ನವದೆಹಲಿ : ಕೊಬ್ಬರಿ ಬೆಳೆಗಾರರು ಹೆಚ್ಚು ಇರುವ ತುಮಕೂರು, ಹಾಸನ ಮುಂತಾದ ಕಡೆಗಳಲ್ಲಿ ನಫೆಡ್ ಖರೀದಿ ಕೇಂದ್ರಗಳನ್ನು ಹೊಸ ವರ್ಷದ ಜನವರಿ ತಿಂಗಳಲ್ಲಿಯೇ ತೆರೆದು ಕೊಬ್ಬರಿ ಖರೀದಿ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ ಮುಂಡಾ ಅವರು ಭರವಸೆ ನೀಡಿದ್ದಾರೆ. ನವದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜ್ಯದ ನಿಯೋಗಕ್ಕೆ ಮುಂಡಾ ಅವರು ಈ ಭರವಸೆ ನೀಡಿದ್ದಾರೆ ಎಂದು ನಿಯೋಗದಲ್ಲಿ ಇದ್ದ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾದ ಶೋಭಾ ಕರಂದ್ಲಾಜೆ ಅವರ ನೆರವಿನಿಂದ ಅರ್ಜುನ ಮುಂಡಾ ಅವರ ಜತೆಗಿನ ಈ ಭೇಟಿಯನ್ನು ನಿಗದಿ ಮಾಡಲಾಗಿತ್ತು ಎಂದು ಅವರು ಹೇಳಿದ್ದಾರೆ. ನಿಯೋಗದಲ್ಲಿ ಸುರೇಶ್ ಗೌಡರು ಮಾತ್ರವಲ್ಲದೇ, ಮಾಜಿ ಸಚಿವ ಎಚ್.ಡಿ. ರೇವಣ್ಣ, ಶ್ರವಣ ಬೆಳಗೊಳದ ಶಾಸಕ ಎಚ್.ಸಿ. ಬಾಲಕೃಷ್ಣ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮುಂತಾದವರೂ…
Author: News Desk Benkiyabale
ತುಮಕೂರು: ಜಿಲ್ಲೆಯಲ್ಲಿ ಒಂದೇ ದಿನ ಮೂವರು ಪಿಎಸ್ಐಗಳು ಸೇರಿದಂತೆ ಐವರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ. ತುರುವೇಕೆರೆ ಪಿಎಸ್ ಐಗಳಾದ ಗಣೇಶ್, ರಾಮಚಂದ್ರಯ್ಯ, ಹೆಡ್ ಕಾನ್’ಸ್ಟೇಬಲ್ ರಘುನಂದನ್ ಅಮಾನತುಗೊಂಡಿದ್ದಾರೆ. ತುರುವೇರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿದ್ದರು. ಈ ಬಗ್ಗೆ ದೂರು ನೀಡಿದ್ದರೂ ಎಫ್ಐಆರ್ ಮಾಡದೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತುಗೊಳಿಸಲಾಗಿದೆ. ಮಧುಗಿರಿ ತಾಲೂಕು ಬಡವನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜು, ಎಎಸ್ಐ ಸುರೇಶ್ ಅಮಾನತುಗೊಂಡಿದ್ದಾರೆ. ತುಮಕೂರು: ಒಂದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐವರು ನಾಪತ್ತೆ ಬಡವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಲಿತರ ಮೇಲೆ ಸವರ್ಣೀಯರು ಹಲ್ಲೆ ಮಾಡಿದ್ದ ಆರೋಪವಿತ್ತು. ಈ ಬಗ್ಗೆ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಸಂತ್ರಸ್ತರು ದೂರು ನೀಡಿದ್ದರು. ಆದರೇ ಎಫ್ ಐಆರ್ ಮಾಡಿಕೊಳ್ಳದೆ ಪೊಲೀಸರು ನಿರ್ಲಕ್ಷ್ಯ ತೋರಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್ ಐ ಮತ್ತು ಎಎಸ್ಐ ಅವರನ್ನು ಅಮಾನತುಗೊಳಿಸಲಾಗಿದೆ. ಎಎಸ್ಐ, ಒಬ್ಬರು ಹೆಡ್ ಕಾನ್ಸ್’ಸ್ಟೇಬಲ್ ಗಳನ್ನು ಅಮಾನತು ಮಾಡುವ ಮೂಲಕ…
