ತುಮಕೂರು :


ತುಮಕೂರಿನ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‍ನಲ್ಲಿ ಭಾರತದ ಅತೀ ದೊಡ್ಡ ಎಚ್‍ಎಎಲ್ ಹೆಲಿಕಾಪ್ಟರ್ ಘಟಕ ಹಾಗೂ ಜಲ ಜೀವನ್ ಮಿಷನ್‍ನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕದ ಯುವಕರಿಗೆ ಉದ್ಯೋಗ ನೀಡಲು ಕೋಟ್ಯಂತರ ವೆಚ್ಚದ ಘಟಕ ಲೋಕಾರ್ಪಣೆ ಮಾಡಲಾಗಿದೆ. ಕರ್ನಾಟಕ ಅತಿ ಹೆಚ್ಚು ಯುವಕರ ಟ್ಯಾಲೆಂಟ್ ಹೊಂದಿರುವ ರಾಜ್ಯ. ಡಬಲ್‍ಇಂಜಿನ್ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಡಬಲ್ ಇಂಜಿನ್ ಸರ್ಕಾರ ಏನು ಮಾಡಿದೆ ಎಂದು ಕೇಳುತ್ತಾರೆ. ಇದಕ್ಕೆ ಇಂದು ಉದ್ಘಾಟನೆಗೊಂಡ ಹೆಚ್?ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕ ಉದಾಹರಣೆಯಾಗಿದೆ ಎಂದರು. ಭಾರತೀಯರ ರಕ್ಷಣೆಗೆ ವಿದೇಶಿಯರ ಮೇಲಿನ ಅವಲಂಬನೆ ಕಡಿಮೆ ಆಗಿದೆ. ನಮ್ಮ ಸಾಮಥ್ರ್ಯವನ್ನು ಇಡೀ ವಿಶ್ವವೇ ಗಮನಿಸುತ್ತಿದೆ. ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯತ್ತ ಭಾರತ ಮುನ್ನುಗ್ಗುತ್ತಿದೆ. ಆತ್ಮನಿರ್ಭರ್ ಭಾರತ ಮೂಲಕ ಹೆಲಿಕಾಪ್ಟರ್??ಗಳ ತಯಾರಿಸಲಾಗುತ್ತದೆ ಎಂದರು.
ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರಿನಲ್ಲಿ ಜಲಜೀವನ್ ಅಭಿಯಾನದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದರು. 430 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವ ಯೋಜನೆ ಇದಾಗಿದ್ದು, ತಿಪಟೂರಿನ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಮತ್ತು ಚಿಕ್ಕನಾಯಕನಹಳ್ಳಿಯ 147 ಜನವಸತಿ ಪ್ರದೇಶಗಳಿಗೆ ನೀರು ಪೂರೈಕೆ ಮಾಡುವ ಗುರಿ ಹೊಂದಲಾಗಿದೆ. 115 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ ಎಂದರು.
ತುಮಕೂರು ದೇಶದ ಅತಿ ದೊಡ್ಡ ಔದ್ಯೋಗಿಕ ಜಿಲ್ಲೆಯಾಗಿ ಬೆಳೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತುಮಕೂರು ಕೈಗಾರಿಕಾ ಟೌನ್?ಶಿಪ್?ಗೆ ಶಿಲಾನ್ಯಾಸ ನೆರವೇರಿಸಿದ್ದೇವೆ. ಕರ್ನಾಟಕದ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರದಿಂದ ಯೋಜನೆ ಮಾಡಲಾಗಿದೆ. ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಹೆಚ್ಚು ಒತ್ತು ನೀಡುತ್ತಿದ್ದೇವೆ. ಮೂರುವರೆ ವರ್ಷದಲ್ಲಿ 3 ಕೋಟಿ ಕುಟುಂಬಗಳಿಗೆ ನಲ್ಲಿಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. ದೇಶದಲ್ಲಿ 3 ಕೋಟಿ ಕುಟುಂಬಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಬಜೆಟ್?ನಲ್ಲಿ ಅನುದಾನ ನೀಡಿದ್ದೇವೆ ಎಂದರು.
ಈ ಬಾರಿಯ ಬಜೆಟ್ ದೇಶಕ್ಕೆ ಅತಿ ಹೆಚ್ಚು ಶಕ್ತಿ ನೀಡಲಿದ್ದು, ಸಶಕ್ತ ಭಾರತ ನಿರ್ಮಾಣಕ್ಕಾಗಿ ಬಜೆಟ್ ಮಂಡಿಸಲಾಗಿದೆ. ಬಡವರು, ಮಧ್ಯಮ ವರ್ಗದ ಬಜೆಟ್ ಬಗ್ಗೆ ಚರ್ಚೆಯಾಗುತ್ತಿದೆ. ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ಇಡೀ ವಿಶ್ವದಲ್ಲಿ ಚರ್ಚೆಯಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದು ಸರ್ವರ ಹಿತ ಕಾಯುವ ಬಜೆಟ್ ಆಗಿದೆ, ಸರ್ವ ಸುಖಕಾರಿ, ಸರ್ವಸ್ಪರ್ಷಿ ಬಜೆಟ್, ದೇಶದ ಮಹಿಳೆಯರ ಶಕ್ತಿ ಪ್ರಬಲಗೊಳಿಸುವ ಬಜೆಟ್, ಭಾರತದ ಕೃಷಿ ಆಧನಿಕರಣ ಮಾಡುವ ಬಜೆಟ್, ಶ್ರೀಅನ್ನ ಮೂಲಕ ಸಣ್ಣ ರೈತರಿಗೆ ಶಕ್ತಿ ನೀಡುವ ಬಜೆಟ್, ಸ್ವರೋಜ್‍ಗಾರ್?ಗೆ ಬಲ ನೀಡುವ ಬಜೆಟ್, ಕರ್ನಾಟಕದ ಪ್ರತಿ ಕುಟುಂಬಕ್ಕೂ ಯೋಜನೆಗಳ ಲಾಭ ಸಿಗಲಿದೆ ಎಂದು ಹೇಳುವ ಮೂಲಕ ಈ ಬಾರಿ ಬಜೆಟ್? ಟೀಕಿಸಿದ ವಿರೋಧ ಪಕ್ಷಗಳಿಗೆ ಟಾಂಗ್ ಕೊಟ್ಟರು.
ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ, ಇದರಿಂದ ಕರ್ನಾಟಕದ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯದ ಕೊಡುಗೆ ಸಾಕಷ್ಟಿದೆ ಎಂದು ಕರ್ನಾಟಕದ ಸಿರಿಧಾನ್ಯಗಳ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ರಾಗಿ ಮುದ್ದೆ, ರೊಟ್ಟಿ ಸ್ವಾದ ಅರಿತವನೇ ಬಲ್ಲ ಎಂದು ಹೇಳಿದರು.
ಕಳೆದ 8 ವರ್ಷಗಳಲ್ಲಿ ಎಲ್ಲ ವರ್ಗಗಳಿಗೂ ಸರ್ಕಾರಿ ಯೋಜನೆ ತಲುಪಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನಮ್ಮ ಸರ್ಕಾರದಲ್ಲಿ ಕಾರ್ಮಿಕರಿಗೆ ಪೆನ್ಶನ್ ಸಿಕ್ಕಿದೆ, ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಸಣ್ಣ ರೈತರಿಗೆ ಅನುಕೂಲ ಆಗುತ್ತಿದೆ. ದೇಶದ ನಿರ್ಮಾಣಕ್ಕೆ ವಿಶ್ವಕರ್ಮ ಸಮಾಜದ ಕೊಡುಗೆ ಸಾಕಷ್ಟಿದೆ. ಹೀಗಾಗಿ ಇದೇ ಮೊದಲ ಬಾರಿಗೆ ವಿಶ್ವಕರ್ಮ ಸಮಾಜದವರಿಗೆ ಯೋಜನೆ ರೂಪಿಸಲಾಗಿದೆ. ಕುಂಬಾರ, ಕಮ್ಮಾರ್, ಅಕ್ಕಸಾಲಿಗ, ಶಿಲ್ಪಿಗಳ ಕೌಶಲ್ಯವನ್ನು ಸಮೃದ್ಧಗೊಳಿಸಲಾಗುವುದು ಎಂದರು.

(Visited 1 times, 1 visits today)