವು ಪ್ರಿಯವಾಗುತ್ತೇವೆ ಎಂದು ನಂಬಿದ್ದರು. ಕನಕದಾಸರ ನಂಬಿಕೆಯAತೆ ನಾವು ಮಾಡುವ ಪ್ರತಿಯೊಂದು ಕೆಲಸವನ್ನು ನಮ್ಮ ಸುತ್ತಮುತ್ತಲಿನ ಜನ ಗಮನಿಸುತ್ತಿರುತ್ತಾರೆ ಎಂಬ ಎಚ್ಚರಿಕೆ ಇರಬೇಕು. ಯಾವುದೇ ಕೆಲಸವಾಗಲಿ ಶ್ರದ್ಧೆ- ಭಕ್ತಿಯಿಂದ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ತಿಳಿಸಿದರಲ್ಲದೆ…

Read More

ಹುಳಿಯಾರು: ಹುಳಿಯಾರಿನ ದುರ್ಗಮ್ಮನ ಗುಡಿ ಬೀದಿಯಲ್ಲಿರುವ ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಸಂಸ್ಥೆಯು 18 ರಿಂದ 45 ವರ್ಷ ವಯಸ್ಸಿನ ನಿರುದ್ಯೋಗಿ ಯುವಕ ಯುವತಿಯರಿಗೆ 2 ತಿಂಗಳ ಉಚಿತ ಟೈಲರಿಂಗ್ ತರಬೇತಿ (ಸಿದ್ದ ಉಡುಪು ತಯಾರಿಕೆ) ನೀಡಲಿದ್ದು, ಆಸಕ್ತರು ಮೇಲ್ಕಂಡ ವಿಳಾಸದಲ್ಲಿ 25/11/2024 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಪಡೆದಂತವರಿಗೆ ಜಿಲ್ಲೆಯ ಪ್ರಖ್ಯಾತ ಗಾರ್ಮೆಂಟ್ಸ್ ಗಳಲ್ಲಿ ಉದ್ಯೋಗ ಕಲ್ಪಿಸಲು ನೆರವು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸಿ.ಎನ್.ಪ್ರಭು, ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಸಂಸ್ಥೆ. ಹುಳಿಯಾರು 9141689595 9448748259.

Read More

ತುಮಕೂರು: ಮಾದಕ ವ್ಯಸನ ಇಂದು ಸಾಮಾಜಿಕ ಪಿಡುಗಾಗಿ ಪರಿಣಮಿಸುತ್ತಿದೆ. ಈ ವ್ಯಸನದಿಂದ ಸಮಾಜವನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಶ್ರೀ ಸಿದ್ದಾರ್ಥ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್‌ರವಿಪ್ರಕಾಶ್ ಅವರು ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾನಿಲಯದಲ್ಲಿ ಬಯೋ ಮೆಡಿಕಲ್ ಇಂಜಿನಿಯರಿAಗ್ ವಿಭಾಗದಿಂದ ಶನಿವಾರದಂದು ಆಯೋಜಿಸಿದ್ದ ‘ಬಯೋ ಮೆಡ್ ಸ್ಪಾರ್ಕ2024’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಹೆಚ್ಚಾಗಿ ಮಕ್ಕಳು ಮಾದಕ ವ್ಯಸನಿಗಳಾಗುತ್ತಿದ್ದಾರೆ. ಇದರಿಂದಾಗಿ ಸಮಾಜದ ಆರೋಗ್ಯ ಹಾಳಾಗುತ್ತಿದೆ. ಹಲವಾರು ಪೋಷಕರಿಗೆ ಮಾದಕ ವ್ಯಸನದ ಸಾಮಾಜಿಕ ಪಿಡುಕು ಬಹುದೊಡ್ಡ ತಲೆ ನೋವಾಗಿ ಪರಿಣಮಿಸುತ್ತದೆ. ಹೀಗೆ ಮುಂದುವರಿದರೆ ಇಡೀ ಒಂದು ಯುವ ತಲೆಮಾರು ನಾಶವಾಗುವ ಭೀತಿಯಿದೆ. ಹಾಗಾಗಿ ನಾವೆಲ್ಲರೂ ಈ ಮಾದಕ ವ್ಯಸನದ ವಿರುದ್ಧ ಹೋರಾಡಬೇಕಿದೆ ಎಂದು ವಿದ್ಯಾರ್ಥಿಗಳಿಗೆ ಡಾ.ಎಂಎಸ್‌ರವಿಪ್ರಕಾಶ್ ಅವರು ಕರೆ ನೀಡಿದರು. ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಕೆವಿಎಂ ಮೆಡ್‌ಟೆಕ್‌ನ ಸಂಸ್ಥಾಪಕ ನಿರ್ದೇಶಕರಾದ ವೈಶ್ಣಮಿ ಕೃಷ್ಣನ್ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಅಭ್ಯಾಸವನ್ನು ರೂಢಿಸಿಕೊಂಡು ನೆಮ್ಮದಿ ಜೀವನ ನಡೆಸಬೇಕು.…