ಪಾವಗಡ ಮುಂದಿನ ಆರು ವಾರಗಳಲ್ಲಿ ಪಾವಗಡ ತಾಲೂಕಿನ ಅತ್ಯಂತ ಹೆಚ್ಚು ಬರ ಉಂಟಾಗಲಿದ್ದು ಇದರಿಂದಾಗಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗಲಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ ಪಾವಗಡ ತಾಲೂಕಿನ ನಲಿಗಾನಹಳ್ಳಿ ಮತ್ತು ಟಿ ಎನ್ ಬೆಟ್ಟ ಗ್ರಾಮಗಳಲ್ಲಿ ಬರ ಪರಿಶೀಲನೆ ನಡೆಸಿ ರೈತರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಹಿಂದೆ ನಾನು ತುಮಕೂರು ಜಿಲ್ಲೆಯಲ್ಲಿ ಎರಡು ವರ್ಷಗಳ ಕಾಲ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೆ, ಆ ಸಮಯದಲ್ಲೂ ಸಹ ಬರೆದ ಪರಿಸ್ಥಿತಿ ಇತ್ತು, ಹಿಂದಿನ ವರ್ಷ ಮಳೆ ಚೆನ್ನಾಗಿ ಆಗಿರುವುದರಿಂದ ಸದ್ಯ ಸ್ವಲ್ಪ ಸಮಸ್ಯೆಗಳ ಪ್ರಮಾಣ ಕಡಿಮೆಯಾಗಿದೆ, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಸಮಸ್ಯೆ ಇದೆ ಹಾಗೂ ಪಶು ಸಂಗೋಪನ ಇಲಾಖೆಯಿಂದ ಈಗಾಗಲೇ ಪಾವಗಡ ತಾಲೂಕಿನ ರೈತರಿಗೆ ಮೇವಿನ ಕಿಟ್ ವಿತರಿಸಲಾಗಿದೆ, ಪ್ರಮುಖವಾಗಿ ನಾವು ಈ ಅಧ್ಯಯನದಲ್ಲಿ ಮೇವಿನ ತೊಂದರೆಯ ಕುರಿತು ಪರಿಶೀಲನೆ ನಡೆಸಿದ್ದೇವೆ, ನಾವು ಸದ್ಯ ರೈತರ…
ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ದೂರು, ವಿಚಾರಣೆ, ಮತ್ತಿತರ ಮಾಹಿತಿಗಾಗಿ ಸಂಪರ್ಕಿಸಲು ಅನುವಾಗುವಂತೆ ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯವಾಣಿ ಸಂಖ್ಯೆ ೦೮೧೬-೧೯೫೦ರ ಕಾರ್ಯಾವಧಿಯನ್ನು ವಿಸ್ತರಿಸಬೇಕೆಂದು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬAಧಿಸಿದAತೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ ೮ ರಿಂದ ರಾತ್ರಿ ೮ರವರೆಗೆ ಕಾರ್ಯ ನಿರ್ವಹಿಸುತ್ತಿರುವ ಸಹಾಯವಾಣಿ ಸಂಖ್ಯೆಯ ಕಾರ್ಯಾವಧಿಯನ್ನು ಗುರುವಾರದಿಂದ ಬೆಳಿಗ್ಗೆ ೬ ರಿಂದ ರಾತ್ರಿ ೧೦ ಗಂಟೆಯವರೆಗೆ ವಿಸ್ತರಿಸಬೇಕೆಂದು ಸೂಚನೆ ನೀಡಿದರು. ಸಹಾಯವಾಣಿ ೧೯೫೦ ಸಂಖ್ಯೆಗೆ ಚುನಾವಣಾ ಮಾಹಿತಿ ಕೋರಿ ಯಾರೇ ಕರೆ ಮಾಡಿದರೂ ನಿಯೋಜಿತ ಅಧಿಕಾರಿ/ಸಿಬ್ಬಂದಿಗಳು ಅಗತ್ಯ ಮಾಹಿತಿ ನೀಡಬೇಕು. ದೂರು ಕರೆಗಳು ಸ್ವೀಕೃತವಾದಾಗ ಕೂಡಲೇ ಸ್ಪಂದಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ನಿರ್ದೇಶನ ನೀಡಿದರು. ನಂತರ ಮಾತನಾಡಿದ ಮಣಿವಣ್ಣನ್ ಅವರು ವಿದೇಶದಲ್ಲಿ ವಾಸವಿರುವವರು…
ತುಮಕೂರು ಒಣಕಸವನ್ನು ಸುಡುವ ಮೂಲಕ ಶೇ.೫೧ರಷ್ಟು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಜೊತೆಗೆ ಸೋಲಾರ್, ಗಾಳಿಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುತ್ತಿದ್ದು, ಮುಂದಿನ ದಿನದಲ್ಲಿ ಯುರೋಪಿಯನ್ ರಾಷ್ಟçದಲ್ಲಿ ಜಾರಿಯಲ್ಲಿರುವ ಬಿಸಿನೀರಿನಿಂದ ೧೦,೦೦೦ ಮೆಗಾವ್ಯಾಟ್ಸ್ ಉತ್ಪಾದಿಸುತ್ತಿರುವ ತಂತ್ರಜ್ಞಾನವನ್ನು ನಮ್ಮಲ್ಲಿಯೂ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ತುಮಕೂರಿನ ಬೆಸ್ಕಾಂನ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಅವರು ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎನರ್ಜಿ ಕ್ಲಬ್ ಹಾಗೂ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಿನಿಕ್ಸ್ ಇಂಜಿನಿಯನಿಯರ್ ವಿಭಾಗ ಸಮಯುಕ್ತವಾಗಿ ಹಮ್ಮಿಕೊಂಡಿದ್ದ ‘ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ’ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಅಂದು ವಿಶ್ವೇಶ್ವರಯ್ಯ ಅವರು ಆಲೋಚನೆ ಮಾಡಿ ಶರಾವತಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಿದ್ದರಿಂದ ಇಂದು ಅನೇಕ ಹಳ್ಳಿಗೆ ನೀರಿನ ಜೊತೆಗೆ ವಿದ್ಯುತ್ ಕೂಡ ದೊರೆಯಿತು. ವಿಶೇಷ ಯೋಜನೆ ಅಡಿಯಲ್ಲಿ ೭೦೦೦ ಮೆಗಾವ್ಯಾಟ್ ವಿದ್ಯುತ್ ಉತ್ವಾದನೆ ಹೆಚ್ಚಿಸುವ ತಯಾರಿ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು. ಒಣಕಸವನ್ನು ಸುಡುವ ಮೂಲಕ ಶೇ.೫೧ರಷ್ಟು ಮೆಗಾವ್ಯಾಟ್,…
