ತುಮಕೂರು ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಗಿಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರಾದ ಅಶ್ವಿಜ ಬಿ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ರಾಜ್ಯದಲ್ಲಿನ ನಾಮಫಲಕಗಳಲ್ಲಿ ಕನ್ನಡವನ್ನು ಬಳಸುವುದು ಕಡ್ಡಾಯವಾಗಿದೆ. ಕನ್ನಡ ಬಳಕೆಯ ಸಮಗ್ರ ಅನುಷ್ಟಾನಕ್ಕೆ ಸಂಬAಧಿಸಿದAತೆ ಅಂಗಡಿ, ಮತ್ತಿತರ ಉದ್ದಿಮೆಗಳ ಪರವಾನಗಿ ನೀಡುವಾಗ ನಾಮಫಲಕಗಳಲ್ಲಿ ಅಗ್ರಸ್ಥಾನದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸದಿದ್ದರೆ ಉದ್ದಿಮೆ ಪರವಾನಗಿಗಳನ್ನು ರದ್ದುಪಡಿಸಲಾಗುವುದು ಎಂದು ನಿರ್ಬಂಧ ವಿಧಿಸಲು ಸರ್ಕಾರ ಆದೇಶ ನೀಡಿದೆ. ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಕನ್ನಡದಲ್ಲಿರತಕ್ಕದ್ದು. ನಾಮಫಲಕದಲ್ಲಿ ಅಗ್ರ ಪಂಕ್ತಿಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು. ಅಶ್ಲೀಲ ಭಾಷೆ ಹಾಗೂ ಚಿತ್ರಗಳನ್ನು ಪ್ರದರ್ಶಿಸುವಂತಿಲ್ಲ. ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡದ ನಾಮಫಲಕ ದೊಡ್ಡದಾಗಿರುವಂತೆ ಅಳವಡಿಸಬೇಕು. ಈ ಪ್ರಕಟಣೆ ಹೊರಡಿಸಿದ ೧೫ ದಿನಗಳೊಳಗಾಗಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ಉದ್ದಿಮೆಗಳ ನಾಮಫಲಕಗಳು ಪ್ರಧಾನವಾಗಿ ಕನ್ನಡದಲ್ಲಿರಬೇಕು. ತಪ್ಪಿದಲ್ಲಿ ಅಂತಹ ಉದ್ದಿಮೆಗಳ ಉದ್ದಿಮೆ…
Author: News Desk Benkiyabale
ತುಮಕೂರು ನಗರದ ಬಾರ್ಲೈನ್ನಲ್ಲಿರುವ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿಯೊಂದು ಕಡತಗಳನ್ನು ಖುದ್ಧು ವೀಕ್ಷಿಸಿದ ಸಚಿವರು, ಕಳ್ಳತನ, ಅಪಘಾತ, ಜೂಜಾಟ ಸೇರಿದಂತೆ ಇನ್ನಿತರೆ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ. ಪರಮೇಶ್ವರ್ ಅವರು, ಪೊಲೀಸ್ ಠಾಣೆಗಳ ವಸ್ತುಸ್ಥತಿ ತಿಳಿಯಲು ಇಂದು ಗ್ರಾಮಾಂತರ ಠಾಣೆಗೆ ದಿಢೀರ್ ಭೇಟಿ ನೀಡಿದ್ದೇನೆ. ಅಂಕಿ-ಅAಶಗಳನ್ನು ಪರಿಶೀಲಿಸಿದ್ದು, ಕಳ್ಳತನ, ಟ್ರಾಫಿಕ್, ಅಪರಾಧ, ಜೂಜು ಪ್ರಕರಣಗಳು ಈ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಿರುವುದು ಕಂಡು ಬಂದಿದೆ. ಈ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಗ್ರಾಮಾAತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ತಾಕೀತು ಮಾಡಿದ್ದೇನೆ. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಇ-ಬೀಟ್ ವ್ಯವಸ್ಥೆಯಡಿ ಸಮರ್ಪಕವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದರು. ಸಿಬ್ಬAದಿ…
ತುಮಕೂರು: ಪ್ರಜಾಪ್ರಭುತ್ವ ಇಂದು ಅತ್ಯಂತ ಬಿಕ್ಕಟ್ಟು ಎದುರಿಸುತ್ತಿದ್ದು, ಸಾಹಿತಿಗಳು ತಮ್ಮ ಜವಾಬ್ದಾರಿ ಮರೆತು ಮೌನಕ್ಕೆ ಶರಣಾಗಿ, ಅವರು ಏನೇ ಬರೆದರೂ ಅದು ಬೂಸಾ ಸಾಹಿತ್ಯವಾಗಲಿದೆ ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಜಿನಮನೆಯ ಶಿಕ್ಷಣ ಭೀಷ್ಮ ಹೆಚ್.ಎಂ.ಗAಗಾಧರಯ್ಯ ವೇದಿಕೆಯಲ್ಲಿ ಜಿಲ್ಲಾ ಕಸಾಪ ಆಯೋಜಿಸಿದ್ದ ೧೫ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಜನರ ಸಮಸ್ಯೆಗಳಿಗೆ ದ್ವನಿಯಾಗದ ಸಾಹಿತ್ಯ ಬೂಸಾ ಎಂಬ ದಿ.ಬಿ.ಬಸವಲಿಂಗಪ್ಪ ಅವರ ಹೇಳಿಕೆಯನ್ನು ಪ್ರಸ್ತಾಪಿಸಿದ ಪ್ರೊ.ಎಸ್.ಜಿ.ಸಿದ್ದರಾಮಯ್ಯ,ಸಾಹಿತಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುವುದು ನಮಗೆ ದೊರೆತ ಜವಾಬ್ದಾರಿಯಿಂದ ನುಣುಚಿಕೊಂಡAತೆ. ಈ ಬಗ್ಗೆ ಎಲ್ಲಾ ಸಾಹಿತಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು. ಸಮ್ಮೇಳನದ ಸ್ಮರಣ ಸಂಚಿಕೆ ಕಲ್ಪ ಸೌರಭ ಬಿಡುಗಡೆ ಮಾಡಿ ಮಾತನಾಡಿದ ಸಿಇಓ ಜಿ.ಪ್ರಭು,ವಿಜ್ಞಾನ ತಂತ್ರಜ್ಞಾನಗಳು, ಎಲ್ಲರಿಗೂ ಶಿಕ್ಷಣ ಇಲ್ಲದ ಕಾಲದಲ್ಲಿಯೂ ಕನ್ನಡ ಭಾಷೆ ಸಾವಿರಾರು ವರ್ಷಗಳಿಂದ ಕನ್ನಡಿಗರಿಗೆ ನೆಲೆ ಒದಗಿಸಿದೆ.ಆದರೆ ಎಲ್ಲರಿಗೂ ಜ್ಞಾನ ದೊರೆತ ನಂತರ ಕನ್ನಡವನ್ನು ಉಳಿಸಬೇಕೆಂಬ ಪ್ರಯತ್ನ ನಡೆದಿದೆ.ಎಂದರು. ತುಮಕೂರು ಜಿಲ್ಲಾ ೧೫ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ…
ಹುಳಿಯಾರು: ಹುಳಿಯಾರಿನಿಂದ ಕೆಂಕೆರೆಗೆ ಹೋಗುವ ರಾಷ್ಟಿçÃಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹಾಕಿರುವ ಮಣ್ಣನ್ನು ಬದಲಾಯಿಸುವಂತೆ ಒತ್ತಾಯಿಸಿ ಕೆಲಸ ನಿರ್ವಹಿಸುತ್ತಿದ್ದ ಮಣ್ಣು, ಜಲ್ಲಿ ಲಾರಿಗಳನ್ನು ತಡೆದು ಪ್ರತಿಭಟನೆ ಮಾಡಿದ ಘಟನೆ ಹುಳಿಯಾರು ಹೋಬಳಿಯ ಕೆಂಕೆರೆಯಲ್ಲಿ ಬುಧವಾರ ಜರುಗಿದೆ. ಹಿರಿಯೂರಿನಿಂದ ಕೆಂಕೆರೆ ಗ್ರಾಮದವರೆವಿಗೂ ರಾಷ್ಟಿçÃಯ ಹೆದ್ದಾರಿಯ ಅಗಲೀಕರಣ ಮಾಡಿ ಗುಣಮಟ್ಟದ ಕಾಮಗಾರಿ ಮಾಡಿದ್ದಾರೆ. ಆದರೆ ಕೆಂಕೆರೆಯಿAದ ಹುಳಿಯಾರಿನವರೆವಿಗೆ ನಾಲ್ಕು ಕಿಮೀ ರಸ್ತೆಯನ್ನು ಅಗಲೀಕರಣ ಮಾಡದೆ ಹಾಲಿ ಇದ್ದ ರಸ್ತೆಯ ಮೇಲೆಯೇ ಮರು ಡಾಂಬರೀಕರಣ ಮಾಡಿದ್ದಾರೆ. ಅಲ್ಲದೆ ರಸ್ತೆಯ ಇಕ್ಕೆಲಗಳಲ್ಲಿ ಗ್ರಾವೆಲ್ ಮಣ್ಣು ಹಾಕದೆ ಧೂಳು ಏಳುವ ಪೌಡರ್ ರೀತಿಯ ಮಣ್ಣು ಸುರಿದಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ರಸ್ತೆ ಅಗಲೀಕರಣ ಮಾಡದೆ ಇರುವ ರಸ್ತೆಯ ಮೇಲೆ ಡಾಂಬರ್ ಹಾಕಿರುವುದರಿಂದ ರಸ್ತೆ ತೀರ ಕಿರಿದಾಗಿದ್ದು ಎರಡೂ ಕಡೆಯಿಂದ ವಾಹನಗಳು ಬಂದಾಗ ಅನಿವಾರ್ಯವಾಗಿ ರಸ್ತೆ ಕೆಳಗೆ ಇಳಿದು ಚಲಿಸಬೇಕಿದೆ. ಈ ಸಂದರ್ಭದಲ್ಲಿ ಧೂಳು ಎದ್ದು ಹಿಂಬದಿಯ ವಾಹನ ಸವಾರರಿಗೆ, ಪಾದಚಾರಿಗಳಿಗೆ ಧೂಳಿನ ಅಭಿಷೇಕ ಮಾಡಿಸಿಕೊಂಡು ಪ್ರಯಾಣಿಸಬೇಕಿದೆ. ಅಲ್ಲದೆ ಗಂಟಲು ಮತ್ತು…
ತುರುವೇಕೆರೆ: ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫಾರೀಕ್ ಪಾಷ (೩೦), ಮೊಹಮದ್ ಸಾಹಿಲ್ (೨೦) ಬಂಧಿತ ಆರೋಪಿಗಳಾಗಿದ್ದು, ಇವರಿಂದ ಒಂದು ಮೊಬೈಲ್ಅನ್ನು ವಶಪಡಿಸಿಕೊಳ್ಳಲಾಗಿದೆ. ತಾಲ್ಲೂಕಿನ ದಂಡಿನಶಿವರ ಪೊಲೀಸ್ ಠಾಣೆಯ ವ್ಯಾಪ್ತಿಯ ಕೆಬ್ಬೆಪಾಳ್ಯ ಗ್ರಾಮದ ರಾಮಯ್ಯ ಎಂಬುವವರ ಪುತ್ರಿ ಭಾಗ್ಯಲಕ್ಷಿöಯವರು ಕಾಲೇಜು ಮುಗಿಸಿಕೊಂಡು ಮನೆಗೆ ಹಿಂದಿರುಗುವಾಗ ಬಾಣಸಂದ್ರ ಮಾರ್ಗದಿಂದ ಬಂದ ಅಪರಿಚಿತರಿಬ್ಬರು ವಿದ್ಯಾರ್ಥಿನಿ ಭಾಗ್ಯಲಕ್ಷಿöಯನ್ನು ವಿಳಾಸ ಕೇಳುವ ನೆಪದಲ್ಲಿ ಮನೆವರೆಗೂ ಹಿಂಬಾಲಿಸಿದ್ದಾರೆ ಮತ್ತು ಕೆಟ್ಟ ದೃಷ್ಟಿಯಿಂದ ನೋಡಿ ಲೈಂಗಿಕ ಕಿರುಕುಳ ನೀಡಿರುತ್ತಾರೆ. ಭಯಗೊಂಡ ವಿದ್ಯಾರ್ಥಿನಿಯು ತನ್ನ ಅಕ್ಕನಿಗೆ ಕರೆ ಮಾಡಲು ಹೋದಾಗ ಮೊಬೈಲ್ ಕಸಿದುಕೊಂಡು ಹೋಗಿರುತ್ತಾರೆ. ಈ ಸಂಬAಧವಾಗಿ ದೂರು ದಾಖಲಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಪತ್ತೆಗೆ ಕುಣಿಗಲ್ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಲಕ್ಷಿöÃಕಾಂತ್ ಅವರ ನೇತೃತ್ವದಲ್ಲಿ ತುರುವೇಕೆರೆ ವೃತ್ತದ ಸಿ.ಪಿ.ಐ ಲೋಹಿತ್.ಬಿ.ಎನ್ರವರ ಕ್ರೆöÊಂ ತಂಡವನ್ನು ರಚಿಸಲಾಗಿತ್ತು.
