ತುಮಕೂರು:


ಕುಣಿಗಲ್ ರಸ್ತೆಯ ಬಿದರಕಟ್ಟೆ ಬಳಿ ಇರುವ ತುಮಕೂರು ವಿವಿ ನೂತನ ಕ್ಯಾಂಪಸ್ ಜ್ಞಾನಸಿರಿಗೆ ತುಮಕೂರು ನಗರದಿಂದ ವಿದ್ಯಾರ್ಥಿಗಳು ತೆರಳು ಆಗಿರುವ ಸಾರಿಗೆ ಸಮಸ್ಯೆ ಕುರಿತಂತೆ ಇಂದು ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಹಾಗೂ ವಿವಿಯ ಕುಲಪತಿ ಪ್ರೊ.ಎಂ.ವೆAಕಟೇಶ್ವರಲು ಅವರೊಂದಿಗೆ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಜೊತೆ ಚರ್ಚೆ ನಡೆಸಿದರು.
ಮಂಗಳವಾರ ಬೆಳಗ್ಗೆ ದೇವರಾಜ ಅರಸು ಬಸ್ ನಿಲ್ದಾಣದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಭೇಟಿಯಾಗಿ ನೂತನ ಕ್ಯಾಂಪಸ್‌ಗೆ ತೆರಳಲು ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ಕುರಿತಂತೆ ಚರ್ಚೆ ನಡೆಸಿ, ಪರಿಹರಿಸುವಂತೆ ಮನವಿ ಮಾಡಿದರು.
ಈ ವೇಳೆ ಮಾತನಾಡಿ ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ,ತÀÄಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ನಲ್ಲಿ ಅಕ್ಟೋಬರ್ ೨೧ ರಿಂದ ವಿಜ್ಞಾನಕ್ಕೆ ಸಂಬAಧಿಸಿದ ೧೨ ವಿಷಯಗಳ ಪಾಠ ಪ್ರವಚನದ ಆರಂಭ ಗೊಂಡಿದೆ.ತÀÄಮಕೂರು ನಗರದಿಂದ ಜ್ಞಾನಸಿರಿ ಕ್ಯಾಂಪಸ್ ಸುಮಾರು ೧೮ ಕಿ.ಮಿ.ದೂರದಲ್ಲಿದ್ದು,ಕುಣಿಗಲ್ ತುಮಕೂರು ರಸ್ತೆಯ ನಾಗವಲ್ಲಿ ಗ್ರಾಮದಿಂದ ೨.೫.ಕಿ.ಮಿ ಇದೆ.ವಿವಿಗೆ ತನ್ನದೇ ಆದ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಅನಿವಾರ್ಯವಾಗಿ ವಿದ್ಯಾರ್ಥಿಗಳು ಕೆ.ಎಸ್.ಆರ್.ಟಿ.ಸಿ ಬಸ್ಸುಗಳನ್ನೇ ಆಶ್ರಯಿಸಬೇಕಾಗಿದೆ.ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಕ್ಯಾಂಪಸ್ ತಲುಪಲು ಆಗುತ್ತಿಲ್ಲ.ಈ ಹಿನ್ನೆಲೆಯಲ್ಲಿ ಇಂದು ಕೆ.ಎಸ್.ಅರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ಭೇಟಿಯಾಗಿ ಅವರಿಗೆ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಮನವರಿಕೆ ಮಾಡಿಕೊಡಲಾಗಿದೆ.ಅವರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.ಒAದೆರಡು ದಿನದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿ ಬಸ್ ವ್ಯವಸ್ಥೆಯಾಗಲಿದೆ ಎಂಬ ಭರವಸೆ ಇದೆ ಎಂದರು.
ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆAಕಟೇಶ್ವರಲು ಮಾತನಾಡಿ, ತುಮಕೂರು ವಿವಿಯ ನೂತನ ಬಿದರಕಟ್ಟೆ ಕ್ಯಾಂಪಸ್‌ಗೆ ಕೆಲ ವಿಷಯಗಳ ಸ್ಥಳಾಂತರಗೊAಡಿವೆ. ಅಲ್ಲಿಗೆ ತರಳಲು ವಿದ್ಯಾರ್ಥಿಗಳಿಗೆ ತೊಂದರೆಯಾದ ಹಿನ್ನೆಲೆಯಲ್ಲಿ ಇಂದು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳನ್ನು ಮುರುಳೀಧರ ಹಾಲಪ್ಪ ಮತ್ತು ನಾವು ಭೇಟಿಯಾಗಿ ಮನವಿ ಮಾಡಿದ್ದು, ಅವರು ಸಹ ಸ್ಪಂದಿಸಿದ್ದಾರೆ. ಪ್ರತಿದಿನ ೯ ಗಂಟೆಯಿAದ ೧೧ ಗಂಟೆಯವರೆಗೆ ಐದು ಬಸ್ ಮತ್ತು ಸಂಜೆ ೩ ಗಂಟೆಯಿAದ ೫ ಗಂಟೆಯವರೆಗೆ ಐದು ಬಸ್ಸುಗಳನ್ನು ಓಡಿಸಲು ಒಪ್ಪಿದ್ದಾರೆ.ಅಲ್ಲದೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬಸ್ ಓಡಿಸಲು ಸಹ ಒಪ್ಪಿದ್ದಾರೆ.ಇದಕ್ಕಾಗಿ ಮುರುಳೀಧರ ಹಾಲಪ್ಪ ಮತ್ತು ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಾಣಾಧಿಕಾರಿ ಚಂದ್ರಶೇಖರ್ ಮಾತನಾಡಿ,ತುಮಕೂರು ವಿವಿಯ ಕೊರಿಕೆ ಮೇರೆಗೆ ಸೋಮವಾರದಿಂದ ಎರಡು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳನ್ನು ವಿವಿ ಕ್ಯಾಂಪಸ್‌ಗೆ ಓಡಿಸಲು ಕ್ರಮ ಕೈಗೊಳ್ಳಲಾಗಿತ್ತು.ಆದರೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದ ಕಾರಣ ಕೆಲ ತೊಂದರೆಯಾಗಿತ್ತು. ಇಂದು ವಿವಿ ಕುಲಪತಿಗಳು ಮತ್ತು ಸಾರ್ವಜನಿಕರು, ವಿದ್ಯಾರ್ಥಿಗಳು ತಮಗಾಗುತ್ತಿರುವ ಸಮಸ್ಯೆಯನ್ನು ಗಮನಕ್ಕೆ ತಂದಿದ್ದಾರೆ.ಹಾಗಾಗಿ ಇಂದಿನಿAದ ಪ್ರತಿ ಅರ್ಧಗಂಟೆಗೆ ಒಂದು ಬಸ್‌ನಂತೆ ಬೆಳಗ್ಗೆ ೯ ರಿಂದ ಮಧ್ಯಾಹ್ನ೧೨ರವರೆಈ ಗೆ ಮತ್ತು ಮಧ್ಯಾಹ್ನ ೩ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಐದು ಟ್ರಿಫ್ ಕೆ.ಎಸ್.ಅರ್.ಟಿ.ಸಿ ಬಸ್‌ಗಳು ಜ್ಞಾನಸಿರಿ ಕ್ಯಾಂಪಸ್‌ಗೆ ಸಂಚರಿಸಲಿವೆ.ಅಲ್ಲದೆ ತುಮಕೂರು ಕುಣಿಗಲ್ ಮಾರ್ಗದಲ್ಲಿ ಕ್ಯಾಂಪಸ್‌ನ ಸಂಪರ್ಕ ರಸ್ತೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ನಿಲುಗಡೆಗೆ ಕೋರಿದ್ದಾರೆ.ಅದನ್ನು ಸಹ ಶೀಘ್ರದಲ್ಲಿಯೇ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ತುಮಕೂರು ವಿವಿ ಕಲಾ ಕಾಲೇಜು ಪ್ರಾಂಶುಪಾಲರಾದ ಡಾ.ಕರಿಯಣ್ಣ,ಕಾಂಗ್ರೆಸ್ ಮುಖಂಡರಾದ ರೇವಣ್ಣಸಿದ್ದಯ್ಯ,ಗೀತಾರುದ್ರೇಶ್, ನಟರಾಜಶೆಟ್ಟಿ, ಅದಿಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

(Visited 1 times, 1 visits today)