ತುಮಕೂರು: ರಕ್ತ ಕೊಟ್ಟೆವು ಖಾಯಂಯಾತಿ ಬಿಡೆವು ಎಂಬ ಧ್ಯೇಯ ವಾಕ್ಯದೊಂದಿಗೆ ಅತಿಥಿ ಉಪನ್ಯಾಸಕರು ೨೭ನೇ ದಿನವೂ ರಕ್ತದಾನ ಮಾಡುವ ಮೂಲಕ ಇಂದು ವಿಶಿಷ್ಟವಾಗಿ ಪ್ರತಿಭಟನೆ ಧರಣಿ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ಧಿಷ್ಠಾವಧಿ ಧರಣಿಯನ್ನು ಮುಂದುವರೆಸಿರುವ ಅತಿಥಿ ಉಪನ್ಯಾಸಕರು ರಕ್ತದಾನ ಮಾಡುವ ಮೂಲಕ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ರಕ್ತ ಕೊಟ್ಟೆವು ಖಾಯಂಯಾತಿ ಬಿಡೆವು ಎಂದು ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸುಮಾರು ಹದಿನೈದಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ರಕ್ತದಾನ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು, ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಡಾ.ಧರ್ಮವೀರ.ಕೆ.ಎಚ್ ಸುಮಾರು ೨೦ ವರ್ಷಗಳಿಂದ ಸರ್ಕಾರ ನಮ್ಮನ್ನು ರಕ್ತ ಹೀರುತ್ತಿದೆ ನಾವು ಸರ್ಕಾರಕ್ಕೆ ರಕ್ತ ಕೊಟ್ಟೆವು ಖಾಯಂಯಾತಿ ಬಿಡುವುದಿಲ್ಲ ಖಾಯಂ ಆಗುವವರೆಗೂ ನಮ್ಮ ಹೋರಾಟ ನಿಲ್ಲದು ಸುಮಾರು ಒಂದು ತಿಂಗಳಿAದ ಪ್ರತಿಭಟನೆ ನಡೆಸುತ್ತಿದ್ದರು ಸರ್ಕಾರ ಮಾತ್ರ ಜಾಣ ಕುರುಡನಂತೆ ವರ್ತಿಸುತ್ತಿರುವುದು ನಮ್ಮನ್ನು ಆತಂಕ್ಕೀಡುಮಾಡಿದೆ ಈಗಾಲಾದರೂ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ನಾವು ಪಾದಯಾತ್ರೆಯನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು. ಅತಿಥಿ ಉಪನ್ಯಾಸಕರ…
ತುಮಕೂರು ಜಿಲ್ಲೆಯಲ್ಲಿರುವ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್ಗಳಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧಿಸುವ ಸಲುವಾಗಿ ಸೂಕ್ತ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅಬಕಾರಿ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಿದೇಶಿ ಸಿಗರೇಟ್ಗಳ ಮಾರಾಟದ ಬಗ್ಗೆ ಕ್ರಮಕೈಗೊಳ್ಳಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಇಡಿ ವಾಲ್ ಹಾಗೂ ಸಿಗ್ನಲ್ಗಳಲ್ಲಿ ತಂಬಾಕು ದುಷ್ಪರಿಣಾಮ ಹಾಗೂ ಕೋಟ್ಪಾ ಕಾಯ್ದೆ ನಿಯಮಗಳ ಬಗ್ಗೆ ಪ್ರಚಾರ ಮಾಡಬೇಕು ಎಂದರಲ್ಲದೆ, ಪಾಲಿಕೆಯಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚಿಸಿ ತಂಬಾಕು