ಹುಳಿಯಾರು: ಹುಳಿಯಾರು ಹೋಬಳಿಯಲ್ಲಿ ಕಳೆದ ಮರ‍್ನಲ್ಕು ದಿನಗಳಿಂದ ಜೋರು ಮಳೆಯಾಗುತ್ತಿದ್ದರೂ ಯಾವುದೇ ಅವಘಡಗಳು ಸಂಬವಿಸಿರಲಿಲ್ಲ. ಆದರೆ ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಕೆರೆಕಟ್ಟೆ ಭರ್ತಿಯಾಗುವ ಜೊತೆಗೆ ಅಲ್ಲಲ್ಲಿ ರಾಗಿ ಬೆಳೆ ನೆಲ್ಲಕಚ್ಚಿದೆ ಹಾಗೂ ಕೋಳಿಗಳನ್ನು ಬಲಿ ಪಡೆದುಕೊಂಡ ಘಟನೆ ನಡೆದಿದೆ. ಸೋಮವಾರ ರಾತ್ರಿ ೭ ಗಂಟೆಗೆ ಮಳೆ ಅಬ್ಬರ ಆರಂಭವಾಯಿತು. ಗುಡುಗು ಸಿಡಿಲಿನ ಅಬ್ಬರದ ಜೊತೆಗೆ ೨ ಗಂಟೆಗೆ ಹೆಚ್ಚು ಕಾಲ ಒಂದೇ ಸಮನೆ ಮಳೆ ಸುರಿಯಿತು. ಸ್ವಲ್ಪ ಹೊತ್ತು ಬಿಡುವು ನೀಡಿ ಮತ್ತೆ ಮಳೆಯಾಯಿತು. ಬಿರುಸಿನ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹುಳಿಯಾರಿನ ವಾಲ್ಮೀಕಿ ಸರ್ಕಲ್ ಬಳಿ ನ್ಯಾಷನಲ್ ಹೈವೆಯಲ್ಲಿ ಎರಡು ಅಡಿಗಳಿಗೂ ಹೆಚ್ಚು ನೀರು ತುಂಬಿಕೊAಡು ವಾಹನ ಚಾಲಕರು ಪರದಾಡಿದರು. ನೀರು ಹರಿಯಲು ಜಾಗವಿಲ್ಲದೆ ಸಮಸ್ಯೆ ಉಂಟಾಯಿತು. ಹಲವೆಡೆ ಚರಂಡಿಗಳಲ್ಲಿ ನೀರು ತುಂಬಿಕೊAಡು ತ್ಯಾಜ್ಯ ಸಮೇತ ರಸ್ತೆಗಳಲ್ಲಿ ಹರಿಯಿತು. ಹೋಬಳಿಯ ಬಹುತೇಕ ಕೆರೆಗಳಿಗೆ ನೀರು ಬಂದಿದೆ. ಚಿಕ್ಕಬಿದರೆ ಕೆರೆ ಕೋಡಿ ಬಿದ್ದಿದೆ. ಹಳ್ಳಿಗಳ ರಸ್ತೆಗಳು ಕೆಸರು…
Author: News Desk Benkiyabale
ತುಮಕೂರು: ಆರಂಭದಲ್ಲಿ ಹೋಗಿ ಕೆಡಿಸಿದ ಮಳೆ, ಈಗ ವಿಪರೀತವಾಗಿ ರೈತರು ಬೆಳೆದ ಶೇಂಗಾ, ರಾಗಿ ಇನ್ನಿತರ ಕೃಷಿ ಉತ್ಪನ್ನಗಳು ಹಾಳಾಗಿದ್ದು, ಜಿಲ್ಲಾಡಳಿತ ಕೂಡಲೇ ಬೆಳೆ ನಷ್ಟ ಪರಿಹಾರ ಅಂದಾಜಿಸಿ, ವೈಜ್ಞಾನಿಕ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದ್ದಾರೆ. ವಿಜ್ಞಾನ ಕೇಂದ್ರದಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು,ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ರೈತರ ಹೊಲ,ಗದ್ದೆಗಳಲ್ಲಿ ಬೆಳೆದ ಬೆಳೆಯಲ್ಲದೆ,ಮನೆಗಳು,ಗುಡಿಸಲುಗಳು ನೆಲಕಚ್ಚಿವೆ.ಜನ ಜಾನುವಾರುಗಳಿಗೆ ತೀವ್ರ ಸ್ವರೂಪದ ತೊಂದರೆಯಾಗಿದೆ.