Read More

ತುಮಕೂರು: ನ.18ರಂದು ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ವಕೀಲರು ಮತ್ತು ಸಮಾಜ ಸೇವಕರಾದ ಆರ್.ತಿಪ್ಪೇಸ್ವಾಮಿರವರಿಗೆ ಸಂತಶ್ರೇಷ್ಠ ಕನಕದಾಸರ 537ನೇ ಜಯಂತ್ಯುತ್ಸವದಲ್ಲಿ ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಸಮಾಜಸೇವೆಗಾಗಿ ತುಮಕೂರು ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ತಿಪ್ಪೇಸ್ವಾಮಿರವರನ್ನು ಜಿಲ್ಲಾಡಳಿತ ಗುರುತಿಸಿ ಅವರಿಗೆ ಕನಕದಾಸರ ಜಯಂತಿಯಲ್ಲಿ ಸನ್ಮಾನ ಮಾಡುತ್ತಿರುವುದಕ್ಕೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯ ಹರ್ಷ ವ್ಯಕ್ತಪಡಿಸಿ ಆರ್.ತಿಪ್ಪೇಸ್ವಾಮಿರವರು ಸಮಾಜಸೇವೆಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ ಸಮುದಾಯದ ಒಳಿತಿಗಾಗಿ,ಜಿಲ್ಲಾ ಕುರುಬರ ಸಂಘದ ಕಾರ್ಯಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ,ಬಡವರು, ದೀನ ದಲಿತರಿಗಾಗಿ,ಬಾಯಿಲ್ಲದವರಿಗೆ ಧ್ವನಿಯಾಗಿ ಉಚಿತ ಕಾನೂನು ಸಲಹೆಗಳನ್ನು ನೀಡುತ್ತಾ ಸಮಾಜ ಮತ್ತು ಸಮುದಾಯದ ಒಳಿತಿಗಾಗಿ ದುಡಿಯುತ್ತಿರುವುದು ನಮಗೆ ಹೆಮ್ಮೆ,ಅವರಿಗೆ ಪ್ರಶಸ್ತಿ ಬಂದಿರುವುದು ವಕೀಲರ ಸಮುದಾಯಕ್ಕೆ ಸಹ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು. ಆರ್.ತಿಪ್ಪೇಸ್ವಾಮಿರವರಿಗೆ ಪ್ರಶಸ್ತಿ ಬಂದಿರುವುದಕ್ಕೆ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು,ಹಿರಿಯ,ಕಿರಿಯ ವಕೀಲರು,ಪತ್ರಕರ್ತರು ಜಿಲ್ಲಾ ಕುರುಬರ ಸಂಘ, ಕಾಳಿದಾಸ ವಿದ್ಯಾವರ್ಧಕ ಸಂಘ,ಕುರುಬ ಸಮುದಾಯದ ಗಣ್ಯರು, ಹರ್ಷ ವ್ಯಕ್ತಪಡಿಸಿದ್ದಾರೆ.

Read More

ತುಮಕೂರು: ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ಕ್ಯಾಂಪಸ್ ಮಾಡಲು ವಿವಿಯ ಜೀವವೈವಿಧ್ಯ ಕೋಶದೊಂದಿಗೆ ನಾವೆಲ್ಲರೂ ಕೈಜೋಡಿಸೋಣ ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ವಿವಿ ವಿಜ್ಞಾನ ಕಾಲೇಜಿನ ಜೀವಾವರಣಶಾಸ್ತç ಮತ್ತು ಪರಿಸರ ವಿಜ್ಞಾನ ಅಧ್ಯಯನ ವಿಭಾಗವು ಶುಕ್ರವಾರ ಆಯೋಜಿಸಿದ್ದ ‘ತುಮಕೂರು ವಿವಿ ಆವರಣ ಹಾಗೂ ಬಿದರಕಟ್ಟೆ ಕ್ಯಾಂಪಸ್‌ನಲ್ಲಿ ಮರಗಳ ಜಿಯೋ ಟ್ಯಾಗಿಂಗ್ ಮತ್ತು ಜೀವವೈವಿಧ್ಯ ದಾಖಲಾತಿ’ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕೇವಲ ಪ್ರಚಾರಕ್ಕಾಗಿ ಸಸಿಗಳನ್ನು ನೆಡಬಾರದು. ಸಸಿಯು ಹೆಮ್ಮರವಾಗುವ ತನಕವೂ ಅದರ ಪಾಲನೆ, ಪೋಷಣೆ ನಮ್ಮದಾಗಬೇಕು. ಮಾಲಿನ್ಯ ರಹಿತ ಪರಿಸರ ನಿರ್ಮಿಸಲು ಸಾಧ್ಯವಾಗದಿದ್ದರೂ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಶುದ್ಧ ಗಾಳಿ, ನೀರು ನಮ್ಮ ಆರೋಗ್ಯ ಕಾಪಾಡುವುದರಲ್ಲಿ ಮುಖ್ಯಪಾತ್ರವಹಿಸುತ್ತವೆ ಎಂದರು. ವಿವಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ. ಶೇಟ್ ಎಂ. ಪ್ರಕಾಶ್, ಜೀವಾವರಣಶಾಸ್ತç ಮತ್ತು ಪರಿಸರ ವಿಜ್ಞಾನ ಅಧ್ಯಯನ ವಿಭಾಗದ ಡಾ. ದ್ವಾರಕಾನಾಥ್ ವಿ. ಉಪಸ್ಥಿತರಿದ್ದರು.

Read More