ತುಮಕೂರು ಕಲೆ, ಸಾಹಿತ್ಯ, ಶಿಕ್ಷಣಗಳ ಜೊತೆಗೆ ವೈವಿಧ್ಯಮಯ ಸಂಗೀತ, ನೃತ್ಯ, ಜಾನಪದ, ಯಕ್ಷಗಾನ ಹಾಗೂ ರಂಗಭೂಮಿಯ ಸಂಗಮ ಹಾಗೂ ಶೈಕ್ಷಣಿಕವಾಗಿ ಕಲೆ ಸಾಹಿತ್ಯ ಸಂಸ್ಕೃತಿಗಳ ಶ್ರೀಮಂತಿಕೆಯಿAದ ಕೂಡಿರುವ ತುಮಕೂರು ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಿಸೆಂಬರ್ ೨೯ ಮತ್ತು ೩೦ರಂದು “ಜಿಲ್ಲಾ ೧೫ನೇ ಕನ್ನಡ ಸಾಹಿತ್ಯ ಸಮ್ಮೇಳನ”ವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ತಿಳಿಸಿದರು. ಅವರಿಂದು ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನು ್ನದ್ದೇಶಿಸಿ ಮಾತನಾಡಿದರು. ನಾಡು ನುಡಿ ಜಲಗಳ ಕುರಿತಾದ ಅರ್ಥಪೂರ್ಣ ವಿಚಾರ ವಿನಿಮಯಗಳಿಗೆ ಸಮ್ಮೇಳನ ಒಂದು ವೇದಿಕೆಯಾಗಿದೆ. ನಮ್ಮ ಜಿಲ್ಲೆಯವರೇ ಆದ ಅಂತರ ರಾಷ್ಟಿçÃಯ ಖ್ಯಾತಿಯ ಸಾಹಿತಿಗಳಾದ ಡಾ. ಹೆಚ್.ಎಸ್.ಶಿವಪ್ರಕಾಶ್ರವರು ಸಮ್ಮೇಳನಾಧ್ಯಕ್ಷರಾಗಿರುತ್ತಾರೆ ಎಂದು ತಿಳಿಸಿದರು. ಡಿಸೆಂಬರ್ ೨೯ರಂದು ಶುಕ್ರವಾರ ಬೆಳಿಗ್ಗೆ ೭.೩೦ ಗಂಟೆಗೆ ಧ್ವಜಾರೋಹಣದ ಮೂಲಕ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ.ಕರಾಳೆ ರಾಷ್ಟçಧ್ವಜಾರೋಹಣ ಮಾಡುವರು. ಮಹಾನಗರಪಾಲಿಕೆಯ ಉಪ ಮಹಾಪೌರರಾದ ಟಿ.ಕೆ.ನರಸಿಂಹಮೂರ್ತಿ ನಾಡ ಧ್ವಜಾರೋಹಣ ನೆರವೇರಿಸುವರು,…
ತುಮಕೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಾಗೂ ವಿಶೇಷವಾಗಿ ತುರುವೇಕೆರೆ ತಾಲ್ಲೂಕಿನಲ್ಲಿ ಚಿರತೆಗಳು ಓಡಾಡುತ್ತಿರುವುದನ್ನು ಗಮನಿಸಲಾಗಿದ್ದು, ಚಿರತೆಗಳನ್ನು ಸುರಕ್ಷಿತವಾಗಿ ಸೆರೆ ಹಿಡಿಯುವುದರೊಂದಿಗೆ ಚಿರತೆಗಳಿಂದ ಮಾನವ ಹಾನಿ ಅಥವಾ ಪ್ರಾಣಿಗಳ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿAದು ಚಿರತೆಗಳ ಸುರಕ್ಷತಾ ಕ್ರಮಗಳ ಕುರಿತು ನಡೆಸಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಾ, ಜಿಲ್ಲೆಯ ಎಲ್ಲಾ ಹೋಬಳಿ ಮಟ್ಟದಲ್ಲಿ ಈ ಕುರಿತು ಟಾಂಟಾA ಮೂಲಕ ವ್ಯಾಪಕ ಪ್ರಚಾರ ಮಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕರಿಗೆ ಎಲ್ಲಿಯಾದರೂ ಚಿರತೆಗಳ ಕುರುಹುಗಳು ಕಂಡು ಬಂದಲ್ಲಿ ಸಂಬAಧಪಟ್ಟ ವಲಯ ಅರಣ್ಯಾಧಿಕಾರಿಗಳಿಗೆ ತಕ್ಷಣವೇ ಟೋಲ್ ಫ್ರೀ ನಂಬರ್ ೧೯೨೬ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದರಲ್ಲದೆ, ವಲಯ ಅರಣ್ಯಾಧಿಕಾರಿಗಳು ಮತ್ತು ವನರಕ್ಷಕರು ಸುರಕ್ಷತೆಯಿಂದ ಚಿರತೆಗಳ ಚಲನವಲನಗಳ ಬಗ್ಗೆ ನಿಗಾ ಇರಿಸಬೇಕು. ಅರಣ್ಯ ಪ್ರದೇಶಗಳ ಅಂಚಿನಲ್ಲಿ ಸುರಕ್ಷತೆಯಿಂದ ಸಂಚರಿಸಬೇಕು ಎಂದು ತಿಳಿಸಿದರು. ವಲಯ ಅರಣ್ಯಾಧಿಕಾರಿಗಳು ಆಯಾ ತಾಲ್ಲೂಕು ಮಟ್ಟದ ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯ…
ತುಮಕೂರು ಜಿಲ್ಲೆಯಲ್ಲಿ ಇಂದಿನಿAದ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಯಡಿ ನೋಂದಾಯಿಸಿಕೊAಡ ಪದವಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿರುವ ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಜಮೆ ಮಾಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಯುವನಿಧಿ ಯೋಜನೆ ಕುರಿತು ಭಿತ್ತಿ ಪತ್ರವನ್ನು ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ೫ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಅದರಂತೆ ಅನ್ನಭಾಗ್ಯ, ಗೃಹಲಕ್ಷಿö್ಮ, ಗೃಹಜ್ಯೋತಿ, ಶಕ್ತಿ ಸೇರಿದಂತೆ ೪ ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಟಾನ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದು, ೫ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಬೆಂಗಳೂರಿನಲ್ಲಿAದು ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು. ಯುವನಿಧಿ ಯೋಜನೆಯಡಿ ಪದವಿ ಮುಗಿಸಿದ ಅರ್ಹ ಫಲಾನುಭವಿಗಳಿಗೆ…
ತುಮಕೂರು ಹಬ್ಬದ ಸಂಭ್ರಮದಲ್ಲಿದ್ದ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲೀ ಯುವಕನೊಬ್ಬನ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ತುಮಕೂರು ತಾಲೂಕಿನ ಗ್ರಾಮಾಂತರ ವ್ಯಾಪ್ತಿಯ ಬೆತ್ತಲೂರು ಗ್ರಾಮದಲ್ಲಿ ಘಟನೆ ನಡೆದಿದ್ದು ಕೊಲೆಯಲ್ಲಿ ಮೃತಪಟ್ಟ ಯುವಕನನ್ನ ನಿರಂಜನ್ (೩೦) ಎಂದು ಗುರುತಿಸಲಾಗಿದೆ.ಇನ್ನು ಯುವಕರ ನಡುವೆ ನಡೆದ ಗಲಾಟೆ ವೇಳೆ ಮೃತಪಟ್ಟ ನಿರಂಜನ್ಗೆ ಕೆಲವರು ಡ್ರ್ಯಾಗರ್ನಿಂದ ಚುಚ್ಚಿದ್ದಾರೆ ಎನ್ನಲಾಗಿದೆ ಅದರ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡ ನಿರಂಜನ್ ನನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಯಿತು ಎನ್ನಲಾಗಿದೆ ಆದರೆ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಮೃತಪಟ್ಟ ನಿರಂಜನ್. ಘಟನೆ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ ಇನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ ರವರು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಇನ್ನು ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ಕೈಗೊಂಡಿದ್ದು ಕೊಲೆ ಮಾಡಿರುವ ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ. ಗ್ರಾಮಾAತರ…
ಕೊರಟಗೆರೆ: ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ವೈದ್ಯಕೀಯ ಕ್ಷೇತ್ರವು ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ವಹಿಸಿದೆ. ಸರ್ಕಾರ ವೈದ್ಯರನ್ನು ಸೇವೆಗೆ ಮಾತ್ರ ಸೀಮಿತಗೊಳಿಸಿದೆ. ಇದಕೊಂದು ಉದಾಹರಣೆ ಎಂದರೆ ಕೊರಟಗೆರೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂಭಾಗದ ಕೇಂದ್ರ ಸ್ಥಾನದಲ್ಲಿ ವೈದ್ಯರು ವಾಸವಿರಬೇಕಾದ ವಸತಿ ಗೃಹಗಳು ಮೂಲಭೂತ ಸೌಕರ್ಯದಿಂದ ವಂಚಿತದಿAದ ಹಳ್ಳ ಹಿಡಿದು ಅನೈತಿಕ ಚಟುವಟಿಕೆಗೆ ತಾಣವಾಗಿ ಮಾರ್ಪಟ್ಟು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.. ವೈದ್ಯರಿಗೆ ರಾತ್ರಿ ಸಮಯದಲ್ಲಿ ಕೇಂದ್ರ ಸ್ಥಾನದಲ್ಲಿ ಉಳಿದುಕೊಳ್ಳಲು ಸರ್ಕಾರವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರು ಸಹ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಯಾವುದೇ ವೈದ್ಯರಾಗಲಿ, ಸಿಬ್ಬಂದಿಗಳಾಗಲಿ ವಾಸವಿಲ್ಲ. ಕಾರಣ, ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಈ ಹಿಂದೆ ನಿರ್ಮಾಣ ಮಾಡಲಾಗಿದ್ದ ವಸತಿ ಗೃಹಗಳು ಮೂಲಭೂತ ಸೌಕರ್ಯದಿಂದ ವಂಚಿತಗೊAಡು ಸುಮಾರು ೧೫ ವರ್ಷಗಳಿಂದ ಎಲ್ಲಾ ಕೊಠಡಿಗಳು ಶಿಥಿಲಗೊಂಡಿದೆ ಎಂದು ಮುಖ್ಯ ವೈದ್ಯರಿಂದ ಮಾಹಿತಿ ತಿಳಿದು ಬಂದಿದೆ.. ಮಾನ್ಯ ಗೃಹಸಚಿವರ ಕ್ಷೇತ್ರದಲ್ಲಿ ೧೫ ವರ್ಷಗಳಿಂದ ವೈದ್ಯರಿಗೆ ಸೂರಿಲ್ಲದೆ ಪರದಾಡುವ ಸ್ಥಿತಿ ಒದಗಿ ಬಂದಿದೆ, ಇದಕ್ಕೆ ಮುಖ್ಯ ಕಾರಣಕರ್ತರಾದ ತಾಲೂಕು ವೈದ್ಯಾಧಿಕಾರಿಯ ಡಾ.ವಿಜಯ್ಕುಮಾರ್ರವರ…