ಆದರೆ ಇದುವರೆಗೂ ಜಿಲ್ಲಾಡಳಿತ ಮಳೆ ಹಾನಿಯನ್ನು ತೀವ್ರವಾಗಿ ಪರಿಗಣಿಸಿದಂತೆ ಕಂಡು ಬರುತ್ತಿಲ್ಲ. ಹಾಗಾಗಿ ಜಿಲ್ಲಾಡಳಿತ ಕೂಡಲೇ ಮಳೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂಬುದು ರೈತ ಸಂಘದ ಆಗ್ರಹವಾಗಿದೆ ಎಂದರು. ರೈತರು ಹತ್ತಾರು ವರ್ಷಗಳಿಂದ ಸರಕಾರಿ ಭೂಮಿಯನ್ನು ಉಳುಮೆ ಮಾಡುತ್ತಾ ಫಾರಂ ನಂ ೫೦,೫೩ ಮತ್ತು ೫೭ ಅಡಿಯಲ್ಲಿ ಸರಕಾರಕ್ಕೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸುತ್ತಾ ಬಂದಿದ್ದರೂ ಇದುವರೆಗೂ ಬಡವರಿಗೆ ಭೂಮಿ ಸಿಕ್ಕಿಲ್ಲ.ಆದರೆ ಉಳ್ಳುವರಿಗೆ ಭೂಮಿ ದೊರೆಯುತ್ತಿದೆ.ಈ ಬಗ್ಗೆ ಜಿಲ್ಲಾಧಿಕಾರಿಗಳೇ…
ತುಮಕೂರು ಜನಪ್ರತಿನಿಧಿಗಳು ಜಾತಿ ನಾಯಕ ರಾಗುವು ದರಿಂದ ಜನನಾಯಕರಾಗಲು ಸಾಧ್ಯವಿಲ್ಲ.ಎಲ್ಲ ವರ್ಗದ ಜನರ ವಿಶ್ವಾಸ ಗಳಿಸಿದಾಗ ಮಾತ್ರ ಹೆಚ್ಚು ದಿನ ರಾಜಕೀಯ ಅಧಿಕಾರ ಅನುಭವಿಸಲು ಸಾಧ್ಯ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ನಗರದ ಎಂಪ್ರೆಸ್ ಕೆಪಿಎಸ್ ಶಾಲೆ ಸಭಾಂಗಣದಲ್ಲಿ ತುಮಕೂರು ಜಿಲ್ಲಾ ವಾಲ್ಮೀಕಿ ನಾಯಕರ ಕ್ಷೇಮಾಭಿವೃದ್ಧಿ ಸಂಘ (ರಿ) ,ಶ್ರೀ ವಾಲ್ಮೀಕಿ ವಿದ್ಯಾವರ್ಧಕ ಸಂಘ, ಜಿಲ್ಲ ನಾಯಕ ಮಹಿಳಾ ಸಮಾಜ, ಶಬರಿ ಮಹಿಳಾ ಪತ್ತಿನ ಸಹಕಾರ ಸಂಘ.ನಿ, ತುಮಕೂರು ವಾಲ್ಮೀಕಿ ಸಹಕಾರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ೨೦೨೩-೨೪ ನೇ ಸಾಲಿನ ವಾಲ್ಮೀಕಿ ಸಮಾಜದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ರಾಜಕೀಯ ಅಧಿಕಾರವೆಂಬುದು ಅತಿ ಮುಖ್ಯ ಅಂಗವಾಗಿದೆ.ಅಧಿಕಾರ ದೊರೆತ ಸಂದರ್ಭದಲ್ಲಿ ದ್ವನಿ ಇಲ್ಲದ ಸಮುದಾಯಗಳ ಪರವಾಗಿ ಕೆಲಸ ಮಾಡಿದಾಗ ಮಾತ್ರ ಜನರ ಪ್ರೀತಿಗಳಿಸಲು ಸಾಧ್ಯ ಎಂದರು. ನಾಯಕ ಸಮುದಾಯದ ಮಕ್ಕಳು ಜಿಲ್ಲಾಮಟ್ಟದಲ್ಲಿ ೨೫೦ ಕ್ಕೂ ಹೆಚ್ಚು ಮಕ್ಕಳು ಶೇ ೮೦…
ತುಮಕೂರು ತಮ್ಮ ಪ್ರಾಣದ ಹಂಗನ್ನು ತೊರೆದು ಸದಾ ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಶ್ಲಾಘನೀಯ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಜಯಂತಕುಮಾರ್ ಹೇಳಿದರು. ನಗರದ ಬಿ.ಹೆಚ್. ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸರ ಸ್ಮಾರಕದ ಪುತ್ಥಳಿಗೆ ಪುಷ್ಪಗುಚ್ಛ ಇರಿಸಿ ಗೌರವ ಸಲ್ಲಿಸಿ ಅವರು ಮಾತನಾಡಿದರು. ದೇಶದಲ್ಲಿ ನಾವುಗಳು ರಾತ್ರಿ ವೇಳೆ ನೆಮ್ಮದಿಯಾಗಿ ನಿದ್ದೆ ಮಾಡುತ್ತಿದ್ದೇವೆ ಎಂದರೆ ಅದಕ್ಕೆ ಪೊಲೀಸರ ಸೇವೆಯೇ ಕಾರಣ. ಪೊಲೀಸರು ದೇಶಕ್ಕಾಗಿ, ಸಮಾಜಕ್ಕಾಗಿ ದಿನದ ೨೪ ಗಂಟೆಯೂ ಸಾಕಷ್ಟು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಕೆಲ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗನ್ನು ತೊರೆದು ಕಾರ್ಯನಿರ್ವಹಿಸುವ ಸನ್ನಿವೇಶಗಳು ಎದುರಾಗುತ್ತವೆ ಎಂದರು. ದೇಶ ಮತ್ತು ಸಮಾಜದ ರಕ್ಷಣೆಗಾಗಿ ಪ್ರತಿ ಕ್ಷಣವೂ ಸೇವೆ ಸಲ್ಲಿಸುತ್ತಿರುವ ಪೊಲೀಸರ ಕಾರ್ಯವನ್ನು ನಾವೆಲ್ಲರೂ ಸ್ಮರಿಸಬೇಕು. ಒಮ್ಮೊಮ್ಮೆ ತಮ್ಮ ಕುಟುಂಬದ ಹಿತವನ್ನು ಬದಿಗೊತ್ತಿ ಸಮಾಜದ ರಕ್ಷಣೆ ಕಾಪಾಡುವ ಪೊಲೀಸರ ಸೇವೆ ಶ್ಲಾಘನೀಯ ಎಂದರು. ೧೯೫೯ ರ ಅ.…
ತುಮಕೂರು ತುಮಕೂರಿನಲ್ಲಿ ಶನಿವಾರ ಕರೆಯಲಾಗಿದ್ದ ಕರ್ನಾಟಕ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆಯನ್ನು ಅಧಿಕಾರಿಗಳ ಅಲಭ್ಯತೆ ಕಾರಣ ಸಮಿತಿಯ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಮುಂದೂಡಿದರು. ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಕೈಗೊಳ್ಳಲಾದ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಇನ್ನಿತರೆ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸುವ ಸಂಬAಧ ಶನಿವಾರ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆ ಅಪರಾಹ್ನ ನಿಗಧಿಯಾಗಿತ್ತು. ಸಮಿತಿ ಸದಸ್ಯರು ಚಿತ್ರದುರ್ಗ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಮುಗಿಸಿ ತುಮಕೂರು ತಲುಪುವ ವೇಳೆಗೆ ಸ್ವಲ್ಪ ವಿಳಂಬವಾಯಿತಾದರೂ ಜಿಲ್ಲೆಯಲ್ಲಿ ಉಪಲೋಕಾಯುಕ್ತರು ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸುವ ಹಾಗೂ ಹಳೆಯ ಪ್ರಕರಣಗಳ ವಿಲೇವಾರಿ ಸಂಬAಧಿಸಿದAತೆ ನಿನ್ನೆಯಿಂದ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಅಧಿಕಾರಿಗಳು ಲೋಕಾಯುಕ್ತರ ಸಭೆಯಲ್ಲಿ ಹಾಜರಿರುವುದಾಗಿ ಹಿರಿಯ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಮಾಹಿತಿ ಪಡೆದು ಸಮಸ್ಯೆಗಳ ಪರಿಹಾರಕ್ಕೆ…