ಮಾರಾಟಗಾರರಿಗೆ ಪ್ರತ್ಯೇಕ ಪರವಾನಗಿ ನೀಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆಯನ್ನು ನಿಯಂತ್ರಿಸುವಲ್ಲಿ ಆರೋಗ್ಯ, ಶಿಕ್ಷಣ, ಪೊಲೀಸ್ ಇಲಾಖೆ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಾತ್ರ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಾಚರಣೆ ನಡೆಸಿ ದಂಡ ವಸೂಲಿ ಮಾಡುತ್ತಿವೆ. ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಾರ್ಮಿಕ…
ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಹೋಬಳಿ ರಾಮಘಟ್ಟದಲ್ಲಿ ಇತ್ತೀಚಗೆ ನಡೆದ ಅಗ್ನಿ ದುರಂತದಲ್ಲಿ ಸುಮಾರು ೧೦೦ಕ್ಕೂ ಹೆಚ್ಚು ಕುರಿ ಮತ್ತು ಕೋಳಿಗಳನ್ನು ಕಳೆದುಕೊಂಡಿದ್ದ ರೈತ ಕುಟುಂಬಕ್ಕೆ ಡಿಸಿಸಿ ಬ್ಯಾಂಕ್ ವತಿಯಿಂದ ಅತಿ ಕಡಿಮೆ ದರದಲ್ಲಿ ಸುಮಾರು ೬.೫೦ಲಕ್ಷ ರೂಗಳ ಸಾಲದ ಆದೇಶ ಪತ್ರವನ್ನು ಸಹಕಾರ ಸಚಿವ ಹಾಗೂ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರು ವಿತರಿಸಿದರು. ಹಂದನಕೆರೆ ಹೋಬಳಿ ರಾಮಘಟ್ಟದ ಚೇತನಕುಮಾರ್ ಅವರ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ರೈತ ಕುಟುಂಬದ ಆಧಾರ ಸ್ಥಂಬವಾಗಿದ್ದ ೧೧೦ ಟಗರು, ೩೦ ಮೇಕೆ, ೧೫೦ ಕೋಳಿಗಳು ಸುಟ್ಟು ಕರಕಲಾಗಿದ್ದು, ಇಡೀ ಕುಟುಂಬವೇ ಕಂಗಾಲಾಗಿತ್ತು.ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜಕುಮಾರ್ ಅವರು ಕುಟುಂಬದ ಸದಸ್ಯರನ್ನು ಭೇಟಿಯಾಗಿ ನೆರವು ನೀಡುವ ಧೈರ್ಯ ತುಂಬಿದ್ದರು. ಇದರಂತೆ ಇಂದು ಡಿಸಿಸಿ ಬ್ಯಾಂಕ್ ವತಿಯಿಂದ ಅತಿ ಕಡಿಮೆ ಬಡ್ಡಿದರದಲ್ಲಿ ಸುಮಾರು ೬.೫೦ ಲಕ್ಷ ರೂಗಳ ಸಾಲದ ಆದೇಶ ಪತ್ರವನ್ನು ಸಂತ್ರಸ್ಥ ಕುಟುಂಬದ ಚೇತನಕುಮಾರ್ ಅವರಿಗೆ ಹಸ್ತಾಂತರಿಸಿದರು.…
ತುಮಕೂರು : ಕೊರಟಗೆರೆ ತಾಲ್ಲೂಕು ಚಿಕ್ಕಪಾಲನಹಳ್ಳಿ, ಧಮಗಲಯ್ಯನಪಾಳ್ಯ ಮತ್ತು ಬೋಳಬಂಡೆನಹಳ್ಳಿ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರಿಂದು ಭೇಟಿ ನೀಡಿ, ಜಾನುವಾರು ಮೇವು ಬೆಳೆಗಳ ಕ್ಷೇತ್ರ ಪರಿಶೀಲನೆ, ಬರದ ಹಿನ್ನೆಲೆ ಟಾಸ್ಕ್ ಫೋರ್ಸ್ ಸಮಿತಿಯಿಂದ ಕೊರೆಸಿರುವ ಕೊಳವೆಬಾವಿ ಸ್ಥಳ ಪರಿಶೀಲನೆ ಮತ್ತು ಬರಗಾಲ ಪರಿಸ್ಥಿತಿಯಿಂದ ಉಂಟಾದ ಬೆಳೆ ನಷ್ಟವನ್ನು ಪರಿಶೀಲಿಸಿದರು. ತುಮಕೂರು ತಾಲ್ಲೂಕಿನ ಊರ್ಡಿಗೆರೆ ಹೋಬಳಿ ವಿಟ್ಟಾರಾವುತನಹಳ್ಳಿಗೆ ಮೊದಲಿಗೆ ಭೇಟಿ ನೀಡಿದ ಅವರು, ರೈತ ದೊಡ್ಡಯ್ಯ ಮತ್ತು ದಾಸಪ್ಪ ಎಂಬುವವರ ರಾಗಿ ಹೊಲಕ್ಕೆ ಭೇಟಿ ನೀಡಿ ಹಾನಿಗೊಳಗಾದ ಬೆಳೆಯನ್ನು ವೀಕ್ಷಿಸಿ ರೈತರಿಗೆ ಬೆಳೆ ಪರಿಹಾರವನ್ನು ತ್ವರಿತಗತಿಯಲ್ಲಿ ಒದಗಿಸುವಂತೆ ಸ್ಥಳದಲ್ಲಿ ಹಾಜರಿದ್ದ ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ತದ ನಂತರ ಕೋಳಾಲ ಹೋಬಳಿ ಚಿಕ್ಕಪಾಲನಹಳ್ಳಿ ಗ್ರಾಮದಲ್ಲಿ ಪಶುಸಂಗೋಪನೆ ಇಲಾಖೆಯಿಂದ ರಾಸುಗಳನ್ನು ಹೊಂದಿರುವ ರೈತರಿಗೆ ವಿತರಿಸಿದ ಉಚಿತ ಮೇವು ಬೀಜ ಬೆಳೆಗಳ ಕ್ಷೇತ್ರ ಪರಿಶೀಲನೆ ನಡೆಸಿದ ಅವರು, ರೈತರಿಗೆ ಮೇವಿನ ಕಿಟ್ಗಳನ್ನು ಕಾಲಮಿತಿಯೊಳಗಾಗಿ ಸಮರ್ಪಕವಾಗಿ ವಿತರಣೆ ಮಾಡುವಂತೆ ಪಶು ಸಂಗೋಪನೆ…
ತುಮಕೂರು ವಿದ್ಯುತ್ ಅಪಘಾತ ತಡೆಯುವ ಸಪ್ತಾಹದ ಅಂಗವಾಗಿ ಬೆಸ್ಕಾಂ ತುಮಕೂರು ವಿಭಾಗದ ವತಿಯಿಂದ ವಿದ್ಯುತ್ ಸುರಕ್ಷತಾ ಜಾಥಾವನ್ನು ನಗರದಲ್ಲಿ ನಡೆಸಲಾಯಿತು. ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿAದ ಆರಂಭವಾದ ವಿದ್ಯುತ್ ಸುರಕ್ಷತಾ ಜನಜಾಗೃತಿ ಜಾಥಾಕ್ಕೆ ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಹೆಚ್.ವಿ. ಕೃಷ್ಣ ಪ್ರಸಾದ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸಾರ್ವಜನಿಕರು, ರೈತರು, ಶಾಲಾ ಮಕ್ಕಳು ಹಾಗೂ ಬೆಸ್ಕಾಂ ಸಿಬ್ಬಂದಿಗಳಿಗೆ ವಿದ್ಯುತ್ ಅಪಘಾತವನ್ನು ತಡೆಯುವ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಾಥಾ ನಡೆಸಲಾಗುತ್ತಿದೆ ಎಂದರು. ವಿದ್ಯುತ್ ಅಪಘಾತ ಉಂಟಾಗದAತೆ ಹೇಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೆಸ್ಕಾಂ ಮುಂದಾಗಿದೆ. ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಸುರಕ್ಷತಾ ಜಾಥಾ ನಡೆಸಿ ಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ಕಟ್ಟಡಗಳನ್ನು ವಿದ್ಯುತ್ ತಂತಿಗಳ ಸಮೀಪ ನಿರ್ಮಿಸಬಾರದು. ತುಂಡಾಗಿ ಬಿದ್ದ ವಿದ್ಯುತ್ ತಂತಿಗಳನ್ನು ಮುಟ್ಟಬಾರದುಯ ತಕ್ಷಣ ಬೆವಿಕಂ ಸಹಾಯವಾಣಿ ೧೯೧೨ಗೆ ಕರೆ ಮಾಡಿ ಮಾಹಿತಿ…