ಹುಳಿಯಾರು:\ ಒಂದು ವರ್ಷ ಕಳೆದರೂ ನರೇಗಾ ಕಾಮಗಾರಿ ಮಾತ್ರ ಇಲ್ಲಿ ಮುಗಿದಿಲ್ಲ. ಅರ್ಧಕ್ಕೆ ಕೆಲಸ ನಿಂತಿರುವುದರಿAದ ಮಳೆ ಬಂದರೆ ಕೆಸರು, ಬೇಸಿಗೆಯಲ್ಲಿ ಧೂಳಾಗಿ ರಸ್ತೆ ಮಾರ್ಪಡುತ್ತದೆ. ಪರಿಣಾಮ ನಿತ್ಯ ಅಧಿಕಾರಿಗಳಿಗೆ ಹಿಡಿಶಾಪ ಹಾಕಿ ಓಡಾಡಬೇಕಿದೆ. ಇದು ಹುಳಿಯಾರು ಹೋಬಳಿಯ ದಸೂಡಿ ಗ್ರಾಮ ಪಂಚಾಯ್ತಿ ಮೈಲೇಕಲ್ಲಹಟ್ಟಿ ರಸ್ತೆಯ ದುಸ್ಥಿತಿ. ದಸೂಡಿ ಗ್ರಾಮ ಪಂಚಾಯ್ತಿಯಿAದ ಕೇವಲ ೧ ಕಿಮೀ ದೂರದಲ್ಲಿರುವ ಮೈಲಕಲ್ಲಹಟ್ಟಿ ಎಂಬ ಪುಟ್ಟ ಗ್ರಾಮವಿದೆ. ಈ ಗ್ರಾಮದವರು ದಸೂಡಿಗೆ ಬಂದೋಗಲು ಹಾಗೂ ದಸೂಡಿ ಮತ್ತು ದಬ್ಬಗುಂಟೆಯವರು ತಮ್ಮತಮ್ಮ ಜಮೀನುಗಳಿಗೆ ಓಡಾಡಲು ಈ ಮಣ್ಣು ರಸ್ತೆ ಅವಲಂಬಿಸಿದ್ದರು. ಆದರೆ ಈ ರಸ್ತೆ ತೀರಾ ಹದಗೆಟ್ಟು ಸಂಚಾರ ದುಸ್ತರವಾಗಿತ್ತು. ಸ್ಥಳೀಯರ ಒತ್ತಾಯದ ಮೇರೆಗೆ ಸ್ಥಳೀಯ ಗ್ರಾಮ ಪಂಚಾಯ್ತಿಯಿAದ ೨೦೨೨-೨೩ ನೇ ಸಾಲಿನ ನರೇಗಾ ಯೋಜನೆಯಡಿ ದುರಸ್ತಿ ಕಾರ್ಯ ಕೈಗೆತ್ತಿಕೊಂಡರು. ದಸೂಡಿ ಮೈಲೇಕಲ್ಲಹಟ್ಟಿಯಿಂದ ದೇವರ ಮರಡಿ ಕೆರೆಯವರೆವಿಗೂ ೩ ಲಕ್ಷ ರೂ. ವೆಚ್ಚದಲ್ಲಿ ಜಲ್ಲಿ ರಸ್ತೆ ಕಾಮಗಾರಿ ಆರಂಭಿಸಿದರು. ಆದರೆ ರಸ್ತೆಗೆ ಅಲ್ಲಲ್ಲಿ ಮಣ್ಣು ಹಾಕಿದ್ದು ಬಿಟ್ಟರೆ…
ತುಮಕೂರು ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ ೩ ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ :- ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊAಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆAದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮಳೆ ಮುನ್ನಚ್ಚರಿಕೆ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರಬೇಕು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವವಿರುತ್ತದೆ. ಇದರಿಂದ ಸಾವು-ನೋವುಗಳು ಉಂಟಾಗಬಹುದಾದ್ದರಿAದ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಿಳಿ ಹೇಳಬೇಕು ಎಂದು ತಿಳಿಸಿದ್ದಾರೆ. ರಾಜ್ಯ/ಜಿಲ್ಲಾಡಳಿತ/ತಾಲ್ಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಗ್ರಾಮ ಪಂಚಾಯತಿಯ ವಿಪತ್ತು…
ತುಮಕೂರು : ಸರ್ಕಾರವು ತನ್ನ ಆಯವ್ಯಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ 11,447 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾ ನಗರ ಪಾಲಿಕೆ ಸಹಯೋಗದಲ್ಲಿ ನಗರದ ಬಾಲ ಭವನ ಸಭಾಂಗಣದಲ್ಲಿ ಗುರುವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದ್ದು, ಜಾತಿ ಗಣತಿ ಆಧಾರದ ಮೇಲೆ ಶೇಕಡಾ 3ರಷ್ಟಿದ್ದ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸಲಾಗಿದೆ. ಉದ್ಯೋಗ ಮತ್ತು ಶಿಕ್ಷಣಕ್ಕೆ ಮಾತ್ರ ಈ ಮೀಸಲಾತಿ ಅನ್ವಯವಾಗಲಿದೆ ಎಂದು ತಿಳಿಸಿದರು. ಸ್ವಾವಲಂಬಿ ಬದುಕು ನಡೆಸಲು ಪರಿಶಿಷ್ಟ ವರ್ಗದ ಸುಮಾರು 5000 ಯುವಕ/ಯುವತಿಯರಿಗೆ ವಿವಿಧ ತರಬೇತಿ ನೀಡಲಾಗಿದೆಯಲ್ಲದೆ 74367 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗಿದೆ. ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ 12 ಬುಡಕಟ್ಟು ಸಮುದಾಯದ 48000 ಕುಟುಂಬಗಳಿಗೆ…
ಗುಬ್ಬಿ : ತಲ್ವಾರ್ ಎಂಬ ಮಾರಕಾಸ್ತ್ರ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಭೂಪ.!! ಎಂಬ ಶರ‍್ಷಿಕೆಯಡಿ ಸುದ್ದಿ ಬಿತ್ತರವಾದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ತಲ್ವಾರ್ ಝಳಪಿರುವ ಬಗ್ಗೆ ಇಬ್ಬರ ಮೇಲೆ ಪ್ರಕರಣ ದಾಖಲಿಸಿ ರ‍್ವ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಗುಬ್ಬಿ ಪಟ್ಟಣದಲ್ಲಿ ಕೆಲ ಮುಸ್ಲಿಂ ಸಮುದಾಯದ ಯುವಕರು ನಡುರಸ್ತೆಯಲ್ಲಿ ಸ್ನೇಹಿತರೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಮಾರಕಾಸ್ತ್ರ ಹಿಡಿದು ಕೇಕ್ ಕತ್ತರಿಸುವ ಮೂಲಕ ವಿಚಿತ್ರವಾಗಿ ಜನರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ರಸ್ತೆಯನ್ನು ಅಡ್ಡಗಟ್ಟಿ ತಲ್ವಾರ್ ಹಿಡಿದು ಬೆದರಿಸಿರುವ ಬಗ್ಗೆ ಸರ‍್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನೆಲೆ ಸುರ‍್ಣ ಪ್ರಗತಿ ವೆಬ್ ನ್ಯೂಸ್ ಪ್ರಕರಣದ ಬಗ್ಗೆ ಸುದ್ದಿ ಪ್ರಸಾರ ಮಾಡಿತ್ತು ಇದರ ಬೆನ್ನಲ್ಲೇ ದೂರು ದಾಖಲಿಸಿ ಕ್ರಮ ಜರುಗಿಸಲಾಗಿದೆ. ತಲ್ವಾರ್ ಜಳಪಿಸಿರುವ ಪ್ರಕರಣದ ಆರೋಪಿಗಳ ತಂಡವನ್ನು ಪತ್ತೆ ಮಾಡಲು ತುಮಕೂರು ಜಿಲ್ಲಾ ಎಸ್ಪಿ ಅಶೋಕ್ ಕೆ.ವಿ ವಿಶೇಷ ತಂಡವನ್ನ ರಚಿಸಿ ಕರ‍್ಯಾಚರಣೆ ಕೈಗೊಂಡು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ, ಸೈಯದ್ ಶರೂಕ್ ಎಂಬತನನ್ನು…
ಕೊರಟಗೆರೆ ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹೊಳವನಹಳ್ಳಿ ಗ್ರಾಮದ ನಾಡ ಕಚೇರಿ ಒಳಗೆ ನೀರು ಸೋರುತ್ತಿದ್ದು, ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿದ್ದಾವೆ ಎಂದು ಸಾರ್ವಜನಿಕರು ದೂರಿದರು. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಕೇಂದ್ರ ಸ್ಥಾನದಲ್ಲಿರುವ ನಾಡಕಚೇರಿ ಹಾಗೂ ಕಂದಾಯ ಅಧಿಕಾರಿಗಳ ಕಚೇರಿ ಸಂಪೂರ್ಣ ನೀರು ನಿಲ್ಲುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಈ ಎರಡು ಇಲಾಖೆಯ ಕಟ್ಟಡಗಳು ಸಂಪೂರ್ಣ ಶೀಥಲವಾಗಿದ್ದು, ಮಳೆ ಬಂದರೆ ಸಾಕು ಕಚೇರಿಯ ಒಳಗೆ ನೀರು ನಿಲ್ಲುತ್ತಿದ್ದು, ಅನೇಕ ಬಾರಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೆ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು. ಕಟ್ಟಡ ಶಿಥಿಲಗೊಂಡಿದ್ದು, ಮಳೆ ಬಂದಾಗ ಕಟ್ಟಡದ ಹಲವೆಡೆ ಸೋರಲಿದೆ ಕಚೇರಿಯ ಸಿಬ್ಬಂದಿಗಳು ಮಳೆ ಬಂದಾಗ ದಾಖಲೆಗಳನ್ನ ಸಂರಕ್ಷಿಸುವುದು ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ನಾಡಕಚೇರಿ ಆರೋಗ್ಯ ಇಲಾಖೆಗೆ ಸೇರಿದ್ದು, ಹೋಬಳಿ ಕೇಂದ್ರದಲ್ಲಿರುವ ನಾಡಕಚೇರಿಗೆ ಸ್ವಂತ ಕಟ್ಟಡ ಇಲ್ಲ. ಈ ಕಟ್ಟಡ ೬೦ ವರ್ಷಕ್ಕೂ ಹಳೆಯ ಕಟ್ಟಡವಾಗಿದ್ದು, ಯಾವಾಗ ಬೀಳುತ್ತದೆಯೋ…